ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರುತಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶರಣು ಗೌಳಿ ಅವರು ಶುಕ್ರವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಸೂಪರ್ ಮಾರ್ಕೆಟ್ನ ನರ್ತಕಿ ಬಾರ್ ಪಾರ್ಕಿಂಗ್ ಪ್ರದೇಶದಲ್ಲಿ ನಿಂತಿದ್ದಾಗ, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೆ …
Read More »ಬೆಂಗಳೂರು ಪೊಲೀಸರ ಪ್ರಾಪರ್ಟಿ ಪರೇಡ್: 75ಕ್ಕೂ ಹೆಚ್ಚು ಕೇಸ್ʼಗಳಲ್ಲಿ 85 ಆರೋಪಿಗಳ ಬಂಧನ
ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ದರೋಡೆ ಮತ್ತು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡ ವಸ್ತುಗಳ ಪ್ರದರ್ಶನವನ್ನು ಆಯೋಜಿಸಿದ್ದಾರೆ. ಹಗಲು ಮತ್ತು ರಾತ್ರಿ ವೇಳೆ ನಡೆದ ವಿವಿಧ ದರೋಡೆ ಹಾಗೂ ಕಳ್ಳತನ ಪ್ರಕರಣಗಳಲ್ಲಿ ಒಟ್ಟು 75ಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆಹಚ್ಚಿ, 85 ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ₹1 ಕೋಟಿ 76 ಲಕ್ಷ 26 ಸಾವಿರ 490 ರೂಪಾಯಿ ಮೌಲ್ಯದ 1 ಕೆ.ಜಿ 879 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ 4.58 …
Read More »ಬಸ್-ಬೈಕ್ ನಡುವೆ ಢಿಕ್ಕಿ : ಸವಾರ ಮೃತ್ಯು
ರಾಯಚೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸಂಜೀವ್ ರಡ್ಡಿ (45) ಎಂದು ಗುರುತಿಸಲಾಗಿದೆ. ಬಸ್ ಚಾಲಕ ಅತಿವೇಗದಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಢಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆಯ ಮಾಹಿತಿ ಪಡೆದ ಮಸ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ …
Read More »ಪ್ರತ್ಯೇಕ ಅಪಘಾತ ಪ್ರಕರಣ : ಇಬ್ಬರು ಮೃತ್ಯು
ಕಲಬುರಗಿ: ನಗರ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಜಫರಾಬಾದ್ ಗ್ರಾಮದ ನಿವಾಸಿ ಸಚಿನ್ ಅಶೋಕ ಸಂಗಾವಿ (28) ಹಾಗೂ ಕಡಣಿ (ಕಣ್ಣಿ) ಗ್ರಾಮದ ನಿವಾಸಿ ಭೀಮಾಶಂಕರ ಪ್ರಕಾಶ ಶಿವರಾಯಗೋಳ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇದೇ ವೇಳೆ ಸಂಚಾರಿ ಪೊಲೀಸ್ ಠಾಣೆ-1ರ ವ್ಯಾಪ್ತಿಯ ನಗರದ ಹೊರವಲಯದ ಶರಣ ಸಿರಸಗಿ ಗ್ರಾಮದ ಸಮೀಪ ಟಂಟಂ ವಾಹನವು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ …
Read More »ಹಂಪಿ ಉತ್ಸವದಲ್ಲಿ ಸಿಎಂ ಎಂಟ್ರಿ ವೇಳೆ ಪಟಾಕಿ ಹೊಡೆತಕ್ಕೆ ಹೊತ್ತಿದ ಬೆಂಕಿ
ವಿಜಯನಗರ: ಹಂಪಿ ಉತ್ಸವಕ್ಕೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಆಗಮಿಸಿದ ವೇಳೆ ಜಿಲ್ಲಾಡಳಿತ ಪಟಾಕಿ ಸಿಡಿಸಿದ್ದು, ಬೆಂಕಿಯ ಕಿಡಿ ಹುಲ್ಲು ಹಾಗೂ ಇತರೆ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿತು. ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಹಿನ್ನೆಲೆ ಶುಕ್ರವಾರ ರಾತ್ರಿ 8.05 ಕ್ಕೆ ವೇದಿಕೆಗೆ ಆಗಮಿಸಿದರು. ಈ ವೇಳೆ ವೇದಿಕೆಯ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಯಿತು. ಕೆಲವೇ ಕ್ಷಣಗಳಲ್ಲಿ ಧಗ ಧಗನೇ ಬೆಂಕಿ ಹೊತ್ತಿ ಉರಿಯಲಾರಂಭಿಸಿತು. ಕೆಲಕ್ಷಣ ಜನರು ಆತಂಕಕ್ಕೆ …
Read More »ಶವ ಪ್ಯಾಕ್ ಮಾಡಿ ಕೊಡಲು ಹುಬ್ಬಳ್ಳಿ ಕಿಮ್ಸ್ನಲ್ಲಿ ಲಂಚ ಕೊಡಬೇಕಂತೆ!
ಹುಬ್ಬಳ್ಳಿ: ಕೆಎಂಸಿ-ಆರ್ಐ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬುಧವಾರ ನಡೆದಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಯಿತು. ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಗದ್ದೆಮ್ಮಾ (52) ಅವರು ಜ.31ರಂದು ಕೆಎಂಸಿ-ಆರ್ಐ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಮೃತಪಟ್ಟಿದ್ದರು. ‘ಹಣ ನೀಡಿದರಷ್ಟೇ ಮೃತದೇಹ ಪ್ಯಾಕ್ ಮಾಡುವುದಾಗಿ ಶವಾಗಾರದ ಸಿಬ್ಬಂದಿ ಪಟ್ಟು ಹಿಡಿದಿದ್ದು, ಫೋನ್ ಪೇ ಮೂಲಕ ಹಣ …
Read More »ಪುತ್ತೂರು | ಆನ್ಲೈನ್ನಲ್ಲಿ ₹ 2.37 ಲಕ್ಷ ವಂಚನೆ: ಆರೋಪಿ ಬಂಧನ
ಇಲ್ಲಿನ ನಿವಾಸಿ ಯಶೋಧರ ಎಂಬುವವರ ಕ್ರೆಡಿಟ್ ಕಾರ್ಡ್ ಸಮಖ್ಯೆ ಹಾಗೂ ಒಟಿಪಿ ಪಡೆದು ಆನ್ಲೈನ್ನಲ್ಲಿ ವಂಚನೆ ನಡೆಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಾರಾಷ್ಟದ ಅವಿನಾಶ್ ರಮೇಶ್ ಗೌಡ (24) ಬಂಧಿತ ಆರೋಪಿ. ಆತ ಮಂಡ್ಯ ಕೃಷ್ಣರಾಜ ಪೇಟೆಯಲ್ಲಿ ವಾಸಿಸುತ್ತಿದ್ದ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. ಯಶೋಧರ ಅವರಿಗೆ ವಿವಿಧ ಮೊಬೈಲ್ ನಂಬರ್ಗಳಿಂದ ಕರೆ ಮಾಡಿದ್ದ …
Read More »ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ: ಸರ್ಕಾರಿ ಬಸ್ – ಖಾಸಗಿ ಬಸ್ ಮುಖಾಮುಖಿ ಡಿಕ್ಕಿ
ಚಾಮರಾಜನಗರ: ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಒಂದು ಭೀಕರ ಅಪಘಾತ ನಡೆದಿದೆ. ಕೆಎಸ್ಆರ್ಟಿಸಿ ಬಸ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. …
Read More »ಅಪಘಾತ ಕೇಸ್ – ನಡುರಸ್ತೆಯಲ್ಲಿ ಸರ್ಕಾರಿ ಬಸ್ ಸೀಜ್.!
ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್ ಮಾಡಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ಬಸ್ಗಳನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ಕರೆದೊಯ್ಯುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲೇ ಇಳಿಸಲಾಯಿತು. ಇದರಿಂದ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದರು. ಯಾವುದೇ ಮುನ್ಸೂಚನೆ ಇಲ್ಲದೆ ಬಸ್ಗಳನ್ನು ಸೀಜ್ ಮಾಡಿದ ಕಾರಣ ಪ್ರಯಾಣಿಕರಿಗೆ ತೀವ್ರ ತೊಂದರೆಯಾಯಿತು ಎಂದು …
Read More »ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ; ಬೆಚ್ಚಿಬಿದ್ದ ಶಿವಮೊಗ್ಗ
ಶಿವಮೊಗ್ಗ : ಜಿಲ್ಲೆಯ ಗಾಜನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೊಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಶಿವಮೊಗ್ಗ ನಗರದ ಹೊಸಮನೆ ಬಡಾವಣೆ 6ನೇ ತಿರುವಿನ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.ಶ್ರೀನಿವಾಸ್ ಗಾರೆ ಕೆಲಸ ಮಾಡುತ್ತಿದ್ದನು. ಗಾಜನೂರಿನಲ್ಲೂ ಗಾರೆ ಕೆಲಸಕ್ಕೆ ತೆರಳಿದ್ದ ಆತ ಕಳೆದ ಮೂರು ದಿನಗಳಿಂದ ಅಲ್ಲಿಯೇ ವಾಸವಾಗಿದ್ದನು. ನಿನ್ನೆ ರಾತ್ರಿ ಗಾಜನೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಪಕ್ಕದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





