Breaking News

BigTv News

ಹುಬ್ಬಳ್ಳಿ: ಮಹಿಳೆಗೆ ಆಸಭ್ಯವಾಗಿ ಕೈಸನ್ನೆ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಇಲ್ಲಿಯ ಅಕ್ಷಯ ಪಾರ್ಕ್ ಬಳಿ ಮಹಿಳೆಗೆ ಆಸಭ್ಯವಾಗಿ ಕೈಸನ್ನೆ ಮಾಡಿದ ಇಬ್ಬರ ವಿರುದ್ಧ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರದ ಸುರೇಶ ಎ. ಮತ್ತು ಸಂದೇಶ ಅವರ ವಿರುದ್ಧ, ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಅಸಭ್ಯವಾಗಿ ಕೈ ಸನ್ನೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಬಂಗಾರಪೇಟೆ | ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮಹಿಳೆ ರಕ್ಷಣೆ, ಮೂವರ ಬಂಧನ

ಇಲ್ಲಿನ ವಿಜಯನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಒಬ್ಬ ಮಹಿಳೆಯನ್ನು ರಕ್ಷಿಸಿದ್ದಾರೆ.ಮೇರಿ (40), ಗೀತಾ (48 ) ಮಂಜುಳ (34) ಬಂಧಿತ ಆರೋಪಿಗಳು. ಇವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಮಹಿಳೆಯರು ವಿಜಯನಗರದ 2ನೇ ಕ್ರಾಸ್‌ನಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು, ಯಾರಿಗೂ ಅನುಮಾನ ಬಾರದಂತೆ ಹಲವು ದಿನಗಳಿಂದ ಈ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ …

Read More »

ಹೊಳಲ್ಕೆರೆ | ಕಾರು ಢಿಕ್ಕಿಯಿಂದ 13 ವಾಹನಗಳು ಜಖಂ

ಹೊಸದುರ್ಗದ ಕಡೆಯಿಂದ ವೇಗವಾಗಿ ಬಂದ ಕಾರು ಎನ್.ಜಿ. ಹಳ್ಳಿ ಗೇಟ್‌ನ ಹುಣಸೆ ಮರದ ಕೆಳಗೆ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10 ಬೈಕ್‌ಗಳು, 2 ಕಾರುಗಳು ಹಾಗೂ ಒಂದು ಆಟೊರಿಕ್ಷಾ ಜಖಂಗೊಂಡಿವೆ. ಕಾರು ಚಾಲಕ ಯಶಪಾಲ್ ಸಿಂಗ್ ಹಾಗೂ ಲಕ್ಷ್ಮಿಕುಮಾರ್ ಎಂಬುವರಿಗೆ ಗಾಯಗಳಾಗಿದ್ದು, ಹೊಸದುರ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುತ್ತಿಕಟ್ಟೆಯ ಪೈಪ್ ಕಾರ್ಖಾನೆಯ ಮಾಲೀಕ ಯಶಪಾಲ್ ಸಿಂಗ್ ಹುಂಡೈ ಕ್ರೆಟಾ ಕಾರಿನಲ್ಲಿ ಹೊಸದುರ್ಗದ ಕಡೆಯಿಂದ ವೇಗವಾಗಿ ಬರುತ್ತಿದ್ದರು. ಇದೇ ವೇಳೆ …

Read More »

ದಾವಣಗೆರೆ | 4 ಕಾರುಗಳು ಬೆಂಕಿಗೆ ಆಹುತಿ

ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ.ಬೆಳಿಗ್ಗೆ 7ಕ್ಕೆ ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಉರಿಯತೊಡಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ‘ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಭಾಗದಲ್ಲಿ ನಿಲುಗಡೆ ಮಾಡಲಾಗಿತ್ತು. ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಸುಟ್ಟು ಹೋಗಿವೆ’ ಎಂದು …

Read More »

ಬಾಲಾಪರಾಧಿ ಗೃಹದಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿ ಮೂವರು ಕೈದಿಗಳು ಪರಾರಿ

ಶ್ರೀನಗರ: ಜಮ್ಮುವಿನ ಬಾಲಾಪರಾಧಿ ಗೃಹವೊಂದರಲ್ಲಿ ಕಾವಲು ಕಾಯುತ್ತಿದ್ದ ಇಬ್ಬರು ಪೊಲೀಸರ ಮೇಲೆ ಗುಂಡು ಹಾರಿಸಿ, ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಮೂವರು ಬಂಧಿತ ಕೈದಿಗಳು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಜಮ್ಮುವಿನ ಆರ್‌ಎಸ್ ಪುರ ಪ್ರದೇಶದಲ್ಲಿರುವ ಬಾಲಾಪರಾಧಿ ವೀಕ್ಷಣಾ ಗೃಹದೊಳಗೆ ಸೋಮವಾರ ಸಂಜೆ 5.05 ರ ಸುಮಾರಿಗೆ ಈ ಘಟನೆ ನಡೆದಿದೆ. ಕೈದಿಗಳು ಇಬ್ಬರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಮೂವರು ಕೈದಿಗಳು ಪರಾರಿಯಾಗಿದ್ದಾರೆ. …

Read More »

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗೆ ಬೆದರಿಕೆ: ಎಫ್‌ಐಆರ್ ದಾಖಲು

ಬೆಂಗಳೂರು: ನಗರ ಸೈಬರ್ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸಿದ್ದು, ಈ ಸಂಬಂಧ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ನ್ಯಾಯಮೂರ್ತಿ ಜೆ.ಚೆಲಮೇಶ್ವರ್ ಅವರಿಗೆ ಕರೆ ಮಾಡಿ ಬೆದರಿಸಿರುವ ಆರೋಪಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ಮಹಾ ಪ್ರಧಾನ ಕಾರ್ಯದರ್ಶಿ ಭರತ್ ಪರಾಶರ್ ಅವರು ದೂರು ನೀಡಿದ್ದಾರೆ. ಜ.9ರಂದು ನಿವೃತ್ತ ನ್ಯಾಯಮೂರ್ತಿ ಅವರಿಗೆ …

Read More »

₹ 2,000 ಮೌಲ್ಯದ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ: 28 ವರ್ಷಗಳ ಬಳಿಕ ಸೆರೆ

ದಾವಣಗೆರೆ: ನಗರದ ರಂಗನಾಥ ಬಡಾವಣೆಯಲ್ಲಿ ₹ 2,000 ಮೌಲ್ಯದ ಟಿವಿ ಕದ್ದು 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಗ್ರಾಮಾಂತರ ಠಾಣೆಯ ಪೊಲೀಸರ ಬಲೆಗೆ ಬಿದ್ದಿದ್ದಾನೆ. ದೇವರಾಜ ಅರಸು ಬಡಾವಣೆಯ ಫಕೀರ (50) ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.ಇನ್ನೊಬ್ಬ ಆರೋಪಿ ರಾಜ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ನಗರದ ರಂಗನಾಥ ಬಡಾವಣೆಯ ರುದ್ರಯ್ಯ ಎಂಬುವರ ಮನೆಯಲ್ಲಿ 1998ರ ಸೆ.23ರಂದು ಟಿವಿ ಕಳವಾಗಿತ್ತು. ದೂರು ಆಧರಿಸಿ ಪೊಲೀಸರು …

Read More »

ಹತ್ತಕ್ಕೂ ಮಿಕ್ಕಿ ಪ್ರಕರಣದ ಆರೋಪಿ ಬಂಧನ

ಕುಂದಾಪುರ: ರಾಜ್ಯದ ವಿವಿಧ ಠಾಣೆಗಳಲ್ಲಿ ಕಳ್ಳತನ, ಸುಲಿಗೆ, ಹನಿ ಟ್ರ್ಯಾಪ್ ಸಹಿತ ಹತ್ತಕ್ಕೂ ಮಿಕ್ಕಿ ಪ್ರಕರಣಗಳಲ್ಲಿ ಆರೋಪಿಯಾಗಿ, ಪರಾರಿಯಾಗಿದ್ದ ಗುಲ್ವಾಡಿಯ ನಿವಾಸಿ ಶಶಾಂಕ್ ಶೆಟ್ಟಿ (32) ಎಂಬಾತನನ್ನು ರವಿವಾರ ಕುಂದಾಪುರ ಪೊಲೀಸರು ಬಿದ್ಕಲ್ ಕಟ್ಟೆ ಸಮೀಪ ಬಂಧಿಸಿದ್ದಾರೆ.ಈತನ ವಿರುದ್ದ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7, ಹೆಬ್ರಿ, ಕಲಘಟಕಿ, ಕೋಟ, ಬೆಂಗಳೂರಿನಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದವು. ಕಳ್ಳತನ, ಸುಲಿಗೆ, ಹನಿಟ್ರ್ಯಾಪ್ ಸಹಿತ ಒಟ್ಟು 11 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ. ಈತನ …

Read More »

ಅಪಾಯಕಾರಿ ರೀಲ್ಸ್ ; ಯುಪಿ ಯುವಕನ ಬಂಧನ

ಅಪಾಯಕಾರಿ ಸ್ಥಳಗಳಲ್ಲಿ ಮತ್ತು ಅಪಾಯಕಾರಿ ರೀತಿಯಲ್ಲಿ ರೀಲ್ಸಗಳನ್ನು ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸರಿಸುತ್ತಿದ್ದ ಬಳ್ಳಾರಿ ನಿವಾಸಿ ಉತ್ತರಪ್ರದೇಶದ ಯುವಕನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯು ಬಳ್ಳಾರಿ ನಗರ ನಿವಾಸಿ, ಉತ್ತರಪ್ರದೇಶದ ರಾಜ್‍ಪೂರ್ ರಾನಿಯಾ ಜಿಲ್ಲೆಯ ನಂದಾಲಪುರ ನಿವಾಸಿ ವಿಶ್ವನಾಥ್ ತಂದೆ ರಾಂಬಹದ್ದೂರ್ ವರ್ಮಾ (29) ಎಂದು ಪೊಲೀಸರು ತಿಳಿಸಿದ್ದಾರೆ. ಬಳ್ಳಾರಿ ನಗರದ ಬ್ರೂಸ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ದುರ್ಗಮ್ಮ ದೇವಸ್ಥಾನದ ರೈಲ್ವೆ ಬ್ರಿಡ್ಜ್ ಮೇಲೆ ಫೆಬ್ರವರಿ …

Read More »

ಬೆಂಗಳೂರು: ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದ ಆರೋಪಕ್ಕೆ ಸಂಬಂಧಿಸಿ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶ್ರೀಶೈಲ್ ಬಾಗಲೂರ ಭೀಮರಾಯ್ ನೀಡಿರುವ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸೀಮಾಂತ್ ಕುಮಾರ್ ಸಿಂಗ್‌ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಪ್ರೊಫೈಲ್ ಸೃಷ್ಟಿಸಿದ್ದ ವಂಚಕರು, ಗಣ್ಯರ ಜೊತೆಗಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. …

Read More »