ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅನುಮತಿ ಪಡೆದ ನಂತರ ಸಿಐಡಿಗೆ ತನಿಖೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಗಳನ್ನು ಸಿಐಡಿ ಸಂಪೂರ್ಣವಾಗಿ ತನಿಖೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆ ವರದಿ ಆಧರಿಸಿ ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂಬುದನ್ನು …
Read More »ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಮತ್ತೊಂದು ಕರಾಳ ಮುಖ ಬಯಲು: ಹನಿಟ್ರ್ಯಾಪ್ ಮಾಡಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ
ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಪ್ರಕರಣವೊಂದರಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನು ಪೊಲೀಸರು ಬಂಧಿಸಿದ್ದ ವೇಳೆ ತಾನೇ ವಿವಸ್ತ್ರವಾಗಿ ಹೈಡ್ರಾಮಾ ಮಾಡಿ ಪೊಲೀಸರ ವಿರುದ್ಧ ಆರೋಪ ಮಾಡಿದ್ದ ಸುಜಾತಾ ಹಂಡಿಯ ಮತ್ತೊಂದು ಕರಾಳ ಮುಖ ಬಹಿರಂಗವಾಗಿದೆ.ಸುಜಾತಾ ಹಂಡಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಹನಿಟ್ರ್ಯಾಪ್ ಕೇಸ್ ಕೂಡ ಇದೆ. ಅಷ್ಟೇ ಅಲ್ಲ ಹಣಕ್ಕಾಗಿ ವ್ಯಕ್ತಿಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಆತನನ್ನು ಹಿಗ್ಗಾ ಮುಗ್ಗಾ ಥಳಿಸಿರುವ ಹಾಗೂ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಸುಜಾತಾ …
Read More »ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ.!
ತುಮಕೂರು : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾದ ಘಟನೆ ತುಮಕೂರು ಬಳಿ ನಡೆದಿದೆ. ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ …
Read More »ಬಿಜೆಪಿ ಕಾರ್ಯಕರ್ತೆಯ ಮೇಲಿನ ದೌರ್ಜನ್ಯ ಪ್ರಕರಣದ ನಡುವೆಯೇ ಶಾಸಕಿ ಭಾಗೀರಥಿ ಮುರುಳ್ಯರ ನಕಲಿ ಶ್ರದ್ಧಾಂಜಲಿ ಪೋಸ್ಟ್ ವೈರಲ್ – ಆರೋಪಿ ವಿರುದ್ಧ ಪ್ರಕರಣ ದಾಖಲು
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರ ನಕಲಿ ಶ್ರದ್ಧಾಂಜಲಿ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಬಿಲ್ಲವ ಸಂದೇಶ್’ ಎಂಬ ಫೇಸ್ಬುಕ್ ಖಾತೆಯಿಂದ ಈ ಅವಹೇಳನಕಾರಿ ಶ್ರದ್ಧಾಂಜಲಿ ಪೋಸ್ಟ್ ಹಾಕಲಾಗಿದ್ದು, ಅದರಲ್ಲಿ ದಲಿತ ಸಮುದಾಯ ಮತ್ತು ಶಾಸಕಿ ಭಾಗೀರಥಿ ಮುರುಳ್ಯರ ಬಗ್ಗೆ ತಪ್ಪು ಹಾಗೂ …
Read More »ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಪೊಲೀಸ್ ಇಲಾಖೆ ಸಂಕಟದಲ್ಲಿ – ನಾಳೆ ಬಿಜೆಪಿ ಹತ್ತು ಗಂಟೆ ಗಡುವು, ಸಸ್ಪೆಂಡ್ ಆಗ್ತಾರಾ ಪೊಲೀಸರು?
ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ವಿವಸ್ತ್ರ ಪ್ರಕರಣ ದಿನೇದಿನೇ ತಾರಕಕ್ಕೇರಿದ್ದು, ಇದೀಗ ಪೊಲೀಸ್ ಇಲಾಖೆ ತೀವ್ರ ಸಂಕಟದ ಪರಿಸ್ಥಿತಿಗೆ ಸಿಲುಕಿದಂತಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ, ನಾಳೆ ರಾಜ್ಯಾದ್ಯಂತ ಮಹಿಳೆಯರ ಪರವಾಗಿ ಹೋರಾಟಕ್ಕೆ ಇಳಿಯಲು ನಿರ್ಧರಿಸಿದೆ. ಇದರ ಜೊತೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ನಾಳೆ ಹತ್ತು ಗಂಟೆಗಳೊಳಗೆ ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು ಎಂದು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಗಡುವು ನೀಡಿದ್ದಾರೆ. …
Read More »ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ
ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ.ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ. …
Read More »ಮಾರಕಾಸ್ತ್ರ ಹಿಡಿದು ತಿರುಗುತ್ತಿದ್ದ ಐವರ ಬಂಧನ
ಮೈಸೂರು: ನಗರದ ಜಯಲಕ್ಷ್ಮೀಪುರಂನಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಐವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ವಿನಾಯಕನಗರ ನಿವಾಸಿಗಳಾದ ಪಿ.ಎಸ್.ಕೃಷ್ಣ, ಅಮರ್ನಾಥ್, ಎಸ್.ಹರೀಶ್, ಸಚಿನ್, ಮದನ್ ಬಂಧಿತ ಆರೋಪಿಗಳು. ನರಸಿಂಹರಾಜ ಉಪವಿಭಾಗದ ಎಸಿಪಿ ಮಾಥ್ಯೂ ಥಾಮಸ್ ಅವರು ಭಾನುವಾರ ರಾತ್ರಿ ತಮ್ಮ ತಂಡದೊಂದಿಗೆ ಗಸ್ತಿಗೆ ತೆರಳಿದ್ದು, ಮುಂಜಾನೆ 3.30ಕ್ಕೆ ಮೆಟ್ರೊ ಪೊಲೀಸ್ ಅಪಾರ್ಟ್ಮೆಂಟ್ ಬಳಿ ಐವರು ಓಡಾಡುತ್ತಿರುವುದು ಕಂಡುಬಂದಿತ್ತು.ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ದರೋಡೆ ಮಾಡುವ ಉದ್ದೇಶದಿಂದ ಮಾರಕಾಸ್ತ್ರ ಹಿಡಿದು ಓಡಾಡುತ್ತಿರುವುದಾಗಿ ತಿಳಿಸಿದ್ದರು ಎಂದು …
Read More »ಶಿವಮೊಗ್ಗ: ಠಾಣೆಯಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೆಬಲ್ ಆತ್ಮಹತ್ಯೆ
ಇಲ್ಲಿನ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬುಧವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ |ಕೈಗಾರಿಕಾ ವಸಾಹತು, ಮೂಲ ಸೌಕರ್ಯಕ್ಕೆ ಕ್ರಮ: ಜಿಲ್ಲಾಧಿಕಾರಿ ಪ್ರಭುಲಿಂಗ ಹೆಡ್ ಕಾನ್ಸ್ಟೇಬಲ್ ಮೊಹಮದ್ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ.ಕಳೆದ ಕೆಲವು ದಿನದಿಂದ ಮೊಹಮದ್ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಕರ್ತವ್ಯಕ್ಕೆ ಮರಳಿದ್ದರು. ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು. …
Read More »ಬೆಂಗಳೂರಲ್ಲಿ ರೌಡಿಯಿಂದ ಮತ್ತೋರ್ವ ರೌಡಿಯ ಕಿಡ್ನ್ಯಾಪ್ : ಬೆರಳು ಕತ್ತರಿಸಿ ರಾತ್ರಿಯಿಡೀ ಚಿತ್ರಹಿಂಸೆ.!
ಬೆಂಗಳೂರಲ್ಲಿ ರೌಡಿಯೋರ್ವ ಮತ್ತೋರ್ವ ರೌಡಿಯ ಕಿಡ್ನ್ಯಾಪ್ ಮಾಡಿ ಬೆರಳು ಕತ್ತರಿಸಿ ರಾತ್ರಿಯಿಡೀ ಚಿತ್ರಹಿಂಸೆ ನೀಡಿದ ಘಟನೆ ಎಲ್ಲರನ್ನ ಬೆಚ್ಚಿ ಬೀಳಿಸಿದೆ. ಹಳೇ ವೈಷಮ್ಯಕ್ಕೆ ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಹೌದು. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಹುಸ್ಕೂರು ಬಳಿ ಈ ಘಟನೆ ನಡೆದಿದೆ.ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಸಲಗನನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಲಾಗಿದೆ. ರೌಡಿಶೀಟರ್ ಗಂಗಾ ಮತ್ತು ಆತನ ಸಹಚರರು ಸಲಗನನ್ನು ಕಿಡ್ನ್ಯಾಪ್ ಮಾಡಿದ್ದಾರೆ . ಕಾರ್ತಿಕ್ ನನ್ನು …
Read More »ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು!
ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಭಾರೀ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.ಬಾಯ್ಲರ್ ಸ್ಫೋಟದ ಪರಿಣಾಮವಾಗಿ ಇನ್ನೂ ಆರು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅವರಲ್ಲಿ ಕೆಲವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





