Breaking News

BigTv News

ಪ್ರೀತಿಸಿ ಮದುವೆಯಾದ ಜೋಡಿಗೆ ಪೊಲೀಸರೇ ವಿಲನ್ – ಕಟ್ಟಿದ್ದ ತಾಳಿ ಬಿಚ್ಚಿಸಿ ಕಿರುಕುಳ?

ತುಮಕೂರು: ಪ್ರೀತಿಸಿ ಮದುವೆಯಾದ ನವಜೋಡಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಯುವತಿಯ ಪೋಷಕರೊಂದಿಗೆ ಸೇರಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಮಧುಗಿರಿಯಲ್ಲಿ ಕೇಳಿಬಂದಿದೆ. ರಾಕೇಶ್ ಹಾಗೂ ಗಾನಶ್ರೀ ಪರಸ್ಪರ ಪ್ರೀತಿಸಿ, ಜುಲೈ 9ರಂದು ಗೊರವನಹಳ್ಳಿ ಲಕ್ಷ್ಮಿ ದೇವಾಲಯದಲ್ಲಿ ಮದುವೆಯಾಗಿದ್ದರು. ಮದುವೆ ವಿಷಯ ತಿಳಿದ ಯುವತಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ವೇಳೆ ಎಎಸ್‌ಐ ಹನುಮಂತರಾಯಪ್ಪ ಹಾಗೂ ಹೆಡ್ ಕಾನ್‌ಸ್ಟೇಬಲ್ ಶಿವಣ್ಣ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಹಾಗೂ ಮರುಮದುವೆ ಮಾಡಿಸುವುದಾಗಿ …

Read More »

ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡರ ಅಟ್ಟಹಾಸ; 8 ಮಂದಿಗೆ ಹಲ್ಲೆ, ಆರೋಪಿಗಳಿಗಾಗಿ ಖಾಕಿ ಶೋಧ!

ಬೆಂಗಳೂರು: ಉತ್ತರಹಳ್ಳಿ ಅರಹಳ್ಳಿ ಗೇಟ್ ಬಳಿ ರಾತ್ರಿ ಮಾರಕಾಸ್ತ್ರ ಹಿಡಿದು ಬಂದ ಆರು ಮಂದಿ ದುಷ್ಕರ್ಮಿಗಳು ನಡುರಸ್ತೆಯಲ್ಲಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ಮೂರು ಬೈಕ್‌ಗಳಲ್ಲಿ ಮಾಸ್ಕ್ ಧರಿಸಿ ಬಂದ ಆರೋಪಿಗಳು ಲಾಂಗು, ಮಚ್ಚು ಹಿಡಿದು ಅಂಗಡಿ ಮುಂದೆ ನಿಂತಿದ್ದವರ ಮೇಲೆ ದಾಳಿ ಮಾಡಿ ಬಳಿಕ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮೀನು ಅಂಗಡಿ ಮಾಲೀಕ ಬಾಲಸುಬ್ರಹ್ಮಣ್ಯಂ ಹಾಗೂ ರವಿ ಗಾಯಗೊಂಡಿದ್ದಾರೆ. ರವಿ ಅವರ ಕಿವಿ ಮತ್ತು ಕೈಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು …

Read More »

ಯುವತಿಯ ಅಶ್ಲೀಲ ಚಿತ್ರ ವೈರಲ್ ಮಾಡುವ ಬೆದರಿಕೆ: ಚಿನ್ನಾಭರಣ ಎಗರಿಸಿದ ಯುವಕ

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಯುವತಿಗೆ ಅಶ್ಲೀಲ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದ ಆರೋಪದ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತ ಯುವತಿಯ ಮೊಬೈಲ್ ಸಂಖ್ಯೆ ಪಡೆದು, ಬಳಿಕ ಅಶ್ಲೀಲ ಚಿತ್ರಗಳನ್ನು ಪಡೆದಿದ್ದಾನೆ ಎನ್ನಲಾಗಿದೆ. ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಚಿನ್ನ ನೀಡುವಂತೆ ಒತ್ತಾಯಿಸಿದ್ದಾನೆ. ಬಳಿಕ ತನ್ನ ಸ್ನೇಹಿತನ ಮೂಲಕ ಯುವತಿ …

Read More »

ಗಣಪತಿ ವಿಸರ್ಜನೆ ವೇಳೆ ಯುವಕರ ನಡುವೆ ಗಲಾಟೆ, ಓರ್ವ ಸಾವು!

ತುಮಕೂರು: ಗಣೇಶ ವಿಸರ್ಜನೆ ವೇಳೆ ನಡೆದ ಜಗಳ ವಿಕೋಪಕ್ಕೆ ತಿರುಗಿ 17 ವರ್ಷದ ಸಿಂಹಾದ್ರಿ ಮೃತಪಟ್ಟ ಘಟನೆ ಮಧುಗಿರಿ ತಾಲೂಕಿನ ಕಾಸಪುರ ಗ್ರಾಮದಲ್ಲಿ ನಡೆದಿದೆ. ಬಂಡೆಗುಂಡ ಮಾರುತೇಶ್ (24) ಕೃತ್ಯವೆಸಗಿದ ಆರೋಪಿಯಾಗಿದ್ದಾನೆ. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮಾರುತೇಶ್ ಹಾಗೂ ಸಿಂಹಾದ್ರಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದೆ. ಈ ವೇಳೆ ಮಾರುತೇಶ್ ಸಿಂಹಾದ್ರಿಯನ್ನು ಜೋರಾಗಿ ತಳ್ಳಿದ್ದು, ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. …

Read More »

ನಿಪ್ಪಾಣಿ | ಅಭಿಷೇಕ ಬಾಮನೆ ಕೊಲೆ ಪ್ರಕರಣ: ಇಬ್ಬರ ಬಂಧನ

ನಿಪ್ಪಾಣಿ: ನಗರದಲ್ಲಿ ನಡೆದ ಅಭಿಷೇಕ ಬಾಮನೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಸಾಯಿನಾಥ ಅಲಿಯಾಸ್ ಶುಭಂ ಬಾಮನೆ ಹಾಗೂ ವಿಠ್ಠಲ ಬಾಮನೆ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನೂ ವಶಕ್ಕೆ ಪಡೆದು ಬಾಲಾಪರಾಧಿಗಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಅಭಿಷೇಕ ಹಾಗೂ ಆರೋಪಿಗಳ ನಡುವೆ ಜಗಳ ನಡೆದ ವೇಳೆ ಸಾಯಿನಾಥ ಚಾಕುವಿನಿಂದ ಅಭಿಷೇಕನ ಹೊಟ್ಟೆಗೆ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದರು. …

Read More »

ಮಧುಗಿರಿ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ದಲಿತ ಬಾಲಕನ ಕೊಲೆ

ಮಧುಗಿರಿ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ 17 ವರ್ಷದ ಸಿಂಹಾದ್ರಿ ಎಂಬ ಬಾಲಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದ ಘಟನೆ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುತೇಶ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ದೂರಿನ ಪ್ರಕಾರ, ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಂಹಾದ್ರಿಗೆ ಆರೋಪಿ ಜಾತಿ ನಿಂದನೆ ಮಾಡಿ ಕಪಾಳಕ್ಕೆ ಹೊಡೆದು, ಬಳಿಕ ಕಲ್ಲಿನಿಂದ ಎದೆಗೆ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು …

Read More »

ಗಣೇಶ ಮೂರ್ತಿ ಮುಂದೆ ದೀಪ ಕಾಯುತ್ತಿದ್ದ 13 ವರ್ಷದ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ: ಮುಂದೇನಾಯ್ತು?

ಗಂಗಾವತಿ: ಗಣೇಶ ಮೂರ್ತಿಯ ಮುಂದೆ ಹಚ್ಚಿದ್ದ ದೀಪವನ್ನು ಕಾಯುತ್ತಿದ್ದ 13 ವರ್ಷದ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆರೋಪದ ಘಟನೆ ಗಂಗಾವತಿಯ ಮುಜಾವರ ಕ್ಯಾಂಪಿನಲ್ಲಿ ನಡೆದಿದೆ. ಮಹ್ಮದ್ ರಿಯಾಜ್ ರಫೀಕ್ ಸಾಬ್ (13) ತೀವ್ರವಾಗಿ ಗಾಯಗೊಂಡಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಜಾವರ ಕ್ಯಾಂಪಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ದೀಪ ಕಾಯಲು ರಿಯಾಜ್‌ನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಈ ವೇಳೆ ಸಂತೋಷ (20) ಎಂಬ …

Read More »

ಬೆಂಗಳೂರಲ್ಲಿ ಸುಟ್ಟ ಸ್ಥಿತಿಯಲ್ಲಿ ‘KSRP’ ಕಾನ್ಸ್ಟೇಬಲ್ ಶವ ಪತ್ತೆ : ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ!

ಬೆಂಗಳೂರು: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಹಳ್ಳಿ ಗೇಟ್ ಬಳಿ ಸುಟ್ಟ ಸ್ಥಿತಿಯಲ್ಲಿ ಕೆಎಸ್‌ಆರ್‌ಪಿ ಕಾನ್ಸ್ಟೇಬಲ್ ಶವ ಪತ್ತೆಯಾಗಿದೆ. ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ಕುಮಾರ್ (35) ಎಂದು ಗುರುತಿಸಲಾಗಿದೆ. ನವೀನ್ ಬೈಕ್‌ನಲ್ಲಿ ಡಿ.ಶೆಟ್ಟಹಳ್ಳಿಗೆ ಬಂದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ನಂದಗುಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, …

Read More »

ಬೆಂಗಳೂರಿನಲ್ಲಿ ಹೋಟೆಲ್​ ಬಳಿ ಬಂದು ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ

ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಬಳಿಯ ಹೋಟೆಲ್ ಮುಂದೆ ನಿಂತಿದ್ದ ಆಡಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ 2.30ರ ಸುಮಾರಿಗೆ KA51 MG 9786 ನೋಂದಣಿ ಸಂಖ್ಯೆಯ ಕಾರು ಹೋಟೆಲ್ ಬಳಿ ಬಂದು ನಿಂತಿತ್ತು. ಬೆಳಗ್ಗೆ ಹೋಟೆಲ್ ಸಿಬ್ಬಂದಿ ಕಾರಿನಲ್ಲಿದ್ದ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ಪತ್ತೆಯಾಗಿದೆ. ಮೃತರನ್ನು ಅಕ್ಬರ್ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ …

Read More »

ವಿಜಯಪುರ: ಪೆಟ್ರೋಲ್‌ ಬಂಕ್‌ ಮಾಲೀಕನಿಂದ ಗುಂಡಿನ ದಾಳಿ

ವಿಜಯಪುರ: ಕೊಲ್ಹಾರ ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಪೆಟ್ರೋಲ್ ಬಂಕ್ ಮಾಲೀಕ ಸಂಗಪ್ಪ ಪೂಜಾರಿ (48) ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಸುಖದೇವ್ ಚಲವಾದಿ (30) ಹಾಗೂ ರಾಜು ಚಲವಾದಿ (40) ಬಂಕ್‌ಗೆ ತೆರಳಿದ್ದ ವೇಳೆ ಜಗಳ ನಡೆದಿದೆ ಎನ್ನಲಾಗಿದೆ. ಜಗಳದ ವೇಳೆ ಸಂಗಪ್ಪ ಪರವಾನಗಿ ಹೊಂದಿರುವ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು, ಸುಖದೇವ್ ಅವರ ಹೊಟ್ಟೆ ಹಾಗೂ ಬೆನ್ನಿಗೆ ಎರಡು ಗುಂಡುಗಳು ತಗುಲಿವೆ. ಗಾಯಗೊಂಡ ಅವರನ್ನು ವಿಜಯಪುರ …

Read More »