Breaking News

BigTv News

ಕಾಸರಗೋಡು| ತಂದೆಯಿಂದ ಮಗಳ ಕೊಲೆ: ಆರೋಪಿ ಸೆರೆ

18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದಿದ್ದಾನೆ ಎನ್ನಲಾದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ.ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ …

Read More »

ದೊಡ್ಡಬಳ್ಳಾಪುರ: ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕನಿಂದ ಗಲಾಟೆ

ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿರುವ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳಗ್ಗೆ ಸುಪ್ರಭಾತ ಹಾಡು ಹಾಕಲಾಗಿತ್ತು. ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡಿ, ಇಲ್ಲವೆ ಆಫ್ ಮಾಡಿ ಎಂದು ಧಮ್ಕಿ ಹಾಕಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು …

Read More »

ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್: ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನ ಇನ್ನಿಬ್ಬರು ಪುತ್ರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಯೂಬ್ ಪುತ್ರರಾದ ಹುಸೇನ್(26), ಹಮ್ಜಾ(24) ಅವರನ್ನು ವಶಕ್ಕೆ ಪಡೆಯಲಾಗಿದೆ. ಜನವರಿ 31 ರಂದು ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು.ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಾಯತ್ರಿ ಕಾನ್ಸ್ಟೇಬಲ್ ಗಳಾದ ಹರೀಶ್ ಮತ್ತು ಕೆಂಚಪ್ಪ ಅವರ ಮೇಲೆ ಹಲ್ಲೆ ಮಾಡಿದ್ದರು. ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ಪ್ರಕರಣ …

Read More »

ಕುಳಗೇರಿ ಕ್ರಾಸ್: ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ,…ಪೊಲೀಸರಿಂದ ಶೋಧ

ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮದ ಹೊರವಲಯದ ನಿರಾಣ ಸಕ್ಕರೆ ಕಾರ್ಖಾನೆ ಬಳಿ ಗೌರಿಶಂಕರ್ ಅವರ ತೋಟದಲ್ಲಿ ನಡೆದಿದೆ. ಕಾಕನೂರ ಗ್ರಾಮದ ಸೋಮಶೇಖರ ಹನಮಂತ ಕಿಳ್ಳಿಕ್ಯಾತರ ವಯಾ (45) ಎಂದು ಗುರಿತಿಸಲಾಗಿದ್ದು ರವಿವಾರ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಹೇಳಿಲಾಗುತ್ತಿದೆ.ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆ ಮಾಡಿದ ವ್ಯಕ್ತಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆ ಸಂಬಂದ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ …

Read More »

ಸಕ್ರೆಬೈಲು ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಮೃತ್ಯು, ಮತ್ತೊರ್ವನ ಸ್ಥಿತಿ ಗಂಭೀರ

ತೀರ್ಥಹಳ್ಳಿ: ಕಾರು ಬಸ್ಸು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಆಲ್ಟೊ ಕಾರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ಸಿನ ಮುಂಭಾಗ ಹಾಗೂ ಕಾರಿನ ಮುಂಭಾಗ ಸಂಪೂರ್ಣ …

Read More »

ಬೆಳಗಾವಿ | ವಾಹನಗಳ ಕಳ್ಳತನ: ಒಬ್ಬನ ಬಂಧನ

ನಗರದ ವಿವಿಧೆಡೆ 20ಕ್ಕೂ ಅಧಿಕ ಬೈಕ್ ಕದ್ದ ಆರೋಪದಡಿ ಒಬ್ಬನನ್ನು ಸಿಸಿಬಿ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಹುಕ್ಕೇರಿ ತಾಲ್ಲೂಕಿನ ಬೆನಕನಹೊಳಿಯ ಸಂಜು ಮೇಖಳಿ ಬಂಧಿತ. ಈಚೆಗೆ ಕೋಟೆ ರಸ್ತೆಯಲ್ಲಿ ಮತ್ತು ಕಪಿಲೇಶ್ವರ ದೇವಸ್ಥಾನ ಬಳಿ ಈತ ವಾಹನಗಳ ಕಳ್ಳತನ ಮಾಡಿದ್ದ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ₹2,78,000 ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆದಿದ್ದು, ಮಾರ್ಕೆಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನಾಪತ್ತೆಯಾಗಿದ್ದ ಬಾಲಕ ಸಂಪ್‌ನಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಕಳೆದ 3 ದಿನಗಳ ಹಿಂದೆ ಕಾಣೆಯಾಗಿದ್ದ 14 ವರ್ಷದ ಬಾಲಕ, ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಸಮೀಪ ಶವವಾಗಿ ಪತ್ತೆಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.ಈ ದುರ್ಘಟನೆಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ. ಪೈಪ್‌ಲೈನ್‌ಗಾಗಿ ತೆಗೆಯಲಾಗಿದ್ದ ಸಂಪ್‌ಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿತ್ತು. ಬಾಲಕ ಓಡಾಡುವ ವೇಳೆ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿರುವ ಸಾಧ್ಯತೆಯಿದೆ ಎಂದು ಎಂದು ಸ್ಥಳೀಯರು ದೂರಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾತಗುಣಿಯ …

Read More »

ಜಮಖಂಡಿ: ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಕುಡುಕ!

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರಿನಲ್ಲಿ ವ್ಯಕ್ತಿಯೊಬ್ಬ ಸೋಮವಾರ ಮೊಬೈಲ್‌ ಟವರ್‌ ಏರಿ ಕೆಲಕಾಲ ಆತಂಕದ ವಾತಾವರಣವನ್ನುಂಟು ಮಾಡಿದ್ದನು. ಕುಡಿದ ಮತ್ತಿನಲ್ಲಿ ಟವರ್‌ ಏರಿ ನಿಂತಿದ್ದ ಎನ್‌. ಅರ್ಜುನ್‌, ತುತ್ತ ತುದಿಯಲ್ಲಿ ಎರಡು ಕೈಬಿಟ್ಟು ಎದ್ದು ನಿಂತಿದ್ದು ಆತಂಕಕ್ಕೆ ಕಾರಣವಾಗಿತ್ತು. ಅಲ್ಲಿಂದಲೇ ಕೆಳಗಿದ್ದವರ ಮೊಬೈಲ್‌ಗೆ ಫೋನ್‌ ಮಾಡಿ ಮಾತನಾಡುವುದಲ್ಲದೇ, ಸೆಲ್ಫಿಯನ್ನು ಹೊಡೆದುಕೊಳ್ಳುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಧ ಗಂಟೆ ಕಾಲ ಅಲ್ಲಿಯೇ ಇದ್ದನು. ಕೆಳಗಿದ್ದ ಕೆಲವರು ಮೊಬೈಲ್‌ …

Read More »

ಹುಬ್ಬಳ್ಳಿ | ಚಾಕುವಿನಿಂದ ಇರಿತ: ಪ್ರಕರಣ ದಾಖಲು

ಮನೆ ಎದುರು ಬಂದು ಗಲಾಟೆ ಮಾಡಿದ ಕಾರಣಕ್ಕೆ ತಂದೆಯ ಎರಡನೇ ಪತ್ನಿಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ನಗರದ ಮಾಲ್ದಾರಬಾಡಾದಲ್ಲಿ ನಡೆದಿದೆ. ಅಲ್ಫಿಯಾ (26) ಗಾಯಗೊಂಡವರು. ಅವರನ್ನು ಚಿಕಿತ್ಸೆಗಾಗಿ ಕೆಎಂಸಿ-ಆರ್‌ಐ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆರೋಪಿ ಮಲ್ಲಿಕ್‌ರೇಹಾನ್ ವಿರುದ್ಧ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಅಡುಗೆ ಕೆಲಸ ಮಾಡಿಕೊಂಡಿರುವ ನಿಸಾರ್‌ಅಹ್ಮದ್ ಖಾನ್ ಅವರು ಕೌಸರ್ ಹಾಗೂ ಅಲ್ಪಿಯಾ ಅವರನ್ನು ಮದುವೆಯಾಗಿದ್ದರು. ಅವರಿಬ್ಬರಿಗೂ ಪ್ರತ್ಯೇಕ ಬಾಡಿಗೆ ಮನೆ ಮಾಡಿಕೊಟ್ಟಿದ್ದರು. ಮೊದಲ ಪತ್ನಿ …

Read More »

ಟಿಪ್ಪರ್‌ಗೆ ಬೈಕ್‌ ಡಿಕ್ಕಿ ; ಒರ್ವನ ಸಾವು

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಅಂಬೇಡ್ಕ‌ರ್ ವೃತ್ತದಲ್ಲಿ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಅನೀಲ ಕೇಸು ರಾಠೋಡ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವೂರ ತಾಂಡಾದಿಂದ ಪಡಗಾನೂರ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.ಬೈಕ್ ನಲ್ಲಿದ್ದ ಮತ್ತೊಬ್ಬ ಸವಾರ ಅವಿನಾಶ ಮನೋಹರ ರಾಠೋಡ (26) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಇಂಡಿ ಕಡೆಗೆ ತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.

Read More »