Breaking News

BigTv News

ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು: ಜಿಂಕೆಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರೆದಿದೆ. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.ಬೆಳಗಾವಿಯ ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನವೆಂಬರ್ 13 ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು.ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವು ಮೃಗಾಲಯದಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ …

Read More »

ಶಾಲೆಗೆ 10 ನಿಮಿಷ ತಡವಾಗಿ ಬಂದಿದ್ದಕ್ಕೆ 100 ಸಿಟಪ್ಸ್ ಶಿಕ್ಷೆ, 6ನೇ ತರಗತಿ ವಿದ್ಯಾರ್ಥಿನಿ ಸಾವು

ಮಕ್ಕಳ ದಿನಾಚರಣೆಯಂದು ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ ನೀಡಿದ ಕಠಿಣ ಶಿಕ್ಷೆಯಿಂದಾಗಿ ಆರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಮಹಾರಾಷ್ಟ್ರದ ವಸೈನಲ್ಲಿರುವ ಶ್ರೀ ಹನುಮಂತ್ ವಿದ್ಯಾಮಂದಿರ ಪ್ರೌಢಶಾಲೆಯಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.ಕಾಜಲ್ ಗೊಂಡ್ ಮೃತ ಬಾಲಕಿ. ಆರನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ. ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ 100 ಸಿಟಪ್ಸ್ ಮಾಡಲು ಹೇಳಿದ್ದರು. ಶಿಕ್ಷೆ ಮುಗಿದ ನಂತರ ವಿದ್ಯಾರ್ಥಿನಿ ಬೆನ್ನು ನೋವಿನ ಬಗ್ಗೆ ದೂರು ನೀಡಿದ್ದಳು. ನಂತರ ಕುಸಿದು …

Read More »

ಕೆಎಸ್‌ಆರ್‌ಟಿಸಿ ಬಸ್ ಹರಿದು ಬಾಲಕಿ ದೇಹ ಛಿದ್ರ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮಧ್ಯಾಹ್ನ ಸಂಭವಿಸಿದ ಹೃದಯವಿದ್ರಾವಕ ಘಟನೆಯೊಂದರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಕೇವಲ ಎರಡು ವರ್ಷದ ಬಾಲಕಿ ಲಕ್ಷ್ಮೀ ದುರ್ಮರಣಕ್ಕೀಡಾಗಿದ್ದಾಳೆ.ಪರಸಪ್ಪ ಎಂಬವರ ಪುತ್ರಿ ಲಕ್ಷ್ಮೀ ಮೃತ ಮಗು.ಸ್ಥಳೀಯರ ಪ್ರಕಾರ, KA 33 F 0346 ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್‌ ಕೂಡಲಗಿ ಗ್ರಾಮದಿಂದ ಸುರಪುರ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಗು ಅಂಗಳದ ಬಳಿ ಆಟವಾಡುತ್ತಾ ರಸ್ತೆಬದಿ ಬಂದ ಕ್ಷಣದಲ್ಲಿ ಅವಘಡ ಸಂಭವಿಸಿದೆ. ಬಸ್‌ನ …

Read More »

12 ತಾಸಿನ ಒಳಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮತ್ತೆ ಮೂವರ ಸಾವು

ಬಿ.ಸಿ. ರೋಡ್ ಪರಿಸರದಲ್ಲಿ ಇಂದು ಮುಂಜಾನೆ ಇನ್ನೋವಾ ವಾಹನ ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ ಘಟನೆ ಬೆನ್ನಿಗೇ ಮಂಗಳೂರು ನಗರದ ಹೊರವಲಯ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.ಈ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ನಡೆದಿದೆ. ಮೃತ ದುರ್ದೈವಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿದ್ದ ಸಂದರ್ಭ ಟ್ಯಾಂಕರ್ ಬಂದು ಮುಂದಿನ …

Read More »

ಚೆಕ್‌ಪೋಸ್ಟ್ ನಲ್ಲಿ ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆ

ಚೆಕ್‌ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ಬೆಳಕಿಗೆ ಬಂದಿದೆ.ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ಹರಿಯಾಣ ಮೂಲದ ನಾನ್ಕಿದೇವಿ (47) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ರಾತ್ರಿ ಲಿಂಗಾಪುರ …

Read More »

ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!

ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ.ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಬಾಗಲಕೋಟೆಯ ತುಳಸಿಗಿರಿ ಗುಡ್ಡದಲ್ಲಿ ಈ ಒಂದು ಹಲ್ಲೆ ನಡೆದಿದೆ. ಗೂಡ್ಸ್ ವಾಹನದ ಚಾಲಕ ಪ್ರಕಾಶ್ ಮೇಲೆ ಮಾಲೀಕ ಯಂಕಪ್ಪ ಮನಬಂದಂತೆ ಥಳಿಸಿದ್ದಾನೆ. ಯಂಕಪ್ಪ …

Read More »

ತುಮಕೂರಿನಲ್ಲಿ ಮತ್ತೆ ನೆತ್ತರಕೋಡಿ: ರೌಡಿಗಳ ಬೀದಿ ಜಗಳದಲ್ಲಿ ಓರ್ವ ಸಾವು, ಇನ್ನೊಬ್ಬ ಗಂಭೀರ!

ಸಾಮಾನ್ಯವಾಗಿ ಶಾಂತವಾಗಿದ್ದ ತುಮಕೂರು ನಗರದಲ್ಲಿ ಮತ್ತೆ ರೌಡಿಗಳ ಮಚ್ಚು ಮತ್ತು ಲಾಂಗ್‌ಗಳ ಅಬ್ಬರ ಮರುಕಳಿಸಿದ್ದು, ನೆತ್ತರ ಕೋಡಿಯೇ ಹರಿದಿದೆ. ಈ ಮಾರಣಾಂತಿಕ ದಾಳಿಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ನಡೆದಿದ್ದು, ಓರ್ವ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮತ್ತೊಬ್ಬನ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಲಾಗಿದೆ.ದಾಳಿಗೊಳಗಾದವರಲ್ಲಿ 28 ವರ್ಷದ ಅಭಿ ಅಲಿಯಾಸ್ ‘ಟಿಬೆಟ್’ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಗಾಯಗೊಂಡ ಮತ್ತೊಬ್ಬ ವ್ಯಕ್ತಿ, 32 ವರ್ಷದ ಮನೋಜ್ ಅಲಿಯಾಸ್ ‘ಪ್ಯಾಚ್’ …

Read More »

ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ

ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ …

Read More »

ಮಂಗಳೂರಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ : ಆಟೋ ಚಾಲಕ ಸೇರಿ ಮೂವರು ಸ್ಥಳದಲ್ಲಿ ಸಾವು

ದಕ್ಷಿಣಕನ್ನಡ : ಇಂದು ಬೆಳಿಗ್ಗೆ ತಾನೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಆಟೋರಿಕ್ಷ ಚಾಲಕ ಹಾಗೂ ಇಬ್ಬರು …

Read More »

ನೇಜಾರು ಹತ್ಯೆ ಪ್ರಕರಣ | ಹಸೀನಾರ ಸಹೋದರರಿಂದ ಸಾಕ್ಷ್ಯ: ವಿಚಾರಣೆ, ಪಾಟಿಸವಾಲು

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಮತ್ತೆ ಇಬ್ಬರು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಇಂದು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಡೆಯಿತು. ಮೃತ ಹಸಿನಾರ ಅಣ್ಣ, ದೂರುದಾರೆ ಐಫಾ, ಕೊಲೆ ನಡೆದಾಗ ಮೊದಲು ಕರೆ ಮಾಡಿದ ತಿಳಿಸಿದ ನೇಜಾರಿನ ಅಶ್ಫಾಕ್ ಹಾಗೂ ಮೃತರ ಮನೆಯ ಸಮೀಪದಲ್ಲೇ ಇರುವ ದೂರುದಾರೆ ಐಫಾ ಅವರ ತಂದೆ, ಮೃತರ ಹಿರಿಯ ಸಹೋದರ ಆಯುಬ್ …

Read More »