Breaking News

BigTv News

ಪಾಕಿಸ್ತಾನದ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 7 ಬಲಿ, 25 ಮಂದಿಗೆ ಗಾಯ

ಪಾಕಿಸ್ತಾನದ ವಾಯವ್ಯ ಭಾಗದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್‌ ದಾಳಿ ಮದುವೆ ಸಂಭ್ರಮವನ್ನು ಕ್ಷಣಾರ್ಧದಲ್ಲಿ ಶೋಕಕ್ಕೆ ತಿರುಗಿಸಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿರುವ ಶಾಂತಿ ಸಮಿತಿ ಸದಸ್ಯರೊಬ್ಬರ ಮನೆಯಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ಮದುವೆ ಮನೆಯ ಛಾವಣಿ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಅವಶೇಷಗಳಡಿ ಹಲವರು ಸಿಲುಕಿದ್ದರಿಂದ ಆರಂಭಿಕ ರಕ್ಷಣಾ …

Read More »

ಅಂತರಾಜ್ಯ ಬೈಕ್ ಕಳ್ಳರ ಅರೆಸ್ಟ್ – ಲಕ್ಷ ಲಕ್ಷ ರೂ. ಮೌಲ್ಯದ ಮಾಲು ಜಪ್ತಿ!

ವಿಜಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 1.17 ಕೋಟಿ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಂಡಿದ್ದಾರೆ. ಒಟ್ಟು 48 ಪ್ರಕರಣದ 14 ಆರೋಪಿಗಳು ಬಂಧಿಸಲಾಗಿದೆ. ಅಲ್ಲದೆ, 14 ಅಂತರ್ ರಾಜ್ಯ, ಅಂತರ್ ಜಿಲ್ಲಾ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 65 ಲಕ್ಷ ರೂ. ಮೌಲ್ಯದ 426.2 ಗ್ರಾಂ ಚಿನ್ನ, 20 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ 2 ಕಾರು, 39 ಬೈಕ್ ವಶಕ್ಕೆ ಪಡೆದು, …

Read More »

60ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ! ಅಬ್ಬಾ..ಈ ಘಟನೆ ಹೇಗೆ ನಡೆಯಿತು?

ಹುಬ್ಬಳ್ಳಿ: ನಗರದ ಮರಾಠಗಲ್ಲಿಯಲ್ಲಿರುವ ಮೆಟ್ರೋ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 60ಕ್ಕೂ ಅಧಿಕ ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಗುರುವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಕೆಲಸ ಮುಗಿಸಿ, ಮಾಲ್‌ಗೆ ಬೀಗ ಹಾಕಿ ಹೋಗಿದ್ದ ಸಂದರ್ಭದಲ್ಲಿ ನಾಲ್ಕನೇ ಫ್ಲೋರ್‌ನಲ್ಲಿರುವ ಲೈಫ್ ಸ್ಟೈಲ್ ಶಾಪ್‌ನಲ್ಲಿ ಮೊದಲಿಗೆ ಸಣ್ಣದಾಗಿ ಬೆಂಕಿ ಕಿಡಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಇಡೀ ಮಾಲ್‌ಗೆ ಬೆಂಕಿ ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ …

Read More »

ರೆಡ್ಡಿ, ಶ್ರೀರಾಮುಲು ಒಡೆತನದ ಮನೆಗೆ ಬೆಂಕಿ ಪ್ರಕರಣ: 8 ಮಂದಿ ವಶಕ್ಕೆ

ಬಳ್ಳಾರಿ: ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಒಡೆತನದ ‘ಜಿ ಸ್ಕ್ವೇರ್‌’ ಬಡಾವಣೆಯ ಮಾಡೆಲ್‌ ಹೌಸ್‌ (ಮಾದರಿ ಮನೆ)ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರೂ ಸೇರಿದಂತೆ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್‌ ಹರ್ಷ ‘ಅಗ್ನಿ ಅವಘಡದ ಪ್ರಕರಣವನ್ನು ನಾವು ಬೇಧಿಸಿದ್ದೇವೆ. ಒಟ್ಟು 8 ಮಂದಿಯನ್ನು ವಶಕ್ಕೆ …

Read More »

ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಜೈಶ್ ಭಯೋತ್ಪಾದಕನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಲ್ಲಾವರ್‌ನ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಜಮ್ಮು ಶ್ರೇಣಿಯ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಟುಟಿ ಹೇಳಿದ್ದಾರೆ. “ಬಿಲ್ಲಾವರ್‌ನ ಸಾಮಾನ್ಯ ಪ್ರದೇಶದಲ್ಲಿ ಸೇನೆ ಮತ್ತು ಸಿಆರ್‌ಪಿಎಫ್‌ ನಡೆಸಿದ ಜಂಟಿ …

Read More »

ʼಫೋನ್ ಪೇʼ ಮೂಲಕ ಲಂಚ ಸ್ವೀಕಾರ : ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್‌ ಕಚೇರಿಯ FDA.!

ಕಲಬುರಗಿ : ತಹಶೀಲ್ದಾರ್‌ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (FDA) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ.ಜೇವರ್ಗಿ ತಹಶೀಲ್ದಾರ್‌ ಕಚೇರಿಯಲ್ಲಿ ಈ ದಾಳಿ ನಡೆದಿದೆ. ಪ್ರಥಮ ದರ್ಜೆ ಸಹಾಯಕ ಸತೀಶ್‌ ರಾಠೋಡ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜೇವರ್ಗಿಯ ಶಿವಕುಮಾರ್‌ ಹೆಗಡೆ ಎಂಬುವವರ ಬಳಿ ಲಂಚ ಸ್ವೀಕಾರ ಮಾಡುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಫೋನ್‌ ಪೇ ಮೂಲಕ 10 ಸಾವಿರ ಲಂಚ ಸ್ವೀಕಾರ …

Read More »

ನಲ್ಲೂರು | ಅಡಿಕೆ ತೋಟದ ಮಧ್ಯೆ ಕೋಳಿ ಅಂಕ: ಪೊಲೀಸರ ದಾಳಿ

ಕಾರ್ಕಳ: ಮನೆಯ ಸಮೀಪದ ಅಡಿಕೆ ತೋಟದ ಮಧ್ಯೆ ಶಾಮಿಯಾನ ಹಾಕಿ ಕುರ್ಚಿ, ಟೇಬಲ್‌ ಇರಿಸಿ ಸಾರ್ವಜನಿಕರನ್ನೂ ಸೇರಿಸಿ ಕೋಳಿಗಳ ಕಾಲುಗಳಿಗೆ ಬಾಳುಕತ್ತಿ ಕಟ್ಟಿ, ಹಣ ಪಣವಾಗಿ ಇಟ್ಟು ನಲ್ಲೂರು ಗ್ರಾಮದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ.ಗ್ರಾಮದ ಬಂಗರೋಡಿ ಎಂಬಲ್ಲಿ ಉದಯ ಶೆಟ್ಟಿ ಕೋಳಿ ಅಂಕ ನಡೆಸುತ್ತಿದ್ದರು. ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್‌ಐ ಸುಂದರ, ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಶಿರ್ವದ ರವಿ, ಸತೀಶ್, …

Read More »

ಅಕ್ರಮ ಮರಳು ಸಾಗಣೆ ಪ್ರಶ್ನಿಸಿದ ರೈತರ ಮೇಲೆ ಹಲ್ಲೆ

ಶಿರಹಟ್ಟಿ: ತಮ್ಮ ಜಮೀನಿಗೆ ಹೊಂದಿಕೊಂಡಿರುವ ಹಳ್ಳದಲ್ಲಿ ಅಕ್ರಮವಾಗಿ ಮರಳು ಸಾಗಿಸುವುದನ್ನು ವಿರೋಧಿಸಿದ ಇಬ್ಬರು ರೈತರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕನಕವಾಡ ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ: ಕನಕವಾಡ ಗ್ರಾಮದ ನಿವಾಸಿಗಳಾದ ನಾಗರಾಜ ವಾಲಿ ಹಾಗೂ ಮಹೇಶ ವಾಲಿ ಅವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವಾಗ ಹಲ್ಲೆ ನಡೆಸಲಾಗಿದೆ. ಆರೋಪಿಗಳಾದ ಮಹಮ್ಮದಲಿ ಲಂಗೋಟಿ, ಸಮೀರ್ ಲಂಗೋಟಿ, ಶಾಹೀರ್ ಲಂಗೋಟಿ ಹಾಗೂ ಇತರರು ಸೇರಿ ಜಮೀನಿನ ಪಕ್ಕದ ಹಳ್ಳದಿಂದ …

Read More »

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಮೃತ್ಯು

ಹನೂರು: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಗ್ಗೆರೆ ನಿವಾಸಿ ಗಣೇಶ್ ಮೃತ ದುರ್ದೈವಿ. ಮೃತ ಗಣೇಶ್ ಹಾಗೂ ಸ್ನೇಹಿತ ನಾಗರಾಜು ಶುಕ್ರವಾರ ಮುಂಜಾನೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹನೂರಿನಿಂದ ಕೊಳ್ಳೇಗಾಲಕ್ಕೆ ಹೋಗುತ್ತಿದ್ದ ಅಪರಿಚಿತ ವಾಹನವೊಂದು ಪಟ್ಟಣದ ಹೊರ …

Read More »

ಗೋವಾ ನೈಟ್‌ ಕ್ಲಬ್ ಅಗ್ನಿ ದುರಂತ: ಲೂಥ್ರಾ ಸಹೋದರರ ಕಚೇರಿ, ನಿವಾಸದ ಮೇಲೆ ED ದಾಳಿ

ಪಣಜಿ/ನವದೆಹಲಿ: ಕಳೆದ ತಿಂಗಳು ಅಗ್ನಿ ದುರಂತ ಸಂಭವಿಸಿದ ‘ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್’ನ ಮಾಲೀಕರಾದ ಲೂಥ್ರಾ ಸಹೋದರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯವು (ಇ.ಡಿ), ಇಂದು ಅವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನೈಟ್‌ ಕ್ಲಬ್‌ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂಥ್ರಾ ಹಾಗೂ ಸಹ-ಮಾಲೀಕ ಅಜಯ್ ಗುಪ್ತಾ ಅವರ ಕಚೇರಿಗಳು …

Read More »