ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 23 ಜನ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್ ಕ್ಲಬ್ ಹೊತ್ತಿ ಉರಿದಿದೆ.ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್ಕ್ಲಬ್ನಲ್ಲಿ …
Read More »ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್’: ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದ್ದು ತಾನು ಪ್ರೀತಿಸಿದ್ದ ಹಿಂದೂ ಯುವತಿ ‘ಮುಸ್ಲಿಂ ಮತಕ್ಕೆ ಮತಾಂತರವಾಗದಿದ್ರೆ ಆಕೆಯನ್ನು ಕೊಂದು 32 ತಂಡು ಮಾಡುತ್ತೇನೆ’ ಎಂದು ಮುಸ್ಲಿಂ ಯುವಕನೋರ್ವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ಬೆಂಗಳೂರಿನ ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ನಿವಾಸಿ ಉಸ್ಮಾನ್ ಎಂಬಾತನ ಮೇಲೆ ಸಂತ್ರಸ್ಥ ಯುವತಿ ಲವ್ ಜಿಹಾದ್ ನ ಗಂಭೀರ ಆರೋಪ ಹೊರಿಸಿದ್ದಾರೆ. ಈ ಸಂಬಂಧ …
Read More »ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾ!
ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರಕ್ಕೆ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆ’ ಎಂದು ಆರೋಪಿಸಿ ದಾಖಲಾಗಿದ್ದ ಎಫ್ಐಆರ್ ಪ್ರಶ್ನಿಸಿ ಅಂದಿನ ಶಾಸಕ ಜಿ.ಮಂಜುನಾಥ್ (ಕೊತ್ತೂರು ಮಂಜುನಾಥ್) ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Read More »Mangaluru: ಉಪ್ಪಿನಂಗಡಿ ನಿವಾಸಿ ನಾಪತ್ತೆ!
ನಗರದ ಪೊಲೀಸ್ ಲೇನ್ ನಲ್ಲಿ ವಾಸವಾಗಿರುವ ಪೊಲೀಸ್ ಅಧಿಕಾರಿಯೊಬ್ಬರ ಮನೆಗೆ ಬಂದಿದ್ದ ಅವರ ಅಣ್ಣ ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ಮೊಹಮ್ಮದ್ ಅಶ್ರಫ್ (49) ಅವರು ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾಗಿರುವ ಅಶ್ರಫ್ 5.4 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಉದ್ದ ತೋಳಿನ ಚೆಕ್ಸ್ ಶರ್ಟ್, ಕಂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕನ್ನಡ, ತುಳು ಹಾಗೂ ಬ್ಯಾರಿ ಭಾಷೆ …
Read More »ನೇಣು ಬಿಗಿದ ಸ್ಥಿತಿಯಲ್ಲಿ ಸ್ತ್ರೀ ರೋಗ ತಜ್ಞೆ; ಪುತ್ರನ ಮೃತದೇಹ ಪತ್ತೆ
ಶಿವಮೊಗ್ಗದ ಸ್ತ್ರೀ ರೋಗ ತಜ್ಞೆ ಮತ್ತು ಅವರ ಪುತ್ರನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿರುವುದಾಗಿ ವರದಿಯಾಗಿದೆ.ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್ (34) ಮೃತಪಟ್ಟವರು.ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Read More »ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!
ಎಂಎನ್ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಆತನ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗುದೆ. ಕೊಳೆತ ಸ್ಥಿತಿಯಲ್ಲಿ ಬಾಡಿಗೆ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಅಂದಾಜು 10 ದಿನಗಳ ಹಿಂದೆಯೇ ಈ ವ್ಯಕ್ತಿ ಸಾವು ಕಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.ಬಸವೇಶ್ವರ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದಾಗ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು 48 ವರ್ಷದ ಯುವರಾಜ್ ಎಂದು ಗುರುತಿಸಲಾಗಿದೆ.
Read More »ಚಿಕ್ಕಬಳ್ಳಾಪುರ :ಬರ್ಬರ ಹತ್ಯೆ: ಪೊಲೀಸ್ ಠಾಣೆ ಬಳಿಯೇ ಕೃತ್ಯ
ಪ್ರೀತಿ-ಪ್ರೇಮದ ವಿಚಾರವಾಗಿ ಆರಂಭವಾದ ಗಲಾಟೆ ಯುವಕನ ಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಪವನ್ (28) ಕೊಲೆಯಾದ ಯುವಕ. ವೃತ್ತಿಯಲ್ಲಿ ಆಟೋ ಚಾಲಕ. ದೊಡ್ದಬಳ್ಳಾಪುರದ ಡಿ ಕ್ರಾಸ್ ಬಳಿಯ ಟಿಬಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು ಹತ್ಯೆ ಮಾಡಿದ್ದಾರೆ. ಯುವತಿಯ ವಿಚಾರವಾಗಿ ಈ ಹಿಂದೆ ನಡೆದಿದ್ದ ಗಲಾಟೆ ದ್ವೇಷಕ್ಕೆ ತಿರುಗಿದ್ದು ಇದೇ ಕಾರಣಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ ಎಂದು ಪವನ್ ಕುಟುಂಬದವರು ಆರೋಪಿಸಿದ್ದಾರೆ.
Read More »ಇಂಡಿಗೋ ರದ್ದು ರಾದ್ಧಾಂತ; ಮತ್ತೆ 400 ಕ್ಕೂ ಹೆಚ್ಚು ವಿಮಾನಗಳು ಕ್ಯಾನ್ಸಲ್!
ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ವಿಮಾನ ರದ್ದು ರಾದ್ಧಾಂತ ಶನಿವಾರ(ಡಿ.6) ಕೂಡ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ದೇಶಾದ್ಯಂತ ಪೈಲಟ್ಗಳ ವಾರದ ವಿಶ್ರಾಂತಿಗೆ ಸಂಬಂಧಿಸಿದಂತೆ ಹೊಸ ನಿಯಮದ ಅನುಷ್ಠಾನವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಾತ್ಕಾಲಿಕವಾಗಿ ಹಿಂಪಡೆದಿರುವ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ.ಇದರಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 124 ವಿಮಾನಗಳು (ಹೊರಡಬೇಕಾಗಿದ್ದ 63 …
Read More »ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಕಾರು ಡಿವೈಡರ್ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಜೀವ ದಹನವಾಗಿದ್ದಾರೆ. ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದ ಅವರ ದೇಹವನ್ನು ಕೈಯಲ್ಲಿದ್ದ ಉಂಗುರ ಮತ್ತು ಕಾರ್ ನಂಬರ್ ಪ್ಲೇಟ್ನಿಂದ ಪತ್ತೆಹಚ್ಚಲಾಗಿತ್ತು.ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆದು ಶವ ಹಸ್ತಾಂತರ ಮಾಡಲಾಯಿತು. ಎತ್ತರದ ಕಟ್ಟುಮಸ್ತಾದ ವ್ಯಕ್ತಿಯಾಗಿದ್ದ ಪಂಚಾಕ್ಷರಿ ಸಾಲಿಮಠ ಅವರ ದೇಹ ಎಷ್ಟು ಮಟ್ಟಿಗೆ ಸುಟ್ಟು ಹೋಗಿತ್ತೆಂದರೆ, ಚಿಕ್ಕ ಮಕ್ಕಳ ಮೃತದೇಹ ಎನ್ನುವಂತೆ …
Read More »ಇಂಡಿಗೋ ಸಮಸ್ಯೆ ಬೆನ್ನಲ್ಲೇ ಏರ್ಲೈನ್ಸ್ಗಳ ಲೂಟಿಗೆ ಬ್ರೇಕ್: ಟಿಕೆಟ್ ದರ ನಿಗದಿಪಡಿಸಿದ ಕೇಂದ್ರ ಸರ್ಕಾರ
ನವದೆಹಲಿ: ಇತ್ತೀಚೆಗೆ ಇಂಡಿಗೋ ವಿಮಾನ ಹಾರಾಟದಲ್ಲಿ ಪದೇ ಪದೇ ವ್ಯತ್ಯಯಗಳುಂಟಾದ ಬೆನ್ನಲ್ಲೇ, ಇತರ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಂದ ಮನಬಂದಂತೆ ಟಿಕೆಟ್ ದರ ವಸೂಲಿಗೆ ಇಳಿದಿದ್ದವು. ಈ ಅಕ್ರಮ ದರ ಹೆಚ್ಚಳದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಕಡಿವಾಣ ಹಾಕಲು ಮುಂದಾದ ಕೇಂದ್ರ ಸರ್ಕಾರ, ವಿಮಾನಯಾನ ಸಂಸ್ಥೆಗಳ ದುಪ್ಪಟ್ಟು ಟಿಕೆಟ್ ದರ ಲೂಟಿಗೆ ತಡೆ ನೀಡಿ, ಏಕರೂಪ ಟಿಕೆಟ್ ದರ ನಿಗದಿಪಡಿಸಿದೆ. ಇಂಡಿಗೋ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





