Breaking News

BigTv News

ಕೋಲಾರ: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಶಿಕ್ಷೆ

ಕೋಲಾರ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮುಳಬಾಗಿಲು ತಾಲ್ಲೂಕಿನ ಪಿ. ಗಂಗಾಪುರ ಗ್ರಾಮದ ಶಿವಕುಮಾರ್‌ಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದೆ. 2023ರ ಸೆಪ್ಟೆಂಬರ್ 30ರಂದು ದಾಖಲಾದ ದೂರಿನ ಮೇರೆಗೆ ನಂಗಲಿ ಪೊಲೀಸರು ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ …

Read More »

ಕುಂದಾಪುರ : ಪತಿಯ ಕಿರುಕುಳಕ್ಕೆ ಮನನೊಂದ ಗೃಹಿಣಿ ಫಿನಾಯಿಲ್‌ ಸೇವನೆ, ದೂರು ದಾಖಲು

ಉಡುಪಿ: ಪತಿಯ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಫಿನಾಯಿಲ್ ಸೇವಿಸಿ ಅಸ್ವಸ್ಥಗೊಂಡ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಲೂರಿನ ಜಯಶ್ರೀ ಅಸ್ವಸ್ಥಗೊಂಡ ಮಹಿಳೆ. 2024ರ ನವೆಂಬರ್‌ನಲ್ಲಿ ಅಮಾಸೆಬೈಲಿನ ಪ್ರಕಾಶ್ ಆಚಾರ್ಯ ಅವರನ್ನು ವಿವಾಹವಾಗಿದ್ದರು. ಮದುವೆಯ ಬಳಿಕ ಪತಿಯ ಅಣ್ಣ ಪ್ರಭಾಕರ ಹಾಗೂ ತಂಗಿ ಪ್ರಶಾಂತಿ ಕಿರುಕುಳ ನೀಡುತ್ತಿದ್ದರು ಎಂದು ಜಯಶ್ರೀ ಆರೋಪಿಸಿದ್ದಾರೆ. 2025ರ ಡಿಸೆಂಬರ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಪತಿ ಆರು ತಿಂಗಳಿಂದ ಮನೆಗೆ ಬಾರದೆ …

Read More »

ಬೆಂಗಳೂರು ಪಬ್​ನಲ್ಲಿ ಐಡಿ ಕಾರ್ಡ್​ ಕೇಳಿದ್ದಕ್ಕೆ ಇನ್​ಸ್ಪೆಕ್ಟರ್ ಕಪಾಳಕ್ಕೆ ಹೊಡೆದ ಐಎಎಸ್​ ಅಧಿಕಾರಿ: FIR ದಾಖಲು

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯ ಪಬ್‌ನಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್ ಮೇಲೆ ಹಲ್ಲೆ ನಡೆಸಿ ಗಲಾಟೆ ಮಾಡಿದ ಆರೋಪದಡಿ ಆಂಧ್ರಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಹಾಗೂ ಅವರ ಮೂವರು ಸ್ನೇಹಿತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಕಾಸ್ ಮರ್ಮಠ್ ಅವರು ಸ್ನೇಹಿತರಾದ ನಿತೇಶ್, ಅಭಯ್, ಉದಯ್ ಸಿಂಗ್ ಮತ್ತು ರೋಷನ್ ಅವರೊಂದಿಗೆ ಪಬ್‌ಗೆ ಬಂದಿದ್ದರು ಎನ್ನಲಾಗಿದೆ. ರಾತ್ರಿ 1.30ರ ಸುಮಾರಿಗೆ ಪರಿಶೀಲನೆಗೆ ತೆರಳಿದ್ದ ಸಿಸಿಬಿ ಅಧಿಕಾರಿಗಳು ಗುರುತಿನ …

Read More »

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಆರೋಪ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಹಾಸನ: ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಿಯಕರ ಸೂರ್ಯ (26) ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿ ಕೇರಳ ಮೂಲದ ನಿಷ್ಮಾ (26) ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಇಬ್ಬರೂ ಬೆಂಗಳೂರಿನ ವೈಟ್‌ಬರ್ಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿಂದ ಲಿವ್‌-ಇನ್ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 24ರಂದು ಸೂರ್ಯ ಮೊಬೈಲ್ ಫೋನ್ ಬಿಟ್ಟು ನಾಪತ್ತೆಯಾಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ನಿಷ್ಮಾ ಆರೋಪಿಸಿದ್ದು, ಸೂರ್ಯನ ಪೋಷಕರು ಹಾಗೂ ಸ್ನೇಹಿತ …

Read More »

ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದ ಮಂಜುನಾಥ (33) ಎಂಬಾತನಿಗೆ ಚಿತ್ರದುರ್ಗದ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ. 2024ರ ಜನವರಿ 15ರಂದು ಬಾಲಕಿಯನ್ನು ಅಪಹರಿಸಿ ಮಾಳೇನಹಳ್ಳಿ ಗ್ರಾಮದ ಬಳಿ ಅತ್ಯಾಚಾರ ಎಸಗಿದ್ದ ಆರೋಪದಡಿ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ …

Read More »

ಕುಡಿದು ಗಲಾಟೆ, ಪೊಲೀಸ್ ಮೇಲೆ ಹಲ್ಲೆ ಆರೋಪ: ಐಎಎಸ್ ಅಧಿಕಾರಿ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕುಡಿದು ಗಲಾಟೆ ಮಾಡಿದ ಆರೋಪದಡಿ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಸೇರಿದಂತೆ ಐವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಕಾಸ್ ಅವರ ಸ್ನೇಹಿತರಾದ ನಿತೇಶ್, ಅಭಯ್, ಉದಯ್ ಸಿಂಗ್ ಹಾಗೂ ರೋಷನ್ ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ರಾತ್ರಿ 1.30ರ ಸುಮಾರಿಗೆ ಪಬ್ ಪರಿಶೀಲನೆಗೆ ತೆರಳಿದ್ದ ಸಿಸಿಬಿ ಪೊಲೀಸರ ಬಳಿ ಗುರುತಿನ ಚೀಟಿ ಕೇಳಿದಾಗ ವಿಕಾಸ್ ಮರ್ಮಠ್ ಆಕ್ಷೇಪ ವ್ಯಕ್ತಪಡಿಸಿ, ಕರ್ತವ್ಯದಲ್ಲಿದ್ದ ಇನ್ಸ್‌ಪೆಕ್ಟರ್‌ಗೆ ನಿಂದಿಸಿ ಕಪಾಳಕ್ಕೆ …

Read More »

ಮಂಗಳೂರು : ಅನೈತಿಕ ಸಂಬಂಧ ಶಂಕೆ ಹಿನ್ನಲೆ, ಚೂರಿಯಿಂದ ಇರಿದು ಪತ್ನಿಯ ಭೀಕರ ಕೊಲೆ, ಪತಿ ಅರೆಸ್ಟ್!

ಮಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸೋನಾಲಿ (30) ಕೊಲೆಯಾದ ಮಹಿಳೆ. ಆರೋಪಿ ಪತಿ ಶಿವಲಿಂಗಪ್ಪ (40)ನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 12ರಂದು ಬಾಡಿಗೆ ಮನೆಯಲ್ಲಿ ದಂಪತಿ ನಡುವೆ ಅನೈತಿಕ ಸಂಬಂಧದ ಶಂಕೆಯಿಂದ ಜಗಳ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಶಿವಲಿಂಗಪ್ಪ ಪತ್ನಿಯನ್ನು ಚೂರಿಯಿಂದ …

Read More »

ಮೊಬೈಲ್ ಗಲಾಟೆಯಿಂದ ವ್ಯಕ್ತಿ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮೊಬೈಲ್ ವಾಪಸ್ ನೀಡದೆ ಹಾಳು ಮಾಡಿದ್ದ ದ್ವೇಷದಿಂದ ವ್ಯಕ್ತಿಯನ್ನು ಮರದ ಸೊಂಟೆಯಿಂದ ಹೊಡೆದು ಕೊಲೆ ಮಾಡಿದ ಧರ್ಮರಾಜ್ ಸುವರ್ಣ (50) ಎಂಬಾತನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿದೆ. 2024ರ ಸೆಪ್ಟೆಂಬರ್ 21ರಂದು ತೋಟ ಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಭಾಗದ ಸಮುದ್ರ ಕಿನಾರೆ ಬಳಿ ಬಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ …

Read More »

ದೇವಸ್ಥಾನಗಳೇ ಟಾರ್ಗೆಟ್! ವಿಗ್ರಹ ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್

ಬೆಂಗಳೂರು: ದೇವಸ್ಥಾನಗಳಲ್ಲಿನ ದೇವರ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ, ಆಂಜನೇಯ ಹಾಗೂ ಲಕ್ಷ್ಮೀ ನಾಗರ ಸೇರಿದಂತೆ ನಾಲ್ಕು ವಿಗ್ರಹಗಳನ್ನು ಕಳವು ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ ವಿಗ್ರಹಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದೇವಸ್ಥಾನಗಳ ವಿಗ್ರಹಗಳಲ್ಲದೆ, ನಿರ್ಮಾಣ ಹಂತದ ಕಟ್ಟಡಗಳಲ್ಲಿನ ಯಂತ್ರೋಪಕರಣಗಳನ್ನೂ ಆರೋಪಿಗಳು ಕದ್ದಿರುವ ಆರೋಪವಿದೆ. …

Read More »

ಮಂಡ್ಯ: ‘ಮನ್‌ಮುಲ್‌’ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ

ಮಂಡ್ಯ: ಮನ್‌ಮುಲ್‌ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕೇರಳ ಮೂಲದ ಅನಸ್‌, ತೂಬಿನಕೆರೆಯ ವಿಜೇಶ್‌ ಮತ್ತು ಮದ್ದೂರಿನ ಅರ್ಪಿತ್‌ ಬಂಧಿತರು. ವಿಜೇಶ್‌ ಮತ್ತು ಅನಸ್‌ ತೂಬಿನಕೆರೆಯಲ್ಲಿ ಎ.ವಿ. ಟ್ರೇಡರ್ಸ್‌ ಹೆಸರಿನಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸುತ್ತಿದ್ದರು. ಪ್ರಕರಣದ ಪ್ರಮುಖ ಆರೋಪಿ ಪ್ರದೀಪ್‌ಕುಮಾರ್‌ ಜಾಧವ್‌ ಕಡಿಮೆ ದರದಲ್ಲಿ ಹಾಲಿನ ಪುಡಿ ನೀಡುವ ಆಮಿಷವೊಡ್ಡಿದ್ದರಿಂದ, ಕಳೆದ ಎರಡು ವರ್ಷಗಳಿಂದ ಟನ್‌ಗಟ್ಟಲೆ ಹಾಲಿನ …

Read More »