Breaking News

BigTv News

ಬಳ್ಳಾರಿಯಲ್ಲಿ ₹350 ಕೋಟಿ ಜಿಎಸ್‌ಟಿ ವಂಚನೆ: ದಂಗಾದ ಸೈಬರ್ ಕ್ರೈಂ ಪೊಲೀಸರು!

ಬಳ್ಳಾರಿಯಲ್ಲಿ ಬೃಹತ್ ಜಿಎಸ್‌ಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ತಿಂಗಳಿಗೆ ಕೇವಲ ₹15 ಸಾವಿರ ಸಂಬಳ ಪಡೆಯುವ ಶೋರೂಂ ಉದ್ಯೋಗಿ ರೋಷನ್ ಎಂಬುವವರ ಹೆಸರಿನಲ್ಲಿ ಐದೇ ತಿಂಗಳಲ್ಲಿ ₹350 ಕೋಟಿ ಜಿಎಸ್‌ಟಿ ವ್ಯವಹಾರ ನಡೆದಿರುವುದು ಪತ್ತೆಯಾಗಿದೆ. ರೋಷನ್ ಅವರ ಆಧಾರ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ವಿದ್ಯುತ್ ಬಿಲ್ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು ‘ರೋಷನ್ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ಜಿಎಸ್‌ಟಿ ನೋಂದಣಿ ಮಾಡಲಾಗಿತ್ತು. ಪ್ಲಾಸ್ಟಿಕ್ ವ್ಯಾಪಾರದ ಹೆಸರಿನಲ್ಲಿ ವ್ಯವಹಾರ ನಡೆಸಿ ಬಳಿಕ …

Read More »

ಅಕ್ರಮ ಮರಳು ಮಾಫಿಯಾಗೆ ಸಾಥ್ ನೀಡಿದ ಆರೋಪ; ಪಿಎಸ್‌ಐ, ಕಾನ್ಸ್​​​​​​​​​ಸ್ಟೆಬಲ್ ಸಸ್ಪೆಂಡ್

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ದೊಡ್ಡಕೆರೆ ಬರಿದಾಗುತ್ತಿದ್ದಂತೆ ಅಕ್ರಮ ಫಿಲ್ಟರ್ ಮರಳು ದಂಧೆ ಮತ್ತೆ ಆರಂಭವಾಗಿದೆ. ದಂಧೆ ನಿಯಂತ್ರಿಸುವಲ್ಲಿ ವಿಫಲವಾದ ಆರೋಪದ ಹಿನ್ನೆಲೆಯಲ್ಲಿ ನಂಗಲಿ ಠಾಣೆಯ ಪಿಎಸ್‌ಐ ವಿದ್ಯಾಶ್ರೀ ಹಾಗೂ ಕಾನ್ಸ್‌ಟೇಬಲ್ ಪ್ರವೀಣ್ ಅವರನ್ನು ಅಮಾನತುಗೊಳಿಸಲಾಗಿದೆ. ಶುಕ್ರವಾರ ರಾತ್ರಿ ಅಕ್ರಮ ಮರಳು ಅಡ್ಡೆ ಮೇಲೆ ಮುಳಬಾಗಿಲು ಎಎಸ್ಪಿ ಮೋನಿಷಾ ದಾಳಿ ನಡೆಸಿ, ಮರಳು ಸಾಗಾಟಕ್ಕೆ ಬಳಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಜೆಸಿಬಿ ಯಂತ್ರವನ್ನು ವಶಪಡಿಸಿಕೊಂಡಿದ್ದರು. ಈ ಕುರಿತು ಸಲ್ಲಿಕೆಯಾದ ವರದಿ …

Read More »

ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಕೇಸ್ – ಆರೋಪಿಗಳ ಸುಳಿವು ಪತ್ತೆಹಚ್ಚಿದ ಪೊಲೀಸರು!

ಬೆಂಗಳೂರು: ಯಲಹಂಕ ನ್ಯೂಟೌನ್‌ನಲ್ಲಿ ನವೆಂಬರ್ 13ರಂದು ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಅವರನ್ನು ಕಚೇರಿ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಕಾರಿನಲ್ಲಿ ಬಂದಿದ್ದ ಚರಣ್ ಮೇಲೆ, ಪತ್ನಿ ಕಾರಿನಿಂದ ಇಳಿದು ಒಳಗೆ ಹೋಗುತ್ತಿದ್ದಂತೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕೃತ್ಯದಲ್ಲಿ ಇಬ್ಬರು ವ್ಯಕ್ತಿಗಳು ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳ ಗುರುತು ಪತ್ತೆಯಾಗಿದ್ದು, ಕೊಲೆಗೆ ಅಸಲಿ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ …

Read More »

ಅಮಾಯಕನ ಹೆಸರಲ್ಲಿ 350 ಕೋಟಿ ರೂ. ಜಿಎಸ್‌ಟಿ ವಹಿವಾಟು! ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಯುವಕನ ದಾಖಲೆ ದುರ್ಬಳಕೆ

ಬಳ್ಳಾರಿ: ತಿಂಗಳಿಗೆ ₹15 ಸಾವಿರ ಸಂಬಳ ಪಡೆಯುವ ಟೊಯೊಟಾ ಶೋರೂಂ ಉದ್ಯೋಗಿ ರೋಷನ್ ಜಮೀಲ್ ಹೆಸರಿನಲ್ಲಿ ಐದು ತಿಂಗಳಲ್ಲಿ ₹350 ಕೋಟಿ ಜಿಎಸ್‌ಟಿ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ. ಅವರ ಆಧಾರ್, ಪ್ಯಾನ್ ಹಾಗೂ ಬ್ಯಾಂಕ್ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು ವಂಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರೋಷನ್ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಪ್ಲಾಸ್ಟಿಕ್ ವ್ಯಾಪಾರಕ್ಕಾಗಿ ಜಿಎಸ್‌ಟಿ ನೋಂದಣಿ ಮಾಡಿಸಿ ಈ ವಹಿವಾಟು ನಡೆಸಲಾಗಿದೆ ಎನ್ನಲಾಗಿದೆ. ಜಿಎಸ್‌ಟಿ ಅಧಿಕಾರಿಗಳು ಮನೆಗೆ ಭೇಟಿ …

Read More »

ಇ-ಖಾತಾ ಅಕ್ರಮ: ಸಹಾಯಕ ಆಯುಕ್ತ ಸೇರಿ 31 ಜನರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ಇ-ಖಾತಾ ವಿತರಿಸಿದ ಆರೋಪದ ಮೇಲೆ ಸಹಾಯಕ ಆಯುಕ್ತ ಬಸವರಾಜ್ ಎನ್. ಮಾಘಿ ಸೇರಿದಂತೆ 31 ಜನರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ಯಾಂಕ್‌ಗಳಿಗೆ ಮಾತ್ರ ಸೀಮಿತವಾಗಿದ್ದ ವಿಶೇಷ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಅನರ್ಹ ನಿವೇಶನ ಹಾಗೂ ಕಟ್ಟಡಗಳಿಗೆ ಇ-ಖಾತಾ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಗತ್ಯ ದಾಖಲೆಗಳ ಬದಲಿಗೆ ಸಾಮಾನ್ಯ ಮಾರಾಟ ಪತ್ರ ಮತ್ತು ಜಂಟಿ ಅಭಿವೃದ್ಧಿ ಒಪ್ಪಂದಗಳನ್ನು …

Read More »

ನಂದಿನಿ ಮೊಸರಿನ ಪ್ಯಾಕೇಟ್‌ನಲ್ಲಿ ಸಿಮ್‌ ಕಾರ್ಡ್‌ ಪತ್ತೆ: ಅಸಲಿಯತ್ತು ಬಯಲಿಗೆ, ವ್ಯಕ್ತಿ ಅರೆಸ್ಟ್‌

ಮಂಡ್ಯ: ನಂದಿನಿ ಮೊಸರಿನ ಪ್ಯಾಕೇಟ್‌ನಲ್ಲಿ ಜಿಯೋ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂದು ಸುಳ್ಳು ವಿಡಿಯೋ ಹರಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ದೂರಿನ ಅರುಣ್ ಕುಮಾರ್ ಎಂಬಾತನೇ ಬಂಧಿತ ಆರೋಪಿ. ಅರುಣ್ ಕುಮಾರ್ ಮೊಸರಿನ ಪ್ಯಾಕೇಟ್‌ನಲ್ಲಿ ಸಿಮ್ ಕಾರ್ಡ್ ಸಿಕ್ಕಿದೆ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇದರಿಂದ ನಂದಿನಿ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಮೂಡಿತ್ತು. ಈ ಕುರಿತು ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧಿಕಾರಿಗಳು ಮದ್ದೂರು …

Read More »

ಮುಂಡಗೋಡು: ಬಾಲಕಿ ಮೇಲಿನ ದೌರ್ಜನ್ಯ ಖಂಡಿಸಿ ಮುಸ್ಲಿಂ ಸಮಾಜದಿಂದ ಪ್ರತಿಭಟನೆ

ಮುಂಡಗೋಡ ತಾಲೂಕಿನಲ್ಲಿ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ, ಮುಸ್ಲಿಂ ಸಮಾಜ ಹಾಗೂ ಅಹ್ಲ್ ಎ ಸುನ್ನತ್ ಜಮಾತ್ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬನ್ನಿಕಟ್ಟೆಯ ನೂರಾನಿ ಮಸೀದಿಯಿಂದ ಕಪ್ಪು ಪಟ್ಟಿ ಧರಿಸಿ ಪೊಲೀಸ್ ಠಾಣೆಯವರೆಗೆ ಮೆರವಣಿಗೆ ನಡೆಸಿ, ಸಿಪಿಐ ರಮೇಶ ಹಾನಾಪುರ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಾಜಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ಸಂತ್ರಸ್ತ ಬಾಲಕಿಗೆ ಸೂಕ್ತ …

Read More »

ಬೆಂಗಳೂರು | ವಕೀಲ ಮಂಜುನಾಥ್ ಹತ್ಯೆ ಪ್ರಕರಣ: ಶೂಟರ್‌ಗೆ ಶೋಧ

ಬೆಂಗಳೂರು: ಪಟ್ಟಂದೂರು ಅಗ್ರಹಾರದಲ್ಲಿ ವಕೀಲ ಮಂಜುನಾಥ್ ಅವರನ್ನು ಗುಂಡಿಟ್ಟು ಕೊಲೆ ಮಾಡಿದ ಪ್ರಕರಣದಲ್ಲಿ ಬಿಹಾರ ಮೂಲದ ಆರೋಪಿ ಅಮಿತ್ ಕುಮಾರ್ ದುಬೆ ಬಂಧಿತನಾಗಿದ್ದಾನೆ. ಮತ್ತೊಬ್ಬ ಆರೋಪಿ ಪವನ್ ಕುಮಾರ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಕ್ಟೋಬರ್ 19ರಂದು ಬಾಡಿಗೆ ವಿಚಾರವಾಗಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಅಮಿತ್ ಮತ್ತು ಪವನ್, ಮಂಜುನಾಥ್ ಅವರನ್ನು ಹೊರಗೆ ಕರೆಸಿ ತಲೆ ಹಾಗೂ ಎದೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದರು. ಬಳಿಕ ಇಬ್ಬರೂ ತಲೆಮರೆಸಿಕೊಂಡಿದ್ದರು. ಆರೋಪಿಗಳ ಬಂಧನಕ್ಕಾಗಿ …

Read More »

ಮನ್‌ಮುಲ್‌ ಹಾಲಿನಪುಡಿ ಕಲಬೆರಕೆ ಪ್ರಕರಣ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಮಂಡ್ಯ: ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಎರಡೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಉಪ ವ್ಯವಸ್ಥಾಪಕ ಟಿ. ರಾಮಕೃಷ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಮದ್ದೂರು ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದ ವೇಳೆ ಸಿಪಿಐ ನವೀನ್ ಕುಮಾರ್ ನೇತೃತ್ವದ ತಂಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೈಕೋರ್ಟ್‌ನಲ್ಲೂ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ರಾಮಕೃಷ್ಣ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಹಾಲಿನ ಪುಡಿ ಚೀಲಗಳಲ್ಲಿ ಕಲಬೆರಕೆ ಹಾಗೂ …

Read More »

ಕೊಡಗಿಯಲ್ಲಿ ಸೂಟ್‌ಕೇಸ್‌ ಒಳಗೆ 8 ತಿಂಗಳ ಮಗುವನ್ನಿಟ್ಟು ಪರಾರಿಯಾದ ತಾಯಿ!

ಕೊಡಗು: 8 ತಿಂಗಳ ಮಗುವನ್ನು ಸೂಟ್‌ಕೇಸ್‌ನಲ್ಲಿ ಹಾಕಿ ತಾಯಿ ಪರಾರಿಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯಲ್ಲಿ ನಡೆದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ನವೆಂಬರ್ 11ರ ರಾತ್ರಿ ಮನೆಯಿಂದ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಪರಿಶೀಲಿಸಿದಾಗ ತಾಯಿ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಬಳಿಕ ಮಗುವಿನ ಅಜ್ಜಿಗೆ ಮಾಹಿತಿ ನೀಡಿ, ಮನೆ ಬೀಗ ಒಡೆದು ನೋಡಿದಾಗ ಸೂಟ್‌ಕೇಸ್‌ನಲ್ಲಿ ಮಗು ಅಳುತ್ತಿರುವುದು ಪತ್ತೆಯಾಗಿದೆ. ತಕ್ಷಣ …

Read More »