ಕಳೆದ ಮೂರು ತಿಂಗಳಿನಿಂದ ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಕಿಡಿಗೇಡಿಯನ್ನು ಅಕ್ಕಪಡೆ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ. ಕಳೆದ ಮೂರು ತಿಂಗಳಿಂದ ವ್ಯಕ್ತಿಯೋರ್ವ ಹಾಸ್ಟೆಲ್ಗೆ ಹೋಗಿ ಬರುವಾಗ ವಿದ್ಯಾರ್ಥಿನಿಯನ್ನು ನಿರಂತರವಾಗಿ ಫಾಲೋ ಮಾಡುತ್ತಿದ್ದಾನೆ ಎನ್ನುವ ಮಾಹಿತಿ ಅಕ್ಕಪಡೆಗೆ ಲಭಿಸಿತ್ತು. ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ಅಕ್ಕಪಡೆ ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳ ಪರಿಣಾಮವಾಗಿ ವಿದ್ಯಾರ್ಥಿನಿ ತಾನು ಅನುಭವಿಸುತ್ತಿದ್ದ ಮಾನಸಿಕ ಕಿರುಕುಳವನ್ನು ಅಕ್ಕಪಡೆಯ ಗಮನಕ್ಕೆ ತಂದಿದ್ದಾಳೆ. ಈ ಹಿನ್ನೆಲೆಯಲ್ಲಿ …
Read More »ಮರ ಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವಶ
ಕನಕಪುರ: ತಾಲೂಕಿನ ಯಲವನಾಥ ಎನ್.ಎ. ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಮರ ಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಅರಣ್ಯ ಪ್ರದೇಶದಲ್ಲಿ ಭಾರಿಗಾತ್ರದ ಮರವನ್ನು ಕಡಿದು ಟ್ರ್ಯಾಕ್ಟರ್ನಲ್ಲಿ ತುಂಬಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಅಂಥೊನಿ ಹಾಗೂ ಉಪವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ಸ್ಥಳಕ್ಕೆ ಧಾವಿಸಿ ಮರ ತುಂಬಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದು, ಸುರೇಶ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಗಸ್ತುಪಾಲಕ ಗಂಗಾಧರ್ ಸಿಬ್ಬಂದಿ ಇದ್ದರು.
Read More »ಹೆಜಮಾಡಿ ಟೋಲ್ ಬಳಿ ಕುಡಿದು ಕೇರಳ ವಿದ್ಯಾರ್ಥಿಗಳ ಪುಂಡಾಟ,ವಿಡಿಯೋ ವೈರಲ್
ಉಡುಪಿ: ಎರಡು ಬಸ್ಸುಗಳಲ್ಲಿ ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದೆ. ಮದ್ಯದ ನಶೆಯಲ್ಲಿ ವಿದ್ಯಾರ್ಥಿಗಳನ್ನು ಪುಂಡಾಟವನ್ನು ಮೆರೆದಿದ್ದಾರೆ ಅಂತ ಹೇಳಲಾಗುತ್ತಿದ್ದು, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
Read More »ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿ – ಚಿಕಿತ್ಸೆಗೆಂದು ಕಾರಿನಲ್ಲಿಟ್ಟಿದ್ದ ಹಣಕ್ಕೆ ಕನ್ನ!
ನೆಲಮಂಗಲದಲ್ಲಿ ವ್ಯಕ್ತಿಯೋರ್ವ ಪತ್ನಿಯ ಚಿಕಿತ್ಸೆಗಾಗಿ ಸಂಗ್ರಹಿಸಿ ಇಟ್ಟಿದ್ದ ಹಣವನ್ನು ಖದೀಮರು ದೋಚಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂಯ ಅವರಿಗೆ ಅನಾರೋಗ್ಯ ಹಿನ್ನೆಲೆ ನಗರೂರು ಸಮೀಪದ ಬಿಜಿಎಸ್ ಆಸ್ಪತ್ರೆಗೆ ಆಯುರ್ವೇದ ಚಿಕಿತ್ಸೆಗಾಗಿ ತೆರಳಿದ್ದ ವೇಳೆ ಕಳ್ಳರು ಕರಾಮತ್ತು ತೋರಿಸಿದ್ದಾರೆ. ಚಿಕಿತ್ಸೆಗಾಗಿ ಹೇಮಣ್ಣ ಸುಮಾರು ಎರಡು ಲಕ್ಷ ಐವತ್ತು ಸಾವಿರ ರೂಪಾಯಿ ಸಾಲ ಪಡೆದು ಕಾರಿನ …
Read More »ಖಾಲಿ ನಿವೇಶನದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಿಸಿದ ಗುತ್ತಿಗೆದಾರ!
ಬೆಂಗಳೂರು: ಖಾಲಿ ನಿವೇಶನದಲ್ಲಿ ಜೆಲಿಟಿನ್ ಕಡ್ಡಿ ಸ್ಫೋಟಗೊಂಡಿರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯ ಅಕ್ಷಯ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ನಾರಾಯಣ ಎಂಬುವರಿಗೆ ಸೇರಿ ಖಾಲಿ ನಿವೇಶನದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು. ಅಕ್ಷಯ ನಗರದ ರೆಸಿಡೆನ್ಸಿಯಲ್ ಪ್ರದೇಶದಲ್ಲಿ ನಾರಾಯಣ ಎಂಬುವರಿಗೆ ಸೇರಿದ 100-100 ನಿವೇಶನ ಇದ್ದು, ಅದರಲ್ಲಿ ಪತ್ತೆಯಾದ ಕಲ್ಲು ಬಂಡೆ ಸ್ಫೋಟಗೊಳಿಸಲು ಗುತ್ತಿಗೆದಾರ …
Read More »ಸಿಂಧನೂರು: ರೈಲಿನಡಿ ಬಿದ್ದು ಯುವತಿ ಆತ್ಮಹತ್ಯೆ
ಸಿಂಧನೂರು ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವತಿಯೊಬ್ಬರು ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನ್ವಿ ತಾಲ್ಲೂಕಿನ ನೀರಮಾನ್ವಿ ಸಮೀಪದ ಸೀಕಲ್ ತಾಂಡಾದ ಸುಮಂಗಲಾ (21) ಮೃತ ಯುವತಿ. ಸುಮಂಗಲಾ ಸಿಂಧನೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಇರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿದ್ದು ಬಿ.ಎ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಈ ಬಗ್ಗೆ ರಾಯಚೂರಿನ ರೈಲ್ವೆ …
Read More »ಆನ್ಲೈನ್ ಗೇಮ್ ಗೀಳು; ಪೋಷಕರು ಬೈದಿದ್ದಕ್ಕೆ 9ನೇ ಮಹಡಿಯಿಂದ ಬಿದ್ದು ಮೂವರು ಸಹೋದರಿಯರು ಆತ್ಮಹತ್ಯೆ
ಲಖನೌ: ಆನ್ಲೈನ್ ಗೇಮ್ ಗೀಳಿನ ಸಲುವಾಗಿ ಪೋಷಕರು ಬೈದಿದ್ದಕ್ಕೆ ಮೂವರು ಅಪ್ರಾಪ್ತ 12, 14, 16 ವರ್ಷದ ಮೂವರು ಸಹೋದರಿಯರು ಅಪಾರ್ಟ್ಮೆಂಟ್ನ 9ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಇಂದು(ಫೆ.04) ಮಧ್ಯರಾತ್ರಿ ನಡೆದಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್ನ ಭಾರತ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯರನ್ನು ಪಖಿ(12), ಪ್ರಾಚಿ(14) ಹಾಗೂ ವಿಶಿಕಾ(16) ಎಂದು …
Read More »ಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಪ್ರಕರಣ ಬಾಲಕಿಗೆ ಗರ್ಭಪಾತ: ವೈದ್ಯೆ ಅಮಾನತು
ಶಿವಮೊಗ್ಗ: ಪೋಕ್ಸೊ ಪ್ರಕರಣ ಎಂದು ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ ಬಾಲಕಿಗೆ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಡಿ. ಪ್ರತಿಮಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಗರ್ಭಪಾತ ಮಾಡಿಸಿದ ಹಿನ್ನೆಲೆಯಲ್ಲಿ ಡಾ. ಪ್ರತಿಮಾ ಸೇರಿ 9 ಜನರ ವಿರುದ್ಧ ನವೆಂಬರ್ 6ರಂದು ಪ್ರಕರಣ ದಾಖಲಾಗಿತ್ತು. ಸಾಗರ ನಗರ …
Read More »ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ
ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ ಭಗವಂತ ಹುಣಶ್ಯಾಳಿ ( 23),ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಬಾಲಕಿಗೆ 2024 ರಲ್ಲಿ ಅಪರಾಧಿಯು ಪ್ರೀತಿಸುವ ನಾಟಕವಾಡಿ ಮದುವೆ ಆಗುತ್ತೆನೆ ಎಂದು ಪುಸಲಾಯಿಸಿ …
Read More »ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ಬಂಧನ
ಸಿರಿಗೆರೆ (ಚಿತ್ರದುರ್ಗ): ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಭರಮಸಾಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ನಮ್ಮನ್ನು ಕೊಠಡಿಗೆ ಕರೆಸಿಕೊಂಡು ಮೈ ಮುಟ್ಟುವುದು, ಮುತ್ತು ಕೊಡುವುದು ಮಾಡುತ್ತಾರೆ’ ಎಂದು ವಿದ್ಯಾರ್ಥಿನಿಯರು ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು. ಇದನ್ನು ಅವರು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಶಿಕ್ಷಕನನ್ನು ಅಮಾನತು ಮಾಡಿದ್ದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಇದರ ಆಧಾರದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





