ಗಂಗೊಳ್ಳಿ: ಆಲೂರು ಗ್ರಾಮದ ಸಂತೋಷ (48) ಅವರು ಆಲೂರು ಗ್ರಾಮದ ದೊಳಬೆ ಎಂಬಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಮನೆಗೆ ನಡೆದುಕೊಂಡು ಹೋಗುವಾಗ ಆವರಣ ಇಲ್ಲದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಅವರ ಸಹೋದರ ರಾಜು ಕುಲಾಲ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
Read More »ಭಾರತದ ಗಡಿಯೊಳಗೆ ನುಸುಳುತ್ತಿದ್ದ ಪಾಕ್ ಪ್ರಜೆ ಅರೆಸ್ಟ್
ಭಾರತದ ಗಡಿಯೊಳಗೆ ನುಸುಳುತ್ತಿದ್ದ ಪಾಕ್ ಪ್ರಜೆಯನ್ನು ಬಿಎಸ್ ಎಫ್ ಸಿಬ್ಬಂದಿ ಬಂಧಿಸಿರುವ ಘಟನೆ ರಾಜಸ್ಥಾನದ ಬಾರ್ಮರ್ ಬಳಿ ನಡೆದಿದೆ.ಹಿಂದಾಲ್ (24) ಬಂದುತ ಆರೋಪಿ. ಪಾಕ್ ಪ್ರಜೆ ದನದ ಕೊಟ್ಟಿಗೆಯಲ್ಲಿ ಅಡಗಿ ಕುಳಿತಿದ್ದ. ಪರಿಶೀಲನೆ ನಡೆಸಿದಾಗ ಬಿಎಸ್ ಎಫ್ ಸಿಬ್ಬಂದಿಗಳಿಗೆ ಸಿಕ್ಕಿ ಬಿದ್ದಿದ್ದಾನೆ.ಆತನನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಬಂಧಿತನ ಬಳಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ಮುಂದುವರೆಸಲಾಗಿದೆ. ಬಂಧಿತ ಪಾಕಿಸ್ತಾನದ ಮಿಥಿ ಜಿಲ್ಲೆಯ ಛಚ್ರೊ …
Read More »ಆಟೋ ರಿಕ್ಷಾದಲ್ಲಿ ಎಂ.ಡಿ.ಎಂ.ಎ. ಪತ್ತೆ; ಇಬ್ಬರ ಬಂಧನ
ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 28.32 ಗ್ರಾಂ ಎಂ.ಡಿ.ಎಂ.ಎ. ಪತ್ತೆ ಹಚ್ಚಿ ಈ ಸಂಬಂಧ ಮುಳಿಯಾರು ಮಾಸ್ತಿಕುಂಡಿನ ಕ್ವಾರ್ಟರ್ಸ್ ನಲ್ಲಿ ವಾಸಿಸುವ ಕೆ.ಉಸ್ಮಾನ್ ಯಾನೆ ಚಾರ್ಲಿ ಉಸ್ಮಾನ್ (43) ಮತ್ತು ಮಧೂರು ಶಿರಿಬಾಗಿಲು ಬದರ್ ಜುಮಾ ಮಸೀದಿ ಸಮೀಪದ ಕುಳತ್ತಿಂಗರ ಹೌಸ್ನ ಎಂ.ಅಬ್ದುಲ್ ರಹ್ಮಾನ್(55)ನನ್ನು ಬಂಧಿಸಿದ್ದಾರೆ.ಶಿರಿಬಾಗಿಲಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪೆರಿಯಡ್ಕ ಭಾಗದಿಂದ ಬಂದ ಆಟೋ ರಿಕ್ಷಾ ನಿಲ್ಲಿಸುವಂತೆ ಸೂಚಿಸಿದರೂ ನಿಲ್ಲಿಸದೆ ಪರಾರಿಯಾಗಿತ್ತು. ಪೊಲೀಸರು ಬೆನ್ನಟ್ಟಿ ಆಟೋ ರಿಕ್ಷಾವನ್ನು ತಡೆದು …
Read More »ಕೆ.ಎಸ್.ಆರ್.ಟಿ.ಸಿ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ
ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸ್ದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳು ನುಜ್ಜುಗುಜ್ಜಾಗಿವೆ.ಅತಿವೇಗ ಹಾಗೂ ನಿರ್ಲಕ್ಷವೇ ಘಟನೆಗೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡಿದ ಘಟನೆಯೂ ನಡೆದಿದೆ.
Read More »ಕೆಂಪೇಗೌಡ ಏರ್ಪೋರ್ಟ್ನಲ್ಲಿ 4 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 4 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್ನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ 11.43 ಕೆ.ಜಿ. ಗಾಂಜಾ ಪತ್ತೆಯಾಗಿದೆ. ಟರ್ಮಿನಲ್ 2ರಲ್ಲಿ ಖಚಿತ ಮಾಹಿತಿ ಮೇರೆಗೆ ಪ್ರಯಾಣಿಕನೊಬ್ಬನನ್ನು ತಪಾಸಣೆ ಮಾಡಿದಾಗ 5 ಕೆ.ಜಿ.ಗಾಂಜಾ ಹಾಗೂ ಮತ್ತೋರ್ವ ಪ್ರಯಾಣಿಕನಿಂದ 6.4 ಕೆ.ಜಿ. ಗಾಂಜಾ ದೊರೆತ್ತಿದೆ. ಒಟ್ಟಾರೆ ಇವುಗಳ ಮೌಲ್ಯ ಅಂದಾಜು 4 ಕೋಟಿ ರೂ. ಆಗಿದೆ. ಆರೋಪಿಗಳನ್ನು …
Read More »ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ; ಆಟೋ ಚಾಲಕ ಅರೆಸ್ಟ್
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ.ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ ಅಡ್ಡಟ್ಟಿ ಎಳೆದಾಟಿ ಹಿಂಸಿಸುತ್ತಿದ್ದನು. ಆಟೋ ಚಾಲಕನ ಕಿರುಕುಳಕ್ಕೆ ಬೇಸತ್ತ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಳು. ಪೋಷಕರು ಆಟೋ ಚಾಲಕನ ವಿರುದ್ಧ ದೂರು ನೀಡಿದ್ದು, ಸದ್ಯ ಆರೋಪಿ ಚಾಲಕನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಮನುಬ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ.
Read More »ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಗರ್ಭಿಣಿ – ಯುವಕ ಅರೆಸ್ಟ್ ; ಪೋಕ್ಸೋ ಪ್ರಕರಣ ದಾಖಲು –
ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಯುವಕನ್ನು ವೇಣೂರು ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ.ಸಂತ್ರಸ್ತ ಬಾಲಕಿ ನೀಡಿರುವ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಮನೆಗೆ ಕರೆದುಕೊಂಡು ಹೋಗಿ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೇಣೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಎರಡೂವರೆ ತಿಂಗಳ ಗರ್ಭವತಿ ಎಂದು ತಿಳಿಸಿದ್ದಾರೆ.
Read More »ಹಿರಿಯೂರು | ರಸ್ತೆ ಅಪಘಾತ ; ಇಬ್ಬರು ಸಾವು
ಕಬ್ಬಿಣ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಹಿಂಡಸ್ಕಟ್ಟೆ ಗ್ರಾಮದ ಬಳಿ ಘಟನೆ ನಡೆದಿದೆ.ಮೃತರನ್ನು ತಿಪಟೂರು ಮೂಲದ ಚಂದನ್ ಗೌಡ(22 ವರ್ಷ) ಕುಮಾರ(17 ವರ್ಷ) ಎಂದು ಗುರುತಿಸಲಾಗಿದೆ.ಕೋಳಿ ಸಾಗಿಸುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಕಬ್ಬಿಣದ ಲಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಬ್ಬಿಣದ ಸರಳುಗಳು ಲಾರಿಯ ಒಳಗೆ ನುಗ್ಗಿದ ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ PSI …
Read More »ನಾಯಿ ಅಡ್ಡ ಬಂದು ಬೈಕ್ ಅಪಘಾತ; ಸವಾರನಿಗೆ ಗಾಯ
ಬೋಳಂತೂರು – ವೀರಕಂಬ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದ ಕಾರಣ ಅಪಘಾತ ಸಂಭವಿಸಿ ಸವಾರ ಬೋಳಂತೂರು ಗ್ರಾಮದ ಉಮೇಶ ಅವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ವೀರಕಂಬದಲ್ಲಿ ಅಪಘಾತ ಸಂಭವಿಸಿದೆ. ಅವರನ್ನು ಕೂಡಲೇ ಶರತ್ ಎಂಬವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಹರೀಶ ನಾಯ್ಕ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »AAP ನಾಯಕನ ಮನೆ ಮೇಲೆ ಗುಂಡಿನ ದಾಳಿ: ಇಬ್ಬರು ಬೈಕ್ ಸವಾರರಿಂದ 23 ಸುತ್ತು ಫೈರಿಂಗ್
ಚಂಡಿಗಢ: ಪಂಜಾಬ್ನ ಕಪುರ್ತಲಾ ಜಿಲ್ಲೆಯ ಫಗ್ವಾರಾ ಪಟ್ಟಣದ ದರ್ವೇಶ್ ಪಿಂಡ್ ಬಳಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಮನೆಯ ಮೇಲೆ ಗುರುವಾರ ಮುಂಜಾನೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಿರುವ ಪೊಲೀಸರು, ಎಎಪಿಯ ಡ್ರಗ್ಸ್ ವಿರುದ್ಧದ ಅಭಿಯಾನದ (ಯುದ್ಧ್ ನಾಶಿಯಾನ್ ವಿರುಧ್) ಫಗ್ವಾರಾ ಸಂಯೋಜಕರಾಗಿರುವ ದಲ್ಜಿತ್ ಸಿಂಗ್ ರಾಜು ಅವರ ಮನೆಯ ಮೇಲೆ ಮುಂಜಾನೆ 1.30 ರ ಸುಮಾರಿಗೆ ಸುಮಾರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





