ಒಡಿಶಾ ರಾಜ್ಯದ ಜಗತಿಸಂಗ್ಪುರ ಜಿಲ್ಲೆಯಲ್ಲಿ 23 ವರ್ಷದ ಯುವತಿಯನ್ನು ಮದುವೆಯ ಭರವಸೆ ನೀಡಿ ಮನೆಬಿಟ್ಟು ಕರೆಸಿಕೊಂಡು ದೌರ್ಜನ್ಯ ಎಸಗಿ ಬಳಿಕ ಹತ್ಯೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ, ಯುವತಿಯೊಂದಿಗೆ ಸ್ನೇಹ ಹೊಂದಿದ್ದ ವ್ಯಕ್ತಿ ದೇವಾಲಯದಲ್ಲಿ ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ 22ರಂದು ಮನೆಬಿಟ್ಟು ಬರಲು ಹೇಳಿದ್ದ. ಬಳಿಕ ಏಕಾಂತ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ರಹಾಮ ಬಸ್ …
Read More »ಯುವತಿ ವಿಚಾರಕ್ಕೆ ಕಿರಿಕ್, ಪಿಯುಸಿ ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿ ಮೇಲೆ ಹಲ್ಲೆ!
ಬೆಂಗಳೂರು: ಹುಡುಗಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು, ಪಿಯುಸಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ದ್ವೀತಿಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿ ಮೇಲೆ ಹಲ್ಲೆ ಹಲ್ಲೆ ನಡೆದಿದೆ. ಅನ್ಯಕೋಮಿನ ಹುಡುಗರ ನಡುವೆ ಈ ಘಟನೆ ಸಂಭವಿಸಿದೆ.ಬೆಂಗಳೂರಿನ ಕೆಆರ್ ಪುರದ ಸಿಲಿಕಾನ್ ಸಿಟಿ ಕಾಲೇಜ್ ಗೇಟ್ ಬಳಿ ಈ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಹೊರಬಂದ ಶ್ರೀ ವೆಂಕಟೇಶ್ವರ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರ ಗುಂಪು …
Read More »ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್
ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ …
Read More »ಗದಗ: ಕತ್ತು ಕೊಯ್ದು ಯುವಕನ ಕೊಲೆ ಮಾಡಿ ಶವವನ್ನು ಹೊಲದಲ್ಲಿ ಬಿಸಾಡಿದ ಹಂತಕರು
ಲಕ್ಷ್ಮೇಶ್ವರ (ಗದಗ ಜಿಲ್ಲೆ): ತಾಲ್ಲೂಕಿನ ಶಿಗ್ಲಿ ಗ್ರಾಮದ ಯುವಕನ ಕತ್ತು ಕೊಯ್ದು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮಹಮ್ಮದ್ ಫಾರೂಕ್ ಶೇಖ್ ಸನದಿ (25) ಕೊಲೆಯಾದ ಯುವಕ. ಈತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹರ್ಲಾಪುರ ಗ್ರಾಮದವರಾಗಿದ್ದು, ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಿದ್ದರು. ಹಂತಕರು ಯುವಕನನ್ನು ಕೊಲೆ ಮಾಡಿ ಶವವನ್ನು ಹೊಲದಲ್ಲಿ ಬಿಸಾಡಿ ಹೋಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ …
Read More »ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್ ದೂರು
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ ಮಾಡಿದ್ದಾರೆ, ಲಂಚಕ್ಕೆ ಪೀಡಿಸಿದ್ದಾರೆ ಎಂದು ಆರೋಪಿಸಿ ಮಹಿಳಾ ವಸತಿ ನಿಲಯದ ವಾರ್ಡನ್ ಒಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ‘2024ರ ಆಗಸ್ಟ್ 13ರಂದು ನಾನು ಹೊರಗುತ್ತಿಗೆ ಆಧಾರದ ಮೇಲೆ ಮಹಿಳಾ ವಸತಿ ನಿಲಯದಲ್ಲಿ ವಾರ್ಡನ್ ಆಗಿ ಸೇವೆಗೆ ಸೇರಿದೆ. ಇಲಾಖೆಯ ಸಹಾಯಕ ನಿರ್ದೇಶಕ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಲಿಂದ …
Read More »ಒಂದೇ ದಿನ ಎರಡು ಕೋಟಿ ರೂ ವಹಿವಾಟು: ಸೈಬರ್ ವಂಚನೆ ಭೇದಿಸಿದ ಮಂಗಳೂರು ಪೊಲೀಸರು
ಮಂಗಳೂರು: ವಿದೇಶದಲ್ಲಿರುವ ದುಷ್ಕರ್ಮಿಗಳೊಂದಿಗೆ ಕೈಜೋಡಿಸಿ ಆನ್ಲೈನ್ ವಂಚನೆ ನಡೆಸುತ್ತಿದ್ದ ಆರು ಮಂದಿಯ ತಂಡವನ್ನು ಮಂಗಳೂರು ಪೊಲೀಸರು ಹೈದರಾಬಾದ್ನಲ್ಲಿ ಬಂಧಿಸಿದ್ದಾರೆ. ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರಾಗಿದ್ದಾರೆ. ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾಂಕ್ ಖಾತೆ ನೀಡಿದರೆ ಕಮಿಷನ್ ನೀಡುವುದಾಗಿ ಜಾಹಿರಾತು ನೀಡಿ ಜನರನ್ನು ಸೆಳೆಯುತ್ತಿದ್ದರು. ನಂಬಿ ಬಂದವರಿಂದ ಖಾತೆಯ ಭದ್ರತಾ ವಿವರಗಳನ್ನು ಪಡೆದು ವಿದೇಶಕ್ಕೆ ರವಾನಿಸುತ್ತಿದ್ದರು. …
Read More »ಮನೆಯಲ್ಲಿ ಕಸಾಯಿಖಾನೆ: ಮೂವರ ಬಂಧನ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋವುಗಳನ್ನು ಕೊಂದು ಮಾಂಸ ಮಾಡುತ್ತಿರುವುದನ್ನು ಪತ್ತೆ ಮಾಡಿರುವ ಉಪ್ಪಿನಂಗಡಿ ಪೊಲೀಸರು, ಮನೆಯನ್ನು ಜಪ್ತಿ ಮಾಡಿ ದಂಪತಿ ಸಹಿತ ೩ ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ. 26ರಂದು ರಾತ್ರಿ ಹೊಸವಕ್ಲು ನಿವಾಸಿ ಅಬ್ದುಲ್ ರಹಿಮಾನ್ ಮನೆ ಆವರಣದಲ್ಲಿ ಗೋ ಹತ್ಯೆ ಮಾಡಿ ಮಾಂಸವನ್ನು ರಿಕ್ಷಾವೊಂದಕ್ಕೆ ತುಂಬಿಸುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಸುತೇಶ್ ಮತ್ತು …
Read More »ಬೆಂಗಳೂರು: ₹91 ಲಕ್ಷ ನಗದು ಕಳ್ಳತನ ಮಾಡಿದ್ದ ಕ್ಯಾಷಿಯರ್ ಸೆರೆ
ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸ್ನೇಹಿತರ ಜತೆ ಸೇರಿಕೊಂಡು ₹91.76 ಲಕ್ಷ ನಗದು ಕಳವು ಮಾಡಿದ್ದ ನಾಲ್ವರ ಪೈಕಿ ಇಬ್ಬರು ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಂಪನಿಯ ಕ್ಯಾಷಿಯರ್ ಧನಂಜಯ್ (23) ಹಾಗೂ ಆತನ ಸ್ನೇಹಿತ ಪ್ರವೀಣ್ ನಾಯ್ಕ್ ಬಂಧಿತರು. ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಂದ ₹ 81.66 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ …
Read More »ಗದಗದಲ್ಲಿ ತಂದೆ-ಮಗನ ಆಸ್ತಿ ಕಲಹ ಕೊಲೆಯಲ್ಲಿ ಅಂತ್ಯ!
ಗದಗ:- ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಕಲಹ ನಡೆದಿದೆ. ಶಂಕರಗೌಡ ದ್ಯಾವನಗೌಡ್ರ (56) ಎಂಬ ತಂದೆಯನ್ನು ಪ್ರಭು ಶಂಕರಗೌಡ್ರ (24) ಎಂಬ ಮಗನ ತಲೆ ಮತ್ತು ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ ಪ್ರಕರಣ ದಾಖಲಾಗಿದೆ. ಘಟನೆ ವೇಳೆ ಇಬ್ಬರೂ ಮದ್ಯಪಾನದಲ್ಲಿದ್ದವರು. ಈ ಭೀಕರ ಘಟನೆಯು 2 ಎಕರೆ ಜಮೀನಿನ ಹಕ್ಕು ಕುರಿತು ಉಂಟಾದ ಕಲಹದಿಂದ ಸಂಭವಿಸಿದೆ. ಸ್ಥಳಕ್ಕೆ ಗದಗ ಎಸ್ಪಿ …
Read More »ರೌಡಿಶೀಟರ್ ಪವನ್ ಹತ್ಯೆ ಕೇಸ್ | ಆರೋಪಿ ಕಾಲಿಗೆ ಉಂಡು ಹಾರಿಸಿದ ಪೋಲಿಸರು
ಬೆಂಗಳೂರು : ನಗರವನ್ನು ಬೆಚ್ಚಿಬೀಳಿಸಿದ್ದ ರೌಡಿಶೀಟರ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ರೌಡಿಶೀಟರ್ ಆಗಿದ್ದ ಪವನ್ ನನ್ನು ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಮರಜ್ಯೋತಿ ನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ರಂಜಿತ್ ಬಾಗಲೂರಿನ ನಿರ್ಜನ ಪ್ರದೇಶದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಬಂಧಿಸಲು ಮುಂದಾದ ವೇಳೆ ಆರೋಪಿ ಲಾಂಗ್ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದನೆಂದು ತಿಳಿದುಬಂದಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





