ಕೋಲಾರದಲ್ಲಿ ಭೀಕರವಾದ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಂಧ್ರಪ್ರದೇಶ ಮೂಲದ ರೌಡಿಶೀಟರ್ ನನ್ನ ಕೊಚ್ಚಿ ಕೊಲೆ ಮಾಡಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಳ್ಳಿ ಬಳಿ ಈ ಒಂದು ಬರ್ಬರ ಕೊಲೆ ನಡೆದಿದೆ. ರೌಡಿಶೀಟರ್ ಆದ ಭಾಸ್ಕರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೌಡಿಶೀಟರ್ ಭಾಸ್ಕರ್ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಆಂಧ್ರಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಭಾಸ್ಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಸದ್ಯ ಸ್ಥಳಕ್ಕೆ ನಂಗಲಿ ಠಾಣೆ ಪೋಲಿಸರು …
Read More »ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ಬೊಲೇರೊ ಮೇಲೆ ಉರುಳಿದ ಕಂಟೇನರ್ ಲಾರಿ, ವ್ಯಕ್ತಿ ಸಾವು
ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುಂದೆ ಸಾಗುತ್ತಿದ್ದ ಬೊಲೇರೊ ಜೀಪ್ಗೆ ಹಿಂಬದಿಯಿಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೊಲೇರೊವನ್ನು ಸುಮಾರು ಅರ್ಧ ಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿರುವ ಲಾರಿ, ಬಳಿಕ ವಾಹನದ ಮೇಲೆಯೇ ಉರುಳಿ ಬಿದ್ದಿದೆ. ಅಪಘಾತದ ಪರಿಣಾಮ ಬೊಲೇರೊ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ …
Read More »ಬೇತಮಂಗಲ | ಅಕ್ರಮವಾಗಿ ಗೋವು ಸಾಗಣೆ ಆರೋಪ; ಪೊಲೀಸರಿಗೆ ದೂರು
ಅಕ್ರಮವಾಗಿ ಗೋವುಗಳನ್ನು ಕಸಾಯಿ ಖಾನೆಗಳಿಗೆ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ, ರಾಷ್ಟ್ರೀಯ ರಕ್ಷಣೆ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮತ್ತು ಕಾರ್ಯಕರ್ತರು ಲಾರಿ ಹಾಗೂ ಚಾಲಕನನ್ನು ಹಿಡಿದಿದ್ದಾರೆ. ಹೋಬಳಿಯ ಕೊತ್ತೂರು ಗ್ರಾಮದಲ್ಲಿ ಸೋಮವಾರ ರಾತ್ರಿ ವಶಕ್ಕೆ ಪಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಚಾಲಕ ಸೈಯದ್ ಎಂಬುವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಮಾಯಕರನ್ನು ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿರುವ ಕಾರ್ಯಕರ್ತರು, ಮತ್ತೆ ಈ ಕೃತ್ಯ ಎಸಗದಂತೆ ಎಚ್ಚರಿಕೆ ನೀಡಿದ್ದಾರೆ. ಗಡಿಯಲ್ಲಿ ಜಾನುವಾರುಗಳ ಸಾಗಣೆಯ ಹೆಚ್ಚಿನ …
Read More »‘ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ’ : ಮದ್ಯದ ಅಮಲಿನಲ್ಲಿ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!
ಯಾದಗಿರಿ : ಜಿಲ್ಲೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ತಾನೇ ಹೆತ್ತ 10 ವರ್ಷದ ಮಗಳನ್ನು ಕ್ಷುಲ್ಲಕ ಕಾರಣಕ್ಕೆ ತಾಯಿಯೇ ಕತ್ತು ಹಿಸುಕಿ ಹತ್ಯೆಗೈದಿರುವ ಘೋರ ಕೃತ್ಯ ಬೆಳಕಿಗೆ ಬಂದಿದೆ. ಯಾದಗಿರಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.ಆರಂಭದಲ್ಲಿ ತಾಯಿ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುತ್ತಮುತ್ತಲಿನವರಿಗೆ ಮತ್ತು ಪೊಲೀಸರಿಗೆ ನಂಬಿಸಲು ಯತ್ನಿಸಿದ್ದಳು. “ನಾನು ಮಗಳಿಗೆ 15 ರೂಪಾಯಿ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ …
Read More »ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು
ಬಾಗಲಕೋಟೆ: ಜಿಲ್ಲೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೊರಗಾವಿಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ತಾಯಿ ಮಂಜುಳಾ ದಳವಾಯಿ(28), ಪುತ್ರಿ ವೇದಾ(1) ಸಾವನ್ನಪ್ಪಿದ್ದಾರೆ.
Read More »ಭೀಕರ ಸರಣಿ ಅಪಘಾತ; ಇಬ್ಬರು ಸಾವು, ಐವರಿಗೆ ಗಾಯ
ತುಮಕೂರು: ಮೂರು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ಬಾಣವಾರ ಬಳಿ ಫೆ.8ರ ರವಿವಾರ ನಡೆದಿದೆ. ಮುರುಳಿ, ಸುರೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳಿದ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಕ್ವಾಲಿಸ್ ಮತ್ತು ಮುಂದೆ ಬರುತಿದ್ದ ಎಸ್ಟೀಮ್ ಹಾಗೂ ಬೋಲೆನೋ ಕಾರಿನ ನಡುವೆ ತುಮಕೂರು-ಕುಣಿಗಲ್ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆ ರವಾನೆ ಮಾಡಲಾಗಿದೆ. …
Read More »ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರ ಸ್ಥಿತಿ ಗಂಭೀರ
ರಾಜಧಾನಿಯ ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆ.ಆರ್. ಪುರಂನ ಮಂಜುನಾಥ್ ಲೇಔಟ್ನಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ, ಮನೆಯಲ್ಲಿದ್ದ ಪೂರ್ಣಿಮಾ (46) ಮತ್ತು ವೆಂಕಟೇಶ್ (40) ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಪ್ರಸ್ತುತ ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ …
Read More »ವೃದ್ಧನನ್ನು ಥಳಿಸಿಕೊಂದ ಆರೋಪ:ಟಿಎಂಸಿ ಕೌನ್ಸಿಲರ್ ಪಕ್ಷದಿಂದ ಅಮಾನತು
ಕೋಲ್ಕತಾ: 80 ವರ್ಷದ ವೃದ್ಧನ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣವಾದ ಆರೋಪದ ಮೇಲೆ ಬಂಧಿಸಲ್ಪಟ್ಟ ಉತ್ತರ ಬ್ಯಾರಕ್ಪೋರ್ ಪುರಸಭೆಯ ಕೌನ್ಸಿಲರ್ ರವೀಂದ್ರ ನಾಥ್ ಭಟ್ಟಾಚಾರ್ಯ ಅವರನ್ನು ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಸೋಮವಾರ ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಳಿಸಿದೆ. ಟಿಎಂಸಿ ಸಂಸದ ಪಾರ್ಥ ಭೌಮಿಕ್, ಪಕ್ಷವು ಈ ವಿಷಯದ ಬಗ್ಗೆ ಶೂನ್ಯ ಸಹಿಷ್ಣುತೆ ನಿಲುವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದು, ಕೌನ್ಸಿಲರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. …
Read More »ಗ್ರೂಪ್ ಸಿ ಹುದ್ದೆ ಪರೀಕ್ಷೆ ವೇಳೆ ಮೊಬೈಲ್, ಎಲೆಕ್ಟ್ರಿಕ್ ಡಿವೈಸ್ ಬಳಸಿ ಕಳ್ಳಾಟ ಬಯಲು: 18 ಪರೀಕ್ಷಾರ್ಥಿಗಳ ವಿಚಾರಣೆ
ಬೆಂಗಳೂರು: ಆರ್ಮಿ ಗ್ರೂಪ್ ಸಿ ಹುದ್ದೆ ಪರೀಕ್ಷೆಯ ವೇಳೆ ಕಳ್ಳಾಟ ಆರೋಪ ಹಿನ್ನೆಲೆಯಲ್ಲಿ 18 ಪರೀಕ್ಷಾರ್ಥಿಗಳನ್ನು ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ನಿನ್ನೆ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಮೊಬೈಲ್, ಎಲೆಕ್ಟ್ರಿಕ್ ಡಿವೈಸ್ ಬಳಸಿ ನಕಲು ಮಾಡಲಾಗಿತ್ತು. ಮೂರು ಮೊಬೈಲ್ ಮತ್ತು ಎಲೆಕ್ಟ್ರಿಕ್ ಡಿವೈಸ್ ಗಳನ್ನು ಜಪ್ತಿ ಮಾಡಲಾಗಿತ್ತು. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರೀಕ್ಷಾರ್ಥಿಗಳ ವಿಚಾರಣೆ …
Read More »ಲಿಬಿಯಾ ಕರಾವಳಿಯಲ್ಲಿ ಮುಳುಗಿದ ದೋಣಿ: 53 ಮಂದಿ ವಲಸಿಗರು ನಾಪತ್ತೆ
ಜಿನೀವಾ: ಲಿಬಿಯಾ ಕರಾವಳಿಯಲ್ಲಿ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸಿಗರ ಸಂಸ್ಥೆ ಸೋಮವಾರ ತಿಳಿಸಿದೆ.ದೋಣಿ ದುರಂತದಲ್ಲಿ ಬದುಕುಳಿದ ಇಬ್ಬರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದೆ. ಲಿಬಿಯಾದ ಜುವಾರಾ ಬಳಿ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ನೈಜೀರಿಯಾದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ‘ದುರಂತದಲ್ಲಿ ಪತಿಯನ್ನು ಕಳೆದುಕೊಂಡೆ’ ಎಂದು ಬದುಕುಳಿದ ಮಹಿಳೆಯೊಬ್ಬರು ತಿಳಿಸಿದರೆ, ಮತ್ತೊಬ್ಬರು ‘ನನ್ನ ಮಕ್ಕಳಿಬ್ಬರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





