Breaking News

BigTv News

ಕುಕನೂರು | ಪ್ರೇಮ ವಿವಾಹವಾದ ದಂಪತಿಗೆ ಜೀವ ಬೆದರಿಕೆ : ಆರೋಪ

ಕುಕನೂರು : ತಾಲೂಕಿನ ತಳಕಲ ಗ್ರಾಮದ ಬಸವರಾಜ್ ಮೇಟಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದು, ನನ್ನ ತಂದೆ ಹಾಗೂ ಕೆಲವರಿಂದ ಜೀವ ಬೆದರಿಕೆ ಇದೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಚಿನ್ಮಯಿ ವೈದ್ಯ ಎಂಬವರು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸರಿಗೆ ನೀಡಿದ ಮನವಿಯಲ್ಲಿ, ಇದೇ ಜ.14ರಂದು ಹುಬ್ಬಳ್ಳಿಯ ಒಂಟಿ ಆಂಜನೇಯ ದೇವಸ್ಥಾನದಲ್ಲಿ ಸ್ವ ಇಚ್ಛೆಯಿಂದ ವಿವಾಹವಾಗಿದ್ದೇವೆ. ಬಳಿಕ ಫೆ.23ರಂದು ಯಲಬುರ್ಗಾ ಪಟ್ಟಣದ ವಿವಾಹ ನೋಂದಣಿ ಕಚೇರಿಯಲ್ಲಿ ಕಾನೂನುಬದ್ಧವಾಗಿ ನೋಂದಾಯಿಸಿಕೊಂಡಿದ್ದೇವೆ. …

Read More »

ಸಂಗೊಳ್ಳಿ ರಾಯಣ್ಣ ಟಿ ಶರ್ಟ್‌ ಧರಿಸಿದ್ದಕ್ಕೆ ಚಾಕು ಇರಿತ? – ಯುವಕನ ಸ್ಥಿತಿ ಗಂಭೀರ!

ಮಂಡ್ಯ : ಸಂಗೊಳ್ಳಿ ರಾಯಣ್ಣ ಟಿಶರ್ಟ್‌ ಧರಿಸಿದ್ದಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ಮದ್ದೂರಿನಲ್ಲಿ ನಡೆದಿದೆ. ಯುವಕ ಮೋಹನ್‌ (21) ತೀವ್ರವಾಗಿ ಅಸ್ವಸ್ಥಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮದ್ದೂರು ತಾಲೂಕಿನ ಆಲೂರಿನಲ್ಲಿ ಬೀರೇಶ್ವರ ಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಬೀರೇಶ್ವರ ಗೆಳೆಯರ ಬಳಗ ಎಂಬ ಸಂಘಟನೆಯಿಂದ ಸದಸ್ಯರು ಸಾಮೂಹಿಕವಾಗಿ ಸಂಗೊಳ್ಳಿ ರಾಯಣ್ಣನ ಟಿ ಶರ್ಟ್‌ ಧರಿಸಿದ್ದರು. ಕೆಎಂ ದೊಡ್ಡಿಯ ಮೋಹನ್‌ ಕೂಡ …

Read More »

ಯುವತಿ ಆತ್ಮಹತ್ಯೆ: ಜ್ಯೋತಿಷಿ ಅಲ್ಪಾಯುಷಿ ಎಂದಿದ್ದಕ್ಕೆ ನೇಣಿಗೆ ಶರಣಾದ ಟೆಕ್ಕಿ?

ಬೆಂಗಳೂರು ನಗರದ ಬಾಗಲಗುಂಟೆ ಪ್ರದೇಶದ ಎಂಇಐ ಲೇಔಟ್‌ನಲ್ಲಿ 29 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾಜ್ಯೋತಿ ಎಂಬ ಯುವತಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ವರ್ಕ್ ಫ್ರಂ ಹೋಮ್ ಮೂಲಕ ಕೆಲಸ ನಿರ್ವಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಕುಟುಂಬದ ಮೂಲಗಳ ಪ್ರಕಾರ, ಕೆಲ ದಿನಗಳ ಹಿಂದೆ ಜ್ಯೋತಿಷಿಯೊಬ್ಬರು ಆಕೆಗೆ ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮಗಳ ಇಷ್ಟಗಳನ್ನೆಲ್ಲ ನೆರವೇರಿಸಲು ಮುಂದಾಗಿದ್ದರು. ಕೊಡಗು …

Read More »

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ!

ನೆಲಮಂಗಲ: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಮೃತದೇಹ ಪತ್ತೆಯಾಗಿರುವ …

Read More »

ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಮೂವರು ಸಾವು – ಚಾಲಕ ಪರಾರಿ!

ರಾಯಚೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಘಟನೆ ನಡೆದಿದೆ. ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್​​ಗೆ ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ …

Read More »

ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ವೈರಲ್: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ವಿಶೇಷ ಚೇತನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲೆಯ ಶಿಕ್ಷಕ ಮೊಹಮ್ಮದ್ ಅಜರುದ್ದೀನ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿಂದ ತೀರ್ಪು ಪ್ರಕಟಿಸಲಾಗಿದೆ. ಕೆಲಸ ಕೊಡಿಸುತ್ತೇನೆ ಎಂದು ಪರಿಚಯವಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬೆದರಿಕೆ ಹಾಕಿದ್ದ. 2022ರ ಜೂನ್ 30ರಂದು ಚಪ್ಪಲಿಯಿಂದ ಹಲ್ಲೆ ಮಾಡಿ …

Read More »

ಬ್ರಾಹ್ಮಣರ ಬಗ್ಗೆ ಅವಹೇಳನ: ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ವಿರುದ್ಧ ದೂರು ದಾಖಲು

ಕಾರವಾರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ವಿರುದ್ಧ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೊನ್ನಾವರ ತಾಲೂಕಿನ ಮೊಳ್ಕೋಡಿನ ಶ್ರೀರಾಮ ಮಂದಿರ ಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮದಲ್ಲಿ ಸೀತಾರಾಮ ಕಲ್ಯಾಣೋತ್ಸವ ಸಭಾಭವನದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ರಾಮಪ್ಪ ವಿರುದ್ಧ ಸಾಗರದ ರಾಜೇಂದ್ರ ಪ್ರಸಾದ್ ದೂರು ನೀಡಿದ್ದಾರೆ. ಜನವರಿ 31ರ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಮಪ್ಪ ಬ್ರಾಹ್ಮಣರನ್ನು …

Read More »

ಅಕ್ರಮ ಶಸ್ತ್ರಾಸ್ತ್ರ ಸರಬರಾಜು: ಕಂಟ್ರಿಮೇಡ್ ಪಿಸ್ತೂಲ್, 50 ಜೀವಂತ ಗುಂಡು ವಶ

ಬೆಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸರಬರಾಜು ಜಾಲ ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು, ಹೊರ ರಾಜ್ಯದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಸೈಯದ್ ಮಸೂದ್ (26), ಭೋಪಾಲ್‌ನ ಜಾವೇದ್ ಆಲಂ (19) ಅವರನ್ನು ಬಂಧಿಸಿ, ಒಂದು ಕಂಟ್ರಿಮೇಡ್‌ ಪಿಸ್ತೂಲ್, 50 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರ ರಾಜ್ಯದಿಂದ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ನಗರದ ವ್ಯಕ್ತಿಯೊಬ್ಬರು ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ಯಾವುದೇ ಪರವಾನಗಿ ಇಲ್ಲದೆ …

Read More »

ಭಟ್ಕಳ | ಗಾಂಜಾ ಸೇವನೆ: ಇಬ್ಬರ ಬಂಧನ

ಭಟ್ಕಳ: ತಾಲ್ಲೂಕಿನ ಹೆಬಳೆಯ ಪಿರ್ದೋಸ ನಗರ ಮೈದಾನದಲ್ಲಿ ಗುರುವಾರ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಹೆಬಳೆ ಬದ್ರಿಯಾ ಕಾಲೊನಿ ನಿವಾಸಿ ಅಬ್ದುಲ್ ಮಜೀದ ಮೊಹಮ್ಮದ ಇಸ್ಮಾಯಿಲ್ (32) ಹಾಗೂ ಜಾಲಿ ತಗ್ಗರಗೋಡ ನಿವಾಸಿ ಮೊಹಮ್ಮದ್ ಜಾಕೀರ ಅಬ್ದುಲ್ ರಜಾಕ್ (28) ಬಂಧಿತ ಯುವಕರು. ವೈದ್ಯಕೀಯ ತಪಾಸಣೆ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಪೊಲೀಸರನ್ನು ಬಿಡದ ಕಳ್ಳರು : ಬೆಂಗಳೂರಲ್ಲಿ ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

ಬೆಂಗಳೂರು : ಸಾಮಾನ್ಯವಾಗಿ ಜನರ ಮನೆಗೆ ನುಗ್ಗಿ ಚಿನ್ನಾಭರಣ ಅನ್ನೋದು ಕರಿಯುತ್ತಿದ್ದ ಕಳ್ಳರು ಇದೀಗ ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರು ನಗರದ ಜಾಲಹಳ್ಳಿ ಹೆಚ್‌ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀಧರ್ ಎಂಬುವವರು ಕಾನ್‌ಸ್ಟೇಬಲ್ ಆಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀಧರ್ ಅವರ ಪತ್ನಿ ಕುಟುಂಬಸ್ಥರು ಮುರುಗೇಶ್ ಪಾಳ್ಯದಲ್ಲಿ ವಾಸವಾಗಿದ್ದರು. …

Read More »