ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ ವರ್ಷಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ತುಮಕೂರಿನ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
Read More »30 ಕೋಟಿ ವಂಚನೆ ಕೇಸ್ : ಬಾಲಿವುಡ್ ಖ್ಯಾತ ನಿರ್ದೇಶಕ ವಿಕ್ರಮ್ ಭಟ್ ದಂಪತಿ ಅರೆಸ್ಟ್.!
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ಮತ್ತು ಶ್ವೇತಾಂಬರಿ ಸೇರಿದಂತೆ ಇತರ ಏಳು ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದಾಗ ಅವರು ಈ ಹಿಂದೆ ತಮ್ಮ ವಿರುದ್ಧ ಮಾತನಾಡಿದ್ದರು. ಉದಯಪುರದಲ್ಲಿ ಮುರ್ದಿಯಾ ಸಲ್ಲಿಸಿದ ದೂರಿನಲ್ಲಿ, ಚಲನಚಿತ್ರ ನಿರ್ಮಾಪಕ ಮತ್ತು ಅವರ ಸಹಚರರು ಆರ್ಥಿಕ ಅಕ್ರಮ ಮತ್ತು ಸುಳ್ಳು ಭರವಸೆಗಳ ಆರೋಪ ಹೊರಿಸಿದ್ದಾರೆ. ತನ್ನ ದಿವಂಗತ ಪತ್ನಿಯ ಜೀವನವನ್ನು ಆಧರಿಸಿದ ಚಿತ್ರಕ್ಕೆ ಹಣಕಾಸು ಒದಗಿಸುವಂತೆ ಮನವೊಲಿಸಲಾಗಿತ್ತು ಎಂದು ಮುರ್ದಿಯಾ ಆರೋಪಿಸಿದ್ದಾರೆ, ಈ ಉದ್ಯಮವು ಸುಮಾರು 200 …
Read More »ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. ‘ಬಂಗಾರಿ’ ಕೇಸ್ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬಮೂಲ್ ಅಧ್ಯಕ್ಷ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ಕೋಟ್ಯಂತರ ರು. ವಂಚನೆ ಪ್ರಕರಣ ಸಂಬಂಧ ಚಲನಚಿತ್ರ ನಟ ಧರ್ಮ ಅವರಿಗೆ ಧ್ವನಿ ಪರೀಕ್ಷೆಯ ಸಂಕಷ್ಟ ಎದುರಾಗಿದೆ.ವಂಚನೆ ಪ್ರಕರಣದಲ್ಲಿ ಚಿನ್ನದ ವ್ಯಾಪಾರಿ ವನಿತಾ ಜತೆ ಮಾಜಿ ಸಂಸದ ಸುರೇಶ್ ಎಂದು ಹೇಳಿಕೊಂಡು ಧರ್ಮ ಮಾತನಾಡಿದ್ದರು ಎಂಬ ಆರೋಪವಿದೆ. ಈ ಬಗ್ಗೆ ಬಹಿರಂಗವಾದ ಆಡಿಯೋದಲ್ಲಿ ಪುರುಷ ದನಿ ಇದೆ. ಹೀಗಾಗಿ ಆಡಿಯೋದಲ್ಲಿರುವ ದನಿ, ಧರ್ಮ ಅವರ …
Read More »ವೈದ್ಯೆ ಪ್ರಜ್ಞೆ ತಪ್ಪಿಸಿ ಆಭರಣ ದೋಚಿದ ನೇಪಾಳಿ ದಂಪತಿ!
ಸ್ತ್ರೀರೋಗ ತಜ್ಞೆ ಡಾ. ಲಲಿತಾ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಠಾಣೆ ಪೋಲೀಸರು ನೇಪಾಳ ಮೂಲದ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಮನೆ ಕೆಲಸಕ್ಕೆ ಸೇರಿಕೊಂಡಿದ್ದ ನೇಪಾಳದ ದಂಪತಿ ಮನೆಯ ನೆಲಮಹಡಿಯಲ್ಲಿ ವಾಸವಾಗಿದ್ದರು. ಡಾ. ಲಲಿತಾ ಅವರ ಪತಿ ಕೂಡ ವೈದ್ಯರಾಗಿದ್ದಾರೆ. ಪುತ್ರ ಎಂಬಿಬಿಎಸ್ ಓದುತ್ತಿದ್ದು, ವೈದ್ಯ ದಂಪತಿಯ ಮನೆಯಲ್ಲಿ ಹೆಚ್ಚಿನ ಹಣ, ಚಿನ್ನಾಭರಣ ಇರುವ ಮಾಹಿತಿ ತಿಳಿದುಕೊಂಡಿದ್ದ …
Read More »ಚನ್ನಪಟ್ಟಣ: ಕೂಲಿ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರ್ಮಿಕರ ಸುಲಿಗೆ
ಕೂಲಿ ಕೆಲಸ ಕೊಡುವುದಾಗಿ ಹೇಳಿ ಮೂವರು ಕಾರ್ಮಿಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಮಾಸಿಗೌಡನದೊಡ್ಡಿಯ ರಕ್ಷಿತ್ ಕುಮಾರ್ ಅಲಿಯಾಸ್ ಚಿನ್ನಿ ಹಾಗೂ ಚನ್ನಂಕೇಗೌಡನದೊಡ್ಡಿಯ ಸುನೀಲ್ ರಾಜ್ ಅರಸ್ ಬಂಧಿತರು.ಕಾರ್ಮಿಕರಿಂದ ಸುಲಿಗೆ ಮಾಡಿದ್ದ ₹11,700 ನಗದು, 3 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆಯಲಾಯಿತು ಎಂದು ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.
Read More »ಬೆಂಗಳೂರು, ಹೈದರಾಬಾದ್ನ 180 ಇಂಡಿಗೋ ವಿಮಾನಯಾನಗಳು ರದ್ದು
ಇಂಡಿಗೋ ವಿಮಾನಯಾನ ಸಂಸ್ಥೆ ಹೈದರಾಬಾದ್ಗೆ ಮತ್ತು ಅಲ್ಲಿಂದ 58 ವಿಮಾನಗಳನ್ನು ನಿರ್ವಹಿಸುತ್ತಿಲ್ಲ. ಇವುಗಳಲ್ಲಿ 14 ಆಗಮನಗಳು ಮತ್ತು 44 ನಿರ್ಗಮನಗಳು ಎಂದು ಮೂಲಗಳು ತಿಳಿಸಿವೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರದ್ದತಿಗಳ ಸಂಖ್ಯೆ 121 ಆಗಿದ್ದು, ಅವುಗಳಲ್ಲಿ 58 ಆಗಮನಗಳು ಮತ್ತು 63 ನಿರ್ಗಮನಗಳಾಗಿವೆ. ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಸರ್ಕಾರವು ಇಂಡಿಗೋ ಸ್ಲಾಟ್ಗಳನ್ನು ಖಂಡಿತವಾಗಿಯೂ ಕಡಿಮೆ ಮಾಡುತ್ತದೆ ಎಂದು ಹೇಳಿದ ನಂತರ, ನಡೆಯುತ್ತಿರುವ ಚಳಿಗಾಲದ ವೇಳಾಪಟ್ಟಿಯಲ್ಲಿ ವಾಹಕವು …
Read More »ಮಂಡಗದ್ದೆ; ಅರಣ್ಯ ಇಲಾಖೆ ದಿಢೀರ್ ಕಾರ್ಯಾಚರಣೆ; ಇಬ್ಬರು ಆರೋಪಿಗಳು ಬಂಧನ
ಅಕ್ರಮವಾಗಿ ಶ್ರೀಗಂಧ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ, ಸೋಮವಾರ (ಡಿ.08) ಬಂಧಿಸಿದೆ. ತೀರ್ಥಹಳ್ಳಿ ತಾಲೂಕಿನ ಕಣಗಲಕೊಪ್ಪ ಗಸ್ತು ವಿಭಾಗದಲ್ಲಿ 33 ಕೆ.ಜಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿಎಫ್ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
Read More »ಗೌರಿಬಿದನೂರು: ನಗರಸಭೆ ಮುಂದೆ ಶವ ಇಟ್ಟು ಪ್ರತಿಭಟನೆ
ನಗರದ ಬಿ.ಎಚ್ ರಸ್ತೆಯಲ್ಲಿ ಬೀದಿದೀಪ ಬಿದ್ದಿದ್ದರಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿವಿಪುರಂ ನಿವಾಸಿ ಸಿಖಂದರ್ ಖಾನ್ (45) ಸೋಮವಾರ ಮೃತಪಟ್ಟಿದ್ದಾರೆ.ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು, ನಗರಸಭೆ ಕಾರ್ಯಾಲಯದ ಆವರಣದಲ್ಲಿ ಶವ ಇಟ್ಟು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.ವೃತ್ತ ನಿರೀಕ್ಷಕ ಅಂಜನ್ ಕುಮಾರ ಮಾತನಾಡಿ, ಈ ಘಟನೆ ಸಂಬಂಧ ಎಫ್ಐಆರ್ ದಾಖಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
Read More »ಶಿಡ್ಲಘಟ್ಟ: ಪೊಲೀಸರಿಂದ ಹೆಲ್ಮೆಟ್ ಜಾಗೃತಿ.
ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಯಿತು. ನಗರ ಠಾಣೆ ಎಸ್ಐ ವೇಣುಗೋಪಾಲ್ ಮಾತನಾಡಿ, ‘ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸುವುದನ್ನು ಈಗಾಗಲೇ ಕಡ್ಡಾಯಗೊಳಿಸಲಾಗಿದೆ.
Read More »ಲಾಠಿ ಚಾರ್ಜ್ ಪ್ರಕರಣ | ನ್ಯಾಯ ಸಿಗುವವರೆಗೆ ಹೋರಾಟ ನಿರಂತರ: ಮೃತ್ಯುಂಜಯ ಸ್ವಾಮೀಜಿ
ಸರ್ಕಾರ ಎಷ್ಟೇ ಲಾಠಿ ಏಟು ಕೊಟ್ಟರೂ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಸರ್ಕಾರ ದ್ವೇಷದಿಂದ ಪಂಚಮಸಾಲಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದರೆ; ನಾವು ಶಾಂತಿಯಿಂದ ಹೋರಾಟ ಮುಂದುವರಿಸುತ್ತೇವೆ. ಬೆಳಗಾವಿಯ ಅದೇ ಸ್ಥಳದಿಂದ ಮತ್ತೊಮ್ಮೆ ಹೋರಾಟದ ಸಂಕಲ್ಪ ಮಾಡುತ್ತೇವೆ’ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.ಗದಗ ನಗರದ ಅಶೋಕ ಸಂಕಣ್ಣವರ ಮಿಲ್ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಂಚಮಸಾಲಿ ಹಿರಿಯರ ಘಟಕದ ಅಧ್ಯಕ್ಷರು ಅನಿಲಕುಮಾರ ಪಾಟೀಲ್, ಅಶೋಕ ಸಂಕಣ್ಣವರ, ಮೋಹನ ಮಾಳಶೆಟ್ಟಿ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





