ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿಯ ವಸತಿಗೃಹದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಯನ್ನು 10 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ವಯನಾಡು ಮೂಲದ ಬಿಜು ಸಿ.ಜೆ. ಅಲಿಯಾಸ್ ಆಂಟೋನಿ ಬಿಜು (44) ಬಂಧಿತ ಆರೋಪಿ. 2016ರಲ್ಲಿ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದ ಅವಧಿ ಮುಗಿದ ಬಳಿಕ ಬಿಡುಗಡೆಯಾಗಿದ್ದ ಆತ, ನಂತರ ನ್ಯಾಯಾಲಯಕ್ಕೆ ಹಾಜರಾಗದೆ …
Read More »ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಕಾರ್ಪಿಯೋ – ಅದೃಷ್ಟವಶಾತ್ ಪ್ರಯಾಣಿಕರು ಪಾರು
ಕೋಲಾರ: ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಏಕಾಏಕಿ ಹೊತ್ತಿ ಉರಿದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …
Read More »ಬೆಂಗಳೂರು | ₹10.96 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಆರು ಮಂದಿ ಸೆರೆ
ಬೆಂಗಳೂರು: ಗಿರಿನಗರ, ಹೆಬ್ಬಾಳ ಹಾಗೂ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ₹10.96 ಕೋಟಿ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವಿದ್ಯಾರಣ್ಯಪುರ ಠಾಣೆ ಪೊಲೀಸರು ಕೆ.ಆರ್.ಪುರದ ಜುನೈದ್ ಪಾಷಾ (30) ಹಾಗೂ ರಿಜ್ವಾನ್ ಬೇಗ್ (30) ಅವರನ್ನು ಬಂಧಿಸಿ, ₹21 ಲಕ್ಷ ಮೌಲ್ಯದ 105 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಹೆಬ್ಬಾಳ ಠಾಣೆ ಪೊಲೀಸರು ಒಡಿಶಾ …
Read More »ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ಆರೋಪ
ಬಾಗಲಕೋಟೆ: ಯುವತಿಯರನ್ನು ಚುಡಾಯಿಸುತ್ತಿದ್ದುದನ್ನು ಪ್ರಶ್ನಿಸಿದ ಕಾರಣಕ್ಕೆ ಯುವಕನೊಬ್ಬನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೆರೂರು ಪಟ್ಟಣದಲ್ಲಿ ಕೇಳಿಬಂದಿದೆ. ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಪಾಂಡು ಬಡಿಗೇರ ಅವರನ್ನು ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಾಂಡು ಅವರು ಯುವತಿಯರನ್ನು ಚುಡಾಯಿಸುತ್ತಿದ್ದ ವಿಚಾರವನ್ನು ಪ್ರಶ್ನಿಸಿದ್ದರಿಂದ ಕೆಲ ಯುವಕರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪಾಂಡು ಅವರ ಪಾಲಕರಾದ ಧರ್ಮಣ್ಣ …
Read More »ಸಕಲೇಶಪುರದಲ್ಲಿ ಸಿನಿಮೀಯ ಕಾರ್ಯಾಚರಣೆ: ಸರಗಳ್ಳತನ ಪ್ರಕರಣದ ಆರೋಪಿಗಳ ಬಂಧನ
ಸಕಲೇಶಪುರ: ಪಟ್ಟಣದಲ್ಲಿ ಮಹಿಳೆಯರ ಸರ ದೋಚಿ ಆತಂಕ ಸೃಷ್ಟಿಸಿದ್ದ ಇಬ್ಬರು ಸರಗಳ್ಳರನ್ನು ಸಕಲೇಶಪುರ ಪೊಲೀಸರು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಹೊಳೆ ಮಲ್ಲೇಶ್ವರ ದೇವಸ್ಥಾನದ ಬಳಿ ರಾಣಿಯಮ್ಮ ಎಂಬುವವರ 45 ಗ್ರಾಂ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದರು. ತಂತ್ರಜ್ಞಾನ ಹಾಗೂ ನೆಟ್ವರ್ಕ್ ನೆರವಿನಿಂದ ಆರೋಪಿಗಳ ಚಲನವಲನ ಪತ್ತೆಹಚ್ಚಿದ ಪೊಲೀಸರು, ಹೇಮಾವತಿ ಸೇತುವೆ ಬಳಿ ನಾಕಾಬಂದಿ ಹಾಕಿ ಅವರನ್ನು ಬೆನ್ನಟ್ಟಿದ್ದಾರೆ. ಹಳೆ ಬಸ್ ನಿಲ್ದಾಣದ …
Read More »ಬೆಂಗಳೂರು| 2 ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ರೌಡಿಶೀಟರ್ ಕೊಲೆ: ನಾಲ್ವರ ಬಂಧನ
ಬೆಂಗಳೂರು: ದಾಸರಹಳ್ಳಿ ಸಮೀಪದ ಚೊಕ್ಕಸಂದ್ರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ರೌಡಿಶೀಟರ್ ದೀಪು (31) ಕೊಲೆಯಾಗಿದ್ದಾನೆ. ಕಾರು ಚಾಲಕನಾಗಿದ್ದ ದೀಪು, ನಂದಿನಿ ಲೇಔಟ್ನಲ್ಲಿ ತಾಯಿಯೊಂದಿಗೆ ವಾಸವಾಗಿದ್ದ. ಭಾನುವಾರ ರಾತ್ರಿ ಆರೋಪಿಗಳು ಚಾಕುವಿನಿಂದ ಇರಿದು ದಾಳಿ ನಡೆಸಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಎರಡು ದಿನಗಳ ಹಿಂದೆ ದೀಪು, ಈಶ್ವರ್ ನೇಪಾಳಿ ಹಾಗೂ ಸುಮನ್ ಅಲಿಯಾಸ್ ಪಾರಿವಾಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದ್ದು, ಇದೇ ವಿಚಾರವಾಗಿ ದೀಪು ಮೇಲೆ ದಾಳಿ ನಡೆದಿರುವ …
Read More »ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಗಲಾಟೆ; ಮೂವರಿಗೆ ಚಾಕು ಇರಿತ
ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಮುಂದುವರಿದು ಮೂವರಿಗೆ ಚಾಕುವಿನಿಂದ ಇರಿದ ಘಟನೆ ಗಂಗಾವತಿ ತಾಲೂಕಿನ ಆರಾಳ ಗ್ರಾಮದಲ್ಲಿ ನಡೆದಿದೆ. ಜಯಪ್ರಕಾಶ್, ಗುರುಪ್ರಕಾಶ್ ಹಾಗೂ ದೊಡ್ಡಬಸವ ಗಾಯಗೊಂಡಿದ್ದು, ಜಯಪ್ರಕಾಶ್ ಮತ್ತು ಗುರುಪ್ರಕಾಶ್ ಅವರ ಹೊಟ್ಟೆಗೆ ಗಂಭೀರ ಗಾಯಗಳಾಗಿವೆ. ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೆಲ ಯುವಕರು ಡಿಜೆ ವಾಹನದ ಮೇಲೆ ಹತ್ತಿ ಕುಣಿಯುತ್ತಿದ್ದರು. ಭದ್ರತೆ ದೃಷ್ಟಿಯಿಂದ ಜಯಪ್ರಕಾಶ್ ಹಾಗೂ ಅವರ …
Read More »ಕಲಬುರಗಿ: ಯುವಕನ ರುಂಡ-ಮುಂಡ ಬೇರ್ಪಟ್ಟಿದ್ದ ನಿಗೂಢ ಕೇಸ್ ಭೇದಿಸಿದ ಖಾಕಿ
ಕಲಬುರಗಿ: ಅಫಜಲಪುರ ತಾಲೂಕಿನ ಗೊಬ್ಬರು (ಬಿ) ಗ್ರಾಮದ ಜಮೀನಿನಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ 22 ವರ್ಷದ ಖಲೀಂ ಸಾಬ್ ಶವದ ಪ್ರಕರಣವನ್ನು ಗಾಣಗಾಪುರ ಪೊಲೀಸರು 48 ಗಂಟೆಗಳಲ್ಲಿ ಭೇದಿಸಿದ್ದಾರೆ. ಇದು ಅಪಘಾತವಲ್ಲ, ಹಣಕಾಸಿನ ವಿಚಾರಕ್ಕೆ ನಡೆದ ಕೊಲೆ ಎಂಬುದು ತನಿಖೆಯಿಂದ ಬಯಲಾಗಿದೆ. ಸೆ.25ರಂದು ಬೈಕ್ಗೆ ಪೆಟ್ರೋಲ್ ಖಾಲಿಯಾಗಿ ತಳ್ಳಿಕೊಂಡು ಬರುತ್ತಿದ್ದ ನಂದಿಕೂರ ತಾಂಡಾದ ಸಂದೀಪ್ ಪವಾರ್ ಹಾಗೂ ಸಂದೀಪ್ ಚವ್ಹಾಣ್ಗೆ ಖಲೀಂ ಪೆಟ್ರೋಲ್ ತಂದುಕೊಟ್ಟಿದ್ದ. ಆರೋಪಿಗಳು ₹200 ನೀಡಿದ್ದು, …
Read More »ರೇಷನ್ ಕಾರ್ಡ್ ವಿಚಾರಕ್ಕೆ ತಮ್ಮನಿಗೆ ಅಣ್ಣನೇ ಚಾಕು ಹಾಕಿದ್ನಾ? ಒಡವಟ್ಟಿದವರ ದ್ವೇಷದ ಹಿಂದಿರುವ ಕಥೆ ಇಲ್ಲಿದೆ
ಹಾಸನ: ಆಸ್ತಿ ಹಂಚಿಕೆ ಹಾಗೂ ರೇಷನ್ ಕಾರ್ಡ್ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೇಲೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ನಡೆದಿದೆ. ದೇವರಾಜ್ ಎಂಬಾತ ತನ್ನ ಸಹೋದರ ರಘು (35)ಗೆ ಚಾಕುವಿನಿಂದ ಇರಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ರಘು ಮೃತಪಟ್ಟಿದ್ದಾರೆ. ಸಹೋದರರಿಬ್ಬರಿಗೂ ಸೇರಿ 7ರಿಂದ 8 ಎಕರೆ ಜಮೀನು ಇದ್ದು, ಅದರಲ್ಲಿ 3 ಎಕರೆ ಜಮೀನು ಮಾರಾಟ ಮಾಡಲಾಗಿತ್ತು ಎನ್ನಲಾಗಿದೆ. ಬಂದ ಹಣದಲ್ಲಿ ತಮ್ಮನ ಪಾಲು ನೀಡುವಂತೆ ರಘು ಕೇಳುತ್ತಿದ್ದರೂ …
Read More »ಒಂದೇ ಒಂದು ನಿಮಿಷ ಬನ್ನಿ ಅಣ್ಣಾ – ಮಹಿಳೆ ಸತ್ತರೂ ಕಾರಿಂದ ಕೆಳಗಿಳಿಯದ ನಿಖಿಲ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಕಗ್ಗಲೀಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಕಾರನ್ನು ಸಾರ್ವಜನಿಕರು ಅಡ್ಡಗಟ್ಟಿ ನೆರವು ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ರೈತರ ಪ್ರತಿಭಟನೆಗೆ ತೆರಳಬೇಕಿರುವುದರಿಂದ ತುರ್ತಾಗಿ ಹೋಗಬೇಕಿದೆ ಎಂದು ಹೇಳಿ ನಿಖಿಲ್ ಕುಮಾರಸ್ವಾಮಿ ಸ್ಥಳದಿಂದ ತೆರಳಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





