ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದೆ. ಟ್ರಕ್ ಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಕ್ಲೀನರ್ ಸೇರಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿತ್ತು. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಗಮ ಸಂಸ್ಥೆಯ ಬಸ್ ಇದಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದ …
Read More »ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.73 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಜಪ್ತಿ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.73 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಮಲೇಷ್ಯಾದ ಕೌಲಲಾಂಪುರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 1.73 ಕೋಟಿ ರೂ. ಮೌಲ್ಯದ 4.96 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಂದಿಳಿದ ಆತ ವಿಮಾನ ನಿಲ್ದಾಣದಿಂದ ಹೊರ ಹೋಗುವಾಗ ಅನುಮಾನದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ತಡೆದು ಬ್ಯಾಗ್ ಪರಿಶೀಲಿಸಿದ್ದಾರೆ. …
Read More »ರಸ್ತೆ ಬದಿ ಕುಳಿತು ಊಟ ಮಾಡುತ್ತಿದ್ದವರ ಮೇಲೆ ಹರಿದ ಕಾರು: 2 ಬಲಿ
ಇಂದೋರ್: ರಸ್ತೆ ಬದಿಯಲ್ಲಿ ಊಟ ಮಾಡುತ್ತಿದ್ದ ಕಾರ್ಮಿಕರ ಗುಂಪಿನ ಮೇಲೆ ಕಾರು ಹರಿದ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಸಿಗ್ಮಾ ಕಾಲೋನಿ ಎಂಬಲ್ಲಿ ರಸ್ತೆ ವಿಭಜಕದ ರೇಲಿಂಗ್ಗಳನ್ನು ಅಳವಡಿಸುವ ಕೆಲಸದಲ್ಲಿ 13 ಮಂದಿ ಕಾರ್ಮಿಕರು ತೊಡಗಿದ್ದರು.ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಕಾರ್ಮಿಕರ ಮೇಲೆ ಹರಿದಿದೆ. ತಲೆಮರೆಸಿಕೊಂಡಿರುವ ಕಾರು ಚಾಲಕನನ್ನು ಬಂಧಿಸಲು ಪ್ರಯತ್ನಗಳು …
Read More »ಆನ್ಲೈನ್ ಬೆಟ್ಟಿಂಗ್ಗೆ ಯುವಕನೊಬ್ಬ ಆತ್ಮಹತ್ಯೆಗೆ ಶರಣು.!
ಬಾಗಲಕೋಟೆ :ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಘಟನೆ ಸಂಭವಿಸಿದೆ.ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ. ಈ ಹಿಂದೆ ರಮೇಶ್ …
Read More »ಮಹಡಿಯಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಶಿಕ್ಷಕ ಸಾವು
ಮನೆ ಮಹಡಿ ಮೇಲೆ ನಿಂತು ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ತಲೆಗೆ ತೀವ್ರ ಪಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಶಿಕ್ಷಕ ಮೃತಪಟ್ಟ ಘಟನೆ ತಾಲೂಕಿನ ಹೊಸದೂಪದಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ತಾಲೂಕಿನ ನಂದಿಹಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಯಶೋಧರ (54) ಮೃತಪಟ್ಟವರು.ಅವರು ಮೂಲತಃ ಹೊನ್ನಾಳಿ ತಾಲೂಕಿನ ಜೀನಳ್ಳಿ ಗ್ರಾಮದ ನಿವಾಸಿಯಾಗಿದ್ದು, ಶಿಕಾರಿಪುರ ಪಟ್ಟಣ ಸಮೀಪವಿರುವ ಹೊಸದೂಪದಹಳ್ಳಿ ಗ್ರಾಮದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದರು. ಮೃತರಿಗೆ ಪತ್ನಿ, …
Read More »ಜಮ್ಮು-ಕಾಶ್ಮೀರಾದಲ್ಲಿ ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಪ್ರದೇಶದ ಬಳಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ಸಿಕ್ಕಿತ್ತು.ಭಾರತೀಯ ಸೇನೆಯ 16 ಕಾರ್ಪ್ಸ್ ಪ್ರಕಾರ, ಈ ಪ್ರದೇಶದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲು ಪಡೆಗಳು ‘ಆಪರೇಷನ್ ಟ್ರಾಶಿ-I’ ಎಂಬ ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. “ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ನಡೆಯುತ್ತಿರುವ ಜಂಟಿ …
Read More »ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ಸಾವು
ದಕ್ಷಿಣ ಕನ್ನಡ ಜಿಲ್ಲೆ ಕುಕ್ಕೆ ಸುಬ್ರಹ್ಮಣ್ಯ ಸಮೀಪ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಹರಿಪ್ರಸಾದ್(37), ಸುಜಿತ್(26) ಮೃತಪಟ್ಟ ಯುವಕರು ಎಂದು ಹೇಳಲಾಗಿದೆ. ಇಬ್ಬರು ಅವಿವಾಹಿತರಾಗಿದ್ದು, ಭಾನುವಾರ ಸ್ನಾನಕ್ಕೆ ಕುಮಾರಧಾರಾ ನದಿಯ ಬಳಿ ಬಂದಿದ್ದಾರೆ.ಕುಲ್ಕುಂದ ಸಮೀಪ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ನೆರವಿನಿಂದ ಇಬ್ಬರ …
Read More »ಹಾಸ್ಟೆಲ್ ವಾರ್ಡನ್ ನಾಪತ್ತೆ
ಉಡುಪಿ: ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ। ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಅನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ 1ನೇ ಮಹಡಿಯಲ್ಲಿ ವಾಸವಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ಎಂಬ ವ್ಯಕ್ತಿ ಜ.12 ರಂದು ರಾತ್ರಿ 8 ಬಳಿಕ ನಾಪತ್ತೆಯಾಗಿದ್ದಾರೆ.ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯ ದೂ: 0820-2520444, …
Read More »ಸಾವಿನ ಮನೆಯಲ್ಲೂ ಲಕ್ಷಾಂತರ ದೋಚಿದ ಕಳ್ಳರು!
ಮನೆ ಕುಸಿದು ಮೃತಪಟ್ಟಿದ್ದ ಗೋಪಾಲ್ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಇವರ ಮನೆಯಲ್ಲಿಟ್ಟಿದ್ದ ನಗದು, 15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದೆ. ವಿಜಯಲಕ್ಷ್ಮಿ ಮತ್ತು ಗೋಪಾಲ್ ಎಂಬುವರು ಆರೋಗ್ಯ ಸಮಸ್ಯೆಯಿಂದ ಕಳೆದ ಎರಡು ತಿಂಗಳ ಹಿಂದೆ ಸಾವನಪ್ಪಿದ್ದರು ಗೋಪಾಲ್ ಮಗಳು ಬಾಂಬೆಗೆ ಹೋಗಿದ್ದ ವೇಳೆ ಕಳ್ಳರು ಕಳ್ಳತನ ಮಾಡಿದ್ದಾರೆ.ಮನೆಯ ಗೇಟ್ ಬೀಗ ಹಾಕಿದ್ದು ಕಾಂಪೌಂಡ್ ಹಾರಿ ಮನೆಯ ಬೀರುವಿನ …
Read More »ಗಾಳಿಪಟ ಹಾರಿಸುವಾಗ ದುರಂತ: ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವಕ ದುರ್ಮರಣ
ಬೀದರ್: ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ.ವಾಂಜರಿ ಬಡಾವಣೆಯಲ್ಲಿ ಈ ದುರಂತ ಸಂಭವಿಸಿದೆ. ಶಶಿಕುಮಾರ್ ಶಿವಾನಂದ್ (19) ಮೃತ ದುರ್ದೈವಿ. ಖಾಸಗಿ ಕಾಲೇಜಿನ ಕಟ್ಟಡದ ಮೇಲೆ ಗಾಳಿಪಟ ಹಾರಿಸಲು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.ಗಾಳಿಪಟ ಹಾರಿಸುತ್ತಿದ್ದಾಗ ಏಕಾಏಕಿ ದಾರ ತುಂಡಾಗಿದೆ. ಈ ವೇಳೆ ಹಾರಿ ಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ ಆಯತಪ್ಪಿ ಯುವಕ ಕಟ್ಟಡದಿಂದ ಕೆಳಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





