ಬೆಳಗಾವಿ: ಸೇಬು ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮುಂಬೈನಿಂದ ದಾವಣಗೆರೆ ಜಿಲೆಗೆ ಗೂಡ್ಸ್ ವಾಹನದಲ್ಲಿ ಸೇಬು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಗೂದ್ಸ್ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಸೇಬು ಹಣ್ಣಿನ ಬಾಕ್ಸ್ ಗಳು ರಸ್ತೆ ಪಾಲಾಗಿದ್ದು, ರಸ್ತೆ ತುಂಬೆಲ್ಲ ಸೇಬು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಕ್ಷ ಲಕ್ಷ ಮೌಲ್ಯದ ಸೇಬು ಹಣ್ಣುಗಳು …
Read More »ಲೈಂಗಿಕ ಕಿರುಕುಳದ ಆರೋಪ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಬಂಧನ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ರಾಜ್ಯ ನರ್ಸಿಂಗ್ ಕೌನ್ಸಿಲ್ನ ರಿಜಿಸ್ಟ್ರಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಚೇರಿಯ ಕೆಲಸದ ನಡುವೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ, ದೈಹಿಕ ಸಂಪರ್ಕಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಅಧಿಕಾರಿ ಸಂತ್ರಸ್ತೆಯನ್ನು ಬಲವಂತವಾಗಿ ಅಪ್ಪಿಕೊಂಡು, ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆಯು ಕೂಡಲೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. …
Read More »ಕಿಡಿಗೇಡಿಗಳಿಂದ ಸಂಕೇತ್ ನ ಸಮಾಧಿಯೂ ಧ್ವಂಸ: ಆಕ್ರೋಶ
ಶಿವಮೊಗ್ಗ: ಊರಗಡೂರಿನಲ್ಲಿ ಹತ್ಯೆಗೀಡಾಗಿದ್ದ ಅಪ್ರಾಪ್ತ ವಯಸ್ಕ ಸಂಕೇತ್ ನ ಸಮಾಧಿಯನ್ನೇ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಊರಗಡೂರಿನ ಗುಡ್ಡೆಮರಡಿ ಮಲ್ಲೇಶ್ವರ ದೇವಾಲಯ ಸಮೀಪದಲ್ಲಿರುವ ಶ್ಮಶಾನದಲ್ಲಿರುವ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ, ದೃಷ್ಕೃತ್ಯ ಮೆರೆದಿದ್ದಾರೆ. ಸಂಕೇತ್ ಪೋಷಕರು ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶ್ಮಶಾನದ ಬಳಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಫೆಬ್ರವರಿ 23 ರಂದು ಅನ್ಯಕೋಮಿನ ಅಪ್ರಾಪ್ತ ಯುವಕರಿಂದ ಸಂಕೇತ್ ಹತ್ಯೆ ನಡೆದಿತ್ತು. ಈ ಸಂಬಂಧ ಶಿವಮೊಗ್ಗದ ತುಂಗಾನಗರ …
Read More »ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಬೆಳಗಾವಿ:ಅಪ್ರಾಪ್ತೆಗೆ ಲೈಂಗಿಕಕಿರುಕುಳ ನೀಡಿದ್ದ ಖಾನಾಪೂರ ತಾಲೂಕಿನ ಭೂರಣಕಿ ಗ್ರಾಮದ ನಿವಾಸಿ ಮೊಶೀನ್ ಸಾಹುಕಾರ(೩೦)ಮತ್ತು ಇರ್ಫಾನ್ ವಸ್ತಾದ (೨೪) ಅಪರಾಧಿಗಳಿಗೆ ತಲಾ ೩ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಅಪರಾಧಿಗಳು ೨೦೨೪ರಲ್ಲಿ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿವಂತೆ, ಕಿರುಕುಳ ನೀಡುವುದರ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಜಿಲ್ಲಾ ನ್ಯಾಯಾಲಯ ದೋಷಾರೋಪಣೆ ಪಟ್ಟಿ …
Read More »ಮಂಚಿಕಟ್ಟೆ: ಅಕ್ರಮ ಮರಳು ಸಾಗಾಟ ವಶ
ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಾಜೆ ಬಳಿಯ ಹಳ್ಳದಿಂದ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಚಿಕಟ್ಟೆಯಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸಜೀಪಮೂಡ ನಿವಾಸಿ ಪಿಕ್ ಅಪ್ ವಾಹನ ಚಾಲಕ ಅಬ್ದುಲ್ ರಝಾಕ್ ಪ್ರಕರಣದ ಆರೋಪಿಯಾಗಿದ್ದು, ಗ್ರಾಮಾಂತರ ಠಾಣಾ ಪಿಎಸ್ಐ ರನ್ನಗೌಡ ಪಾಟೀಲ್ ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಂಚಿಕಟ್ಟೆಗೆ ತೆರಳಿ ಪಿಕ್ ಅಪ್ ವಾಹನವನ್ನು ತಡೆದು ಚಾಲಕನನ್ನು ವಿಚಾರಿಸಿದಾಗ ಪರವಾನಿಗೆ ಪಡೆಯದೆ …
Read More »ವೈಷಮ್ಯ ಹಿನ್ನೆಲೆಯಲ್ಲಿ ಓರ್ವನ ಕೊಲೆ
ಬೆಳಗಾವಿ: ಹಳೇ ವೈಷಮ್ಯ ಹಿನ್ನೆಲೆ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸಂಗನಗೌಡ ಬಸನಗೌಡ ಪಾಟೀಲ (50) ಸೋಮ ವಾರ ರಾತ್ರಿ ಕೊಲೆಗೀಡಾಗಿದ್ದಾರೆ. ಗ್ರಾಮದ ಸಿದ್ಧೇಶ್ವರ ಜಾತ್ರೆ ಮೆರವಣಿಗೆ ಸಂದರ್ಭದಲ್ಲಿ ಸಂಗನಗೌಡ ಮೇಲೆ ಮಾರಕಾಸಗಳಿಂದ ಹಲ್ಲೆ ನಡೆದಿದ್ದು, ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ಕುರಿತು 16 ಜನರ ವಿರುದ್ಧ ನೇಸರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐವರನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ …
Read More »ಮೂವರ ವಿರುದ್ಧ ಫೋಕ್ಸೋ ಕೇಸು ದಾಖಲು
ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಬೇಡಗಂ ಪೊಲೀಸರು ಫೋಕ್ಸೋ ಕೇಸು ದಾಖಲಿಸಿದ್ದಾರೆ. ಬಾಲಕಿ ನೀಡಿದ ದೂರಿನಂತೆ ಕುತ್ತಿಕ್ಕೋಲ್ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸಂಬಂಧಿಕನ ವಿರುದ್ಧ ಫೋಕ್ಸೋ ಕೇಸು ದಾಖಲಿಸಿದ್ದು. ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. 8ನೇ ತರಗತಿಯ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ತಂದೆಯ ವಿರುದ್ಧ ಮೇಲ್ಪರಂಬ ಪೊಲೀಸರು ಫೋಕ್ಸೋ ಕೇಸು ದಾಖಲಿಸಿದ್ದಾರೆ. ಬಾಲಕಿಗೆ ಕಿರುಕುಳ ನೀಡಿದ ಬಗ್ಗೆ ತಾಯಿಗೆ …
Read More »ಕಾರು- ರಿಕ್ಷಾ ಮುಖಾಮುಖಿ : ಹಲವರಿಗೆ ಗಾಯ
ಬೆಳ್ತಂಗಡಿ: ಕಾಪಿನಡ್ಕ ಸೇತುವೆಯ ಬಳಿ ಬುಧವಾರ ಕಾರು ಮತ್ತು ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗುರುವಾಯನಕೆರೆ ಕಡೆಯಿಂದ ಸಂಚರಿಸುತ್ತಿದ್ದ ಕಾರು ಹಾಗೂ ಕಾಪಿನಡ್ಕ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದೆ, ರಿಕ್ಷಾ ಮತ್ತು ಕಾರಿನಲ್ಲಿದ್ದವರಿಗೆ ಗಾಯಗಳಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಕಲಬುರಗಿ ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, …
Read More »ಬಸ್ ನಿಲ್ದಾಣಕ್ಕೆ ನುಗ್ಗಿದ ಬಸ್, 2 ವರ್ಷದ ಮಗು ಮತ್ತು ಮಹಿಳೆಗೆ ಡಿಕ್ಕಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ. ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ, ಮಗು ಮತ್ತು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಅವಘಡಕ್ಕೆ ಕಾರಣರಾದ ಚಾಲಕ ಮತ್ತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





