Breaking News

BigTv News

ಅಪಘಾತದಲ್ಲಿ ಗಾಯಗೊಂಡ ಮಧುವಿಗೆ ಐಸಿಯುನಲ್ಲೇ ತಾಳಿ ಕಟ್ಟಿದ ವರ –

ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು.ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ …

Read More »

ಆಸ್ಪತ್ರೆಯ ವಾರ್ಡ್​ ಒಳಗೆ ಫಿಯಾನ್ಸಿ ಜತೆ ವೈದ್ಯನ ಡ್ಯಾನ್ಸ್

ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಸ್ಪತ್ರೆಯ ವಾರ್​ಡ್​ ಒಳಗೆ ಫಿಯಾನ್ಸಿ ಜತೆ ಡ್ಯುಯೆಟ್ ಹಾಡಿ ಕೆಲಸ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಾ ಆಸ್ಪತ್ರೆಯಲ್ಲಿ ನಡೆದಿದೆ.ಆಸ್ಪತ್ರೆಯ ಕೋಣೆಯಲ್ಲಿ ಇಬ್ಬರೂ ನೃತ್ಯ ಮಾಡಿದ ವಿಡಿಯೋ ವೈರಲ್ ಆದ ಬಳಿಕ ವೈದ್ಯರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆಸ್ಪತ್ರೆ ಆಡಳಿತವು ಸರ್ಕಾರ ಒದಗಿಸಿದ ಅವರ ವಸತಿ ಸೌಕರ್ಯವನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವಿವರವಾದ ವರದಿಯನ್ನು ಸಲ್ಲಿಸಿತು. ಇತ್ತೀಚೆಗೆ ಎರಡು ವರ್ಷಗಳ ಒಪ್ಪಂದದ ಮೇಲೆ …

Read More »

ತುಂಗಾ ನದಿಯಲ್ಲಿ ಸ್ಫೋಟ ಕೇಸ್: ಇಬ್ಬರು ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ ಫೈಜಲ್ ಶಿಕ್ಷೆಗೊಳಗಾದ ಆರೋಪಿಗಳು.ಆರೋಪಿಗಳಿಗೆ 6 ವರ್ಷಗಳ ಜೈಲು ಶಿಕ್ಷೆ ಜೊತೆಗೆ ತಲಾ 59,000 ರೂ. ದಂಡ ಕೂಡ ವಿಧಿಸಲಾಗಿದೆ. 4 ವರ್ಷಗಳ ಹಿಂದೆ ಆರೋಪಿಗಳು ಪ್ರಾಯೋಗಿಕ ಸ್ಫೋಟ ನಡೆಸಿದ್ದರು. ಸ್ವಾತಂತ್ರ‍್ಯ ದಿನಾಚರಣೆ ದಿನ ಹಿಂದೂ ಯುವಕನಿಗೆ ಚಾಕುವಿನಿಂದ ಇರಿದಿದ್ದರು. 2022ರ ಆ.15 ರಂದು ರಾಜಸ್ಥಾನ ಮೂಲದ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದರು. ಜೊತೆಗೆ ಭಾರತದ ಧ್ವಜ ಸುಟ್ಟ ಪ್ರಕರಣ …

Read More »

ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ : CMS ಮಾಜಿ ನೌಕರ ಅರೆಸ್ಟ್ , 5.30 ಕೋಟಿ ಹಣ ಜಪ್ತಿ.!

ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದೆ.ಈತ ಕಾನ್ಸ್ಟೇಬಲ್ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆ ಸ್ಕೆಚ್ ಹಾಕಿದ್ದರು. ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್ ನನ್ನು ಕೂಡ ಬಂಧಿಸಲಾಗಿದೆ. ಅಣ್ಣಪ್ಪ ನಾಯ್ಕ್ ರಾಬರಿ ಮಾಡಲು ಹುಡುಗರ ಗ್ಯಾಗ್ ರೆಡಿ …

Read More »

ರಾಜ್ಯದಲ್ಲಿ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ಹಾವೇರಿಯಲ್ಲಿ ವಿಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣು

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ ಪತಿ ಎಂದು ತಿಳಿದುಬಂದಿದೆ. ಪತ್ನಿ, ಅತ್ತೆ-ಮಾವ ಮತ್ತು ಅವರ ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳಕ್ಕೆ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಮಂಜುನಾಥ್ ವೀಡಿಯೋ ಮಾಡಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಾನಸಿಕವಾಗಿ …

Read More »

ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಕೇಸ್: ಕಿಂಗ್ ಪಿನ್ ರವಿ ಪತ್ನಿ ಪೊಲೀಸರು ಅರೆಸ್ಟ್

ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣದಲ್ಲಿ ಕಿಂಗ್ ಪಿನ್ ರವಿ ಎಂಬುದಾಗಿ ಪೊಲೀಸರು ತನಿಖೆಯಲ್ಲಿ ಪತ್ತೆ ಹಚ್ಚಿದ್ದರು. ಅಲ್ಲದೇ ಬಂಧಿಸಿದ್ದರು. ಈ ಪ್ರಕರಣದಲ್ಲಿ ನಿನ್ನೆ ರಾತ್ರಿ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಪತಿ ರವಿ, 7.11 ಕೋಟಿ ದರೋಡೆ ಕೇಸಲ್ಲಿ ಭಾಗಿಯಾಗಿರೋದನ್ನು ಅವರ ಪತ್ನಿ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ನಾನೇ ಪೊಲೀಸ್ ಠಾಣೆಗೆ ಬರಬೇಕು ಎಂದುಕೊಂಡಿದ್ದೆ. ನೀವೇ ಬಂದ್ರಿ ಎಂದು ಪೊಲೀಸರ ಜೊತೆಗೆ …

Read More »

ಬೆಂಗಳೂರಿನ ವಿಧಾನಸೌಧ ಮುಂದೆ ಪುಂಡಾಟ ಮೆರೆದ 11 ಆರೋಪಿಗಳು ಅರೆಸ್ಟ್

ನಗರದ ಶಕ್ತಿ ಕೇಂದ್ರ ವಿಧಾನಸೌಧದ ಮುಂದೆಯೇ ನೇಪಾಳಿ ಗ್ಯಾಂಗ್ ಪುಂಡಾಟ ಮೆರೆದಿತ್ತು. ಈ ಸಂಬಂಧ 11 ಆರೋಪಿಗಳನ್ನು ಎಡೆಮುರಿಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕಳೆದ ಭಾನುವಾರದಂದು ಬೆಂಗಳೂರಿನ ಹಲವೆಡೆ ತಿರುಗಾಡಿದ್ದಂತ ನೇಪಾಳಿ ಗ್ಯಾಂಗ್, ವಿಧಾನಸೌಧ, ಮೆಟ್ರೋ ನಿಲ್ದಾಣಕ್ಕೂ ಬಂದಿತ್ತು.ಈ ಗ್ಯಾಂಗ್ ಸದಸ್ಯರ ನಡುವೆಯೇ ಗಲಾಟೆಯಾಗಿ, ವಿಧಾನಸೌಧದ ಮುಂದೆಯೇ ಮಾರಾಮಾರಿ ಮಾಡಿಕೊಂಡಿದ್ದರು. ದಿಢೀರ್ ವಿಧಾನಸೌಧದ ಮುಂದೆ ಮಾರಾಮಾರಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದರು. ಗುಂಪು ಚದುರಿಸೋದಕ್ಕೆ ಸ್ಥಳದಲ್ಲಿದ್ದಂತ ಪೊಲೀಸರು ಲಾಠಿ ಬೀಸಿದ್ದರು. ಆ ಬಳಿಕ …

Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ.1 ಕೋರ್ಟ್) 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 65 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.2022 ರಲ್ಲಿ …

Read More »

ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಕಾರು.!

ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ.ಕಾರು ಚಲಾಯಿಸುತ್ತಿದ್ದ ನಿತೇಶ್ (31) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದು (73) ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ದೌಡಾಯಿಸಿದ ಬೈಂದೂರು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಚಿಕ್ಕಮಗಳೂರಿನಲ್ಲಿ 5 ವರ್ಷದ ಬಾಲಕಿಯನ್ನು ಹೊತ್ತೊಯ್ದ ಚಿರತೆ : ಮೃತದೇಹ ಪತ್ತೆ.!

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ.ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ.ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದ್ದು, ಸದ್ಯ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿಯನ್ನು ಚಿರತೆ ಹೊತ್ತೊಯ್ದಿದಿತ್ತು. ಇದೀಗ ಪೊಲೀಸರು ಮತ್ತು ಅರಣ್ಯಇಲಾಖೆ …

Read More »