Breaking News

BigTv News

ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ಬೆದರಿಕೆ ಪ್ರಕರಣ: ಐದು ಮಂದಿ ಆರೋಪಿಗಳ ಬಂಧನ

ಕೋಟ: ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಗೆದ್ದ 15ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ್(25), ಕೊಳ್ಕೆಬೈಲುವಿನ ಸೃಜನ್ ಶೆಟ್ಟಿ(28), ಪಡುಮುಂಡುವಿನ ರಾಘವೇಂದ್ರ (37), ಶಿರಿಯಾರ ಕುಶಲ(38) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಲ್ಲಾಡಿಯ ಸಂದೇಶ್ ಕುಲಾಲ್ ಎಂಬವರಿಗೆ ಸುಮಾರು ಒಂದು ವರ್ಷದ ಹಿಂದೆ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ …

Read More »

ಹಗಲಲ್ಲಿ ಕಬ್ಬು ಕಟಾವು, ರಾತ್ರಿ ವೇಳೆ ಮನೆ ಕಳ್ಳತನ: ಖತರ್ನಾಕ್​ ಗ್ಯಾಂಗ್​​ ಭೇದಿಸಿದ ಖಾಕಿ

ಬಾಗಲಕೋಟೆ: ಕಬ್ಬು ಕಟಾವು ಮಾಡುವ ನೆಪದಲ್ಲಿ ಜಿಲ್ಲೆಗೆ ಎಂಟ್ರಿಕೊಟ್ಟು ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ಮಹಾರಾಷ್ಟ್ರ ಮೂಲದ ಗ್ಯಾಂಗ್​​ನ ಬಾಗಲಕೋಟೆ ಪೊಲೀಸರು ಭೇದಿಸಿದ್ದಾರೆ. ಶಂಕರ್ ಪವಾರ್ (20), ಅಭಿ ಬೋಸ್ಲೆ(19), ಲಕ್ಷ್ಮೀ ಬೋಸ್ಲೆ (40), ಕರಣ ಪವಾರ್ (20) ಮತ್ತು ಮಮತಾ ಬೋಸ್ಲೆ(21) ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲ ಮಹಾರಾಷ್ಟದ ಪರಬಾನಿ ಜಿಲ್ಲೆ ಮಂಗರೂಲ ತಾಂಡಾದ ನಿವಾಸಿಗಳು ಎಂಬುದು ಗೊತ್ತಾಗಿದೆ. ಕಬ್ಬು ಕಟಾವು ಕೆಲಸ ಮಾಡುವ ನೆಪದಲ್ಲಿ ಬಾಗಲಕೋಟೆಗೆ ಬಂದಿದ್ದ ಈ ತಂಡ …

Read More »

ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!

ಪಿರಿಯಾಪಟ್ಟಣ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) …

Read More »

ತುಮಕೂರು: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು, ನಾಲ್ಕು ಮಂದಿಗೆ ಗಾಯ

ತುಮಕೂರು: ತಾಲ್ಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಿಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅನಿಕೇತ್, ಅಭೀರ್, ಆಂಧ್ರಪ್ರದೇಶದ ಸನ್ಮುಕ್ತಿ ಮೃತರು. ಎಲ್ಲರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಬೆಂಗಳೂರಿಗೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕೋರ …

Read More »

ಮದುವೆಯ ನೆಪದಲ್ಲಿ 10 ವರ್ಷ ಮನೆಕೆಲಸದವಳ ಮೇಲೆ ಅತ್ಯಾಚಾರ :ಬಾಲಿವುಡ್ ನಟ ನದೀಮ್ ಖಾನ್ ಅರೆಸ್ಟ್

ನವದೆಹಲಿ: ಸುಮಾರು ಹತ್ತು ವರ್ಷಗಳಿಂದ ಮನೆಗೆಲಸದ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಎಸಗಿದ ಆರೋಪದ ಮೇಲೆ ನಟ ನದೀಮ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಎಬಿಪಿ ವರದಿಯ ಪ್ರಕಾರ, ಸಂತ್ರಸ್ತೆ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟ ಅನೇಕ ಸಂದರ್ಭಗಳಲ್ಲಿ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾನೆ ಮತ್ತು ಮದುವೆಯ ಸುಳ್ಳು ಭರವಸೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಧುರಾಂಧಾರ್ ನಲ್ಲಿ ರಹಮಾನ್ ದಕೈತ್ ಅವರ ಅಡುಗೆಯವ ಅಖ್ಲಾಕ್ …

Read More »

ಬೆಳಗಾವಿಯಲ್ಲಿ ಭೀಕರ ಅಪಘಾತ : ನಿಂತಿದ್ದ ಕಾರಿಗೆ ಕಂಟೇನರ್ ಡಿಕ್ಕಿ, ಸ್ಥಳದಲ್ಲೇ ದಂಪತಿ ದುರ್ಮರಣ!

ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದಂತಹ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ದಂಪತಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಮೃತ ದಂಪತಿಗಳು ಕೊಲ್ಲಾಪುರದ ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವಾಗ ಕೂಗನೋಳ್ಳಿ ಎಂಬಲ್ಲಿ ದಂಪತಿಗಳು ಕಾರು ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದಂತಹ …

Read More »

ಉಡುಪಿ| ಕಲ್ಸಂಕ ಜಂಕ್ಷನ್ ಬಳಿ ಭೀಕರ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತ್ಯು

ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾಶ್ (19) ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬಿದ್ದಿದ್ದು, ಈ ವೇಳೆ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ …

Read More »

ನೆಲಮಂಗಲದ ಫಾರ್ಮ್ ಹೌಸ್​​​​​​​​​ನಲ್ಲಿ ರೌಡಿಶೀಟರ್ ಆಟೋ ನಾಗನ ಭೀಕರ ಹತ್ಯೆ!

ನೆಲಮಂಗಲ: ಬೆಂಗಳೂರಿನ ಆಟೋ ನಾಗ (32) ಎಂಬ ರೌಡಿಶೀಟರನನ್ನು ದುಷ್ಕರ್ಮಿಗಳು ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನೆಲಮಂಗಲ ಬಳಿಯ ಬಾಲಾಜಿ ಫಾರಂ ಹೌಸ್‌ನಲ್ಲಿ ನಡೆದಿದೆ. ಈತನ ಮೇಲೆ ಕ್ರಿಮಿನಲ್ ಆರೋಪಗಳು ಇದ್ದ ಹಿನ್ನಲೆ ರೌಡಿಶೀಟ್ ತೆರೆಯಲಾಗಿತ್ತು. ಆದ್ರೆ ಇಂದು (ಜ.25) ನೆಲಮಂಗಲದ ಬಳಿಯ ಬಾಲಾಜಿ ಫಾರಂ ಹೌಸ್‌ನ ರೂಮ್‌ನಲ್ಲಿ ಈತನ್ನಿ ಕೊಚ್ಚಿ ಕೊಲೆ ಮಾಡಿಯುವ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಈತನ ವಿರುದ್ಧ …

Read More »

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವಕನಿಗೆ ‘ಲೈಂಗಿಕ ಕಿರುಕುಳ’ : ಪೊಲೀಸ್ ಕಾನ್ಸ್‌ಟೇಬಲ್ ಅರೆಸ್ಟ್!

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಕಾಲೇಜು ವಿದ್ಯಾರ್ಥಿಗೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಇದೀಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾನ್ಸ್ಟೇಬಲ್ ಅನ್ನು ಅರೆಸ್ಟ್ ಮಾಡಲಾಗಿದೆ. ಆರ್.ಟಿ.ನಗರ ಠಾಣೆಯ ಕಾನ್ಸ್​​ಟೇಬಲ್ ಯಮುನಾ ನಾಯಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಠಾಣೆ …

Read More »

400 ಕೋಟಿ ರಾಬರಿ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಶಾಮೀಲು : ಸ್ಪೋಟಕ ಆಡಿಯೋ ವೈರಲ್!

ಬೆಳಗಾವಿ : ಕರ್ನಾಟಕ ಮತ್ತು ಗೋವಾ ಗಡಿ ಭಾಗದಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ಆಡಿಯೋ ಲಭ್ಯವಾಗಿದೆ. ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಆರೋಪಿಗಳು ಇಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆರೋಪಿಗಳಾದ ವಿರಾಟ್ ಮತ್ತು ಜಯೆಶ್ ಮಾತನಾಡಿದ್ದಾರೆ ಎನ್ನುವ ಆಡಿಯೋ ವೈರಲ್ ಆಗಿದೆ. ಇಬ್ಬರು ಮಾತನಾಡಿದ್ದಾರೆ ಆಶ್ರಮ ಒಂದರಲ್ಲಿ ಎರಡು ಸಾವಿರ ಹಣ ಬದಲಾವಣೆ ಕುರಿತು …

Read More »