Breaking News

BigTv News

ಬೈಕ್ ಗೆ ಬಸ್‌ ಢಿಕ್ಕಿ; ಸವಾರ ಸಾವು

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಮಡಂತ್ಯಾರು ಸಮೀಪ ಡಿ. 14ರಂದು ಸಂಭವಿಸಿದೆ.ಮೆಸ್ಕಾಂ ವೇಣೂರು ಶಾಖೆಯಲ್ಲಿ ಉದ್ಯೋಗಿ ನೋಯೆಲ್‌ ಜೋಸೆಫ್‌ ಪಿಂಟೋ (38) ಮೃತಪಟ್ಟವರು.ತಮ್ಮ ಮನೆಯ ಕೆಲಸದವರಿಗೆ ತಿಂಡಿ ತರಲೆಂದು ಮಡಂತ್ಯಾರಿಗೆ ಬರುತ್ತಿದ್ದ ವೇಳೆ ಬಸ್ಸೊಂದು ಆಟೋ ರಿಕ್ಷಾವನ್ನು ಹಿಂದಿಕ್ಕುವ ಭರದಲ್ಲಿ ಬೈಕ್‌ಗೆ ಢಿಕ್ಕಿ ಹೊಡೆಯಿತು. ನೋಯೆಲ್‌ ಅವರ ಎದೆಗೆ ಬಲವಾದ ಗಾಯವಾಗಿ ಮೃತಪಟ್ಟರು. …

Read More »

ಸಿಗಂದೂರು ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಸಾಗರ: ಸಿಗಂದೂರು ನೂತನ ಸೇತುವೆ ಮೇಲಿನಿಂದ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.ಲೆಕ್ಕಪರಿಶೋಧಕರ ಕಚೇರಿಯ ಸಿಬ್ಬಂದಿ ಎನ್ನಲಾದ ಮೈಸೂರಿನ ಆಂಜನೇಯ (47) ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.ಸೇತುವೆಯ ಮೇಲೆ ನಿಂತಿದ್ದು, ಆತ್ಮಹತ್ಯೆಗೆ ಯತ್ನಿಸಿದ ವೇಳೆ ಎಂಜಿನಿಯರ್ ರಂಜೇಶ್ ರಕ್ಷಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿರುವ ಶಂಕೆ ಹಿನ್ನೆಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ತನಿಖೆ ಮುಂದುವರಿದಿದೆ.

Read More »

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ಗದಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಳಿ ಸಂಭವಿಸಿದೆ.ಮೃತನನ್ನು ಬಳ್ಳಾರಿ ಮೂಲದ ಜಿತೇಂದ್ರ ರೆಡ್ಡಿ (25) ಎಂದು ಗುರುತಿಸಲಾಗಿದೆ. ಜಿತೇಂದ್ರ ರೆಡ್ಡಿ ಬಳ್ಳಾರಿಯಿಂದ ದಾಂಡೇಲಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಅದರಲ್ಲಿ ಚಾಲಕ ಮೃತಪಟ್ಟರೆ ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ …

Read More »

ರಾಮನಗರ | ಮಾದಕ ವಸ್ತು ಮಾರಾಟ: ಇಬ್ಬರ ಬಂಧನ

ನಗರದ ಹೊರವಲಯದ‌ ರಂಗರಾಯನದೊಡ್ಡಿ ಕೆರೆ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಐಜೂರು ಠಾಣೆ ಪೊಲೀಸರು, ಆರೋಪಿಗಳಿಂದ 2.5 ಗ್ರಾಂ ತೂಕದ ಎಂಡಿಎಂಎ ಮಾದಕವಸ್ತು ಹಾಗೂ ₹2 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ನಗರದ ತೌಸಿಫ್ ಮಹಮ್ಮದ್(26) ಮತ್ತು ನವಾಜ್ ಪಾಷಾ(25) ಬಂಧಿತರು.ಆರೋಪಿಗಳು ಕೆರೆ ರಸ್ತೆಯಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಕುರಿತು ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮಾಲು ಸಮೇತ ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು …

Read More »

ತುಮಕೂರು | ಅಕ್ರಮ ಸಂಬಂಧ ಶಂಕೆ: ಪತ್ನಿ ಮೇಲೆ ಹಲ್ಲೆ

ನಗರದ ವೀರಸಾಗರದಲ್ಲಿ ಶನಿವಾರ ಸಂಜೆ ಅಕ್ರಮ ಸಂಬಂಧದ ಶಂಕೆಯಿಂದ ಹೆಂಡತಿ ಮೇಲೆ ಗಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.5 ವರ್ಷಗಳ ಹಿಂದೆ ಇವರ ಮದುವೆ ನೆರವೇರಿತ್ತು. ಪತ್ನಿ ಬೇರೆಯವರ ಜತೆಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪಾಷ ಅನುಮಾನ ವ್ಯಕ್ತಪಡಿಸುತ್ತಿದ್ದರು. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. ಶನಿವಾರ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಪಾಷ ಮನೆಯಲ್ಲಿದ್ದ ಕಬ್ಬಿಣದ ಆಯುಧದಿಂದ ಮುಸ್ಕಾನ್‌ ತಲೆ, ಮುಖಕ್ಕೆ ಹೊಡೆದಿದ್ದಾರೆ. ನಂತರ ಮನೆಗೆ ಬೀಗ …

Read More »

ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ `ಪ್ರವಾಸಿ ಬಸ್’ : ಮಡಿಕೇರಿಯಲ್ಲಿ ತಪ್ಪಿದ ಭಾರೀ ದುರಂತ.!

ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್ನದಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು.ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ …

Read More »

ಕುಂದಾಪುರ | ತಂದೆ ಹಾಕಿದ ಕೇಸು ವಾಪಾಸ್ ಪಡೆಯುವಂತೆ ಬಾಲಕನಿಗೆ ಹಲ್ಲೆ; ಪ್ರಕರಣ ದಾಖಲು

ತಂದೆ ಹಾಕಿದ ಕೇಸು ವಾಪಾಸ್ಸು ಪಡೆಯುವಂತೆ ಬಾಲಕನಿಗೆ ಹಲ್ಲೆ ನಡೆಸಿರುವ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಲ್ಲೂರು ಗ್ರಾಮ ಪವನ್(13) ಎಂಬವರು ಡಿ.5ರಂದು ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದು, ಈ ವೇಳೆ ಮೈದಾನದ ಹತ್ತಿರ ತಮ್ಮಯ್ಯ ಎಂಬವರು ಬಾಲಕನನ್ನು ಅಡ್ಡಗಟ್ಟಿ, ತಲೆಗೆ ಮತ್ತು ಕೆನ್ನೆಗೆ ಕೈಯಿಂದ ಹೊಡೆದು ನಿನ್ನ ಅಪ್ಪನಿಗೆ ಹೋಗಿ ಹೇಳು ಮೊದಲಿನ ಕೇಸು ವಾಪಾಸ್ಸು ತೆಗೆಯಬೇಕು ಇಲ್ಲದಿದ್ದರೆ ನಿನ್ನ ಅಪ್ಪನನ್ನು ಕೊಲೆ ಮಾಡುತ್ತೇನೆಂದು ಹೆದರಿಸಿದ್ದಾನೆ ಎಂದು …

Read More »

ಮಂಗಳೂರು | ತಾಂತ್ರಿಕ ದೋಷ: ಬೋಟ್ ಬೆಂಕಿಗೆ ಆಹುತಿ

ಮೀನುಗಾರಿಕೆಗೆ ತೆರಳಿದ್ದ ಬೋಟ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ, ಬೋಟ್‌ಗೆ ಬೆಂಕಿ ಹೊತ್ತಿ ಉರಿದು, ₹1 ಕೋಟಿಯಷ್ಟು ನಷ್ಟವಾಗಿದೆ ಎಂದು ಕಂಕನಾಡಿ ಮುಹಮ್ಮದ್ ಫಾರೂಕ್ ಅವರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಹಾಗೂ ಕರಾವಳಿ ಕಾವಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.’ಮಗಳು ಫಾತಿಮಾ ಶಾಫಾ ಮಾಲೀಕತ್ವದ ‘ಮಶ್ರಿಕ್‌’ ಹೆಸರಿನ ಬೋಟ್ ಡಿ.10ರಂದು ಬೆಳಗಿನ ಜಾವ ಮಂಗಳೂರು ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು. ಅದೇ ದಿನ ಸಂಜೆ ಸುರತ್ಕಲ್-ಕಾಪು ಕರಾವಳಿ ತೀರದಿಂದ ಸುಮಾರು 12 …

Read More »

ಮಲೆ ಮಹದೇಶ್ವರ ಬೆಟ್ಟದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ

ಚಾಮರಾಜನಗರ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿ. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವವರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ ಟಿ ಕವಿತಾ, ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧಮೇಂದ್ರ ಮಾರ್ಗದರ್ಶನದಲ್ಲಿ ಮಲೆ …

Read More »

ಬಾಲಕಿಗೆ ಲೈಂಗಿಕ ಕಿರುಕುಳ; ಬಂಧನ

ಸುರತ್ಕಲ್: ಹಳೆಯಂಗಡಿ ಚೇಳಾರು ಕರಿತೋಟ ಎಂಬಲ್ಲಿ ಕಳೆದ ಅಕ್ಟೊಬರ್ ತಿಂಗಳಲ್ಲಿ ನಡೆದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಸುಂದರ ಸಾಲ್ಯಾನ್ (60) ಎಂಬಾತನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದಿಳಿದು ತನ್ನ ಒಳ ರಸ್ತೆಯಾಗಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರು ಬದಿಯಿಂದ ಬಂದ ವ್ಯಕ್ತಿ ಆಕೆಯ ಕೈಹಿಡಿದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆಘಟನೆಯ ಬಳಿಕ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾದ ಕಾರಣ ವೈದ್ಯರ ಬಳಿ …

Read More »