ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು ಸಮೀಪದ ಕೀರ್ತಿನಗರ ಐದನೇ ಅಡ್ಡರಸ್ತೆ ವ್ಯಾಪ್ತಿಯಲ್ಲಿ ತೆಂಗಿನ ತೋಟಕ್ಕೆ ಗುರುವಾರ ಸಂಜೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆಅಗ್ನಿ ಶಾಮಕ ದಳದವರು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅನೇಕ ಮರಗಿಡಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಸಮೀಪದ ತೆಂಗಿನ ತೋಟಕ್ಕೂ ಬೆಂಕಿ ಆವರಿಸಿಕೊಂಡಿದೆ. ತೋಟದ ಬಹುಭಾಗಕ್ಕೆ ಹಾನಿಯಾಗಿದೆ. ರಾತ್ರಿಯ ವೇಳೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ …
Read More »ಕಾರವಾರ: ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ
ಇಲ್ಲಿನ ಶಿರವಾಡದಲ್ಲಿರುವ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಸ್ಟಿಕ್ ಸೇರಿದಂತೆ ಘನ ತ್ಯಾಜ್ಯಗಳನ್ನು ವಿಲೇವಾರಿಗೆ ದಾಸ್ತಾನು ಮಾಡಿದ್ದ ಪ್ರದೇಶಕ್ಕೆ ಬೆಂಕಿ ಆವರಿಸಿದೆ. ನಸುಕಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತ್ಯಾಜ್ಯ ವಿಲೇವಾರಿ ಘಟಕದ ಸಿಬ್ಬಂದಿ ತಿಳಿಸಿದ್ದಾರೆ. ಹತ್ತಾರು ಟನ್ ತ್ಯಾಜ್ಯ ದಾಸ್ತಾನು ಇದ್ದ ಜಾಗದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಕಾರವಾರ, ಅಂಕೋಲಾ, ಬಿಣಗಾದಲ್ಲಿರುವ ಬಿರ್ಲಾ …
Read More »ನೆಲಮಂಗಲ: ಭಾರಿ ಅಗ್ನಿ ಅನಾಹುತ, ಸುಟ್ಟು ಕರಕಲಾಯ್ತು 40 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ …
Read More »ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ …
Read More »ಕನಕಗಿರಿ: ₹ 8.50 ಲಕ್ಷ ಮೌಲ್ಯದ ಆಭರಣ, ನಗದು ಕಳ್ಳತನ
ಕನಕಗಿರಿ: ತಾಲ್ಲೂಕಿನ ನವಲಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಪಾಯಿಯಾದ (ಸಹಾಯಕ ಹುದ್ದೆ) ಮೆಹಬೂಬಸಾಬ ಪಿಂಜಾರ ಅವರ ಮನೆಯಲ್ಲಿ ಮಂಗಳವಾರ ಕಳ್ಳತನವಾಗಿದೆ. ಗ್ರಾಮದ ವೀರಸಂಗಪ್ಪ ಪಟ್ಟಣಶೆಟ್ಟಿ ಅವರಿಗೆ ಸೇರಿದ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಬಾಡಿಗೆ ಇದ್ದು 15 ವರ್ಷದಿಂದ ಸಂಘದಲ್ಲಿ ಸಿಪಾಯಿ ಕೆಲಸ ಮಾಡುತ್ತಿರುವೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ₹ 1.50 ಲಕ್ಷ ನಗದು ಹಾಗೂ ₹ 7.50 ಲಕ್ಷ ಮೊತ್ತದ ಬಂಗಾರದ ಉಂಗುರ, …
Read More »ಕರ್ತವ್ಯ ಲೋಪ: ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ
ಚಾಮರಾಜನಗರ: ಹಾಸ್ಟೆಲ್ಗಳಲ್ಲಿ ಅವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಆಹಾರ ಪದಾರ್ಥಗಳ ದುರ್ಬಳಕೆ, ಬಿಲ್ ಹಾಗೂ ಕಡತಗಳ ನಿರ್ವಹಣೆ ಮಾಡದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ನ್ಯಾಯಬೆಲೆ ಅಂಗಡಿ ವಿತರಕನ ಪರವಾನಗಿ ಅಮಾನತುಗೊಳಿಸಲಾಗಿದೆ.ಬಂಡಿಗೆರೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾರ್ಡನ್ಗಳನ್ನು ಒಂದು ತಿಂಗಳು ಕಡ್ಡಾಯ ರಜೆ ಮೇಲೆ ಕಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ …
Read More »ಮಾನಹಾನಿಕರ ಹೇಳಿಕೆ ಆರೋಪ: ಪ್ರತಿಭಾ ಕುಳಾಯಿಗೆ ನೋಟಿಸ್
ಪುತ್ತೂರು: ಮಾಧ್ಯಮಗಳ ಮುಂದೆ ತನ್ನ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರು ನೀಡಿದ್ದ ದೂರಿನ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ನಗರ ಠಾಣೆ ಪೊಲೀಸರು ನೋಟೀಸ್ ನೀಡಿದ್ದಾರೆ. ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣದಲ್ಲಿ ನಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಮತ್ತು ಸಂದರ್ಶನಗಳಲ್ಲಿ ಮಾನಹಾನಿಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪಿ.ಜಿ.ಜಗನ್ನಿವಾಸ್ ರಾವ್ …
Read More »ಕೇರಳ: ಕಲ್ಲಂಗಡಿ ಟ್ರಕ್ನಲ್ಲಿ ಸ್ಫೋಟಕಗಳು ಪತ್ತೆ
ಪಾಲಕ್ಕಾಡ್ : ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ, ಜಿಲೆಟಿನ್ ಹಾಗೂ ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಯ ಮೇಲೆ ರಾಶಿ …
Read More »ಬೆಳಗಾವಿ hit-and-run case: ಮೂವರು ಯುವಕರ ದಾರುಣ ಸಾವು
ಹಾರೂಗೇರಿ ಪಟ್ಟಣದ ಅಥಣಿ-ಗೋಕಾಕ ರಸ್ತೆ ಮೇಲೆ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೋಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ಗಜಾನನ ಮಹಾದೇವ ವಡೆಯರ್(22), ಮಾಳಪ್ಪ ಮಲ್ಲಪ್ಪ ಗೋಲಭಾಂವಿ(22) ಮತ್ತು ಮಹಾದೇವ ಮಲ್ಲಪ್ಪ ಗೋಲಭಾಂವಿ (26) ಎಂದು ಗುರುತಿಸಲಾಗಿದೆ. ಮೂವರು ಮುಗಳಖೋಡ್ ನಿಂದ ಹಾರೂಗೇರಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ …
Read More »ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಕಸದ ರಾಶಿ
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಖಾಲಿ ಜಾಗದಲ್ಲಿ ಹಾಕಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಧಗಧಗಿಸಿ ಉರಿದಿದೆ. ಬೆಂಗಳೂರಿನ ಜೆಪಿ ನಗರದ ಶ್ರೀನಿಧಿ ಲೇಔಟ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮರ ಇದ್ದಿದ್ದರಿಂದ ಹೊತ್ತಿ ಬೆಂಕಿ ಉರಿದಿದೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸದ್ಯ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





