Breaking News

BigTv News

ಬೆಂಗಳೂರಿನಲ್ಲಿ ಲವ್ ವಿಚಾರಕ್ಕೆ ಮನನೊಂದ ಅಪ್ರಾಪ್ತ ಬಾಲಕಿ : ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರಲ್ಲಿ ಪ್ರೀತಿಯ ವಿಚಾರಕ್ಕೆ ಮನನೊಂದು ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ತೇಜಸ್ವಿನಿ (17) ಎನ್ನುವ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ಮೃತದೇಹವನ್ನು ನೆಲಮಂಗಲದ ಆಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತ ಬಾಲಕಿ ಪೋಷಕರು ಮಾದನಾಯಕನಹಳ್ಳಿ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. …

Read More »

ಇಂತಹ ಶಿಕ್ಷಕಿಯರು ಇದ್ರೆ ವಿದ್ಯಾರ್ಥಿಗಳ ಪಾಡೇನು.!

ವಿದ್ಯಾರ್ಥಿ ಓದಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಹೊಡೆದಿದ್ದು, ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ.!ಗಲಗ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿ ಹರ್ಷಿಯಾ ತಸ್ಕಿನ್ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ್ದಾಳೆ.ಓದಿಲ್ಲ ಎಂಬ ಕಾರಣ ನೀಡಿ ೩ನೇ ತರಗತಿಯ ವಿದ್ಯಾರ್ಥಿಯನ್ನು ಮನಸೋ ಇಚ್ಛೇ ಹೊಡೆದಿದ್ದು, ಗಂಭೀವಾಗಿ ಹಲ್ಲೆಗೊಳಗಾದ ಬಾಲಕನ ಸ್ಥಿತಿ ಗಂಭೀರವಾಗಿದೆ. ಬಾಲಕನ ಮೈತುಂಬಾ ಬಾಸುಂಡೆ ಬಂದಿದೆ. ಗಾಯಾಳು ಬಾಲಕನನ್ನು …

Read More »

ಬೆಂಗಳೂರಲ್ಲಿ 3.16 ಕೋಟಿ ರೂ. ಮೌಲ್ಯದ ‘ಡ್ರಗ್ಸ್’ ಜಪ್ತಿ : ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 3.16 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.ಮಾಲು ಸಮೇತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.ಬಂಧಿತ ಆರೋಪಿಗಳನ್ನು ಸೈಯದ್ ತಾರಿಕ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂದು ಗುರುತಿಸಲಾಗಿದೆ.ಅಶೋಕ್ ನಗರ ಪೊಲೀಸ್ ಠಾಣೆ ಆರೋಪಿಗಳನ್ನುಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಮೂರು ಕೆಜಿ 169 ಗ್ರಾಂ ಎಂಡಿಎಂಎ ಸೀಜ್ ಮಾಡಿಕೊಂಡಿದ್ದಾರೆ. ಹೊಸ ವರ್ಷಾಚರಣೆಗೆ ಡ್ರಗ್ಸ್ ಸರಬರಾಜು ಮಾಡಲಾಗಿತ್ತು ಎಂದು ತಿಳಿದು …

Read More »

ಕಲಬುರಗಿಯಲ್ಲಿ ಕಾಲೇಜು ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಉಪನ್ಯಾಸಕ ಅರೆಸ್ಟ್.!

ವಿದ್ಯಾರ್ಥಿಗಳನ್ನು ತಿದ್ದಿ ಬುದ್ದಿ ಹೇಳಬೇಕಾದ ಶಿಕ್ಷಕರು ದಾರಿ ತಪ್ಪಿದರೆ ಹೇಗೆ..? ಹೌದು. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕ ಅಂದರ್ ಆದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ. ಸರ್ಕಾರಿ ಕಾಲೇಜಿನ ಉಪನ್ಯಾಸಕ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.ಹೊಸ ವರ್ಷಕ್ಕೆ ವಿದ್ಯಾರ್ಥಿನಿಗೆ ಗಿಫ್ಟ್ ಕೊಡುವ ನೆಪದಲ್ಲಿಕಾಲೇಜಿಗೆ ಬೇಗ ಬರುವಂತೆ ಹೇಳಿ ವಿದ್ಯಾರ್ಥಿನಿಯನ್ನು ಕರೆಸಿಕೊಂಡ ಉಪನ್ಯಾಸಕ ರಾಜ ಕುಮಾರ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿ …

Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕೆ ಕೃತ್ಯ : ಮಗಳ ಮೇಲೆ ತಂದೆಯಿಂದಲೇ ‘ಲೈಂಗಿಕ ದೌರ್ಜನ್ಯ’, ಪೋಕ್ಸೋ ಕೇಸ್ ದಾಖಲು!

ರಾಜ್ಯದಲ್ಲಿ ಮತ್ತೊಂದು ಪವಿಶಾಚಿಕ ಕೃತ್ಯ ನಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ, ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ 40 ವರ್ಷದ ತಂದೆಯ ವಿರುದ್ದ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ …

Read More »

ಅಕ್ರಮ ಜಾನುವಾರು ಸಾಗಾಟ,ಆರೋಪಿಗಳು ಪರಾರಿ

ಪುಂಜಾಲಕಟ್ಟೆ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಆರೋಪದಲ್ಲಿ ಇಬ್ಬರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿದ್ದಕಟ್ಟೆಯ ಕಿನ್ನಾಜೆ ನಿವಾಸಿಗಳಾದ ರಾಘವೇಂದ್ರ ನಾಯ್ಕ ಮತ್ತು ಯೋಗೀನಾಥ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.ಆರೋಪಿಗಳು ಪಿಕಪ್ ವಾಹನದಲ್ಲಿ3 ಗಂಡು ಕರು ಹಾಗೂ 1 ಹಸುವನ್ನು ಕರ್ಪೆದೋಟ – ನೆಕ್ಲಾಜೆ – ಕುಪ್ಪೆಪದವು ಮಾರ್ಗವಾಗಿ ಮಂಗಳೂರು ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಖಚಿತ ಮಾಹಿತಿಯನ್ವಯ ಬಂಟ್ವಾಳ ಗ್ರಾಮಾಂತರ …

Read More »

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ!

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ.ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ …

Read More »

ಅಮ್ಮ ಖರ್ಚಿಗೆ ಎರಡು ಲಕ್ಷ ಕೊಟ್ಟಿಲ್ಲ ಅಂತ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಮಗ

ಈ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ನನ್ನಿವಾಳ ರಸ್ತೆಯಲ್ಲಿ ನಡೆದಿದೆ. 34 ವರ್ಷದ ಮಹೇಶ್ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.ಚಳ್ಳಕೆರೆಯ ಮಹೇಶ್ ತಾಯಿ ಗಂಗಮ್ಮ ಜಮೀನು ಮಾರಾಟ ಮಾಡಿದ್ದರು. ಕಳೆದ ವಾರ ಕಾರು ಖರೀದಿ ಮಾಡಬೇಕು ಅಂತ ಮಹೇಶ್,​ ತಾಯಿ ಗಂಗಮ್ಮ ಬಳಿ 4 ಲಕ್ಷ ರೂಪಾಯಿ ಹಣ ಪಡೆದಿದ್ದ. ಮತ್ತೆ 2 ಲಕ್ಷ ಹಣಕ್ಕೆ ಡಿಮ್ಯಾಂಡ್​​ ಮಾಡಿದ್ದ. ಆದ್ರೆ ಹಣ …

Read More »

ರೈಲಿಗೆ ತಲೆಕೊಟ್ಟು ನಿವೃತ್ತ ಎಎಸ್‌ಐ ಆತ್ಮಹತ್ಯೆ

ಮೈಸೂರು: ನಗರದ ಕುಕ್ಕರಹಳ್ಳಿ ಬಳಿಯ ರೈಲ್ವೆ ಗೇಟ್ ಬಳಿ ರೈಲಿಗೆ ತಲೆಕೊಟ್ಟು ನಿವೃತ್ತ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೋಗಾದಿಯ ನಿವಾಸಿ, ನಿವೃತ್ತ ಎಎಸ್‌ಐ ಲವಕುಶ(60)ಮೃತರು. ನಗರದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಮೂರು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು.ಭಾನುವಾರ ಬೆಳಗ್ಗೆ ಮನೆಯಿಂದ ಹೊರ ಬಂದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನದಿಗೆ ಹಾರಿ ಯುವತಿ ಆತ್ಮಹತ್ಯೆ: ಪ್ರೇಮ ವಂಚನೆ ಕಾರಣ?

ಮಂಗಳೂರು : ಯುವತಿಯೊಬ್ಬಳು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜ5)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಎಂದು ತಿಳಿದುಬಂದಿದೆ.ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದು ಸೇತುವೆ ಬಳಿ ಬಂದು ಏಕಾಏಕಿ ನಿಲ್ಲಿಸಿ ನದಿಗೆ ಹಾರಿದ್ದಾಳೆ.ಸ್ನೇಹಿತೆ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಕೂಡಲೇ ಪೊಲೀಸರು , ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಬಜ್ಪೆ ಪೊಲೀಸ್ …

Read More »