ದೇವಸ್ಥಾನದ ಹುಂಡಿ ಒಡೆದು ಲಕ್ಷಾಂತರ ಹಣ ದೋಚಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ತೊರವಳ್ಳಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಹಾಬಲೇಶ್ವರ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳತನ ಆಗಿದೆತಡರಾತ್ರಿ ದೇವಾಲಯದ ಆವರಣಕ್ಕೆ ಆಗಮಿಸಿದ ಖದೀಮರು, ದೇವಾಲಯದ ಹುಂಡಿ ಒಡೆದು ಸುಮಾರು. 50 ಸಾವಿರಕ್ಕೂ ಹೆಚ್ಚಿನ ಮೊತ್ತ ಹಣ ದೋಚಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಬೆಳ್ಳಿ ವಿಗ್ರಹಗಳು, ಕಂಚಿನ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.ಬೆಳಗ್ಗೆ ಪೂಜೆ ಮಾಡಲು ದೇವಸ್ಥಾನಕ್ಕೆ ಬಂದಾಗ ಕಳ್ಳತನ ಆಗಿರುವುದು ಬೆಳಕಿಗೆ …
Read More »ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಈ ದುರಂತ ಸಂಭವಿಸ್ದೆ. ಬೈಕ್ ಸವಾರ ಫಾಸರ್ (75) ಮೃತ ದುರ್ದೈವಿ. ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಬಸ್ ನ ಚಕ್ರ ಹರಿದು ಹೋಗಿದೆಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳುರಿನಿಂದ ಕೃಷ್ಣಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿ ಈ …
Read More »ಕೋಲಾರದಲ್ಲಿ ಲವ್ ಕ್ರೈಂ: ಪ್ರೀತಿ ನಿರಾಕರಣೆ ಕಾರಣ ಚಾಕುವಿನಿಂದ ಇರಿದು ಮಹಿಳೆ ಹತ್ಯೆ
ಕೋಲಾರದಲ್ಲಿ ಪ್ರೀತಿ ನಿರಾಕರಣೆ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಭೀಕರ ಕೊಲೆ ನಡೆದಿದೆ. ಮೃತ ಮಹಿಳೆಯನ್ನು ಸುಜಾತ (27) ಎಂದು ಗುರುತಿಸಲಾಗಿದ್ದು, ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಸುಜಾತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ತೆರಳುತ್ತಿದ್ದಳು ಎಂದು ತಿಳಿದುಬಂದಿದೆ.ಆರೋಪಿ ಚಿರಂಜೀವಿ, ಹೊಸಪೇಟೆಯ ಇಂಡಸ್ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದನು. ಸಾಲ ವಸೂಲಿಗೆ ತೆರಳಿದ ವೇಳೆ …
Read More »ಬೆಳ್ತಂಗಡಿ : ಧನು ಪೂಜೆಗೆಂದು ಹೋದ ಬಾಲಕ ನಾಪತ್ತೆ
ಧನು ಪೂಜೆಗೆ ಹೋದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಜ.14ರಂದು ಬುಧವಾರ ಬೆಳಿಗ್ಗೆ ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಪ್ರದೇಶದಲ್ಲಿ ನಡೆದಿದೆ.ನಾಪತ್ತೆಯಾದ ಬಾಲಕನು ಕುವೆಟ್ಟು ಗ್ರಾಮದ ಬರಮೇಲು ನಿವಾಸಿ ಸುಮಂತ್ (16) ಎಂದು ಗುರುತಿಸಲಾಗಿದೆ.ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿರುವ ಸುಮಂತ್, ಇಂದು ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಸಮೀಪದ ಕಳಿಯ ಗ್ರಾಮದ ನಾಳದ ದೇವಸ್ಥಾನಕ್ಕೆ ಧನು ಪೂಜೆಗೆ ತೆರಳಿದ್ದ. ಈ …
Read More »ಶಿರಾ: ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಕೊಲೆ
ಶಿರಾ ತಾಲ್ಲೂಕಿನ ಮಾರನಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿತಿನ್ ತುಳಸಿರಾಮ್ (40) ಎಂಬುವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ನಿತಿನ್ ತುಳಸಿರಾಮ್ ಪತ್ನಿ ಯಶೋದ ಅವರ ಮೊದಲ ಗಂಡನ ಮಗ ಹರೀಶ್ ಕೊಲೆ ಮಾಡಿದ ಆರೋಪಿ. ಮಹಾರಾಷ್ಟ್ರದಿಂದ ಬಂದು ಶಿರಾ ತಾಲ್ಲೂಕಿನ ಮಾರನಗೆರೆ ಗ್ರಾಮದಲ್ಲಿ 3 ವರ್ಷದಿಂದ ಇದ್ದಿಲು ಸುಡುವ ಕೆಲಸ ಮಾಡಿಕೊಂಡಿದ್ದರು.ನಿತಿನ್ ತುಳಸಿರಾಮ್ ಅವರು ಯಶೋದ ಅವರನ್ನು ಎರಡನೇ ಮದುವೆ ಮಾಡಕೊಂಡಿದ್ದರು. ಯಶೋದಗೆ ಸಹ ಇದು ಎರಡನೇ ಮದುವೆಯಾಗಿದ್ದು, ಮೊದಲ …
Read More »ಬಿಸ್ಕೆಟ್ ಬಾಕ್ಸ್ ಕದ್ದವರ ಬಂಧನ
ಬಿಡದಿ:ಕಂಪನಿಯೊಂದರ ಬಿಸ್ಕೆಟ್ ಬಾಕ್ಸ್ಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳ ಪೈಕಿ ಒಬ್ಬನನ್ನು ಬಿಡದಿ ಪೊಲೀಸರು ಬಂಧಿಸಿದ್ದು, ಒಂದು ಲಕ್ಷ ರೂ. ಮೌಲ್ಯದ ಮಾಲನ್ನು ವಶಕ್ಕೆ ಪಡೆದಿದ್ದಾರೆ.ಚಾಲಕ ದೇವರಾಜ್ ಎಂಬಾತನನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಶಶಿಕುಮಾರ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಅಬ್ಬನಕುಪ್ಪೆ ಗ್ರಾಮದ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯ ವೇರ್ಹೌಸ್ನಿಂದ ಎರಡು ವಾಹನಗಳಲ್ಲಿ 7 ಲಕ್ಷ ರೂ. ಮೌಲ್ಯದ ಬಿಸ್ಕೆಟ್ ಬಾಕ್ಸ್ಗಳನ್ನು ಲೋಡ್ ಮಾಡಿಕೊಂಡು ಹೊಸಕೋಟೆಗೆ ಹೋಗಿದ್ದರು. ಆದರೆ, ನಿಗದಿತ ಸ್ಥಳದಲ್ಲಿ …
Read More »ಮಕರ ಸಂಕ್ರಾಂತಿ ಗಾಳಿ ಪಟದ ಮಾಂಜಾಗೆ ಬೈಕ್ ಸವಾರ ಬಲಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ
ಮಕರ ಸಂಕ್ರಾಂತಿ ನಿಮಿತ್ತ ಗಾಳಿ ಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೊಗುತ್ತಿದ್ದ ಯುವಕ ಗಾಳಿ ಪಟದ ಮಾಂಜಾ (ಚೀನಿ ಮಾಂಜಾ)ಕ್ಕೆ ಸಿಲುಕಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ಈ ಮೃತ ದುರ್ದೈವಿಯನ್ನು ಸಂಜಿಕುಮಾರ್ ಎಂದು ಗುರುತಿಸಲಾಗಿದೆ.ಬೀದರ್ ತಾಲ್ಲೂಕಿನ ಬೊಂಬಳಗಿ ಗ್ರಾಮದ ಯುವಕ ಸಂಜಿವಕುಮಾರ್ ಬೈಕ್ ಮೇಲೆ ಹೋಗುವಾಗ ಗಾಳಿ ಪಟದ ಮಾಂಜಾ ದಾರ ಕಾಣಿಸದೆ ನೇರವಾಗಿ ಅವರ ಕುತ್ತಿಗೆ ಸಿಲುಕಿದೆ. ಮಾಂಜಾ ಸಿಲುಕಿದ ರಭಸಕ್ಕೆ ಬೈಕ್ ಮೇಲಿಂದ …
Read More »ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಆತ್ಮಹತ್ಯೆ
ಧಾರವಾಡ: ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕೇಂದ್ರ ಕಾರಾಗೃಹದಲ್ಲಿದ್ದ ಈಶ್ವರಪ್ಪ ಪೂಜಾರ (46) ಮಂಗಳವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೈದಿ ಈಶ್ವರಪ್ಪ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪೂರ ಗ್ರಾಮದವರು.2024 ಜೂನ್ 19ರಿಂದ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜೈಲಿನ ಕೈಮಗ್ಗ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಕೆಲದಿನಗಳಿಂದ ಆತ ಹತಾಶನಾಗಿದ್ದ ಎಂದು ಸಹಕೈದಿಗಳು ತಿಳಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬಾಂಗ್ಲಾದೇಶಿ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಮೂವರ ಬಂಧನ
ಮಂಗಳೂರು: ಕೂಲಿ ಕೆಲಸಕ್ಕಾಗಿ ಜಾರ್ಖಂಡ್ದಿಂದ ಮಂಗಳೂರಿಗೆ ಬಂದಿದ್ದ ಕಾರ್ಮಿಕ ದಿಲ್ಜಾನ್ ಅನ್ಸಾರಿ ಎಂಬುವವರ ಮೇಲೆ ಹಲ್ಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಕೂಳೂರು ನಾರಾಯಣ ಗುರು ಭಜನಾ ಮಂದಿರ ಸಮೀಪದ ನಿವಾಸಿಗಳಾದ ರತೀಶ್ ದಾಸ್ ಅಲಿಯಾಸ್ ಲಾಲು (32), ಧನುಷ್ (24) ಹಾಗೂ ಕೂಳೂರು ರಾಯಕಟ್ಟೆಯ ಸಾಗರ್ (24) ಬಂಧಿತರು.ಮೋಹನ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ‘ಕಾರ್ಮಿಕ ದಿಲ್ಜಾನ್ …
Read More »ಜ್ಯೂಸ್ನಲ್ಲಿ ಮತ್ತಿನ ಔಷಧ ಬೆರೆಸಿ ನೀಡಿ ಪ್ರಜ್ಞೆ ತಪ್ಪಿಸಿ ಕಳ್ಳತನ: ಇಬ್ಬರ ಬಂಧನ
ರೈಲು ಪ್ರಯಾಣಿಕರನ್ನು ಪರಿಚಯಿಸಿಕೊಂಡು ಟೀ ಹಾಗೂ ಜ್ಯೂಸ್ನಲ್ಲಿ ಮತ್ತುಬರುವ ಔಷಧ ಬೆರೆಸಿ ಕೊಟ್ಟು ಪ್ರಜ್ಞೆ ತಪ್ಪಿದ ಬಳಿಕ ಕಳ್ಳತನ ಮಾಡುತ್ತಿದ್ದ ಬಿಹಾರದ ಇಬ್ಬರನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ಸಫಾರ್ ಹಾಗೂ ಸತರ್ಮ್ ಬಂಧಿತರು.ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಿಹಾರದ ಕೃಷ್ಣಕುಮಾರ್ ಅವರಿಗೆ ಮತ್ತುಬರುವ ಔಷಧ ನೀಡಿ ಅವರ ಬ್ಯಾಗ್, ಮೊಬೈಲ್ ಹಾಗೂ ನಗದು ಕಳ್ಳತನ ಮಾಡಿಕೊಂಡು ಆರೋಪಿಗಳು ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು. ಕುಮಾರ್ ಅವರು ನಗರದಿಂದ ಪಟ್ನಾದ ದಾನಾಪುರಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





