Breaking News

BigTv News

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಸುಳ್ಯ: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸುಳ್ಯದ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ರವಿವಾರ ಸಂಭವಿಸಿದೆ. ಅಜ್ಜಾವರ ಗ್ರಾಮದ ದೊಡ್ಡೇರಿ ನಿವಾಸಿ ಕೃಷ್ಣಪ್ಪ ನಾಯ್ಕ (70) ಮೃತರು. ಕೃಷ್ಣ್ಪಪ್ಪ ಅವರ ಮೃತದೇಹ ಸುಳ್ಯದ ಓಡಬಾಯಿ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಕೃಷ್ಣಪ್ಪ ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ನದಿ ದಾಟುವ ವೇಳೆ ಅಥವಾ ಇನ್ನಾವುದೋ ಕಾರಣಕ್ಕೆ ನದಿಗೆ ಇಳಿದ ವೇಳೆ ಆಕಸ್ಮಿಕವಾಗಿ ನದಿ ನೀರಲ್ಲಿ …

Read More »

ವಿಟ್ಲಮುಡ್ನೂರು : ಕೋಳಿ ಅಂಕಕ್ಕೆ ದಾಳಿ, ನಾಲ್ವರು ವಶಕ್ಕೆ

ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ವಿಟ್ಲಮುಡ್ನೂರು ಗ್ರಾಮದ ಎಲ್ಯಣ್ಣ ಪೂಜಾರಿ ಅವರ ತೋಟದ ಬಳಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದು ಸ್ಥಳಕ್ಕೆ ದಾಳಿ ನಡೆಸಿದಾಗ, ಕೋಳಿ ಅಂಕ ಜೂಜಾಟ ನಡೆಯುತ್ತಿರುವುದು ಕಂಡುಬಂದಿದೆ. ಪೊಲೀಸರು ಬಂದಿರುವುದನ್ನು ಕಂಡು ಕೆಲವರು ಓಡಿ ಹೋಗಿದ್ದು, ಮಹೇಶ್, ಬಾಬು, ಆನಂದ ಹಾಗೂ ಅಣ್ಣು ಎಂಬ ನಾಲ್ವರನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ. ಅಲ್ಲಿ ನಗದು ರೂಪಾಯಿ 4390 …

Read More »

ವಿವಾಹದ ಮನೆಯಲ್ಲಿ ಚಿನ್ನಾಭರಣ ಕಳವು

ಉಪ್ಪಳ: ವಿವಾಹದ ತಯಾರಿ ನಡೆಯುತ್ತಿದ್ದ ಬಪ್ಪಾಯಿತೊಟ್ಟಿಯ ರುಕ್ಸಾನ ಅವರ ಮನೆಯಿಂದ ಸುಮಾರು 23 ಲಕ್ಷ ರೂ. ಮೌಲ್ಯದ 23.5 ಪವನ್‌ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ. ಜ.23 ರಂದು ಮಗಳ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಮನೆಯ ನವೀಕರಣ ನಡೆಯುತ್ತಿದ್ದಾಗ ಕಳವು ನಡೆದಿದೆ. ಜನವರಿ 15 ರಂದು ಮಧ್ಯಾಹ್ನ 2 ಗಂಟೆಯಿಂದ ಜ.21 ರ ಸಂಜೆ 6 ಗಂಟೆಯೊಳಗೆ ಕಳವು ನಡೆದಿರಬೇಕೆಂದು ಮಂಜೇಶ್ವರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮಂಜೇಶ್ವರ ಪೊಲೀಸರು ಪ್ರಕರಣ …

Read More »

ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ಬೆದರಿಕೆ ಪ್ರಕರಣ: ಐದು ಮಂದಿ ಆರೋಪಿಗಳ ಬಂಧನ

ಕೋಟ: ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಗೆದ್ದ 15ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ್(25), ಕೊಳ್ಕೆಬೈಲುವಿನ ಸೃಜನ್ ಶೆಟ್ಟಿ(28), ಪಡುಮುಂಡುವಿನ ರಾಘವೇಂದ್ರ (37), ಶಿರಿಯಾರ ಕುಶಲ(38) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಲ್ಲಾಡಿಯ ಸಂದೇಶ್ ಕುಲಾಲ್ ಎಂಬವರಿಗೆ ಸುಮಾರು ಒಂದು ವರ್ಷದ ಹಿಂದೆ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ …

Read More »

ಹಗಲಲ್ಲಿ ಕಬ್ಬು ಕಟಾವು, ರಾತ್ರಿ ವೇಳೆ ಮನೆ ಕಳ್ಳತನ: ಖತರ್ನಾಕ್​ ಗ್ಯಾಂಗ್​​ ಭೇದಿಸಿದ ಖಾಕಿ

ಬಾಗಲಕೋಟೆ: ಕಬ್ಬು ಕಟಾವು ಮಾಡುವ ನೆಪದಲ್ಲಿ ಜಿಲ್ಲೆಗೆ ಎಂಟ್ರಿಕೊಟ್ಟು ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ಮಹಾರಾಷ್ಟ್ರ ಮೂಲದ ಗ್ಯಾಂಗ್​​ನ ಬಾಗಲಕೋಟೆ ಪೊಲೀಸರು ಭೇದಿಸಿದ್ದಾರೆ. ಶಂಕರ್ ಪವಾರ್ (20), ಅಭಿ ಬೋಸ್ಲೆ(19), ಲಕ್ಷ್ಮೀ ಬೋಸ್ಲೆ (40), ಕರಣ ಪವಾರ್ (20) ಮತ್ತು ಮಮತಾ ಬೋಸ್ಲೆ(21) ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲ ಮಹಾರಾಷ್ಟದ ಪರಬಾನಿ ಜಿಲ್ಲೆ ಮಂಗರೂಲ ತಾಂಡಾದ ನಿವಾಸಿಗಳು ಎಂಬುದು ಗೊತ್ತಾಗಿದೆ. ಕಬ್ಬು ಕಟಾವು ಕೆಲಸ ಮಾಡುವ ನೆಪದಲ್ಲಿ ಬಾಗಲಕೋಟೆಗೆ ಬಂದಿದ್ದ ಈ ತಂಡ …

Read More »

ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!

ಪಿರಿಯಾಪಟ್ಟಣ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) …

Read More »

ತುಮಕೂರು: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು, ನಾಲ್ಕು ಮಂದಿಗೆ ಗಾಯ

ತುಮಕೂರು: ತಾಲ್ಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಿಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅನಿಕೇತ್, ಅಭೀರ್, ಆಂಧ್ರಪ್ರದೇಶದ ಸನ್ಮುಕ್ತಿ ಮೃತರು. ಎಲ್ಲರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಬೆಂಗಳೂರಿಗೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕೋರ …

Read More »

ಮದುವೆಯ ನೆಪದಲ್ಲಿ 10 ವರ್ಷ ಮನೆಕೆಲಸದವಳ ಮೇಲೆ ಅತ್ಯಾಚಾರ :ಬಾಲಿವುಡ್ ನಟ ನದೀಮ್ ಖಾನ್ ಅರೆಸ್ಟ್

ನವದೆಹಲಿ: ಸುಮಾರು ಹತ್ತು ವರ್ಷಗಳಿಂದ ಮನೆಗೆಲಸದ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಎಸಗಿದ ಆರೋಪದ ಮೇಲೆ ನಟ ನದೀಮ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಎಬಿಪಿ ವರದಿಯ ಪ್ರಕಾರ, ಸಂತ್ರಸ್ತೆ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟ ಅನೇಕ ಸಂದರ್ಭಗಳಲ್ಲಿ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾನೆ ಮತ್ತು ಮದುವೆಯ ಸುಳ್ಳು ಭರವಸೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಧುರಾಂಧಾರ್ ನಲ್ಲಿ ರಹಮಾನ್ ದಕೈತ್ ಅವರ ಅಡುಗೆಯವ ಅಖ್ಲಾಕ್ …

Read More »

ಬೆಳಗಾವಿಯಲ್ಲಿ ಭೀಕರ ಅಪಘಾತ : ನಿಂತಿದ್ದ ಕಾರಿಗೆ ಕಂಟೇನರ್ ಡಿಕ್ಕಿ, ಸ್ಥಳದಲ್ಲೇ ದಂಪತಿ ದುರ್ಮರಣ!

ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದಂತಹ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ದಂಪತಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಮೃತ ದಂಪತಿಗಳು ಕೊಲ್ಲಾಪುರದ ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವಾಗ ಕೂಗನೋಳ್ಳಿ ಎಂಬಲ್ಲಿ ದಂಪತಿಗಳು ಕಾರು ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದಂತಹ …

Read More »

ಉಡುಪಿ| ಕಲ್ಸಂಕ ಜಂಕ್ಷನ್ ಬಳಿ ಭೀಕರ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತ್ಯು

ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾಶ್ (19) ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬಿದ್ದಿದ್ದು, ಈ ವೇಳೆ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ …

Read More »