Breaking News

BigTv News

ಕಾಂಗ್ರೆಸ್ ಸದಸ್ಯನಿಂದ ಹಲ್ಲೆಗೊಳಗಾದ ಪಾಲಿಕೆ ಇಂಜಿನಿಯರ್ ಮೇಲೆ ಅಟ್ರಾಸಿಟಿ ಕೇಸ್ ದಾಖಲು

ಬಳ್ಳಾರಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯನಿಂದ ಹಲ್ಲೆಗೊಳಗಾದ ಪಾಲಿಕೆ ಇಂಜಿನಿಯರ್ ಮೇಲೆಯೇ ಅಟ್ರಾಸಿಟಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ. ಬಳ್ಳಾರಿ ಮಹಾನಾಗರ ಪಾಲಿಕೆ ಇಂಜಿನಿಯರ್ ವೀರೇಶ್ ಮೇಲೆ ಕಾಂಗ್ರೆಸ್ ಸದಸ್ಯ ಕುಬೇರ್ ಹಲ್ಲೆ ನಡೆಸಿದ್ದಾರೆ. ಈಗ ಹಲ್ಲೆಗೊಳಗಾದ ವಿರೇಶ್ ವಿರುದ್ಧವೇ ದೂರು ದಾಖಲಾಗಿದೆ. ಮಹಾನಗರ ಪಾಲಿಕೆ ಮೇಯರ್ ಗಾದೆಪ್ಪ ಜೊತೆ ಠಾಣೆಗೆ ಬಂದಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ವೀರೇಶ್ ವಿರುದ್ಧ ದೂರು ನೀಡಿದ್ದಾರೆ. ನಗರದ ರಾಯಲ್ ವೃತ್ತದಿಂದ …

Read More »

ಮಡಿಕೇರಿ: ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಮಹಿಳೆ ಪತ್ತೆ

ಧನ್‌ಬಾದ್: ಹಳೆಯ ಕಬ್ಬಿಣ ಕದಿಯುವ ಪ್ರಯತ್ನದಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಮುನಿಡಿಹ್‌ನಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಕಬ್ಬಿಣದ ಸ್ಕ್ರ್ಯಾಪ್ ಕದಿಯಲು ಹೋದ ತಂಡವು ಅನಿಲ ತುಂಬಿದ್ದ ಸಿಲಿಂಡರ್ ಕತ್ತರಿಸಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ತೀವ್ರ ಪ್ರಮಾಣದಲ್ಲಿ ಅನಿಲ ಹೊರಬಂದಿದ್ದು, ಅದನ್ನು ಸೇವಿಸಿದ ಮೂವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಇತರ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಅನಿಲ ಸೋರಿಕೆ: ಮೂವರ ಸಾವು

ಧನ್‌ಬಾದ್: ಹಳೆಯ ಕಬ್ಬಿಣ ಕದಿಯುವ ಪ್ರಯತ್ನದಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಮುನಿಡಿಹ್‌ನಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಕಬ್ಬಿಣದ ಸ್ಕ್ರ್ಯಾಪ್ ಕದಿಯಲು ಹೋದ ತಂಡವು ಅನಿಲ ತುಂಬಿದ್ದ ಸಿಲಿಂಡರ್ ಕತ್ತರಿಸಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ತೀವ್ರ ಪ್ರಮಾಣದಲ್ಲಿ ಅನಿಲ ಹೊರಬಂದಿದ್ದು, ಅದನ್ನು ಸೇವಿಸಿದ ಮೂವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಇತರ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ಸ್ನೇಹಿತನ ಊರಿಗೆ ಬಂದ ಇಬ್ಬರು ನೀರು ಪಾಲು

ಚಿಕ್ಕಬಳ್ಳಾಪುರ: ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ ಇಬ್ಬರು ಕೆರೆಯಲ್ಲಿ ನೀರು ಪಾಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಸಮೀಪ ನಡೆದಿದೆ. ರಾಮಸಮುದ್ರ ಕೆರೆಯಲ್ಲಿ ಈಜಲು ಹೋಗಿದ್ದ ಬೆಂಗಳೂರಿನ ಜೆಪಿ ನಗರದ ಗಿರೀಶ್(35), ಕಿಶೋರ್(28) ಮೃತಪಟ್ಟವರು. ಭಾನುವಾರ ರಜೆ ಹಿನ್ನೆಲೆ ಸ್ನೇಹಿತ ಜಗದೀಶ್ ಅವರ ಸ್ವಗ್ರಾಮ ಗಡಿಮಿಂಚೇನಹಳ್ಳಿಗೆ 7 ಜನ ಸ್ನೇಹಿತರು ಬೆಂಗಳೂರಿನಿಂದ ಬಂದಿದ್ದಾರೆ. ಗ್ರಾಮಕ್ಕೆ ಸಮೀಪದ ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದಾರೆ. 7 ಜನರ ಪೈಕಿ ಇಬ್ಬರು …

Read More »

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

ನಗರದ ಪ್ರತ್ಯೇಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹುಬ್ಬಳ್ಳಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ವರದಿಗಳ ಪ್ರಕಾರ, ಹುಬ್ಬಳ್ಳಿಯ ಎರಡು ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಿರುಕುಳದ ಪ್ರಕರಣಗಳು ದಾಖಲಾಗಿವೆ: ಮೊದಲ ಪ್ರಕರಣ: ಮಹಿಳೆಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿ, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಓರ್ವನನ್ನು ವಶಕ್ಕೆ …

Read More »

ಸಾಮೂಹಿಕ ಅತ್ಯಾಚಾರ ಆರೋಪ : ಇಬ್ಬರು ಆರೋಪಿಗಳ ಬಂಧನ

ಯಾದಗಿರಿ: ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆ ಪೊಲೀಸರು ಶನಿವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಸಪ್ಪ (25) ಮತ್ತು ರಡ್ಡೆಪ್ಪ (30) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಬಯಲು ಬಹಿರ್ದೆಸೆಗೆ ತೆರಳಿ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ಬಸಪ್ಪ ಅಡ್ಡಗಟ್ಟಿ, ತನ್ನ ನಾದಿನಿಯೊಂದಿಗೆ ಪ್ರೀತಿಸುತ್ತಿರುವ ವಿಚಾರವನ್ನು ಕುಟುಂಬದವರಿಗೆ ಏಕೆ ತಿಳಿಸಿದ್ದೆ ಎಂದು ಪ್ರಶ್ನಿಸಿ ಬೆದರಿಕೆ ಹಾಕಿ …

Read More »

ಲೈಂಗಿಕ ದೌರ್ಜನ್ಯ ಆರೋಪ: ಹುಬ್ಬಳ್ಳಿ ಜಿಮ್ ಟ್ರೇನರ್ ಸೆರೆ

ಹುಬ್ಬಳ್ಳಿ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾನಗರ ಪೊಲೀಸರು ಜಿಮ್ ಟ್ರೇನರ್ ವಿಜಯನಗರದ ಸಮೀರ್ ಮುಲ್ಲಾ ಎಂಬಾತನನ್ನು ಶನಿವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಸಮೀರ್‌ ಜಿಮ್ ತರಬೇತಿ ನೆಪದಲ್ಲಿ ಯುವತಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ನಶೆ ಬರುವ ಪದಾರ್ಥ ಸೇರಿಸಿ ಜ್ಯೂಸ್ ಕುಡಿಸಿದ್ದ.ನಂತರ ಖಾಸಗಿ ಫೋಟೋ ಮತ್ತು ವಿಡಿಯೋ ಮಾಡಿ, ಅದನ್ನು ಎಲ್ಲರಿಗೂ ಹರಿಬಿಡುವುದಾಗಿ ಹೆದರಿಸಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು …

Read More »

ಬಸ್‌ನಲ್ಲಿ ಸೀಟು ಹಿಡಿಯಲು ಹೋಗಿ ಕೈ ಕಳೆದುಕೊಂಡಿದ್ದ ಮಹಿಳೆ ಸಾವು

ಚನ್ನಪಟ್ಟಣ: ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಸೀಟು ಹಿಡಿಯಲು ಹೋಗಿ ಆಯತಪ್ಪಿ ಜಾರಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ಕೈ ಸಂಪೂರ್ಣ ಜಜ್ಜಿಹೋಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹೊನ್ನಾಯಕನಹಳ್ಳಿ ಜಯಮ್ಮ (60) ಮೃತರು. ಅವರು ಏ.2ರಂದು ಕಾರ್ಯನಿಮಿತ್ತ ನಗರಕ್ಕೆ ಬಂದು ವಾಪಸ್ ತಮ್ಮ ಗ್ರಾಮಕ್ಕೆ ತೆರಳಲು ಬಸ್‌ ಹತ್ತಿದ್ದರು. ನಿಧಾನಕ್ಕೆ ಚಲಿಸುತ್ತಿದ್ದ ವೇಳೆಯಲ್ಲಿಯೇ ಸೀಟು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದರು. ತೀವ್ರ ರಕ್ತಸ್ರಾವಗೊಂಡಿದ್ದ …

Read More »

ಹುಬ್ಬಳ್ಳಿಯಲ್ಲಿ ಯುವತಿಯ ಮೇಲಿನ ಅತ್ಯಾಚಾರ ಆರೋಪ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಮುಫೀಸ್ ಮಿಯಾನ್ನವರ್ ಎಂಬ ಯುವಕನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಯುವತಿಯ ದೂರಿನ ಪ್ರಕಾರ, ಆರೋಪಿ ಪ್ರೀತಿಯ ನೆಪದಲ್ಲಿ ಸಂಪರ್ಕ ಬೆಳೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಇದಲ್ಲದೆ, ಧಾರವಾಡದಲ್ಲಿ ರಿಜಿಸ್ಟರ್ …

Read More »

ಬೆಂಗಳೂರು : ಮದ್ಯ ಸೇವಿಸಿದಕ್ಕೆ ದಂಡ ವಿಧಿಸಿದ ಪೊಲೀಸರು : ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ!

ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪೊಲೀಸರಿಂದ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಮದ್ಯ ಸೇವಿಸಿದ್ದಕ್ಕೆ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ದಂಡ ಹಾಕಿದ್ದರು. ಆನಂತರ ಲಾರಿಯನ್ನು ಪೊಲೀಸರು ಸ್ಟೇಷನ್ ಬಳಿಗೆ ತಂದಿದ್ದಾರೆ ಆದರೆ ಲಾರಿ ಚಾಲಕ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತಂತೆ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೆಸ್ ದಾಖಲಾಗಿದೆ.

Read More »