ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸದೆ ಶೇಷಾದ್ರಿ ಜಂಕ್ಷನ್ ಬಳಿ ರಸ್ತೆತಡೆ ನಡೆಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಭೀಮಸೇನ ಘಾಟಗೆ ಅವರ ದೂರಿನ ಮೇರೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ, ಸಂಘಟನಾ ಸಂಚಾಲಕರಾದ ಹನುಮಂತಪ್ಪ ಕಾಕರಗಲ್, ಎಸ್.ಫಕೀರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೈಕೋರ್ಟ್ ಆದೇಶದ ಪ್ರಕಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ …
Read More »ನಕಲಿ ನೋಟು ಚಲಾವಣೆ: ಬೆಳಗಾವಿಯಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್
ಬೆಳಗಾವಿ: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಳಗಾವಿಯ ಮಾರ್ಕೆಟ್ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ ಅರ್ಬಾಜ (21), ರೂಪೇಶ ಹನುಮಂತ ವಾಕೋಡೆ (26) ಮೊಹಮ್ಮದ ಹುಸೇನ ಬಕ್ಷಿ (23) ಹಾಗೂ ಶ್ರವಣಕುಮಾರ (25) ಎಂದು ಗುರುತಿಸಲಾಗಿದೆ. ಆರೋಪಿಗಳು ಖಡೇಬಜಾರ ರಸ್ತೆಯಲ್ಲಿರುವ ಅಂಗಡಿಯಲ್ಲಿ ಸಾಮಾನು ಖರೀದಿ ಮಾಡಿ 500 ರೂ. ಮುಖಬೆಲೆಯ ನಕಲಿ ನೋಟು ನೀಡುವಾಗ ಖಚಿತ …
Read More »ಎಣ್ಣೆ ಪಾರ್ಟಿಯಲ್ಲಿ ಕಿರಿಕ್, ಬೆಂಗಳೂರಲ್ಲಿ ಯುವಕನ ಬರ್ಬರ ಕೊಲೆ
ಬೆಂಗಳೂರು: ನಗರದ ಹೊರವಲಯದಲ್ಲಿ ಅತಿಯಾದ ಮದ್ಯಪಾನ ಹಾಗೂ ವೈಯಕ್ತಿಕ ದ್ವೇಷ ಮಾರಣಾಂತಿಕ ಹಲ್ಲೆಗೆ ಎಡೆ ಮಾಡಿಕೊಟ್ಟಿದೆ. ಮಾರ್ಚ್ 14ರ ತಡರಾತ್ರಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಹಿತಕರ ಘಟನೆ ಸಂಭವಿಸಿದೆ. ಸ್ನೇಹಿತರಾದ ಕಿಶೋರ್, ಜೀವನ್ ಮತ್ತು ಮುನಿರಾಜು ಒಟ್ಟಾಗಿ ಔತಣಕೂಟ ನಡೆಸುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಈ ವೇಳೆ ಕಿಶೋರ್ ಎಂಬಾತ ಜೀವನ್ ಮೇಲೆ ಹಲ್ಲೆ ನಡೆಸಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದರಿಂದ ಕೆರಳಿದ ಜೀವನ್, ಸೇಡು ತೀರಿಸಿಕೊಳ್ಳಲು …
Read More »ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣ| ಮೂಡುಬಿದಿರೆ ಇನ್ಸ್ಪೆಕ್ಟರ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು
ಮಂಗಳೂರು: ಮೂಡುಬಿದಿರೆ ಇನ್ಸ್ಪೆಕ್ಟರ್ರಿಂದ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಂದು ಖಾಸಗಿ ವಾಹಿನಿ ಯಲ್ಲಿ ಪ್ರಸಾರಗೊಂಡ ವರದಿಯನ್ನು ಆಧರಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಂಗಳವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. ಅಲ್ಲದೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಐದು ದಿನದೊಳಗೆ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ. ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪ್ರಕರಣವೊಂದಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ಲಾಕ್ಮೇಲ್ ಮಾಡಿದ್ದಲ್ಲದೆ ಸಂತ್ರಸ್ತೆಯ ಅಪ್ರಾಪ್ತ ಬಾಲಕಿಯ …
Read More »ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುರತ್ಕಲ್ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿ ಮಹಮ್ಮದ್ ಶರೀಫ್ ಸುಮಾರು 2 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದ್ದ. ಆದರೆ ಮೋಹನ್ …
Read More »ಸಾವಿನ ದವಡೆಯಿಂದ 4 ಜನ ಕಾರ್ಮಿಕರನ್ನ ಪಾರು ಮಾಡಿದ ಖಾಕಿ
ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪಿಎಸ್ಐ ಚಂದ್ರಶೇಖರ ಪರಿಸ್ಥಿತಿ ಅರಿತು ತಕ್ಷಣವೇ ಸ್ಥಳಕ್ಕಾಗಮಿಸಿ, ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ LED ಕೆಲಸಕ್ಕೆಂದು 10 ದಿನಗಳ ಹಿಂದೆ ಬಂದಿದ್ದ ಕಾರ್ಮಿಕರು ನಿನ್ನೆ ರಾತ್ರಿ ಊಟ ಮುಗಿಸಿ ತಮ್ಮ …
Read More »ಗದಗದಲ್ಲಿ ಯುವತಿ ಜೊತೆ ಮದುವೆ ವಿಚಾರಕ್ಕೆ ಗಲಾಟೆ : ಕಲ್ಲು ಎತ್ತಿ ಹಾಕಿ ತಮ್ಮನನ್ನೆ ಬರ್ಬರವಾಗಿ ಕೊಂದ ಅಣ್ಣ!
ಗದಗದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಯುವತಿಯ ಜೊತೆ ಮದುವೆ ವಿಚಾರಕ್ಕೆ ಅಣ್ಣನೊಬ್ಬ ಸ್ವಂತ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಫಕೀರಪ್ಪ (19) ಎನ್ನುವ ಯುವಕನ ಕೊಲೆ ಆಗಿದೆ.ಆರೋಪಿ ಸಹೋದರ ಅಶೋಕನನ್ನು ಸದ್ಯ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಇವರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಕ್ಕ ಮೊಲಂಗಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಲ್ಲಿಂದ …
Read More »ಹಳೆಯ ದ್ವೇಷ: ರಾಯಚೂರಿನ ಬುಳ್ಳಾಪುರ ಗ್ರಾಮದಲ್ಲಿ ಯುವಕನ ಕೊಲೆ
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಾಯಚೂರು ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಯುವಕನನ್ನು ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ನಡೆದಿದೆ. ಬುಳ್ಳಾಪುರ ಗ್ರಾಮದ ಪ್ರಾಣೇಶ(23) ಕೊಲೆಯಾದ ಯುವಕ. ದಿನ್ನಿ ಗ್ರಾಮದ ಪ್ರಸಾದ, ಮಲ್ಲೇಶ, ಮಲ್ಲಿಕಾರ್ಜುನ, ಅಮರೇಶ ಕೊಲೆ ಆರೋಪಿಗಳು. ಆರೋಪಿ ಪ್ರಸಾದ ಪತ್ನಿ ಮತ್ತು ಪ್ರಾಣೇಶ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗುತ್ತಿದೆ. ಬುಳ್ಳಾದಲ್ಲಿ ಜಾಗದ ವಿಷಯವಾಗಿ ನ್ಯಾಯ ಪಂಚಾಯಿತಿ ನಡೆಯುತ್ತಿದ್ದ ವೇಳೆ ತಾಯಿಯ ಎದುರಲ್ಲೇ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. …
Read More »ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!
ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಯುವತಿಯೋರ್ವಳ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಯುವತಿಯನ್ನು ಜೋಯಾ ಎಂದು ತಿಳಿದುಬಂದಿದ್ದು, ಆಕೆಯ ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು ಸದ್ಯ ಆರೋಪಿ ಪತ್ತೆಗಾಗಿ ಡಿಜೆ ಹಳ್ಳಿ ಠಾಣೆ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
Read More »ಅಕ್ರಮ ದಾಸ್ತಾನು: ಹುಬ್ಬಳ್ಳಿಯಲ್ಲಿ 25 ವಾಣಿಜ್ಯ ಬಳಕೆಯ ಸಿಲಿಂಡರ್ ವಶಕ್ಕೆ
ಹುಬ್ಬಳ್ಳಿ: ಇಲ್ಲಿನ ಸಿದ್ಧೇಶ್ವರ ಪಾರ್ಕ್ನಲ್ಲಿರುವ ಶಿವಸಾಗರ ಹೋಟೆಲ್ನಲ್ಲಿ ಅನಧಿಕೃವಾಗಿ ಸಂಗ್ರಹಿಸಿಟ್ಟಿದ್ದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಸಹಕಾರದೊಂದಿಗೆ ಭಾನುವಾರ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅನಿಲ ತುಂಬಿದ 25 ಸಿಲಿಂಡರ್ಗಳನ್ನು ಪತ್ತೆಹಚ್ಚಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆಯಡಿ ಹೋಟೆಲ್ ಸಹ ಮಾಲೀಕ ಸತೀಶ ಬಂಡಿ ವಿರುದ್ಧ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ದೂರು ದಾಖಲಿಸಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





