ಕೊಣಾಜೆ: ನಡುಪದವು ಎಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳ ಗುಂಪು ಕಾಲೇಜಿನ ಹೊರಗಡೆ ಪರಸ್ಪರ ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಸಿದಂತೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಲೇಜಿನ ಗೇಟ್ ನ ಹೊರಭಾಗದಲ್ಲಿ ಎ.1 ರಂದು ಮಧ್ಯಾಹ್ನ ಸುಮಾರು 10-15 ಜನರ ತಂಡ ಅವ್ಯಾಚ್ಯವಾಗಿ ಮಾತನಾಡಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದರು. ಹೊಡೆದಾಡಿಕೊಂಡ ದೃಶ್ಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಬಳಿಕ ಪೊಲೀಸರು ಕಾಲೇಜಿನ ಸಂಬಂಧಪಟ್ಟವರಲ್ಲಿ ವಿಚಾರಿಸಿ ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಹೊಡೆದಾಡಿಕೊಂಡ ಪದವಿ ಹಾಗೂ ಎಂಜಿನಿಯರಿಂಗ್ …
Read More »ಶಿರಾ ಬಳಿ ಎರಡು ಬಸ್ಗಳ ಮಧ್ಯೆ ಅಪಘಾತ: ಇಬ್ಬರು ಸಾವು, 32 ಮಂದಿಗೆ ಗಾಯ
ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಭಾನುವಾರ ಎರಡು ಬಸ್ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ. ಗದಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಗೆ ಹಾವೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ.ಖಾಸಗಿ ಬಸ್ನಲ್ಲಿದ್ದ ಶಿಗ್ಗಾವಿ ಪಟ್ಟಣದ ಪ್ರವೀಣ್ (16), ರೋಣ ತಾಲ್ಲೂಕಿನ ಚವಡಿ ಗ್ರಾಮದ ಸಂಗೀತಾ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ 9 ಮಂದಿಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ತುಮಕೂರಿನಲ್ಲಿ KSRTC-ಖಾಸಗಿ ಬಸ್ ಡಿಕ್ಕಿ: ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಹುಬ್ಬಳ್ಳಿಯಿಂದ ಬರುತ್ತಿದ್ದ ಖಾಸಗಿ ಬಸ್ನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್ನಲ್ಲಿದ್ದ …
Read More »ನೇರಳಕಟ್ಟೆ: ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಭಸ್ಮ
ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದು ಸುಟ್ಟು ಕರಕಲಾದ ಘಟನೆ ಶನಿವಾರ ತಡರಾತ್ರಿ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಸಂಭವಿಸಿದೆ. ಹಂದಕುಂದ ಅರೆಕಲ್ಲು ಮನೆಯ ಗಣಪು ಶೆಡ್ತಿ ಅವರ ಮನೆ ಹಾನಿಗೊಳಗಾಗಿರುವುದು. ಮನೆಯ ಮಾಡು, ಗೋಡೆಗೂ ಹಾನಿಯಾಗಿದೆ. ಮನೆ ಒಳಗಿದ್ದ ಸ್ವಲ್ಪ ಚಿನ್ನಾಭರಣ, ನಗದು, ಟಿವಿ, ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಬರೆ, ಪಾತ್ರೆಗಳೆಲ್ಲವೂ ಸುಟ್ಟು ಕರಕರಲಾಗಿದೆ. ಗಣಪು ಶೆಡ್ತಿ ಹಾಗೂ ಅವರ ಮೊಮ್ಮಗ ಮಾತ್ರ …
Read More »ಚಿಕ್ಕಬಳ್ಳಾಪುರ | ಕಾರು ಪಲ್ಟಿ; ಬಾಲಕಿ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ತಾಲ್ಲೂಕಿನ ಕೊತ್ತನೂರು ಗೇಟ್ನ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಶನಿವಾರ ಕಾರು ಉರುಳಿ ಬಿದ್ದು ಒಂಬತ್ತು ವರ್ಷ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಕಲಬುರಗಿ ಜಿಲ್ಲೆ ಚಿಂಚೋಳಿಯ ರಾಜೇಂದ್ರ ಹಾಗೂ ಭಾಗ್ಯ ದಂಪತಿ ಪುತ್ರಿ ಅಂಕಿತಾ ಮೃತರು. ದಂಪತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ವಾಸಿಸುತ್ತಿದ್ದು ಚಿಂಚೋಳಿಯಿಂದ ಹೊಸಕೋಟೆ ಬರುವಾಗ ಈ ಅವಘಡ ನಡೆದಿದೆ.ಕೊತ್ತನೂರು ಗೇಟ್ ಬಳಿ ಲಾರಿಯನ್ನು ಹಿಂದಿಕ್ಕುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. …
Read More »ಹೊಸಂಗಡಿ ಚೆಕ್ಪೋಸ್ಟ್ನಲ್ಲಿ ಜಾನುವಾರು ಸಾಗಾಟ ಜಾಲ ಪತ್ತೆ: ಮೂವರು ಆರೋಪಿಗಳ ಬಂಧನ, ಎರಡು ವಾಹನ ವಶ
ಅಮಾಸೆಬೈಲು: ಹೊಸಂಗಡಿ ಪೊಲೀಸ್ ಚೆಕ್ಪೋಸ್ಟ್ನಲ್ಲಿ ರವಿವಾರ ಬೆಳಗಿನ ಜಾವ ಅಮಾಸೆಬೈಲು ಪೊಲೀಸರು ನಡೆಸಿದ ವಾಹನ ತಪಾಸಣೆ ವೇಳೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಸಾಗಾಟಕ್ಕೆ ಬಳಸಿದ ಗೂಡ್ಸ್ ವಾಹನ ಹಾಗೂ ಬೆಂಗಾವಲಾಗಿ ಬಂದಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಮೂಲದ ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಮತ್ತು ಕಂಡ್ಲೂರಿನ ನದೀಂ ಅಬ್ದುಲ್ …
Read More »ರಾಂಪುರ ಬಳಿ ಡಿವೈಡರ್ಗೆ ಕಾರು ಡಿಕ್ಕಿ: ಇಬ್ಬರ ಸಾವು
ಮೊಳಕಾಲ್ಮುರು: ತಾಲ್ಲೂಕಿನ ರಾಂಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರ ರಾಜಾಪುರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಲಗ್ಗೆರೆಯ ಸೀಗೆ ಗಾರ್ಡನ್ ನಿವಾಸಿ ಜೇಮ್ಸ್ ರವಿಚಂದ್ರ (38), ಹಾಸನ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಅಂಚೆ ಚಿಕ್ಕೇನಹಳ್ಳಿಯ ನಂಜೇಗೌಡ (24) ಮೃತರು. ಕಾರು ಬೆಂಗಳೂರು ಕಡೆಯಿಂದ ಬಳ್ಳಾರಿಗೆ ಹೋಗುತ್ತಿತ್ತು. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ …
Read More »ವರದಕ್ಷಿಣೆ ಕಿರುಕುಳ : ಹೆಚ್ಚಿನ ಹಣಕ್ಕೆ ಬೇಡಿಕೆ: ಮಹಿಳೆ ಮನೆಯಿಂದ ಹೊರಕ್ಕೆ
ಕಟಪಾಡಿ: ಹೆಚ್ಚಿನ ಹಣವನ್ನು ತರುವಂತೆ ಒತ್ತಾಯಿಸಿ ಪತಿ ಹಾಗೂ ಮನೆಯವರು 5 ½ ತಿಂಗಳ ಮಗುವಿನೊಂದಿಗೆ ಮಹಿಳೆಯನ್ನು ಮನೆಯಿಂದ ಹೊರಗೆ ಹಾಕಿ ಪಡುಬಿದ್ರಿ ಮಾರ್ಗ ಮಧ್ಯದಲ್ಲಿ ಬಿಟ್ಟು ಹೋದ ಘಟನೆಯೊಂದು ವರದಿಯಾಗಿದೆ.. ಮೂಡಬೆಟ್ಟು ಗ್ರಾಮದ ಸರಕಾರಿಗುಡ್ಡೆ ನಿವಾಸಿ ಯಾಸೀರ್ ಸಾಬನ್ ಅಲಿ ಎಂಬಾತ 2024ರ ಮೇ ತಿಂಗಳಿನಲ್ಲಿ ನಡ್ಸಾಲು ಗ್ರಾಮದ ಶಬ್ರೀನ ಎಂಬ ಯುವತಿಯನ್ನು ಮದುವೆಯಾಗಿದ್ದ. ಅನಂತರದ ದಿನಗಳಲ್ಲಿ ಶಬ್ರೀನ ಅವರಿಗೆ ಪತಿ, ಅವರ ತಂದೆ ಸಾಬನ್ ಸಾಹೇಬ್, ತಾಯಿ …
Read More »ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿ, ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗು ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತ ಮಗುವನ್ನು ರಬೀಯಾ ದೊಡ್ಡಮನಿ (2) ಎಂದು ಗುರುತಿಸಲಾಗಿದೆ. ಮನೆಯ ಮುಂಭಾಗದಲ್ಲಿ ಇದ್ದಾಗಲೇ ಏಕಾಏಕಿ ಬಂದ ಟ್ರ್ಯಾಕ್ಟರ್ ಮಗುವಿನ ಮೇಲೆ ಹರಿದಿದ್ದು, ಗಂಭೀರ ಗಾಯಗಳಿಂದ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ. ಘಟನೆಯ ನಂತರ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದು, ಪ್ರಕರಣವನ್ನು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. …
Read More »ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ
ಮಂಡ್ಯ : ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆಯ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪಿತ್ರಾಜಿತ ಆಸ್ತಿಯ ರಸ್ತೆಗೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಒಂದೇ ಕುಟುಂಬದ ಸೋಮೇಗೌಡ, ವಸಂತ್ ಕುಮಾರ್, ನಿಶಾಂತ್ ಕುಮಾರ್ಗೆ ಗಾಯವಾಗಿದ್ದು, ಉಗ್ರೇಗೌಡರ ಕುಟುಂಬದಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಗಾಯಾಳುಗಳಿಗೆ ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





