Breaking News

BigTv News

ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ತರುಣ ಸಾವು

ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟ ವರು.ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು ಸಮೀಪದ …

Read More »

ಚಿತ್ರದುರ್ಗದಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ, 1 ವರ್ಷದಿಂದ ನಿರಂತರ ಅತ್ಯಾಚಾರ : ಇಬ್ಬರು ಅರೆಸ್ಟ್!

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 10 ವರ್ಷದ ಬಾಲಕಿಯನ್ನು ಬೆದರಿಸಿ 1 ವರ್ಷದಿಂದ ನಿರಂತರವಾಗಿ ಇಬ್ಬರು ಸಾಮೂಹಿಕವಾಗಿ ಅತ್ಯಾಚಾರ ಎಸೆಗಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ.ಕಳೆದ ಒಂದು ವರ್ಷದಿಂದ 24 ವರ್ಷದ ಹಾಗೂ 40 ವರ್ಷದ ಇಬ್ಬರು ವ್ಯಕ್ತಿಗಳು ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸದ್ಯ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿ ಪೋಕ್ಸೋ ಪ್ರಕರಣ …

Read More »

ರಾಜ್ಯದಲ್ಲಿ ಮತ್ತೊಂದು ‘ಡಬಲ್ ಮರ್ಡರ್’ : ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಶಿವಮೊಗ್ಗದಲ್ಲಿ ಇಬ್ಬರ ಬರ್ಬರ ಹತ್ಯೆ.!

ರಾಜ್ಯದಲ್ಲಿ ಮತ್ತೊಂದು ಡಬಲ್ ಮರ್ಡರ್ ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ಬಡಾವಣೆಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನ ಯುವತಿಯ ಸಹೋದರ ಹಾಗೂ ಹಾಗೂ ಆತನ ಸ್ನೇಹಿತರು ಹತ್ಯೆ ಮಾಡಿದ್ದಾರೆ.ಹತ್ಯೆಯಾದ ಯುವಕರನ್ನ ಕಿರಣ್ (25) ಮಂಜುನಾಥ್ (45) ಎಂದು ಗುರುತಿಸಲಾಗಿದೆ. ಮನೆ ಬಿಟ್ಟು ಬಂದ ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ …

Read More »

ಸಾಲ’ದ ವಾಹನ ಮಾರಾಟ: ದೂರು

ಕುಂದಾಪುರ: ಫೈನಾನ್ಸ್ ನಿಂದ ಸಾಲ ಮಾಡಿ ವಾಹನ ಖರೀದಿಸಿ ಸುಳ್ಳು ದಾಖಲೆ ಸೃಷ್ಟಿಸಿ ವಾಹನ ಮಾರಾಟ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.ಚೋಳಮಂಡಲಂ ಇನ್ವೆಸ್ಟ್ಮೆಂಟ್‌ ಅಂಡ್‌ ಫೈನಾನ್ಸ್‌ ಕಂ.ಲಿನ ಮಿಥುನ್‌ ಎ.ಕೆ. ದೂರು ನೀಡಿದ್ದು, ಅದರಲ್ಲಿ ಸಿದ್ದಾಪುರ ಶೇಡಿಮನೆಯ ಅವಿಚರಣ್‌ ಸುರೇಶ್‌ ನಾಯ್ಕ ಎಂಬ ವ್ಯಕ್ತಿ ಕಲ್ಲಯ್ಯ ವೀರಯ್ಯ ಸುರೇಬಾನು ಬೆಳಗಾಂ ಅವರಿಂದ ಖರೀದಿಸಿದ ವಾಹನಕ್ಕೆ 5.20 ಲಕ್ಷ ರೂ.ಸಾಲ ಪಡೆದಿದ್ದರು. ಸಾಲದ ಹಣವನ್ನು ಸವದತ್ತಿಯಲ್ಲಿರುವ ಚೋಳಮಂಡಲಂ ಶಾಖೆಗೆ ಕಳುಹಿಸಿದ್ದು ಕಲ್ಲಯ್ಯ …

Read More »

ಹಾಸನದಲ್ಲಿ ಘೋರ ದುರಂತ : ಕರ್ತವ್ಯದ ವೇಳೆ ಲಾರಿ ಹರಿದು ‘KSRTC’ ಚೆಕ್ಕಿಂಗ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು.!

ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಕರ್ತವ್ಯದ ವೇಳೆಲಾರಿ ಡಿಕ್ಕಿಯಾಗಿ ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ನಡೆದಿದೆ.ಪಾಳ್ಯಾ ಬಳಿ ಈ ಘಟನೆ ನಡೆದಿದ್ದು, ಚೆಕ್ಕಿಂಗ್ ಇನ್ಪೆಕ್ಟರ್ ಶಕುನಿಗೌಡ (57) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹೆದ್ದಾರಿಯಲ್ಲಿ ಬಸ್ ತಡೆದು ಚೆಕ್ಕಿಂಗ್ ಮಾಡುವಾಗ ಲಾರಿ ಡಿಕ್ಕಿಯಾಗಿದೆ. ಕೆಳಗೆ ಬಿದ್ದ ಶಕುನಿಗೌಡ ಮೇಲೆ ಲಾರಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ …

Read More »

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ.!

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ನಿನ್ನೆ ಸಂಜೆ ಅಪಘಾತವಾಗಿದೆ. ನೈಸ್ ರಸ್ತೆ ಬಳಿ ಹುಲ್ಲು ತೆರವು ಮಾಡುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ರಂಗಮ್ಮ ಮತ್ತು ಚೌಡಮ್ಮಗೆ ವಾಹ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು …

Read More »

ಬೆಂಗಳೂರು: ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ತಳಿಯ ಗಿಳಿಯನ್ನು ರಕ್ಷಿಸಲು ಹೋದ ಯುವಕ ಸಾವು

ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ಇಲ್ಲಿನ ಗಿರಿನಗರದ ಖಾಸಗಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಅರುಣ್ ಕುಮಾರ್(32) ಮೃತ ಯುವಕ.ಸುಮಾರು 2 ಲಕ್ಷ ರೂ. ಬೆಲೆ ಬಾಳುವ ವಿದೇಶಿ ಗಿಳಿಯೊಂದು ಖಾಸಗಿ ಅಪಾರ್ಟ್‍ಮೆಂಟ್ ಒಳಭಾಗದಲ್ಲಿರುವ 65 ಸಾವಿರ ಕೆವಿ ಸಾಮರ್ಥ್ಯದ ವಿದ್ಯುತ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಅರುಣ್ ಕುಮಾರ್ ಗಿಳಿ ರಕ್ಷಣೆಗೆ ಮುಂದಾಗಿದ್ದಾರೆ. ಅಪಾರ್ಟ್‍ಮೆಂಟ್ ಕಾಪೌಂಡ್ ಮೇಲೆ ನಿಂತು ಕಬ್ಬಿಣದ …

Read More »

ಏಷ್ಯಾನೆಟ್ ಸುವರ್ಣನ್ಯೂಸ್ ಸಿಬ್ಬಂದಿ ಲಲಿತಮ್ಮ ಸಾವು; ಟ್ರಕ್ ಚಕ್ರ ತಲೆ ಮೇಲೆ ಹರಿದು ಭೀಕರ ಅಂತ್ಯ

ಓಕಳೀಪುರಂ ರೈಲ್ವೇ ಪ್ಯಾರಲೆಲ್ ರಸ್ತೆ ಬಳಿ ಸಂಭವಿಸಿದ ಭೀಕರ ಟ್ರಕ್ ಅಪಘಾತದಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.ವೇಗದಿಂದ ಬಂದ ಟ್ರಕ್ ಒಂದು ರಸ್ತೆ ದಾಟುತ್ತಿದ್ದ ಲಲಿತಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಲಿತಮ್ಮ ಅವರು ಕೆಳಗೆ ಬಿದ್ದಿದ್ದು, ತಕ್ಷಣವೇ ಟ್ರಕ್‌ನ ಚಕ್ರ ಅವರ ತಲೆಯ ಮೇಲೆ ಹರಿದು ಹೋಗಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ …

Read More »

ಆನೆ ದಂತ ಮಾರಾಟ ಮಾಡಲು ಯತ್ನ; ಐವರ ಮೇಲೆ ದೂರು ದಾಖಲು

ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಯಳಂದೂರು ವನ್ಯಜೀವಿ ಉಪವಿಭಾಗ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಆನೆ ದಂತ ಮಾರಾಟ ಮಾಡಲು ಯತ್ನಿಸಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.ಮೂಡುಬಿದಿರೆಯಲ್ಲಿ ಪತ್ತೆ ಹಚ್ಚಿ ಕೊಳ್ಳೇಗಾಲಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ಇವರಿಬ್ಬರೂ ಪ್ರಮುಖ ಆರೋಪಿಗಳೆಂದು ಇವರಿಬ್ಬರನ್ನು ಕೂಡ ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More »

ಖಾಕಿ ತೊಟ್ಟ ಭೂಗಳ್ಳ! 25 ಕೋಟಿ ಮೌಲ್ಯದ ಭೂಮಿ ಲಪಟಾಯಿಸಿದ ಹೆಡ್ ಕಾನ್ಸ್‌ಟೇಬಲ್

ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಿರಿಜೇಶ್ ವಿರುದ್ಧ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಲಪಟಾಯಿಸಿದ ಆರೋಪ ಗಿರಿಜೇಶ್ ಮತ್ತು ಆತನ ಸಹಚರರ ಮೇಲಿದೆ. ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನ ಪ್ರಕರಣ ದಾಖಲಿಸಲಾಗಿದೆ.ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಿರಿಜೇಶ್‌ನನ್ನು ಅಮಾನತು ಮಾಡಲಾಗಿತ್ತು. ಮನೆಯಲ್ಲಿದ್ದರೂ ಬುದ್ಧಿ ಕಲಿಯದ ಈ ಆರೋಪಿ, ಭೂ …

Read More »