ಮುಳಬಾಗಿಲು: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯ ಲಾಡ್ಜ್ನಲ್ಲಿ ಪತಿಯೇ ಪತ್ನಿಯನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಮುಳಬಾಗಿಲಿನ ಆಸಿಯಾ (28) ಕೊಲೆಯಾದ ಮಹಿಳೆ. ಆಸಿಯಾ ಮತ್ತು ಪತಿ ನವೀದ್ ಬಾಷಾ ಬೆಂಗಳೂರಿನಿಂದ ಮದನಪಲ್ಲಿಗೆ ತೆರಳಿ ಲಾಡ್ಜ್ನಲ್ಲಿ ತಂಗಿದ್ದರು. ಈ ವೇಳೆ ಪತಿ ಬಿಯರ್ ಬಾಟಲಿಯಿಂದ ಚುಚ್ಚಿ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೃತ್ಯದ ಬಳಿಕ …
Read More »ಉಜಿರೆಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರ ಬಂಧನ
ಬೆಳ್ತಂಗಡಿ: ನಾವೂರಿನ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರವಿಕುಮಾರ್ (31), ದಿನೇಶ್ ಪ್ರಭು (51) ಮತ್ತು ಸುರೇಶ್ ಪಿ.ಎನ್. (44) ಎಂದು ಗುರುತಿಸಲಾಗಿದೆ. ಅಕ್ಟೋಬರ್ 7ರ ತಡರಾತ್ರಿ ನಡೆದ ಬೆಂಕಿ ಹಚ್ಚಿದ ಘಟನೆಯಲ್ಲಿ ವೈದ್ಯಕೀಯ ಸಲಕರಣೆಗಳು ಹಾಗೂ ಔಷಧಿಗಳು ಸುಟ್ಟುಹೋಗಿದ್ದು, ಸುಮಾರು ₹3 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. …
Read More »ದಶಕದ ಬಳಿಕ ಬಯಲಾಯ್ತು ಹಗರಣ: ನಕಲಿ ಅಂಕಪಟ್ಟಿ ನೀಡಿ ನೌಕರಿ ಗಿಟ್ಟಿಸಿದ್ದ 52 ಆರೋಗ್ಯ ಇಲಾಖೆ ಸಿಬ್ಬಂದಿ ಅಮಾನತು!
ಬೆಂಗಳೂರು: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಕಲಿ ಎಸ್ಎಸ್ಎಲ್ಸಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದಿದ್ದ ಕಲ್ಯಾಣ ಕರ್ನಾಟಕ ವೃಂದದ 52 ಗ್ರೂಪ್-ಡಿ ನೌಕರರನ್ನು ಅಮಾನತುಗೊಳಿಸಲಾಗಿದೆ. 2016ರಲ್ಲಿ ನೇಮಕಗೊಂಡಿದ್ದ ಈ ಸಿಬ್ಬಂದಿ ವಿವಿಧ ಜಿಲ್ಲಾ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 2023ರಲ್ಲಿ ಬಂದ ದೂರಿನ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ ಅಕ್ರಮ ಬೆಳಕಿಗೆ ಬಂದಿದೆ. ಕೇವಲ 230 ಅಂಕ ಪಡೆದಿದ್ದ ಅಭ್ಯರ್ಥಿಗಳು ನಕಲಿ ಅಂಕಪಟ್ಟಿಗಳ …
Read More »ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಕೃತ್ಯ ಸಾಬೀತು: ದಸರಾ ವೇಳೆಯೇ ಕಾಮುಕನಿಗೆ ಶಿಕ್ಷೆ ಪ್ರಕಟ
ಮೈಸೂರು: ಕಳೆದ ವರ್ಷ ದಸರಾ ವೇಳೆ ಬಲೂನ್ ಮಾರಲು ಬಂದಿದ್ದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಕಾರ್ತಿಕ್ (32) ಅಪರಾಧಿ ಎಂದು ಮೈಸೂರಿನ ತ್ವರಿತ ನ್ಯಾಯಾಲಯ ತೀರ್ಪು ನೀಡಿದೆ. ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಪೋಷಕರೊಂದಿಗೆ ತಂಗಿದ್ದ ಬಾಲಕಿಯನ್ನು ಅಕ್ಟೋಬರ್ 9ರಂದು ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಪೊಲೀಸರು 24 ಗಂಟೆಯೊಳಗೆ ಆರೋಪಿ ಕಾರ್ತಿಕ್ನನ್ನು ಬಂಧಿಸಿದ್ದರು. …
Read More »ಶ್ರೀಗಂಧ ಸಾಗಾಟ; ವಾಹನ ಸಹಿತ ಇಬ್ಬರ ಬಂಧನ
ವಿರಾಜಪೇಟೆ: ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ನಂಜರಾಯಪಟ್ಟಣ ಮಾರ್ಗವಾಗಿ ₹5 ಲಕ್ಷಕ್ಕೂ ಅಧಿಕ ಮೌಲ್ಯದ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕಂಬಿಬಾಣೆ ಗಿರಿಜನ ಕಾಲನಿಯ ರಘು (34) ಮತ್ತು ಸುಂಟಿಕೊಪ್ಪದ ಸಂತೋಷ್ (40) ಬಂಧಿತರು. ಆರೋಪಿಗಳಿಂದ ಶ್ರೀಗಂಧದ ತುಂಡುಗಳು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
Read More »ಬೆಂಗಳೂರು: ಡ್ರೈವರ್ ಮೇಲೆ ಗುಂಡಿನ ದಾಳಿ ಮಾಡಿದ ರಿಯಲ್ ಎಸ್ಟೇಟ್ ಉದ್ಯಮಿ!
ಬೆಂಗಳೂರು: ಪಿಳ್ಳಗಾನಹಳ್ಳಿ ನೈಸ್ ರಸ್ತೆ ಸೇತುವೆ ಬಳಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಂಪಂಗಿ, ಶ್ರೀನಿವಾಸ್ ಅಲಿಯಾಸ್ ಮೆಂಟಲ್ ಸೀನನ ಕಾಲಿಗೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಶ್ರೀನಿವಾಸ್ ಹಿಂದೆ ಸಂಪಂಗಿ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಒಂದು ವರ್ಷದ ಹಿಂದೆ ಶ್ರೀನಿವಾಸ್ನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಇತ್ತೀಚೆಗೆ ಶ್ರೀನಿವಾಸ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸಂಪಂಗಿ ದೂರು ನೀಡಿದ್ದ. …
Read More »ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೃಹಲಕ್ಷ್ಮಿ ಲೇಔಟ್ನಲ್ಲಿ ಆರೋಪಿ ಲಾಂಗ್ ಹಿಡಿದು ವಿಡಿಯೋ ಮಾಡಿದ್ದ ಎನ್ನಲಾಗಿದೆ. ಈ ವಿಡಿಯೋ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಎರಡು ಲಾಂಗ್ಗಳನ್ನು ವಶಪಡಿಸಿಕೊಂಡು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, …
Read More »ಹಿರಿಯೂರು: ಲವ್ ಜಿಹಾದ್ಗೆ ಮಹಿಳೆ ಬಲಿ; ಐವರ ವಿರುದ್ಧ ಪ್ರಕರಣ ದಾಖಲು
ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದ ಆಶಾ (24), ಇಮ್ರಾನ್ (40) ಎಂಬ ವಾಹನ ಚಾಲಕನನ್ನು ಪ್ರೀತಿಸಿ 2023ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಎರಡೂವರೆ ವರ್ಷದ ಮಗುವಿದೆ. ಆಶಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದರೂ, ಪತ್ನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆಶಾ ಪೋಷಕರು ಆರೋಪಿಸಿ ದೂರು ದಾಖಲಿಸಿದ್ದಾರೆ. ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿರುವ ಹಿಂದೂಪರ ಸಂಘಟನೆಗಳು, ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ …
Read More »ಬೆಂಗಳೂರಿನಲ್ಲಿ ಫೈರಿಂಗ್: ಡ್ರೈವರ್ ಮೇಲೆ ಗುಂಡಿನ ದಾಳಿ ಮಾಡಿದ ರಿಯಲ್ ಎಸ್ಟೇಟ್ ಉದ್ಯಮಿ
ಬೆಂಗಳೂರು, ಅ. 14: ಹಳೇ ದ್ವೇಷದ ಹಿನ್ನೆಲೆಯಲ್ಲಿ ಬೆಂಗಳೂರಿನ ಪಿಳ್ಳಗಾನಹಳ್ಳಿ ನೈಸ್ ರಸ್ತೆ ಸೇತುವೆ ಬಳಿ ರಿಯಲ್ ಎಸ್ಟೇಟ್ ಉದ್ಯಮಿ ಸಂಪಂಗಿ, ಶ್ರೀನಿವಾಸ್ ಅಲಿಯಾಸ್ ಮೆಂಟಲ್ ಸೀನನ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಶ್ರೀನಿವಾಸ್ ಕಾಲಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀನಿವಾಸ್ ಹಿಂದೆ ಸಂಪಂಗಿ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದರಿಂದ ಸುಮಾರು ಒಂದು ವರ್ಷದ ಹಿಂದೆ …
Read More »ಹೊನ್ನಾಳಿಯಲ್ಲಿ ಹಳೆ ವೈಷಮ್ಯಕ್ಕೆ ಯುವಕನ ಬರ್ಬರ ಹತ್ಯೆ: 6 ಜನರ ವಿರುದ್ಧ ಪ್ರಕರಣ ದಾಖಲು
ಹೊನ್ನಾಳಿ: ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಬನ್ನಿ ಮಹಾಂಕಾಳಿ ದೇವಸ್ಥಾನದ ಸಮೀಪ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಆರು ಮಂದಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹೊನ್ನಾಳಿ ನಿವಾಸಿ ಎಂ.ಕೆ. ಅಮಿತ್ (30) ಕೊಲೆಯಾದವರು. ಮಂಗಳವಾರ ರಾತ್ರಿ ದೇವಸ್ಥಾನದಲ್ಲಿ ಕಾರ್ಯಕ್ರಮ ಮುಗಿಸಿ ತಾಯಿಯೊಂದಿಗೆ ಮನೆಗೆ ಮರಳುತ್ತಿದ್ದ ಅಮಿತ್ ಮೇಲೆ ಸ್ಕೂಟರ್ ಮತ್ತು ಕಾರಿನಲ್ಲಿ ಬಂದ ಆರೋಪಿಗಳು ಖಾರದ ಪುಡಿ ಎರಚಿ ಮಚ್ಚು, ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





