ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಬಳಿ ಇರುವ ಬಿಲ್ಡಿಂಗ್ನ ನಾಲ್ಕನೇ ಮಹಡಿಯ ಮನೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಅಭಿನಂದನ್ ಶರ್ಮಾ, ಅಭಿಷೇಕ್ ಶರ್ಮಾ ಮತ್ತು ರಾಮ್ ಭಚನ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಸೋಂಪುರ ಕೈಗಾರಿಕಾ ಪ್ರದೇಶದ ಮಾರುತಿ ಸುಜುಕಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ಗಳಾಗಿ ಕೆಲಸ ಮಾಡುತ್ತಿದ್ದರು. ಮೇಲ್ನೋಟಕ್ಕೆ ಅಡುಗೆ ಅನಿಲ (LPG) ಸೋರಿಕೆಯಾಗಿ ಈ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ …
Read More »ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್ಗಳ ಸ್ಫೋಟ, 7 ಮಂದಿ ಸಜೀವದಹನ
ಇಂದೋರ್: ಇವಿ ಚಾರ್ಜಿಂಗ್ ಸ್ಫೋಟಗೊಂಡ ಪರಿಣಾಮ ಬೆಂಕಿ ಮನೆಗೂ ತಗುಲಿದ್ದು, ಇದರ ಪರಿಣಾಮ ಮನೆಯೊಳಗಿದ್ದ 10ಸಿಲಿಂಡರ್ಗಳು ಸ್ಫೋಟಗೊಂಡಿದ್ದು, 7 ಮಂದಿ ಸಜೀವದಹನವಾಗಿರುವ ಘಟನೆ ಇಂದೋರ್ನಲ್ಲಿ ನಡೆದಿದೆ.ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪುಗಾಲಿಯಾ ಕುಟುಂಬದ ಮನೆಯ ಹೊರಗೆ ವಿದ್ಯುತ್ ವಾಹನ (ಇವಿ) ಚಾರ್ಜಿಂಗ್ ಪಾಯಿಂಟ್ನಲ್ಲಿ ಶಂಕಿತ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ, ಜ್ವಾಲೆಗಳು ವಾಹನದಿಂದ ಮೂರು ಅಂತಸ್ತಿನ ವಸತಿ ಕಟ್ಟಡಕ್ಕೆ ವೇಗವಾಗಿ ಹರಡಿ …
Read More »ಧಾರವಾಡದಲ್ಲಿ ಯುಗಾದಿ ದಿನವೇ ರಕ್ತಪಾತ: ಆಸ್ತಿಗಾಗಿ ಒಡ ಹುಟ್ಟಿದ ತಂಗಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಅಣ್ಣ!
ಹೊಸ ವರ್ಷದ ಸಂಭ್ರಮ ತರಬೇಕಿದ್ದ ಯುಗಾದಿ ಹಬ್ಬದ ದಿನವೇ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಭೀಕರ ರಕ್ತಪಾತ ನಡೆದಿದೆ. ಕೇವಲ ಆಸ್ತಿ ಆಸೆಗಾಗಿ ಅಣ್ಣನೇ ತನ್ನ ಒಡಹುಟ್ಟಿದ ತಂಗಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಕೊಲೆಯಾದ ದುರ್ದೈವಿಯನ್ನು ಶಿವಲೀಲಾ ಸಂಗೊಳ್ಳಿ (35) ಎಂದು ಗುರುತಿಸಲಾಗಿದೆ. ಅಮ್ಮಿನಬಾವಿಯ ಹಣಮಂತ ಎಲೆವಾಳ ಎಂಬಾತನೇ ತನ್ನ ತಂಗಿಯನ್ನ ಕೊಂದ ಆರೋಪಿ. ಎಲೆವಾಳ ಕುಟುಂಬವು ಗ್ರಾಮದಲ್ಲಿ ಒಟ್ಟು ಆರು ಎಕರೆ ಕೃಷಿ …
Read More »ರೌಡಿಗಳಿಗೆ ಪಿಸ್ತೂಲ್ ಮಾರಾಟ: ಆರೋಪಿ ಬಂಧನ
ಬೆಂಗಳೂರು: ರೌಡಿಶೀಟರ್ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದವರಿಗೆ ಕಂಟ್ರಿ ಮೆಡ್ ಪಿಸ್ತೂಲ್, ರಿವಾಲ್ವರ್ಗಳನ್ನು ಮಾರುತ್ತಿದ್ದ ಭೂಪಾಲ್ ಮೂಲದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದೆ. ಮಧ್ಯಪ್ರದೇಶದ ಭೂಪಾಲ್ ಮೂಲದ ಸೈಯದ್ ಇರ್ಫಾನ್ ರಿಜ್ಜಿ (34) ಬಂಧಿತ. ಈತನಿಂದ 3 ಕಂಟ್ರಿಮೆಡ್ ಪಿಸ್ತೂಲ್, 1 ರಿವಾಲ್ವರ್ ಹಾಗೂ 2 ಜೀವಂತ ಗುಂಡು ವಶಕ್ಕೆ ಪಡೆಯಲಾಗಿದೆ. ಆರೋಪಿ ಈ ಹಿಂದೆ ನಗರದ ರೌಡಿಶೀಟರ್ ಮಸೂದ್, ಜಾವೀದ್ ಎಂಬುವ ರಿಗೆ ಗನ್ …
Read More »ಎಕ್ಸ್ಪ್ರೆಸ್ ವೇಯಲ್ಲಿ ಗೂಡ್ಸ್ ವಾಹನ ಅಪಘಾತ – ಒಬ್ಬ ಸಾ*ವು, ಮತ್ತೋರ್ವ ಗಂಭೀರ.!
ರಾಮನಗರ ತಾಲೂಕಿನ ಮಾಯಗಾನಹಳ್ಳಿ ಸಮೀಪ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಡಿವೈಡರ್ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಅಮೀರ್ (25) ಎಂಬುವವರು ಮೃತಪಟ್ಟಿದ್ದಾರೆ. ಗೂಡ್ಸ್ ವಾಹನ ಮೈಸೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ಜಖಂಗೊಂಡಿದ್ದು, …
Read More »ಸ್ಥಳ ಮಹಜರು ಸಮಯದಲ್ಲಿ ಪೊಲೀಸ್ ಮೇಲೆ ಹಲ್ಲೆ : ವ್ಯಕ್ತಿಗೆ 2 ವರ್ಷ ಶಿಕ್ಷೆ
ತುಮಕೂರು: ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ಸಮಯದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಸರ್ವಿ ಅಲಿಯಾಸ್ ಸರವಣ ಎಂಬಾತನಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ, ₹5 ಸಾವಿರ ದಂಡ ವಿಧಿಸಿದೆ. ನಗರದ ಹೊಸ ಬಡಾವಣೆ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2015ರ ಜೂನ್ 22ರಂದು ಪೊಲೀಸರು ಸರ್ವಿಯನ್ನು ತಾಲ್ಲೂಕಿನ ಅಯ್ಯನಪಾಳ್ಯಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಸರ್ವಿ ಮಾರ್ಗ ಮಧ್ಯೆ …
Read More »ಸಿಂಧನೂರು | ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ
ಸರಕಾರಿ ಸೇವೆಯಲ್ಲಿದ್ದುಕೊಂಡೇ ಮಠ ಸ್ಥಾಪಿಸಿ, ಸ್ವಾಮೀಜಿಯಾಗಿದ್ದ ಮುಖ್ಯಗುರುವೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಮುಳ್ಳೂರು ಇಜೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ದೇವೆಂದ್ರಪ್ಪ (58) ಮೃತರು. ಸರಕಾರಿ ಶಿಕ್ಷಕನಾಗಿ ಸೇವೆಯಲ್ಲಿದ್ದ ದೇವೆಂದ್ರಪ್ಪ ಅವರು, ಕಳೆದ ಅನೇಕ ವರ್ಷಗಳಿಂದ ವೈರಾಗ್ಯ ಜೀವನದತ್ತ ಮುಖ ಮಾಡಿದ್ದರು ಎನ್ನಲಾಗಿದೆ. ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗುಳಗುಳಿ ಗ್ರಾಮದ …
Read More »ಕಾರಿನಲ್ಲಿ ಜಾನುವಾರು ಸಾಗಾಟ ಪತ್ತೆ
ಬಜಪೆ: ತೆಂಕ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಬಳಿ ಫಾರ್ಚೂನರ್ ಕಾರಿನಲ್ಲಿ ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿದ ಗಸ್ತು ನಿರತ ಬಜಪೆ ಪೊಲೀಸರು, ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಾನುವಾರುಗಳನ್ನು ರಕ್ಷಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಕಾರಿನಲ್ಲಿ 4 ದನಗಳನ್ನು ಕೈ ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ದನಗಳನ್ನು ಎಲ್ಲಿಂದಲೋ ಕಳವು ಮಾಡಿಕೊಂಡು ಬಂದು, ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆದ ಕಾರಿನ …
Read More »ರಸ್ತೆ ಅಪಘಾತ: ವ್ಯಕ್ತಿಯ ಸಾವಿಗೆ ಕಾರಣನಾದ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ, ದಂಡ
ಸಾಗರ: ತಾಲ್ಲೂಕಿನ ಗೌತಮಪುರ ಗ್ರಾಮದ ಬಳಿ ಹಾಲು ಸಾಗಿಸುವ ಕ್ಯಾಂಟರ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಮಾರುತಿ ಓಮಿನಿಗೆ ಡಿಕ್ಕಿ ಹೊಡೆಸಿ, ಅದರಲ್ಲಿದ್ದ ವ್ಯಕ್ತಿಯ ಸಾವಿಗೆ ಕಾರಣನಾದ ಚಾಲಕನಿಗೆ ಇಲ್ಲಿನ ಹಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧೀಶರ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ, ₹ 35 ಸಾವಿರ ದಂಡ ವಿಧಿಸಿದೆ. ಶಿಕಾರಿಪುರದ ಇನಾಮ್ ಅಗ್ರಹಾರ ಬಡಾವಣೆಯ ಶಿವಾನಂದ ಟಿ.ಟಿ. ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. 2024ರ ಸಾಲಿನ ಜೂನ್ …
Read More »ಕನ್ನಡಿಗ ಯುಪಿಎಸ್ಸಿ ರ್ಯಾಂಕ್ ವಿಜೇತನ ಹೆಸರಲ್ಲಿ ಕಳ್ಳಾಟ!
ಕರ್ನಾಟಕದ ಚಿಕ್ಕಬಳ್ಳಾಪುರದ ಯುವಕ ಪಡೆದಿದ್ದ ಯುಪಿಎಸ್ಸಿ ರ್ಯಾಂಕ್ ಅನ್ನು, ತನ್ನದೆಂದು ಸುಳ್ಳು ಹೇಳಿಕೊಂಡು ಸನ್ಮಾನ ಸ್ವೀಕರಿಸಿದ್ದ ಬಿಹಾರದ ಯುವಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಶೇಖ್ಪುರದ ನಿವಾಸಿ ರಂಜೀತ್ ಕುಮಾರ್ ಬಂಧಿತ. ಮಾ.6ರಂದು 2025ನೇ ಸಾಲಿನ ಯುಸಿಎಸ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ 440ನೇ ರ್ಯಾಂಕ್ ಅನ್ನು ಚಿಕ್ಕಬಳ್ಳಾಪುರದ ರಂಜಿತ್ ಕುಮಾರ್ ಎಂಬುವವರು ಪಡೆದಿದ್ದರು. ಆದರೆ ಬಿಹಾರದ ರಂಜೀತ್ ತಾನೇ 440ನೇ ರ್ಯಾಂಕ್ ಪಡೆದಿದ್ದೇನೆ ಎಂದು ಊರವರನ್ನು ನಂಬಿಸಿದ್ದ. ಶಾಸಕರು, ಸ್ಥಳೀಯ ಮುಖಂಡರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





