ಬೆಳಗಾವಿ: ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇ- ಮೇಲ್ ಮೂಲಕ ಹುಸಿ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಧ್ಯಾಹ್ನದ ಎಲ್ಲ ಕಲಾಪಗಳನ್ನು ತಕ್ಷಣ ಸ್ಥಗಿತಗೊಳಿಸಲಾಯಿತು.ನ್ಯಾಯಾಲಯದ ಮೇಲ್ಗೆ ಇ-ಮೇಲ್ ಸಂದೇಶ ಬರುತ್ತದ್ದಂತೆಯೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಎಲ್ಲ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ …
Read More »ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!
ಪುತ್ತೂರು: ಬಸ್ ನಲ್ಲಿ ಯುವತಿ ಜತೆ ಅನುಚಿತ ವರ್ತನೆ ಆರೋಪದ ಹಿನ್ನೆಲೆ ಯುವಕನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಂಗಳವಾರ (ಮಾ.03) ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಅವರನ್ನು ವಶಕ್ಕೆ ಪಡೆದಿದ್ದಾರೆ, ಬಳಿಕ ಮಹಿಳಾ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಯುವಕ ಯುವತಿ ಇಬ್ಬರೂ ಸುಳ್ಯ ತಾಲೂಕಿನವರು ಎಂದು …
Read More »ಸಂಚರಿಸುತ್ತಿದ್ದಾಗಲೇ ಬಸ್ನ ಇಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್
ಚಿಕ್ಕಮಗಳೂರು, ಮಾ.3: ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಬಳಿ ಇಂದು (ಮಾ.3) ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿದ್ದಾಗಲೇ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಬಸ್ ಇಂದು ಮಧ್ಯಾಹ್ನ ಜಿಲ್ಲಾ ಕೇಂದ್ರದಿಂದ ಹಾಸನಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ …
Read More »ಕೋಲಾರದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್, ಡಿಟೋನೇಟರ್ ವಶಕ್ಕೆ
ಕೋಲಾರ: ತಾಲ್ಲೂಕಿನ ತಲಗುಂದ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್ ಪತ್ತೆಯಾಗಿವೆ. ವೇಮಗಲ್ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಗ್ರಾಮದ ಮೆಹಬೂಬ್ ಪಾಷಾ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಜಮೀನಿನಲ್ಲಿನ ಬಂಡೆ ಸ್ಫೋಟಕ್ಕೆ ಬಳಸಲು ತಂದಿದ್ದಾಗಿ ಆತ ಹೇಳಿದ್ದು, ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್ಗಳನ್ನು ವಶಕ್ಕೆ ಪಡೆದಿದ್ದಾರೆ. ಶ್ವಾನದಳ, ಸೋಕೊ ತಂಡ ಪರಿಶೀಲನೆ ನಡೆಸಿದ್ದು, ಎಲ್ಲಿಂದ ತರಲಾಗಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »ಕನ್ನಂಪಲ್ಲಿ ದೊಡ್ಡ ಕೆರೆಯಲ್ಲಿ ವೃದ್ಧೆ ಶವ ಪತ್ತೆ
ಚಿಂತಾಮಣಿ: ಕನ್ನಂಪಲ್ಲಿಯ ನಿವಾಸಿ ಹಾದಿಗೆರೆ ಮುನಿಲಕ್ಷಮ್ಮ ಎಂಬುವವರ ಶವ ಕಲ್ಲಹಳ್ಳಿ ಗ್ರಾಮದ ದೊಡ್ಡಕೆರೆಯಲ್ಲಿ ಪತ್ತೆಯಾಗಿದೆ. ಕನ್ನಂಪಲ್ಲಿಯ ನಿವಾಸಿ ಹಾದಿಗೆರೆ ಆಂಜಪ್ಪ ಪತ್ನಿ ಮುನಿಲಕ್ಷಮ್ಮ ಅವರು 5 ದಿನಗಳಿಂದ ನಾಪತ್ತೆಯಾಗಿದ್ದರು. ಕುಟುಂಬದವರು ಹುಡುಕಾಟ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಸೋಮವಾರ ಬೆಳಗ್ಗೆ ದೊಡ್ಡಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಮುರಳೀಧರ್ ಮತ್ತು ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರ ಸಮ್ಮುಖದಲ್ಲಿ ಶವ ಹೊರೆತೆಗದಾಗ ಮೃತರ …
Read More »ಕುಡಿದ ಮತ್ತು: ಕ್ಷುಲ್ಲಕ ವಿಚಾರಕ್ಕೆ ಗೆಳೆಯರಿಬ್ಬರ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ
ಯಾದಗಿರಿ: ಟಿಪ್ಪರ್ ಚಾಲಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ಸೋಮವಾರ (ಮಾ.2) ತಡರಾತ್ರಿ ನಡೆದಿದ್ದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಬಸನಗೌಡ(30) ಕೊಲೆಯಾದ ವ್ಯಕ್ತಿಯಾಗಿದ್ದು, ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಕೆಲಸದ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ ಎನ್ನಲಾಗುತ್ತಿದೆ. ಜಗಳ ತಾರಕಕ್ಕೆ ಏರಿ …
Read More »ಕಾರಲ್ಲಿದ್ದ ನವ ದಂಪತಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದವರನ್ನು ಹೆಡೆಮುರಿ ಕಟ್ಟಿದ ಗ್ರಾಮೀಣ ಪೊಲೀಸರು!
ಹುಬ್ಬಳ್ಳಿ: ಖಾಲಿ ಸೈಟ್ ಬಳಿ ಇಬ್ಬರು ಗಂಡ ಹೆಂಡತಿ ಕಾರಲ್ಲಿ ಮಾತನಾಡುತ್ತಿರುವಾಗ, ಇಬ್ಬರು ಖದೀಮರು ಬಂದು ನವ ದಂಪತಿಗೆ ಚಾಕು ತೋರಿಸಿ, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬಂಗಾರ ಚೈನ್ ಮತ್ತು ಹಣ ಸುಲಿಗೆ ಮಾಡಿಕೊಂಡು ಹೋಗಿದ್ದರು. ಈ ಪ್ರಕರಣವನ್ನು ಬೆನ್ನು ಹತ್ತಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಹೌದು,,, ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮದ ಖಾಲಿ ಸೈಟ್ ಬಳಿ ನವ ದಂಪತಿ ಕಾರಲ್ಲಿ …
Read More »ಕಲಬುರಗಿ| ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ; ತೀವ್ರ ತಪಾಸಣೆ
ನಗರದ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕರರೊಬ್ಬರು ಹುಸಿ ಬಾಂಬ್ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಮತ್ತು ಶ್ವಾನದಳದಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಗೆ ಅನಾಮಿಕ ವ್ಯಕ್ತಿಯೋರ್ವ ಬಾಂಬ್ ಬೆದರಿಕೆ ಹಾಕಿರುವ ಹಿನ್ನೆಲೆ ಮಂಗಳವಾರ ಬೆಳಗ್ಗೆ ನ್ಯಾಯಾಲಯದ ಆವರಣದಲ್ಲಿರುವ ವಕೀಲರನ್ನು, ಕಕ್ಷಿದಾರರನ್ನು ಕೋರ್ಟ್ ಆವರಣದಿಂದ ಹೊರಗೆ ಕಳುಹಿಸಲಾಗಿದೆ. ಬಾಂಬ್ ಬೆದರಿಕೆ ಹಾಕಿರುವ ಬೆನ್ನಲ್ಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ಸಿಬ್ಬಂದಿ, ಶ್ವಾನ ದಳದ ಸಿಬ್ಬಂದಿಯವರು ತಪಾಸಣೆ …
Read More »ಕೌಟುಂಬಿಕ ಕಲಹ : ಅವಳಿ ಮಕ್ಕಳ ಜೊತೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಮೂರು ವರ್ಷದ ಅವಳಿ ಮಕ್ಕಳ ಜೊತೆ ನೀರಿ ಸಂಪ್ ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ ಮಕ್ಕಳು ಸಾವನಪ್ಪಿದ್ದು, ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೋಡಗುರ್ಕಿ ಗ್ರಾಮದ ಮುರುಳಿ ಅವರ ಪತ್ನಿ ಉಷಾ (28) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಹರ್ಷಿತ್ ಮತ್ತು ಹಿತೇಶ್ ಮೃತ ಮಕ್ಕಳಾಗಿದ್ದಾರೆ. ಕುಟುಂಬದಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಉಷಾ ತನ್ನ …
Read More »ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – 24 ತಾಸಿನಲ್ಲೇ ಆರೋಪಿ ಅಂದರ್!
ತುಮಕೂರು: ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದೂರು ದಾಖಲಾದ 24 ತಾಸಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ. 26 ವರ್ಷದ ರೇಣುಕಾ ಬಂಧಿತ ಆರೋಪಿ. ತುಮಕೂರು ತಾಲ್ಲೂಕಿನ ಹಾಲನೂರು ಅದ್ಲಾಪುರ ಗ್ರಾಮದ ನಿವಾಸಿಯಾದ ಆರೋಪಿ, ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಒಂಟಿ ಬಾಲಕಿಯನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದ. ವಿಷಯ ತಿಳಿದ ಕೂಡಲೇ ಬಾಲಕಿಯ ಪೋಷಕರು ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





