ಕುಂದಾಪುರ: ಇಲ್ಲಿನ ಹೊದ್ರೋಳಿಯ ದಿಣ ಸಂಜೀವ ಪೂಜಾರಿ ಅವರ ಪುತ್ರಿ ರೇಷ್ಮಾ (25) ಅವರು ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಹೋದವರು ಕಾಣೆಯಾಗಿದ್ದಾರೆ.ಅವರು ಪತಿ ಮನೆ ತರಿಕೆರೆ ತಾಲೂಕಿನ ಎರಂಗಾಪುರ ಗ್ರಾಮದಿಂದ ಪತಿಯ ಜತೆ ಆಗಮಿಸಿದ್ದರು. ಡಿ. 6ರಂದು ಜಾತ್ರೆಗೆ ಹೋದವರು ಕುಂದಾಪುರ ಶಾಸ್ತ್ರಿ ಸರ್ಕಲ್ ವರೆಗೆ ಬಂದಿದ್ದು ಬಳಿಕ ಕಾಣೆಯಾಗಿದ್ದಾರೆ.5.4 ಅಡಿ ಎತ್ತರದ ಅವರು ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವಾಗ ನೇರಳೆ ಬಣ್ಣದ ಸ್ಲೀವ್ಲೆಸ್ ಟಾಪ್, ನೀಲಿ …
Read More »ಚಲಿಸುತ್ತಿದ್ದ ಕಾರು ನಡುರಸ್ತೆಯಲ್ಲಿಯೇ ಧಗಧಗ, 8 ಮಂದಿ ಪ್ರಯಾಣಿಕರು ಜಸ್ಟ್ ಮಿಸ್
ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.ರಾತ್ರಿ 12 ಗಂಟೆ ಸುಮಾರಿಗೆ ಚಂದಾಪುರದ ಬಳಿ ಯೂಟರ್ನ್ ತೆಗೆದುಕೊಳ್ಳುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಪ್ರಯಾಣಿಕರು ಸಮಯಪ್ರಜ್ಞೆಯಿಂದ ತಕ್ಷಣವೇ ಕೆಳಗಿಳಿದು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
Read More »ಬೆಳಗಾವಿ | ಎಂಇಎಸ್ ವಿರುದ್ಧ ಪ್ರತಿಭಟನೆ: ಕರವೇ ಕಾರ್ಯಕರ್ತರು ವಶಕ್ಕೆ
ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು.ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.ಮತ್ತೊಂದೆಡೆ, ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್ ಹಿರೇಕೋಡಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ಏಕಕಾಲಕ್ಕೆ ಕನ್ನಡ ಸಂಘಟನೆಯವರು ಮತ್ತು ಎಂಇಎಸ್ ನವರು ಬೇರೆ ಬೇರೆ ಸ್ಥಳಗಳಲ್ಲಿ ಪ್ರತಿಭಟಿಸುತ್ತಿದ್ದಾರೆ. …
Read More »೪ ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ರಿಜ್ವಾನ್ ಬಂಧನ
ದೆಹಲಿಯ ನರೇಲಾ ಪ್ರದೇಶದಲ್ಲಿ ೪ ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ರಿಜ್ವಾನ್ನನ್ನು ಬಂಧಿಸಿದ್ದಾರೆ.ಪೀಡಿತ ಬಾಲಕಿ ತನ್ನ ಕುಟುಂಬದವರೊಂದಿಗೆ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಆಕೆಯ ಕುಟುಂಬದವರು ಅವಳನ್ನು ಉರ್ದು ಕಲಿಯುವುದಕ್ಕಾಗಿ ಹತ್ತಿರದ ಮದರಸಾಗೆ ಕಳುಹಿಸುತ್ತಿದ್ದರು. ಡಿಸೆಂಬರ್ ೩ ರಂದು, ಅವಳು ಮದರಸಾಗ ಹೋಗುತ್ತಿದ್ದಳು. ದಾರಿಯಲ್ಲಿ ಕುಡಿದ ಮತ್ತಿನಲ್ಲಿದ್ದ ರಿಜ್ವಾನ್ …
Read More »ಉಡುಪಿ | ಮದ್ಯ ವ್ಯಸನಿಯಿಂದ ಅಡ್ಡಾದಿಡ್ಡಿ ಗ್ಯಾಸ್ ಬುಲೆಟ್ ಟ್ಯಾಂಕರ್ ಚಾಲನೆ : ತಪ್ಪಿದ ಅನಾಹುತ
ಟ್ಯಾಂಕರ್ ಚಾಲಕನೊಬ್ಬ ರಾತ್ರಿಯ ಹೊತ್ತು ಹೆಡ್ ಲೈಟ್ ಕೂಡ ಹಾಕದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಗ್ಯಾಸ್ ಬುಲೆಟ್ ಟ್ಯಾಂಕರ್ ಮಾಡಿಕೊಂಡು ಬಂದಿದ್ದು ಕೂದಲೆಳೆಯ ಅಂತರದಲ್ಲಿ ಹಲವಾರು ಅಪಘಾತಗಳು ತಪ್ಪಿದೆ.ಕೊನೆಗೆ ಆತನನ್ನು ಅಂಬಲಪಾಡಿಯ ಬಳಿ ವಾಹನವನ್ನು ನಿಲ್ಲಿಸಿ ಸಾರ್ವಜನಿಕರು ಮದ್ಯ ವ್ಯಸನಿಯನ್ನು ವಶಕ್ಕೆ ಪಡೆದು ಪೋಲಿಸರಿಗೆ ಒಪ್ಪಿಸಿದ್ದಾರೆ.ಟ್ಯಾಂಕರ್ ಚಾಲಕ ಮಹಾರಾಷ್ಟ್ರ ಮೂಲದವನಾಗಿದ್ದು, ಬಹಳಷ್ಟು ಮದ್ಯ ಸೇವಿಸಿ ರಾತ್ರಿಯ ಹೊತ್ತು ಹೆಡ್ ಲೈಟ್ ಕೂಡ ಹಾಕದೆ ಬಹಳಷ್ಟು ವೇಗವಾಗಿ ಬರುತ್ತಿದ್ದ. ಇದನ್ನು ಗಮನಿಸಿದ …
Read More »ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಬೆದರಿಕೆ | ರಕ್ಷಣೆ ಕೋರಿ ಪೊಲೀಸರ ಮೊರೆ
ಪ್ರೀತಿಸಿ ಮದುವೆಯಾದ ಜೋಡಿಗಳಿಗೆ ಪೋಷಕರು ಬೆದರಿಕೆಯೊಡ್ಡಿದ್ದು, ಜೋಡಿಗಳು ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.ಈ ಘಟನೆ ಕೊಪ್ಪಳ ತಾಲೂಕಿನ ಚುಕ್ಕನಕಲ್ಲ ಗ್ರಾಮದ ಗಣೇಶ್ ಮತ್ತು ಮುದ್ದಾಬಳ್ಳೀ ಗ್ರಾಮದ ಉಷಾರಾಣಿ ದೇವಸ್ಥಾನದಲ್ಲಿ ಮದುವೆಯಾದ ಜೋಡಿಗಳು.ಅಂತರ್ಜಾತಿ ಎಂದು ಯುವತಿಯ ಪೋಷಕರು ಮದುವೆಯ ನಂತರವೂ ವಿರೋಧ ವ್ಯಕ್ತಪಡಿಸಿದರು. ಯುವಕನ ಜೀವ ಬೆದರಿಕೆ ಹಿನ್ನೆಲೆ ಜೋಡಿಗಳು ಗಂಗಾವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸದಯ ಜೋಡಿಗಳನ್ನು ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಕೊಪ್ಪಳ ಪೊಲೀಸ್ ಠಾಣೆಗೆ ಕಳುಹಿಸಿಕೊಟ್ಟಿದ್ದಾರೆ.
Read More »ಕಾಫಿ ತೋಟದಲ್ಲಿ ಅಕ್ರಮ ಗೋಹತ್ಯೆ; ಮೂವರ ಬಂಧನ!
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರು ಕಾಫಿ ಎಸ್ಟೇಟ್ನಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಎರಡು ದನಗಳನ್ನು ಕದ್ದು ಕಾಫಿ ತೋಟದಲ್ಲಿ ಹತ್ಯೆ ಮಾಡಿ ಮಾಂಸ ಹಂಚಿಕೆ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.ಸ್ಥಳೀಯರು ಇವರು ಅಸ್ಸಾಂನವರಲ್ಲ, ಅಕ್ರಮ ಬಾಂಗ್ಲಾ ವಲಸಿಗರೆಂದು ಆರೋಪಿಸಿದ್ದಾರೆ. ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿದ ಬಾಳೆಹೊನ್ನೂರು ಪೊಲೀಸರು, ಆರೋಪಿಗಳಾದ ಅನ್ಸರ್, …
Read More »ಪ್ರೀತಿಸಿದ ಯುವಕ ಮದುವೆಗೆ ನಿರಾಕರಣೆ | ಮನನೊಂದ ಯುವತಿ ಆತ್ಮಹತ್ಯೆ!
ಪ್ರೀತಿಸಿದ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವತಿಯೊಬ್ಬಳು ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ.ಕಳೆದ ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಆತ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಈ ಘಟನಾ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Read More »ಬೈಕ್ ಢಿಕ್ಕಿ; ಪಾದಚಾರಿಗೆ ಗಾಯ
ಕುಂದಾಪುರ: ಕುಂಭಾಶಿಯ ಪಾಕಶಾಲಾ ಹೊಟೇಲ್ ಬಳಿಯ ರಾ.ಹೆ.66ರ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜು ಪೂಜಾರಿ ಅವರಿಗೆ ಚೇತನ್ ಅವರು ಚಲಾಯಿಸುತ್ತಿದ್ದ ಬುಲೆಟ್ ಬೈಕ್ ಹಿಂದಿನಿಂದ ಢಿಕ್ಕಿಯಾಗಿ ಗಾಯಗೊಂಡ ಘಟನೆ ಡಿ.6ರಂದು ಸಂಭವಿಸಿದೆ.ಗಾಯಗೊಂಡ ಮಂಜು ಪೂಜಾರಿಯವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಳಿಯ ಉಮೇಶ್ ಪೂಜಾರಿ ಸಾಲಿಗ್ರಾಮ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಚಾಲಕನ ನಿಯಂತ್ರಣ ತಪ್ಪಿ ಕರೆಗೆ ಉರುಳಿದ ಕಾರು | ಸ್ಥಳೀಯರ ಸಮಯ ಪ್ರಜ್ಞೆಯಿಂದ ಮೂವರು ಪಾರು
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆಯ ತಾವರೆಕರೆಯಲ್ಲಿ ನಡೆದಿದೆ.ಮಾರುತಿ ಆಲ್ಟೋ ಕಾರಿನಲ್ಲಿ ಮೂವರು ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದರು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತಾವರೆಕೆರೆಗೆ ಕಾರು ಉರುಳಿದೆ. ಕಾರು ಕೆರೆಗೆ ಉರುಳುತ್ತಿದ್ದಂತೆ ತಕ್ಷಣ ಸ್ಥಳಿಯರು ಕಾರನ್ನು ಬದಿಗೆ ತಂದು, ಮೂರನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





