ಮಾರಕಾಸ್ತ್ರ ಹಿಡಿದು ದಾಂದಲೆ ನಡೆಸಿದ್ದ ಆರು ಮಂದಿಯನ್ನು ಸಿ.ಕೆ. ಅಚ್ಚುಕಟ್ಟು ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಪ್ರಜ್ಞಾ ಲೇಔಟ್‌ನ ವೆಂಕಟೇಶ್ ಅಲಿಯಾಸ್ ಕಾಡು, ಕತ್ರಿಗುಪ್ಪೆಯ ನಿವಾಸಿ ಗಿರೀಶ್ ಅಲಿಯಾಸ್ ಚೋಟ, ಬ್ಯಾಟರಾಯನಪುರದ ಸುರೇಂದ್ರ ಅಲಿಯಾಸ್ ಸುರಿ, ಚಂದನ್ ಅಲಿಯಾಸ್ ಸಣ್ಣ, ಶ್ರೀನಿವಾಸನಗರದ ಕೆ.ಎಸ್.ಗಣೇಶ್, ಜ್ಞಾನಭಾರತಿಯ ಗಣೇಶ ಬಂಧಿತರು.ಕತ್ರಿಗುಪ್ಪೆ ಮುಖ್ಯರಸ್ತೆಯಲ್ಲಿ ಗಲಾಟೆ ನಡೆದಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು. ರಸ್ತೆಯಲ್ಲಿ ಸಾಗುತ್ತಿದ್ದ ಇಬ್ಬರ ಮೇಲೆ …
Read More »ಹುಲಿಕಲ್ ಘಾಟೆಯಲ್ಲಿ ಧರೆಗೆ ಗುದ್ದಿದ ಖಾಸಗಿ ಬಸ್; ಮಗು ಸಾವು; ಹಲವರಿಗೆ ಗಾಯ
ದಾವಣಗೆರೆಯಿಂದ ಮಂಗಳೂರಿಗೆ ಹೊರಟಿದ್ದ ಕುಂದಾಪುರ ಮೂಲದ ಖಾಸಗಿ ಬಸ್ ಹುಲಿಕಲ್ ಘಾಟಿಯಲ್ಲಿ ಧರೆಗೆ ಗುದ್ದಿದ ಪರಿಣಾಮ, ಮಗುವೊಂದು ಮೃತಪಟ್ಟಿದ್ದು, ಹಲವು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಉಡುಪಿ ಖಾಸಗಿ ಸೇರಿ ವಿವಿಧ ಆಸ್ಪತ್ರೆಗೆ ದಾಖಲಾದ ಘಟನೆಯು ಡಿ.29 ರ ತಡರಾತ್ರಿ ನಡೆದಿದೆ. ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಸ್ ನ ಮುಂಭಾಗವು ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳುಗಳಾದ ಶರೀಫಾಬಿ(57), ಇಮಾಮ್ ಸಾಬ್ (73), ಸಫನಾ …
Read More »ಇನ್‌ಸ್ಪೆಕ್ಟರ್‌ಗಳ ಬಳಿ ₹5 ಲಕ್ಷ ಹಣಕ್ಕೆ ಬೇಡಿಕೆ: ಪತ್ರಕರ್ತ ಬಂಧನ
ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ವಾಟ್ಸ್‌ಆಯಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪತ್ರಕರ್ತರೊಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಬಾಗಲೂರು ಠಾಣೆ ಸಬ್ ಇನ್‌ಸ್ಪೆಕ್ಟರ್ ರಮೇಶ್ ಅವರ ದೂರು ಆಧರಿಸಿ ಪತ್ರಕರ್ತ ಶರತ್ ಶರ್ಮಾ ಕಲಗಾರ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದಾರೆ.ಆರೋಪಿಯು ಬಾಗಲೂರು ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ಶಬರೀಶ್ ಮತ್ತು ಸಬ್ ಇನ್‌ಸ್ಪೆಕ್ಟರ್ ರಮೇಶ್, ಕೊತ್ತನೂರು ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ಚೇತನ್ ಕುಮಾರ್ ಮತ್ತು ಅವಲಹಳ್ಳಿಯ …
Read More »ನ್ಯಾಯಕ್ಕಾಗಿ ಆಗ್ರಹಿಸಿ ಪತಿಯ ಶಾಲೆಯ ಮುಂದೆ ಧರಣಿ ಕುಳಿತ ಪತ್ನಿ
ಪ್ರೀತಿಸಿ ವಿವಾಹವಾಗಿದ್ದ ವ್ಯಕ್ತಿಯೋರ್ವ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದಲೇ ಹೊರ ಹಾಕಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ.ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮಾಲೀಕ ರೂಪೇಶ್ ವಿರುದ್ಧ ಪತ್ನಿಗೆ ಕಿರುಕುಳ ಆರೋಪ ಕೇಳಿಬಂದಿದೆ.ಒಂದು ವರ್ಷದ ಹಿಂದಷ್ಟೇ ರೂಪೇಶ್ ಪ್ರೀತಿ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದು, ಮದುವೆ ಬಳಿಕ ರೂಪೇಶ್ ಪತ್ನಿಗೆ ಕಿರುಕುಳ, ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಕೆಲ ದಿನಗಳಿಂದ ಪತ್ನಿಯನ್ನು ಮನೆಯೊಳಗೆ ಸೇರಿಸುತ್ತಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ. …
Read More »ಅಪ್ರಾಪ್ತ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಅರೆಸ್ಟ್
ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.ತನ್ನ 13 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಡಿಸೆಂಬರ್ 25 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ 5 ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ತನ್ನ ಮಗಳ ಮೇಲೆ ಮಲತಂದೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಕಾನ್‌ಸ್ಟೆಬಲ್ ದೂರು ದಾಖಲಿಸಿದ್ದಾರೆ ಎಂದು …
Read More »ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ
ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್ ಪಲ್ಟಿಯಾಗಿದೆ.ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ …
Read More »ಬಾತ್ ರೂಂ ಗ್ಯಾಸ್ ಗೀಜರ್ ಸೋರಿಕೆ ; ಯುವತಿ ಸಾವು
ಚಿತ್ರದುರ್ಗ :ಬಾತ್ ರೂಂ ಗ್ಯಾಸ್ ಗೀಜರ್ ಸೋರಿಕೆಯಿಂದ ಉಸಿರುಗಟ್ಟಿ ಯುವತಿ ಸಾವುನಪ್ಪಿರುವ ಘಟನೆ ಇಂದು ನಡೆದಿದೆ.ನಗರದ ವಿನಾಯಕ ಕಲ್ಯಾಣ ಮಂಟಪದ ಬಳಿ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು ನೂತನ ಎನ್ನುವ 20 ವರ್ಷದ ಯುವತಿ ಉಸಿರುಗಟ್ಟಿ ಸಾವುನಪ್ಪಿದ್ದಾರೆ.ಸ್ನಾನದ ಕೋಣೆಯ ಬಾಗಿಲು ಕಿಟಕಿ ಎಲ್ಲಾ ಮುಚ್ಚಿದ್ದರಿಂದಾಗಿ ಯುವತಿ ಹೊರ ಬರಲಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ನೂತನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ B.Sc ವ್ಯಾಸಂಗ ಮಾಡುತ್ತಿದ್ದು ಇಂದು ನೀರು ಕಾಯಿಸಲು ಗ್ಯಾಸ್ ಗೀಜರ್ …
Read More »ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್ ನಿಂದ ಸೋಫಾ ಫ್ಯಾಕ್ಟರಿಗೆ ಬೆಂಕಿ ತಗುಲಿ ಅಪಾರ ಹಾನಿ
ಬೆಂಗಳೂರಿನಲ್ಲಿ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಯಂಡಹಳ್ಳಿಯ ಐಟಿಐ ಲೇಔಟ್ ನಲ್ಲಿ ಸೋಫಾ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ ತೆಗುಲಿದೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ್ದು, ಸೋಫಾ, ತಯಾರಿಕೆ ವಸ್ತುಗಳು ಸುಟ್ಟು ಕರಕಲಾಗಿವೆ.ಮಾಹಿತಿ ತಿಳಿದ 3 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ …
Read More »ಶಿರಾ: ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ, ಮಗು ಶವ ಪತ್ತೆ
ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ತಾಯಿ ಮತ್ತು ಮಗನ ಶವ ಪತ್ತೆಯಾಗಿದೆ.ಮೃತರನ್ನು ತಾಲ್ಲೂಕಿನ ಭೂಪಸಂದ್ರ ಗ್ರಾಮದ ಹಂಸಲೇಖ (30) ಹಾಗೂ ಅವರ ಪುತ್ರ ಗುರುಪ್ರಸಾದ್ (10) ಎಂದು ಗುರ್ತಿಸಲಾಗಿದೆ. ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ಶವಗಳು ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ಬಿ.ಕೆ.ಶೇಖರ್, ಶಿರಾ ಗ್ರಾಮಾಂತರ ಸಿಪಿಐ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, …
Read More »ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ: ಗೆಳೆಯನನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಯುವಕ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ಭಗೀರಥ ಕೊಲೆಯಾದ ವ್ಯಕ್ತಿ. ದೀಪು ಮಂಡಲ್ ಸ್ನೇಹಿತನನ್ನೇ ಹೊಡೆದು ಕೊಂದ ಆರೋಪಿ.ಇಬ್ಬರೂ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಎಣ್ಣೆ ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ವೇಳೆ ದೀಪು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





