Breaking News

BigTv News

7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು!

ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್​(28) ಆತ್ಮಹತ್ಯೆಗೆ ಶರಣಾದ ದಂಪತಿ.ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು.ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ.ಆದ್ರೆ, …

Read More »

ನ್ಯೂಝಿಲ್ಯಾಂಡ್: ಅತ್ಯಾಚಾರ ಆರೋಪಿ ಭಾರತೀಯ ಮೂಲದ ಚಾಲಕನಿಗೆ ಜೈಲು ಶಿಕ್ಷೆ

ನ್ಯೂಝಿಲ್ಯಾಂಡ್ ನಲ್ಲಿ ಪ್ರಯಾಣಿಕ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಉಬರ್ ಚಾಲಕ ಸತ್ವಿಂದರ್ ಸಿಂಗ್ ಗೆ 7 ವರ್ಷ ಎರಡು ತಿಂಗಳು ಜೈಲುಶಿಕ್ಷೆ ವಿಧಿಸಲಾಗಿದೆ.2023ರಲ್ಲಿ ಡ್ಯುನೆಡಿನ್ನ ಸ್ಪೆಯ್ಟ್ಸ್ ಏಲ್ಹೌಸ್ ನಿಂದ ಪೂರ್ವ ಹ್ಯಾಮಿಲ್ಟನ್ ಗೆ ತಡರಾತ್ರಿ ಉಬರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಚಾಲಕ ಸತ್ವಿಂದರ್ ಸಿಂಗ್ ಅತ್ಯಾಚಾರ ಎಸಗಿರುವುದು ಸಾಬೀತಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖಿಸಿದ್ದು ಸತ್ವಿಂದರ್ ಸಿಂಗ್ಗೆ ವಿಧಿಸಿರುವ ಶಿಕ್ಷೆಯ ಪ್ರಮಾಣವನ್ನು ಇಳಿಸಬೇಕೆಂಬ …

Read More »

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!

ಎರಡು ತಿಂಗಳಲ್ಲೇ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 26 ಮಂದಿ ‘ಬ್ಯಾಂಕಾಕ್‌ ‘ಪ್ರಯಾಣಿಕರನ್ನು ಸೆರೆ ಹಿಡಿದು 112.2 ಕೋಟಿ ರು. ಮೌಲ್ಯದ 1.60 ಕ್ವಿಂಟಲ್‌ ಹೈಡೋ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅದೇ ರೀತಿ 8 ತಿಂಗಳ ಅವಧಿಯಲ್ಲಿ ಚಾಮರಾಜಪೇಟೆಯಲ್ಲಿರುವ ವಿದೇಶಿ ಅಂಚೆ ಕಚೇರಿಯಲ್ಲಿ 20 ಕೋಟಿ ರು. ಮೌಲ್ಯದ ಹೈಡ್ರೋ ಗಾಂಜಾವನ್ನು ಸಿಸಿಬಿ ವಶಪಡಿಸಿಕೊಂಡಿದೆ. ಇನ್ನು ಇತ್ತೀಚೆಗೆ ಬ್ಯಾಂಕಾಕ್‌ನಿಂದ ಅಕ್ರಮವಾಗಿ 18.65 ಕೋಟಿ ರು. ಮೌಲ್ಯದ …

Read More »

ಮೈಸೂರಿನಲ್ಲಿ ‘ರಿಯಲ್ ಎಸ್ಟೇಟ್’ ಉದ್ಯಮಿ ಕಿಡ್ನ್ಯಾಪ್ ಮಾಡಿ 30 ಲಕ್ಷ ಹಣಕ್ಕೆ ಬೇಡಿಕೆ : ನಾಲ್ವರು ಆರೋಪಿಗಳು ಅರೆಸ್ಟ್.!

ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬುವವರನ್ನ ದುಷ್ಕರ್ಮಿಗಳು ಟಾಟಾ ಸುಮೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದರು .ಬಳಿಕ ಪತ್ನಿಗೆ ಕರೆ ಮಾಡಿ ಬರೋಬ್ಬರಿ 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಇದರಿಂದ ಭಯಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಲರ್ಟ್ ಆದ ಪೊಲೀಸರು ಕಾರ್ಯಾಚರಣೆ ನಡೆಸಿ ಮೈಸೂರಿನಿಂದ 50 ಕಿಮೀ ದೂರದಲ್ಲಿ ಆರೋಪಿಗಳನ್ನ ಬಂಧಿಸಿ ಲೋಕೇಶ್ ಅವರನ್ನ ರಕ್ಷಣೆ ಮಾಡಿದ್ದಾರೆ.

Read More »

ಫ್ಯಾಮಿಲಿ ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಓರ್ವನ ಬಂಧನ

ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್​ಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್​ಗಳು ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.ಕಾರಿನೊಳಗೆ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Read More »

ಇಬ್ಬರು ಆರೋಪಿಗಳ ಬಂಧನ; 51 ಕೆ.ಜಿ ಗಾಂಜಾ ವಶ

ಧಾರವಾಡ: ಅಕ್ರಮ ಸ್ಪಿರಿಟ್‌ ಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರು ವಾಸ ಇದ್ದ ಬಾಡಿಗೆ ಮನೆಯಲ್ಲಿ 51.46 ಕೆ.ಜಿ ಗಾಂಜಾ (ಅಂದಾಜು ಮೌಲ್ಯ ₹12.86 ಲಕ್ಷ), ಡಿಜಿಟಲ್ ಮಾಪನ ಯಂತ್ರ ಹಾಗೂ ಮೂರು ಮೊಬೈಲ್‌ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬೆಂಗಳೂರ ನಗರ ಜಿಲ್ಲೆಯ ಆನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ (ಕೆೆಚ್‌ಬಿ ಜಾಗ) 3 ಬಾಡಿಗೆ ಮನೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಾದ ರೋನಿ ಅಲಿಯಾಸ್‌ ರಮೇಶ್‌ ಹಾಗೂ ಜಾನ್‌ ಪೌಲ್‌ …

Read More »

ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ: ಮಹಿಳೆ ಕತ್ತು ಕೊಯ್ದು ಬರ್ಬರ ಹತ್ಯೆ

ಹಾವೇರಿ: ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಕ್ಕಳ ಜೊತೆಗೆ ವಾಸವಾಗಿದ್ದ ಲಲಿತಾ ಕರಬಸಪ್ಪ ಬ್ಯಾಡಗಿ(45) ಕೊಲೆಯಾದವರು ಎಂದು ಹೇಳಲಾಗಿದೆ.ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ರಸ್ತೆಯ ಮನೆಯಲ್ಲಿ ಲಲಿತಾ ಅವರನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿ ಲಲಿತಾ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಣೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Read More »

ರಸ್ತೆಯಲ್ಲಿ ಶವ ಎಸೆದು ಪೊಲೀಸರು ಪರಾರಿ

ಮೀರತ್: ಅಪರಿಚಿತ ಶವವೊಂದರನ್ನು ರಸ್ತೆ ಬದಿಯಲ್ಲೇ ಎಸೆದು ಪೊಲೀಸರೇ ಓಡಿಹೋದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಂಗಡಿಯ ಎದುರು ಶವ ಬಿದ್ದಿರುವುದನ್ನು ನೋಡಿ ಗಾಬರಿಯಾದ ಜನ ಸಿಸಿಟೀವಿ ದೃಶ್ಯಗಳನ್ನು ಗಮನಿಸಿದಾಗ ಪೊಲೀಸರೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.ವಿಡಿಯೋದಲ್ಲಿ ಗುರುತಿಸಲಾದ ಜಿತೇಂದ್ರ ಕುಮಾರ್,ರಾಜೇಶ್ ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಗೃಹರಕ್ಷಕ ರೋಹ್ತಾಶ್ ಅವರನ್ನು ವಜಾಗೊಳಿಸಿದ್ದಾರೆ. ಅಲ್ಲದೆ ಮೃತಪಟ್ಟವನ ಗುರುತಿಸುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More »

ಬಳ್ಳಾರಿ ಜೈಲಿಗೆ ಸಿಮ್‌ ತಂದ ಅಣ್ಣನನ್ನು ನೋಡಲು ಬಂದ ಸಹೋದರ: ಎಫ್‌ಐಆರ್‌

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಅಣ್ಣನನ್ನು ನೋಡಲು ಬಂದಾಗ ಸಿಮ್‌ ಕಾರ್ಡ್‌ ತಂದಿದ್ದ ಆತನ ಸಹೋದರನ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಜೈಲು ನಿಯಮಗಳ ಪ್ರಕಾರ ಸಿಮ್‌ ಕಾರ್ಡ್‌ ನಿಷೇಧಿತ ವಸ್ತು. ಲಿಂಗರಾಜು ವಿರುದ್ಧ ಜೈಲು ಸಿಬ್ಬಂದಿ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Read More »

ರಾಮನಗರ: ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು

ಮುಂದೆ ಹೋಗುತ್ತಿದ್ದ ಹಾಲಿನ ಟ್ಯಾಂಕರ್‌ಗೆ ಹಿಂಬಂದಿಯಿಂದ ಡಿಕ್ಕಿ ಹೊಡೆದ ಕಾರೊಂದು ಕೆಲವೇ ಕ್ಷಣಗಳಲ್ಲೇ ಹೊತ್ತಿ ಉರಿದ ಘಟನೆ ತಾಲ್ಲೂಕಿನ ಸಂಗಬಸವನದೊಡ್ಡಿ ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಕಾರಿನಲ್ಲಿದ್ದವರು ಕೂಡಲೇ ಕೆಳಕ್ಕಿಳಿದು ದೂರಕ್ಕೆ ಹೋಗುವ ಮೂಲಕ ಅಪಾಯದಿಂದ ಪಾರಾಗಿದ್ದಾರೆ.ಮೂರ್ನಾಲ್ಕು ಮಂದಿ ಇದ್ದ ಡಸ್ಟರ್ ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ವೇಗವಾಗಿ ಹೋಗುತ್ತಿದ್ದ ಚಾಲಕ ಸಂಗಬಸವನದೊಡ್ಡಿ ಬಳಿ ನಿಯಂತ್ರಣ ಕಳೆದುಕೊಂಡು ಮುಂದೆ ಹೋಗುತ್ತಿದ್ದ ಹಾಲಿನ ಟ್ಯಾಂಕರ್‌ಗೆ ಗುದ್ದಿದ್ದಾನೆ. ಕೂಡಲೇ …

Read More »