ಆನಂದಪುರ: ತಾಲೂಕಿನ ಕರಡಿಮನೆ ಗ್ರಾಮದಲ್ಲಿ ರೈತರೊಬ್ಬರ ಕೊಟ್ಟಿಗೆಯಿಂದ ಎತ್ತು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಆನಂದಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನ ನಡೆದ ಕೇವಲ ಎರಡೇ ದಿನಗಳಲ್ಲಿ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಾರ್ಚ್ 17ರಂದು ಕರಡಿಮನೆ ಗ್ರಾಮದ ಸುರೇಶ್ ಎಂಬುವವರ ತೋಟದ ಮನೆಯ ಕೊಟ್ಟಿಗೆಯಲ್ಲಿ ಸುಮಾರು 15 ಸಾವಿರ ಮೌಲ್ಯದ ಎತ್ತನ್ನು ಕಟ್ಟಿಹಾಕಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿದ ಕಳ್ಳರು ಎತ್ತನ್ನು ಅಪಹರಿಸಿ ಪರಾರಿಯಾಗಿದ್ದರು. ಈ ಬಗ್ಗೆ …
Read More »ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ.ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ. ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ …
Read More »ಫಾರ್ಚೂನರ್ ಕಾರಿನಲ್ಲಿ ಅಕ್ರಮ ದನ ಸಾಗಾಟ; ಪೊಲೀಸರನ್ನು ಕಂಡು ಆರೋಪಿಗಳು ಪರಾರಿ
ಮಂಗಳೂರು ಮಾರ್ಚ್ 19: ಐಷಾರಾಮಿ ಫಾರ್ಚೂನರ್ ಕಾರಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ನಾಲ್ಕು ದನಗಳನ್ನು ರಕ್ಷಿಸಿದ್ದಾರೆ. ತೆಂಕ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಬಳಿ ಗುರುವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಮಾರ್ಚ್ 18ರಂದು ಬೆಳಗಿನ ಜಾವ 4:45ರ ಸುಮಾರಿಗೆ ಪೊಲೀಸರು ಗಸ್ತಿನಲ್ಲಿದ್ದಾಗ ಸಾಸ್ತಾವು ದೇವಸ್ಥಾನದ ಬಳಿ ಫಾರ್ಚೂನರ್ ಕಾರಿನಲ್ಲಿ ದನಗಳನ್ನು ಅಕ್ರಮವಾಗಿ ತುಂಬುತ್ತಿದ್ದಾರೆ ಎಂಬ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಸ್ಥಳಕ್ಕೆ …
Read More »ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಲೈಂಗಿಕ ದೌರ್ಜನ್ಯ.!
ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ ನವಲಗುಂದ ತಾಲೂಕಿನಲ್ಲಿ ನಡೆದಿದೆ. ಬುಧವಾರ (ಮಾರ್ಚ್ 18ರಂದು) ಸಂಜೆ 4:30 ಸುಮಾರಿಗೆ ಮುಖ್ಯಶಿಕ್ಷಕ ಬಾಲಕಿಯನ್ನು ತನ್ನ ಕಚೇರಿ ಸಮೀಪದ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ ವರ್ತನೆಯಿಂದ ಗಾಬರಿಗೊಂಡ ಬಾಲಕಿ ತನ್ನ ಪೋಷಕರ ಬಳಿ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ. ಈ ಸಂಬಂಧ ಬಾಲಕಿಯ …
Read More »ಏಕಾಏಕಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್: ಅದೃಷ್ಟವಶಾತ್ ಚಾಲಕ ಪಾರು
ಬೆಂಗಳೂರು: ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದಿದೆ. ವರ್ನಾ ಕಾರ್ ಚಲಿಸುತ್ತಿದ್ದ ವೇಳೆಯಲ್ಲಿ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದಿದೆ.ಈ ವೇಳೆ ಎಚ್ಚೆತ್ತ ಚಾಲಕ ರಸ್ತೆ ಬದಿ ಕಾರ್ ನಿಲ್ಲಿಸಿ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!
ಹಾಸನ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದ್ದು, ದುಷ್ಟರು ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದು ಸುಟ್ಟು ಹಾಕಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ವರುಣ್.ಕೆ.ಎಂ (22) ಎಂದು ಗುರುತಿಸಲಾಗಿದೆ.ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಬಳಿಕ ವರುಣ್ ಶವದ ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ್ದಾರೆ. ಮಾ.15 ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ವರುಣ್ ಕಾಣೆಯಾದ …
Read More »ಮದುವೇಲಿ ಮಕ್ಕಳ ಗುರಿಯಾಗಿಸಿ ಚಿನ್ನ ಕದಿಯುತ್ತಿದ್ದ ಆರೋಪಿ ಸೆರೆ
ಬೆಂಗಳೂರು: ಅರಮನೆ ಮೈದಾನ, ಕಲ್ಯಾಣ ಮಂಟಪಗಳಲ್ಲಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಅವರು ಧರಿಸಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂದ್ರಹಳ್ಳಿ ನಿವಾಸಿ ಬಾಬು ಅಲಿಯಾಸ್ ಪಲ್ಸರ್ ಬಾಬು (45) ಬಂಧಿತ. ಆರೋಪಿಯಿಂದ 42.38 ಲಕ್ಷ ರೂ. ಮೌಲ್ಯದ 132 ಗ್ರಾಂ ಚಿನ್ನಾಭರಣ, 1.20 ಲಕ್ಷ ರೂ. ನಗದು, 7 ಮೊಬೈಲ್, 2 ಲ್ಯಾಪ್ಟಾಪ್, 2 ಕಾರು, 4 ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿ 2025ರ …
Read More »ಮುಳಬಾಗಿಲು | ಗಾಂಜಾ ಮಾರಾಟ: ಆರೋಪಿ ಬಂಧನ
ಅಕ್ರಮವಾಗಿ ಯುವಕರಿಗೆ ಪ್ರತಿನಿತ್ಯ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಳಬಾಗಿಲು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮುಳಬಾಗಿಲು ನಗರದ ಶಾಮಿರ್ ಮೊಹಲ್ಲಾ ನಿವಾಸಿ ಶಾಮಿರ್ ಪಾಷಾ (38) ಬಂಧಿತ ಆರೋಪಿ. ಬಂಧಿತನಿಂದ ₹50 ಸಾವಿರ ಮೌಲ್ಯದ 1.ಕೆಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶಾಮಿರ್ ಪಾಷಾ ಪ್ರತಿನಿತ್ಯ ನಗರದ ಸೋಮೇಶ್ವರ ಪಾಳ್ಯದ ಉದ್ಯಾನವನದ ಬಳಿಯಲ್ಲಿ ಯುವಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ …
Read More »ಬಸ್ -ಆಟೋ ನಡುವೆ ಢಿಕ್ಕಿ; ಓರ್ವ ಮೃತ್ಯು, ಮೂವರಿಗೆ ಗಾಯ
ಶಿವಮೊಗ್ಗ : ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗದ ಬುದ್ಧನಗರದ ನಿವಾಸಿ ಪ್ರೇಮ್ ಕುಮಾರ್ (24) ಅಪಘಾತದಲ್ಲಿ ಮೃತಪಟ್ಟ ಯುವಕ. ಆಟೋದಲ್ಲಿದ್ದ ಮನೋಜ್ (21), ಪವನ್ (21) ಹಾಗೂ ಗಿರೀಶ್ (21) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ …
Read More »ಪರಸ್ತ್ರೀ ಜೊತೆ ಅಪ್ಪನ ಅನೈತಿಕ ಸಂಬಂಧ, ಮಗನಿಂದಲೇ ತಂದೆಯ ಮರ್ಡರ್!
ಯಾದಗಿರಿ : ಜಿಲ್ಲೆಯ ಗೋನಾಳ ಗ್ರಾಮದಲ್ಲಿ ಇತ್ತೀಚೆಗೆ ನಡೆದ ವೃದ್ಧನ ಹತ್ಯೆ ಪ್ರಕರಣವು ಅನಿರೀಕ್ಷಿತ ತಿರುವು ಪಡೆದಿದ್ದು, ಪರಸ್ತ್ರಿ ಜೊತೆಗೆ ತಂದೆಯ ಅನೈತಿಕ ಸಂಬಂಧದಿಂದ ಬೇಸತ್ತ ಮಗನೇ ಈ ಕೃತ್ಯದ ಸೂತ್ರಧಾರ ಎಂದು ತಿಳಿದುಬಂದಿದೆ. ಮೃತ ಹಂಪಣ್ಣ ಸಜ್ಜನ್ ಎಂಬುವವರು ಅಗಾಧ ಆಸ್ತಿ ಹೊಂದಿದ್ದರೂ, ಮದ್ಯ ಹಾಗೂ ಪರಸ್ತ್ರೀಯರ ವ್ಯಾಮೋಹಕ್ಕೆ ಬಿದ್ದು ಸೊಸೆ ಸೇರಿದಂತೆ ಮನೆಯವರ ಮಾನಕ್ಕೆ ಧಕ್ಕೆ ತರುತ್ತಿದ್ದರು. ಈ ಅವಮಾನವನ್ನು ಸಹಿಸದ ಮಗ ನರಸರೆಡ್ಡಿ, ಎರಡೂವರೆ ಲಕ್ಷ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





