ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಎರಡು ಕಾರುಗಳು ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಕಲ್ಯಾಣ ಮಂಪಟದಲ್ಲಿ ನಿಗದಿಯಾಗಿದ್ದ ಮದುವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಯಾದಗಿರಿ ಜಿಲ್ಲೆಯ ಶಹಾಪುರದವರಿಗೆ ಸೇರಿದ ಇಬ್ಬರ ಕಾರುಗಳು ಸುಟ್ಟು ಹೋಗಿವೆ.ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಕಾರುಗಳು ಸಂಪೂರ್ಣ ಸುಟ್ಟು ಹೋಗಿವೆ.
Read More »ಶಿವಮೊಗ್ಗ | ಕಾರಾಗೃಹದೊಳಗೆ ಗಾಂಜಾ ಎಸೆದ ಆರೋಪ; ನಾಲ್ವರ ಬಂಧನ
ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹ ಕಟ್ಟಡದ ಒಳಗೆ ಫೆ. 1ರಂದು ಗಾಂಜಾ, ಮೊಬೈಲ್ಫೋನ್, ಸಿಗರೇಟ್ ಹಾಗೂ ಲೈಟರ್ ಒಳಗೊಂಡ ಪ್ಯಾಕೆಟ್ ಎಸೆದಿದ್ದ ಆರೋಪದ ಮೇಲೆ ತುಂಗಾ ನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪರಿಚಿತರು ಗಮ್ಟೇಪ್ನಿಂದ ಸುತ್ತಿದ್ದ ಪ್ಯಾಕ್ ಎಸೆದಿರುವ ಬಗ್ಗೆ ಕಾರಾಗೃಹದ ಅಧೀಕ್ಷಕ ಎಚ್.ಎ.ಪರಮೇಶ್ ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಸಿಪಿಐ ಕೆ.ಟಿ.ಗುರುರಾಜ್ ನೇತೃತ್ವದ ತಂಡ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು. …
Read More »ಪಂಜಾಬ್ ನಲ್ಲಿ ಬೆಚ್ಚಿ ಬೀಳಿಸೋ ಘಟನೆ : ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದು ವಿದ್ಯಾರ್ಥಿಯು ಆತ್ಮಹತ್ಯೆ!
ದೇಶದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಕ್ಲಾಸ್ ರೂಮ್ ಗೆ ನುಗ್ಗಿ ಒಬ್ಬ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿ ಗುಂಡಿನ ದಾಳಿ ಮಾಡಿರುವ ಘಟನೆ ಪಂಜಾಬ್ ನ ತರನ್ ತರಾನ್ ಜಿಲ್ಲೆಯ ಶಾಲೆಯಲ್ಲಿ ಈ ಒಂದು ಭೀಕರ ಘಟನೆ ನಡೆದಿದೆ. ಹೌದು ಶಾಲೆಯಲ್ಲಿ ವಿದ್ಯಾರ್ಥಿನಿ ಬೆಂಚ್ ಮೇಲೆ ಕುಳಿತಿದ್ದಾಗ ಆಕೆಯ ಸಹಪಾಠಿ ಏಕಾಏಕಿ ಬಂದು ವಿದ್ಯಾರ್ಥಿನಿ ತಲೆಗೆ ಗುಂಡಿಕ್ಕಿ ಕೊಲ್ಲುತ್ತಾನೆ ಬಳಿಕ ವಿದ್ಯಾರ್ಥಿ ತಾನು ಸಹ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ …
Read More »ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು
ಬೆಂಗಳೂರು:37 ವರ್ಷದ ಚಂದನ್ ಕುಮಾರ್ ಹತ್ಯೆಯಾದ ವ್ಯಕ್ತಿ. ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಗುಂಡುಗಳು ಚಂದನ್ ದೇಹವನ್ನು ಹೊಕ್ಕಿವೆ. ಘಟನಾ ಸ್ಥಳದಲ್ಲೇ ಚಂದನ್ ಸಾವನ್ನಪ್ಪಿದ್ದಾರೆ. ಚಂದನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಸಾವನ್ನಪ್ಪಿದ್ದಾಗಿ …
Read More »ಬೆಂಗಳೂರಲ್ಲಿ ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಕುಸಿದು ಬಿದ್ದು ಮಹಿಳೆ ಸಾವು!
ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಕುಸಿದು ಬಿದ್ದು ಜ್ಯೋತಿ (45) ಸಾವನ್ನಪ್ಪಿದ್ದರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಗೋಕರ್ಣ| ಪ್ರೀತಿ ನಿರಾಕರಣೆ: ಹಲ್ಲೆ ನಡೆಸಿ, ಕೈ ಕುಯ್ದುಕೊಂಡ ಯುವಕ
ಇಲ್ಲಿಯ ಬೇಲೆಹಿತ್ತಲಿನ ಯುವತಿಯೊಬ್ಬರಿಗೆ ಪ್ರೀತಿಸು ಎಂದು ಪೀಡಿಸಿದ ಯುವಕನೊಬ್ಬ, ಯುವತಿ ನಿರಾಕರಿಸಿದಾಗ ಸಿಟ್ಟಿಗೆದ್ದು ಯುವತಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ತಾನೂ ಕೈ ಕುಯ್ದುಕೊಂಡು ಗಾಯ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.ಚಿತ್ರದುರ್ಗದ ನಿವಾಸಿ, ಹಾಲಿ ಡ್ರೈಫ್ರುಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರ ಎಂ. (28) ಕೈ ಕುಯ್ದುಕೊಂಡ ಯುವಕ. ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದ ಯುವತಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಯುವತಿ ಕೆಲಸಕ್ಕೆ ಹೋಗುವದನ್ನೇ …
Read More »ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಥಾಯ್ಲೆಂಡ್ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ …
Read More »ಫ್ಲೈಓವರ್ ಮೇಲೆ ನಿಂತಿದ್ದ ಕಾರಿನಲ್ಲಿ ಮೂರು ಶವ ಪತ್ತೆ
ನವದೆಹಲಿ: ಫ್ಲೈ ಓವರ್ ಮೇಲೆ ನಿಂತಿದ್ದ ಕಾರಿನಲ್ಲಿ ಮೂರು ಶವ ಪತ್ತೆಯಾಗಿರುವ ಘಟನೆ ದೆಹಲಿಯ ಪೀರಗಢಿಯಲ್ಲಿ ನಡೆದಿದೆ. ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂರು ಶವಗಳು ಪತ್ತೆಯಾಗಿವೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್(60) ಲಕ್ಷ್ಮೀ ದೇವಿ (40) ಹಾಗೂ ಶಿವ ನರೇಶ್ ಸಿಂಗ್ (47) ಮೃತ ದುರ್ದೈವಿಗಳು. ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. …
Read More »ಎಸ್ಡಿಪಿಐ ರಾಜ್ಯಾಧ್ಯಕ್ಷರ ಕಾರು ಅಗ್ನಿಗಾಹುತಿ
ಮಡಿಕೇರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಕಾರು ಅಗ್ನಿಗಾಹುತಿಯಾದ ಘಟನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತತ್ಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಶಾಲನಗರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಕಾರು ಸಂಪೂರ್ಣ ಹಾನಿಗೀಡಾಗಿದ್ದು, ಅಗ್ನಿ ಅನಾಹುತಕ್ಕೆ ಕಾರಣ …
Read More »KSRTC ಬಸ್ನಲ್ಲಿ ಆಕಸ್ಮಿಕ ಬೆಂಕಿ; ಚಾಲಕನ ಸಮಯ ಪ್ರಜ್ಞೆ, ತಪ್ಪಿದ ಭಾರೀ ದುರಂತ
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ತಾಂತ್ರಿಕ ತೊಂದರೆಯಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.ಬಸ್ ಚಲಿಸುತ್ತಿದ್ದ ವೇಳೆ ಎಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿ ಕೊಂಡಿದ್ದು, ಚಾಲಕ ಸಮಯ ಪ್ರಜ್ಞೆ ಪ್ರದರ್ಶಿಸಿ ಬಸ್ ಅನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಸುರಕ್ಷಿತವಾಗಿ ಇಳಿಯಲು ಅವಕಾಶ ಮಾಡಿಕೊಟ್ಟರು. ಚಾಲಕನ ಬಾಗಿಲು ಮೂಲಕ ಪ್ರಯಾಣಿಕರು ಬಸ್ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ತಕ್ಷಣದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





