ರಾಮನಗರ: ಐಜೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ನ್ಯಾಯಾಲಯದಲ್ಲಿ ಜಾಮೀನು ಪಡೆದ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕು ಮೇಲುಕೋಟೆ ಹೋಬಳಿ ಹೊಸಕೋಟೆ ಗ್ರಾಮದ ಬೆಟ್ಟೇಗೌಡ ಬಿನ್ ನರಸಿಂಹೇಗೌಡ ಮತ್ತು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಕಸಬಾ ಹೋಬಳಿಯ ಟಿ.ಹೊಸಹಳ್ಳಿ ಗ್ರಾಮದ ಜಿ.ಬಿ.ಮಂಜುನಾಥ ಬಿನ್ ಭದ್ರಯ್ಯ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಮಾ.13ರಂದು ರಾಮನಗರದ ಹಿರಿಯ ಶಿರಸ್ತೇದಾರರು, ಪ್ರಧಾನ …
Read More »ಕನ್ನೊಳ್ಳಿ ಅಪಘಾತ ಪ್ರಕರಣಕ್ಕೆ ತಿರುವು: ಯುವಕ ಆತ್ಮಹತ್ಯೆ ಶಂಕೆ
ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ಗೇಟ್ ಸಮೀಪ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರೊಬ್ಬರು ಸಜೀವ ದಹನಗೊಂಡ ಪ್ರಕರಣಕ್ಕೆ ಬೇರೆ ತಿರುವು ದೊರಕಿದ್ದು, ಆತ್ಯಹತ್ಮೆಯ ಶಂಕೆ ವ್ಯಕವಾಗಿದೆ. ಮೃತರನ್ನು ದೇವರ ಹಿಪ್ಪರಗಿ ಪಟ್ಟಣದ ಮುಳಸಾವಳಗಿ ಗ್ರಾಮದ ನಿವಾಸಿ ಅಭಿಷೇಕ್ ಸಾಯಬಾಗೌಡ ನಾಗರಾಳ (19) ಎಂದು ಗುರುತಿಸಲಾಗಿದೆ. ಅಭಿಷೇಕ್ ಸಾಯಬಾಗೌಡ ನಾಗರಾಳ ಈ ಘಟನೆಗೂ ಮುನ್ನ ವಿಡಿಯೋ ಮಾಡಿ ಇನ್ಸ್ಟಾಗ್ರಾಂ ಹರಿಬಿಟ್ಟಿದ್ದಾರೆ. ಮೂವರ ಹೆಸರು ಉಲ್ಲೇಖಿಸಿ ನನ್ನ …
Read More »ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ವಾಚ್ಗಳ ಮಾರಾಟ: ಐವರ ಬಂಧನ
ಬೆಂಗಳೂರು: ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ವಾಚ್ಗಳನ್ನು ಮಾರಾಟ ಮಾಡುತ್ತಿದ್ದ 5 ಅಂಗಡಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ದಳದ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿ 25 ಲಕ್ಷ ಮೌಲ್ಯದ 670 ವಾಚ್ ಹಾಗೂ 414 ಬಿಡಿ ಭಾಗಗಳನ್ನು ಜಪ್ತಿ ಮಾಡಿದ್ದಾರೆ. ನಗರದ ಚಿಕ್ಕಪೇಟೆ, ಸುಲ್ತಾನ್ಪಾಳ್ಯ ಮುಖ್ಯರಸ್ತೆ, ಗಂಗಾನಗರ, ದಿಣ್ಣೂರು ಮುಖ್ಯರಸ್ತೆಯಲ್ಲಿರುವ ವಾಚ್ ಅಂಗಡಿಗಳಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರಿನ ವಾಚ್ಗಳು ಹಾಗೂ ಬಿಡಿ ಭಾಗಗಳನ್ನು ನಕಲಿ ಮಾಡಿ ಅಸಲಿ …
Read More »ದಾವಣಗೆರೆ: ಮಸಾಲ ಮಂಡಕ್ಕಿ ಅಂಗಡಿಯಲ್ಲಿ ಅಗ್ನಿ ಅವಘಡ
ನಗರದ ಜಯದೇವ ವೃತ್ತದಲ್ಲಿರುವ ಮಸಾಲ ಮಂಡಕ್ಕಿ ಅಂಗಡಿಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿತು. ಸಿಲಿಂಡರ್ ಅನಿಲ ಸೋರಿಕೆಯಿಂದ ಕಾಣಿಸಿಕೊಂಡ ಬೆಂಕಿಯು ಸ್ಥಳದಲ್ಲಿದ್ದ ಜನರಲ್ಲಿ ಕೆಲಹೊತ್ತು ಆತಂಕ ಸೃಷ್ಟಿಸಿತು. ರಸ್ತೆ ಬದಿಯಲ್ಲಿನ ಅಂಗಡಿ ಕೆಲ ಕಾಲ ಹೊತ್ತಿ ಉರಿಯಿತು. ಅಂಗಡಿಯಲ್ಲಿದ್ದ ಮಂಡಕ್ಕಿ ಚೀಲಗಳು, ಆಹಾರ ಧಾನ್ಯಗಳು, ತರಕಾರಿ, ಅಡುಗೆ ಸಾಮಗ್ರಿ ಹಾಗೂ ಇನ್ನಿತರ ವಸ್ತುಗಳು ಸುಟ್ಟು ಕರಕಲಾದವು. ಸ್ಥಳದಲ್ಲಿದ್ದ ಜನರು ಸಮಯಪ್ರಜ್ಞೆ ಮೆರೆದು ಸಿಲಿಂಡರ್ ಅನ್ನು ಹೊರಗೆಳೆದು ಸುರಕ್ಷಿತವಾಗಿ ಅನಿಲ ಸೋರಿಕೆಯನ್ನು …
Read More »ಬೆಂಗಳೂರು: ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ಸ್ ಜಾಲ; ನೈಜೀರಿಯಾ ಪ್ರಜೆ ಸೆರೆ
ಸಿಲಿಕಾನ್ ಸಿಟಿಯಲ್ಲಿ ಬಟ್ಟೆ ವ್ಯಾಪಾರದ ಮುಖವಾಡ ಧರಿಸಿ ಅಂತರಾಷ್ಟ್ರೀಯ ಮಟ್ಟದ ಮಾದಕ ವಸ್ತು ಜಾಲ ನಡೆಸುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು 2 ಕೋಟಿ ರೂಪಾಯಿ ಮೌಲ್ಯದ 2 ಕೆಜಿ MDMA ಕ್ರಿಸ್ಟಲ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಸ್ಯಾಮುಯೆಲ್ ಇಕ್ಕೆನಾ ಎಂದು ಗುರುತಿಸಲಾಗಿದೆ. ಈತ 2012ರಲ್ಲಿ ಬಿಸಿನೆಸ್ ವೀಸಾದಡಿ ಭಾರತಕ್ಕೆ ಆಗಮಿಸಿದ್ದನು. ಆರಂಭದಲ್ಲಿ ದೆಹಲಿ ಮತ್ತು ಮುಂಬೈ ನಗರಗಳಲ್ಲಿ ಬಟ್ಟೆ …
Read More »ಹಳೆಯ ವೈಷಮ್ಯದ ಹಿನ್ನೆಲೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!
ಬೆಳಗಾವಿಯಲ್ಲಿ ಹಳೆಯ ವೈಷ್ಯಮಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಮಂಗಳವಾರ ಬೆಳಕಿಗೆ ಬಂದಿದೆ. ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳ ನಡುವೆ ಕಳೆದ ಕೆಲ ವರ್ಷಗಳಿಂದ ಕಲಹ ನಡೆಯುತ್ತಿತ್ತು. ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯೋರ್ವ ಮದ್ಯಪಾನ ಮಾಡಿ ಡ್ಯಾನ್ಸ್ ಮಾಡುವ ವೇಳೆ ಸುಮಾರು 16 ಜನರಿಂದ ಭೀಕರವಾಗಿ ಮಾರಕಾಸ್ತ್ರಗಳಿಂದ ಹಲ್ಲೆ …
Read More »ಮೈಸೂರು: ಖರ್ಚಿಗೆ ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು
ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಯುವಕರ ತಂಡವೊಂದು ಮಂಗಳಮುಖಿಯರ ಮೇಲೆ ತಲ್ವಾರ್ ಮತ್ತು ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದಿದೆ. ಅಮೃತ ಬಡಾವಣೆ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ ಬಳಿ ಕೆಲವು ಯುವಕರು ತಮ್ಮ ವೈಯಕ್ತಿಕ ಖರ್ಚಿಗೆ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಆನಮ್ ಹಣ ನೀಡಲು ನಿರಾಕರಿಸಿದಾಗ ಯುವಕರು ಗಲಾಟೆ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಕಂಡು ಆನಮ್ ತನ್ನ …
Read More »ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು
ದೇವನಹಳ್ಳಿ: ಚಲಿಸುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಇದ್ದಕ್ಕಿದ್ದಂತೆ ಬೆಂಕಿಯಲ್ಲಿ ಹಿಒತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದಲ್ಲಿ ನಡೆದುದೆ. ಹೊಸಕೋಟೆ-ದಾಬಸ್ಪೇಟೆ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರು ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಮಾರ್ಗ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ …
Read More »ಕೆಲಸದಿಂದ ತೆಗೆದುಹಾಕಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ನ ಬರ್ಬರ ಹತ್ಯೆ
ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ವ್ಯಕ್ತಿಯೊಬ್ಬ ಮ್ಯಾನೇಜ್ ನನ್ನೇ ಕೊಲೆಗೈದಿರುವ ಭೀಕರ ಅಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಂಪನಿಯಿಂದ ತನ್ನನ್ನು ತೆಗೆದು ಹಾಕಿದರೆಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ಮ್ಯಾನೇಜ್ ನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪೈ.ಲಿ. ಕಂಪನಿಯಲ್ಲಿ ಘಟನೆ ನಡೆದಿದೆ. ರಾಹುಲ್ (38) ಕೊಲೆಯಾದ ಮ್ಯಾನೇಜರ್. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಹನುಮಂತನನ್ನು …
Read More »ವಿಜಯಪುರದಲ್ಲಿ ಬೈಕ್ಗೆ ಬಸ್ ಡಿಕ್ಕಿ: ಸವಾರ ಸಜೀವ ದಹನ
ವಿಜಯಪುರ: ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ಗೇಟ್ ಬಳಿ ಮಂಗಳವಾರ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ, ಸಿಂದಗಿಯ ಅಭಿಷೇಕ ಸಾಹೇಬಗೌಡ ನಾಗರಹಳ್ಳಿ(19) ಬಸ್ಸಿನಲ್ಲಿ ಸಿಲುಕಿಕೊಂಡಿದ್ದು, ಸಜೀವ ದಹನವಾಗಿದ್ದಾನೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕೆ ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





