ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಆಸ್ತಿ ವೈಷಮ್ಯ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ವೀರಭದ್ರಪ್ಪ (55) ಎಂದು ಗುರುತಿಸಲಾಗಿದೆ. ಕುಟುಂಬಗಳ ನಡುವಿನ ಆಸ್ತಿ ವಿವಾದವೇ ಈ ಕೊಲೆಗೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.ಈ ಕೃತ್ಯವನ್ನು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ನಡೆಸಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ದೊಡ್ಡಾಲಘಟ್ಟದಿಂದ ಜಮೀನಿಗೆ ತೆರಳುವ ರಸ್ತೆಯಲ್ಲಿ ವೀರಭದ್ರಪ್ಪ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆ …
Read More »ಹಾಸನ – ಖಾಸಗಿ ಬಸ್-ಲಾರಿ ಡಿಕ್ಕಿ – ಕುಂದಾಪುರ ಮೂಲದ ಪ್ರಯಾಣಿಕ ಸಾವು
ಹಾಸನ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ಮೂಲದ ಪ್ರಯಾಣಿಕ ಸಾವನಪ್ಪಿದ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಸಮೀಪದ ಅಮ್ಮಕುಟೀರ ಬಡಾವಣೆಯ ಬಳಿ ಮಂಗಳವಾರ ಮುಂಜಾನೆ 4.30ರ ಸಂಭವಿಸಿದೆ. ಮೃತರನ್ನು ಕುಂದಾಪುರ ಮೂಲದ ಕೃಷ್ಣಶೆಟ್ಟಿ (42) ಸ್ಥಳದಲ್ಲೇ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ದುರ್ಗಾಂಬ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಾಗುತ್ತಿದ್ದ ವೇಳೆ, …
Read More »ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್ಐ & ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!
ಕೋಲಾರ : ನಿವೇಶನ ಸಂಬಂಧ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಕೋಲಾರ ನಗರಸಭೆಯ ಆರ್ಐ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ನಗರಸಭೆ ಆರ್ಐ ಕಿರಣ್ ಕುಮಾರ್ ಹಾಗೂ ಬಿಲ್ ಕಲೆಕ್ಟರ್ ನಟರಾಜ್ ಮತ್ತು ಬ್ರೋಕರ್ ವೆಂಕಟೇಶಪ್ಪ ಲೋಕಾ ಅಧಿಕಾರಿಗಳ ಬಲೆಗೆ ಬಿದ್ದ ಆರೋಪಿಗಳು. ಕೋಲಾರ ನಗರಸಭೆ ಆವರಣದಲ್ಲಿ ಮುನಾವರ್ ಎಂಬುವರಿಂದ 15 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ DYSP ವೆಂಕಟೇಶ್ ನೇತೃತ್ವದಲ್ಲಿ ಅಧಿಕಾರಿಗಳು …
Read More »ಆನ್ಲೈನ್ ಗೇಮ್ ಗೆ ವೈದ್ಯ ವಿದ್ಯಾರ್ಥಿ ಬಲಿ
ಬೀದರ್: ಆನ್ಲೈನ್ ಗೇಮ್ ಚಟದಿಂದಾಗಿ ಸಾಲದ ಸುಳಿಗೆ ಸಿಲುಕಿದ ಎಂಬಿಬಿಎಸ್ ಅಂತಿಮ ವರ್ಷದ ಆತ್ಮಹತ್ಯೆಗೆ ಶರಣಾದ ಘಟನೆ ಇಲ್ಲಿನ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್) ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಾಲತ್ಯಾ ತಾಂಡಾ ನಿವಾಸಿ ಅನಿಷ್ಕಾರ್ ಚವ್ಹಾಣ (೨೧) ಮೃತ ವಿದ್ಯಾರ್ಥಿ. ಸೋಮವಾರ ತಡರಾತ್ರಿ ಹಾಸ್ಟೆಲ್ ಕೊಠಡಿಯಲ್ಲಿ ಮಲಗಲು ಹೋಗಿದ್ದ ಅನಿಷ್ಕಾರ್ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ …
Read More »ಜಮೀನು ಜಗಳದ ರಕ್ತಸಿಕ್ತ ಅಂತ್ಯ: ಮಚ್ಚಿನಿಂದ ಕೊಚ್ಚಿ ರೈತನ ಭೀಕರ ಹತ್ಯೆ!
ಚಿತ್ರದುರ್ಗ: ಜಮೀನು ವಿವಾದದ ಹಿನ್ನೆಲೆ ಭೀಕರ ಕೊಲೆ ನಡೆದಿದ್ದು, ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ರೈತನೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತ ರೈತನನ್ನು ವೀರಣ್ಣ ಎಂದು ಗುರುತಿಸಲಾಗಿದ್ದು, ಸಂಬಂಧಿಕರ ನಡುವೆ ನಡೆದ ಹಳೆಯ ದ್ವೇಷವೇ ಈ ಹತ್ಯೆಗೆ ಕಾರಣವಾಗಿದೆ. ಕಾಂತರಾಜ್ ಹಾಗೂ ಅವನ ಮಗನೊಂದಿಗೆ ಜಮೀನು ವಿಚಾರವಾಗಿ ಉಂಟಾದ ಜಗಳದಲ್ಲಿ, ಹಿಂದೆ ವೀರಣ್ಣ ಕಾಂತರಾಜ್ ಮೇಲೆ ಹಲ್ಲೆ ನಡೆಸಿದ್ದನು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಕಾಂತರಾಜ್ ಮಗ, ಇಂದು ವೀರಣ್ಣ ಹೊಲದಲ್ಲಿ …
Read More »ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವವು ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ …
Read More »ಪೆಟ್ರೋಲ್ ಸುರಿದು ಮಹಿಳೆಯ ಕೊಲೆ ಯತ್ನ : ಚಿಕಿತ್ಸೆ ಫಲಿಸದೆ ವೃದ್ಧೆ ಸಾವು
ಚಿಕ್ಕಬಳ್ಳಾಪುರ: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಚಿಂತಾಮಣಿಯ ಕೆಜಿಎನ್ ಬಡಾವಣೆಯ ಲಕ್ಷ್ಮಿದೇವಮ್ಮ(60) ಮೃತ ಮಹಿಳೆ. ಕಿಡಿಗೇಡಿಗಳು ಮಹಿಳೆ ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಕೊಲೆ ಯತ್ನಿಸಿದ್ದರು. ಈ ಹಿನ್ನೆಲೆ ಮಹಿಳೆ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆದರೆ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಮೃತ ಮಹಿಳೆಯ ಮಗ …
Read More »ತರಕಾರಿ ಗಾಡಿಯಲ್ಲಿ ಗಾಂಜಾ ಘಮಲು – ಜಪ್ತಿಯಾಯ್ತು 3 ಕೋಟಿ ರೂ. ಮೌಲ್ಯದ ಮಾಲು!
ಬೆಂಗಳೂರು: ತರಕಾರಿ ಸಾಗಾಣಿಕೆ ಹೆಸರಿನಲ್ಲಿ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಸಿಸಿಬಿ ಪೊಲೀಸರು ಬಯಲುಗೊಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಭಾನುವಾರ ಮಧ್ಯಾಹ್ನ ದಾಳಿ ನಡೆಸಿದ ಮಾದಕ ದ್ರವ್ಯ ನಿಗ್ರಹ ದಳ, ನಾಯಂಡಹಳ್ಳಿ ಬಳಿ ಲಾರಿಯನ್ನು ಸೀಜ್ ಮಾಡಿ ದೊಡ್ಡ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡಿದೆ. ಆಂಧ್ರ ಪ್ರದೇಶದ ವೈಜಾಗ್ ಸಮೀಪದ ಅರಕ್ಕು ಪ್ರದೇಶದಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಗಾಂಜಾವನ್ನು ಲಾರಿಯ ಕಂಟೇನರ್ನಲ್ಲಿ ಗುಪ್ತವಾಗಿ ಸಾಗಿಸಲಾಗುತ್ತಿತ್ತು. ಈ ಲಾರಿ ಬೆಂಗಳೂರು ಮೂಲಕ ಮೈಸೂರು ಹಾಗೂ …
Read More »ಮಸೀದಿ ವಿಚಾರದಲ್ಲಿ ತಕರಾರು – ದೊಣ್ಣೆ , ತಲವಾರು ಹಿಡಿದು ಬಡಿದಾಟ!
ಮಂಗಳೂರು : ಮಸೀದಿ ವಿಚಾರಕ್ಕೆ ಎರಡು ಗುಂಪುಗಳು ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಸಮೀಪದ ಉಳ್ಳಾಲದ ಸಜಿಪ ಪಡು ತಲೆಮೊಗರು ಗಾಮದಲ್ಲಿ ಈ ಘಟನೆ ನಡೆದಿದ್ದು, ಮಸೀದಿ ಬಳಿ ಎರಡು ಗುಂಪುಗಳ ನಡುವಿನ ತಗಾದೆ ಜಗಳದಲ್ಲಿ ಕೊನೆಗೊಂಡಿದ್ದು ಈ ಘಟನೆಯ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ.ಮಸೀದಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ನಡೆಯುತ್ತಿತ್ತು. ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾಗ ತಕರಾರು ಉಂಟಾದ ಪರಿಣಾಮ …
Read More »ಜಮೀನಿಗೆ ನೀರು ಹಾಯಿಸುವ ವಿಚಾರವಾಗಿ ಜಗಳ: ತಮ್ಮನನ್ನೇ ಕೊಲೆಗೈದ ಅಣ್ಣ
ಬೆಳಗಾವಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿದೆ. ಜಮೀನಿಗೆ ನೀರು ಹರಿಸುವ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಗಲಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಣ್ಣ-ತಮ್ಮನ ನಡುವೆ ಜಗಳವಾಗಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಯಲ್ಲಪ್ಪ ದೇಮಪ್ಪ ಸಣ್ಣಮ್ಮನವರ (45) ಕೊಲೆಯಾಗಿರುವ ವ್ಯಕ್ತಿ. ಮಹಾದೇವಪ್ಪ ದೇವಪ್ಪ ಸಣ್ಣಮ್ಮನವರ (55) ತಮ್ಮನನ್ನೇ ಕೊಂದ ಅಣ್ಣ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





