ಉದ್ಯಾನನಗರಿ ಬೆಂಗಳೂರಿನಲ್ಲಿ 25 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾಳೆ. ಆಕೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯನ್ನು ದಾವಣಗೆರೆ ಮೂಲದ ಸುಪ್ರಿಯಾ ಎಂದು ಗುರುತಿಸಲಾಗಿದೆ.ಎಂಬಿಎ ವ್ಯಾಸಂಗ ಮಾಡಿದ್ದ ಸುಪ್ರಿಯಾ ಬೈಕ್ ರೈಡಿಂಗ್ ತರಬೇತಿ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.ಗಾಯತ್ರಿನಗರದ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ಸುಪ್ರಿಯಾ ವಾಸವಿದ್ದರು. ಕಳೆದ ಎರಡು ದಿನಗಳಿಂದ ಆಕೆ ವಾಸವಾಗಿದ್ದ ರೂಮ್ ಲಾಕ್ ಆಗಿತ್ತು. ಈ ಬಗ್ಗೆ ಅನುಮಾನಗೊಂಡ ಮನೆಯ …
Read More »ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ
ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ.ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿಯಲ್ಲಿ ಕೊಟ್ಟಿ ನೌಫಾಲ್ ಕೊಲೆ ಮಾಡಲಾಗಿದೆ. ನೌಫಾಲ್, ಫರಂಗಿಪೇಟೆ ಜೋಡಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದನು.ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ. ಮಂಗಳಿನ ಫೈಸಲ್ ನಗರದ ನಿವಾಸಿ ಟೋಪಿ ನೌಫಾಲ್ ಆಗಿದ್ದನು. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …
Read More »ಆಗಷ್ಟೇ ಹುಟ್ಟಿದ ಮಗುವನ್ನು ಕಸದ ಪೊಟ್ಟಣದಂತೆ ರಸ್ತೆ ಪಕ್ಕ ಎಸೆದು ಹೋದ ಪಾಪಿಗಳು!
ಆ ಮಗು ಹುಟ್ಟಿ ಕೆಲವೇ ಗಂಟೆಗಳಾಗಿರಬಹುದು ಅಷ್ಟೇ. ಆದರೆ, ಹುಟ್ಟಿದ ಮಗುವಿಗೆ ಭೂಮಿಯ ಮೇಲೆ ಬದುಕುವ ಅದೃಷ್ಟವಿರಲಿಲ್ಲ. ಯಾಕೆಂದರೆ, ಆಕೆ ಪಾಪಿಗಳ ಕುಟುಂಬದಲ್ಲಿ ಹುಟ್ಟಿದ್ದಳು. ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ನಡೆದ ಅಮಾನುಷ ಘಟನೆಯಲ್ಲಿ ಆಗಷ್ಟೇ ಹುಟ್ಟಿದ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ಕಸದ ಪೊಟ್ಟಣ ಎಸೆಯುವಂತೆ ರಸ್ತೆ ಬದಿ ಎಸೆದು ಹೋಗಿರುವ ಘಟನೆ ನಡೆದಿದೆ.ಜನಿಸಿದ ಕೆಲವೇ ಗಂಟೆಗಳಲ್ಲಿ ನವಜಾತ ಹೆಣ್ಣು ಶಿಶು ಬೀದಿ ಹೆಣವಾಗಿದೆ. ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ …
Read More »ತಾಂಜಾನಿಯಾದಲ್ಲಿ ಚುನಾವಣೆ ವೇಳೆ ಹಿಂಸಾಚಾರ – 700 ಮಂದಿ ಸಾವು, ಕರ್ಪ್ಯೂ ಜಾರಿ!
ದೇಶದ ಮೊದಲ ಮಹಿಳಾ ಅಧ್ಯಕ್ಷೆ ಸಮಿಯಾ ಸುಲುಹು ಹಸನ್ ಬುಧವಾರ (ಅಕ್ಟೋಬರ್ 30) ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಸಮಯದಲ್ಲಿ ಪ್ರತಿಭಟನೆಗಳು ಆರಂಭವಾದವು.ಚುನಾವಣಾ ಅವ್ಯವಸ್ಥೆ ನಿರಂತರವಾಗಿ ಮುಂದುವರೆದಿದೆ. ಮೂರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 700 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.ಬೀದಿಗಿಳಿದ ಗುಂಪುಗಳನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ಇಂಟರ್ನೆಟ್ ಸ್ಥಗಿತ ಮತ್ತು ಕರ್ಫ್ಯೂಗಳನ್ನು ಹೇರಿದೆ. ಈ ನಿರ್ಧಾರ ಇಡೀ ದೇಶವನ್ನು ಯುದ್ಧಭೂಮಿಯನ್ನಾಗಿ ಮಾಡಿವೆ.
Read More »ಅಜ್ಜನ ಮನೆಯಲ್ಲಿ ಕಸದ ಬುಟ್ಟಿಯಲ್ಲಿ ಸಿಕ್ಕ ಕೋಟಿ ಮೌಲ್ಯದ ಷೇರು ಪ್ರಮಾಣಪತ್ರ – ಅಪ್ಪ ಮಗನ ನಡುವೆ ಗಲಾಟೆ.
ಅಜ್ಜನ ಮನೆಯಲ್ಲಿರುವ ಕಸದ ಬುಟ್ಟಿಯಲ್ಲಿ ಮೊಮ್ಮಗನಿಗೆ ಕೋಟಿ ಮೌಲ್ಯದ ಷೇರುಗಳ ಪ್ರಮಾಣ ಪತ್ರ ಸಿಕ್ಕಿದೆ. ಇದೀಗ ಅಪ್ಪ ಮತ್ತು ಮಗನ ನಡುವೆ ಗಲಾಟೆಗೆ ಕಾರಣವಾಗಿದ್ದು, ಕೋರ್ಟ್ ಮೆಟ್ಟಿಲೇರಿದೆ.ಅದನ್ನು ಪರಿಶೀಲನೆ ನಡೆಸಿದ ವೇಳೆ ಅವುಗಳು ಷೇರುಗಳ ಪ್ರಮಾಣ ಪತ್ರ ಎಂದು ತಿಳಿದು ಬಂದಿದ್ದು, ಈಗಿನ ಮಾರುಕಟ್ಟೆಯಲ್ಲಿ ಅದರ ಬೆಲೆ ಬರೋಬ್ಬರ 2.5 ಕೋಟಿ ಎಂದು ತಿಳಿದು ಬಂದಿದೆ.ಇದು ಕುಟುಂಬದೊಳಗೆ ವಿವಾದಕ್ಕೆ ಕಾರಣವಾಗಿದೆ. ಷೇರು ಪ್ರಮಾಣಪತ್ರಗಳು ಷೇರುಗಳ ಮಾಲೀಕತ್ವವನ್ನು ಸಾಬೀತುಪಡಿಸಲು ಮೊದಲು ನೀಡಲಾದ …
Read More »ಬೆಳಗಾವಿ| ಡಿಸೇಲ್ ಸೋರಿಕೆ, ಕೆಟ್ಟುನಿಂತ ಕವಾಯತು ವಾಹನ: ಸಚಿವರ ಪರಿವೀಕ್ಷಣೆ ರದ್ದು.
ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅದ್ಧೂರಿ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪರೇಡ್ ವೀಕ್ಷಣೆಗೆ ತೆರಳುವ ಜೀಪ್ ಡಿಸೇಲ್ ಸೋರಿಕೆಯಿಂದ ಸ್ಥಗಿತಗೊಂಡಿತು. ಸಂಭವನೀಯ ಅನಾಹುತ ತಪ್ಪಿತು.ಧ್ವಜಾರೋಹಣ ಬಳಿಕ ಪರೇಡ್ ವೀಕ್ಷಣೆಗೆ ಹೋಗುವಾಗ ಸಚಿವ ಜೀಪ್ ಏರುವ ಮುನ್ನ ಡಿಸೇಲ್ ಸೋರಿಕೆಯಾಯಿತು. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ಹೊತ್ತದಂತೆ ಫೈಯರ್ ಕಂಟ್ರೋಲ್ ಗ್ಯಾಸ್ ಸಿಂಪಡಿಸಿ, ಜೀಪ್ ತಳ್ಳಿಕೊಂಡು ಮೈದಾನದಿಂದ ಹೊರ ತೆಗೆದುಕೊಂಡು ಹೋದರು.
Read More »RSS ಪಥಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಭೀಮ್ ಆರ್ಮಿ ಮುಖಂಡನ ಕಾರ್ ಗೆ ತಡರಾತ್ರಿ ದುಷ್ಕರ್ಮಿಗಳಿಂದ ಬೆಂಕಿ.
ಆರ್ಮಿ ಮುಖಂಡನ ಕಾರ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆಯ ಬಳಿ ನಡೆದಿದೆ.ತಡರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಭೀಮ್ ಆರ್ಮಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಅವರ ಕಾರ್ ಗೆ ಬೆಂಕಿ ಹಚ್ಚಲಾಗಿದೆ.ಆರ್.ಎಸ್.ಎಸ್. ಪಥಸಂಚಲನ ವಿರುದ್ಧದ ಹೋರಾಟದ ಮುಂದಾಳತ್ವ ವಹಿಸಿದ್ದ ಸತೀಶ್ ಅವರ ಕಾರ್ ಗೆ ಬೆಂಕಿ ಹಚ್ಚಲಾಗಿದೆ. ಕುಮ್ಮಕ್ಕಿನಿಂದ ಕಾರ್ ಗೆ ಬೆಂಕಿ …
Read More »ಬೆಂಗಳೂರಿನಲ್ಲಿ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ : 35 ಯುವತಿಯರು ಸೇರಿ 115 ಜನರು ವಶಕ್ಕೆ.!
ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ದಾಳಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ.
Read More »ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ
ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದೆ. ನಸುಕಿನ ಜಾವ, ಮಧ್ಯಾಹ್ನ, ಸಂಜೆ ಭೂಮಿ ಕಂಪಿಸಿದೆ.ಪದೇ ಪದೇ ಭೂಕಂಪನ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.ಅದೇ ರೀತಿ ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ 10 ಗಂಟೆ 5 ನಿಮಿಷದ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದೆ. …
Read More »ಟಿಪ್ಪರ್ ನಿಂದ ಕಲ್ಲು ಬಿದ್ದು, ಮಹಿಳಾ ಪೇದೆಗೆ ಗಾಯ; ಪ್ರಾಣಾಪಾಯದಿಂದ ಪಾರು
ಪೆರೇಸಂದ್ರ ಠಾಣೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುವ ವೇಳೆ, ರೇಣುಮಾಕಲಹಳ್ಳಿ ಕೆರೆ ಕಟ್ಟೆಯ ಸಮೀಪ ಟಿಪ್ಪರ್ ನಿಂದ ಕಲ್ಲು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳಾ ಪೊಲೀಸ್ ಪೇದೆಗೆ ಬಿದ್ದ ಪರಿಣಾಮ ತಲೆ ಮತ್ತು ಕಾಲಿಗೆ ಗಾಯಗಳಾಗಿ, ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ನಡೆದಿದೆ.ಹಸೀನ ಎಂಬ ಮಹಿಳಾ ಪೊಲೀಸ್ ಪೇದೆ ಕರ್ತವ್ಯ ಮುಗಿಸಿಕೊಂಡು, ಸ್ವಗ್ರಾಮವಾದ ತಾಲೂಕಿನ ಭತ್ತಲಹಳ್ಳಿ ಗ್ರಾಮಕ್ಕೆ ವಾಪಸ್ಸು ಆಗುವ ವೇಳೆ, ಎದುರುನಿಂದ ಹೋಗುತ್ತಿದ್ದ ಟಿಪ್ಪರ್ ಲಾರಿಯ ಮೇಲೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





