Breaking News

BigTv News

ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ವಿಷ ಸೇವಿಸಿದ ಗ್ರಾಮ ಪಂಚಾಯಿತಿ ನೌಕರ

ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಪರಮಾನಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ರಂಜುಣಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪರಮಾನಂದ ಅಸ್ವಸ್ಥರಾಗಿದ್ದಾರೆ. ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಕೆಲವರ ಮಾತು ಕೇಳಿ ಪಿಡಿಒ ಕೆಲಸದಿಂದ ತೆಗೆದಿದ್ದಾರೆ. ಯಾವುದೇ ನೋಟಿಸ್ ನೀಡದೆ ಕೆಲಸದಿಂದ ತೆಗೆದಿದ್ದಾರೆ ಎಂದು ಆರೋಪಿಸಲಾಗಿದೆ. ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪರಮಾನಂದನಿಗೆ ಚಿಕಿತ್ಸೆ …

Read More »

ನೇಣು ಹಾಕಿಕೊಂಡು ಬಾಲಕ ಆತ್ಮಹತ್ಯೆ

ಬಾಲಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಪುನರ್ವಸತಿ ಕೇಂದ್ರದಲ್ಲಿ ಘಟನೆ ನಡೆದಿದೆ. ಆಕಾಶ್ ಹೆದ್ದಾರಿ (15) ಮೃತಪಟ್ಟ ದುರ್ದೈವಿ.ಮೃತ ಆಕಾಶ್ ಜಮಖಂಡಿಯ ಡಿಸ್ಟಿಕ್ ಬಂಜಾರ ಎಜುಕೇಶನ್ ಸೋಸೈಟಿ ಹೈಸ್ಕೂಲ್‌ನಲ್ಲಿ ಒಂಬತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.ಇಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆಯ ಮಾಹಿತಿ ದೊರಕಿದ ಕೂಡಲೇ ಜಮಖಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನೈಜ ಕಾರಣ …

Read More »

ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಮ್ಯಾನ್ ಹೋಲ್ ಗೆ ಇಳಿದಿದ್ದ ಮೂವರು ಕಾರ್ಮಿಕರು ಅಸ್ವಸ್ಥ.

ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಅಧಿಕಾರಿಗಳು ಮ್ಯಾನ್ ಹೋಲ್ ಸ್ವಚ್ಛತಾ ಕಾರ್ಯಕ್ಕೆ ಮೂವರು ಕಾರ್ಮಿಕರನ್ನು ಮ್ಯಾನ್ ಹೋಲ್ ಗೆ ಇಳಿಸಿದ್ದರು. ಮ್ಯಾನ್ ಹೋಲ್ ಸ್ವಚ್ಛತೆಗೆದೆಂದು ಇಳಿದಿದ್ದ ಮೂವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ನಡೆದಿದೆ.ಈ ವೇಳೆ ವಿಷಾನೀಲ ಸೇವನೆ, ಆಮ್ಲಜನಕ ಕೊರತೆಯಿಂದಾಗಿ ಮೂವರು ಕಾರ್ಮಿಕರು ತೀವ್ರ ಅಸ್ವಸ್ಥರಾಗಿದ್ದಾರೆ. ಅದರಲ್ಲಿ ಓರ್ವ ಕಾರ್ಮಿಕ ಚರಂಡಿಯೊಳಗೇ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳೀಯರ ಸಹಾಯದಿಂದ ಮೂವರು ಕಾರ್ಮಿಕರನ್ನು ಮ್ಯಾನ್ ಹೋಲ್ ನಿಂದ …

Read More »

ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ಎಂಟು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಾನನಕಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅತಿ ವೇಗದಲ್ಲಿ ಬಂದು ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ನೂರ್, ಶಮಿಉಲ್ಲಾ, ಗುರುರಾಜ್ ಮತ್ತು ಖಾದರ್ ಜಿಲಾನ್ ಸ್ಥಿತಿ ಗಂಭೀರವಾಗಿದ್ದು ಗಯಾಳುಗಳು …

Read More »

ಪೊಲೀಸರಿಂದ ಹಲ್ಲೆ ಆರೋಪ, ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ ಯತ್ನ

ಪೊಲೀಸರಿಂದ ಹಲ್ಲೆಗೊಳಗಾದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರು ಸಮೀಪದ ಚಿಕ್ಕಬೆನ್ನೂರಿನಲ್ಲಿ ನಡೆದಿದೆ.24 ವರ್ಷದ ಕಿರಣ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಯುವಕ.ಕಳ್ಳತನ ಪ್ರಕರಣವೊಂದರ ವಿಚಾರಣೆಗಾಗಿ ಆತನನ್ನು ಪೊಲೀಸರು ಅಕ್ಟೋಬರ್ 27 ರಂದು ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರ ಹಿಂಸೆಯಿಂದ ಬೇಸತ್ತು ಕಿರಣ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಸಂತೆಬೆನ್ನೂರು ಪೊಲೀಸರ ವಿರುದ್ಧ ಆತನ ಕುಟುಂಬದವರು …

Read More »

ಬೈಕ್‌ಗೆ ಗೂಡ್ಸ್‌ ವಾಹನ ಡಿಕ್ಕಿ: ಸವಾರ ದುರ್ಮರಣ

ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಗೂಡ್ಸ್‌ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾರೆ. ನೇಪಾಳ ಮೂಲದ ಹೂಡಿ ನಿವಾಸಿ ನರೇಶ್‌ ಕುಮಾರ್‌(32) ಮೃತಪಟ್ಟವರು. ಸಂಬಂಧಿಕರೊಬ್ಬರ ಮನೆಯಲ್ಲಿದ್ದ ದೇವರ ಕಾರ್ಯದ ಸಲುವಾಗಿ ಗುರುವಾರ ರಾತ್ರಿ ಅವರ ಮನೆಗೆ ನರೇಶ್‌ ಕುಮಾರ್‌ತೆರಳಿದ್ದರು.ಊಟ ಮಾಡಿ ಮುಂಜಾನೆ 1.20ರ ಸುಮಾರಿನಲ್ಲಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಾರ್ಗಮಧ್ಯೆ ರಾಮಮೂರ್ತಿ ನಗರದ ಬಿ.ಚನ್ನಸಂದ್ರ ಮುಖ್ಯರಸ್ತೆಯ ಬಳಿ ಹಿಂದಿನಿಂದ ವೇಗವಾಗಿ ಬಂದ ಗೂಡ್ಸ್‌ ವಾಹನ …

Read More »

ಸೈಡ್‌ ಕೊಡದಿದ್ದಕ್ಕೆ ಬೈಕ್‌ಗೆ ಕಾರು ಗುದ್ದಿಸಿ ಗುಂಡಾವರ್ತನೆ: ಚಾಲಕನ ಕೃತ್ಯ ಕ್ಯಾಮೆರಾದಲ್ಲಿ ಸೆರೆ

ಸೈಡ್ ಕೊಡದ ವಿಚಾರಕ್ಕೆ ಕೋಪಗೊಂಡ ಕ್ಯಾಬ್ ಚಾಲಕನೊಬ್ಬ ದುಂಡಾವರ್ತನೆ ತೋರಿದ ಘಟನೆ ನಗರದ ಕೆ.ಆರ್.ಪುರದ ಬಳಿ ನಡೆದಿದೆ.ಬೈಕ್ ಸವಾರನೊಬ್ಬ ಸೈಡ್ ಕೇಳಿದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಕ್ಯಾಬ್ ಚಾಲಕ ಕಾರನ್ನು ಮುಂದೆ ತೆಗೆದುಕೊಂಡು ಹೋಗಿ ಬೈಕ್‌ಗೆ ನೇರವಾಗಿ ಗುದ್ದಿಸಿದ್ದಾನೆ.ಇದರಿಂದ ಬೈಕ್ ಸವಾರ ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದಾನೆ. ಈ ಸಂಪೂರ್ಣ ಘಟನೆ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಕ್ಯಾಬ್ …

Read More »

ಕಾಲೇಜಿನಿಂದ ಮನೆಗೆ ಬಂದು ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ!

ಅತಿಯಾದ ಮೊಬೈಲ್ ಬಳಕೆ ಮಾಡುತಿದ್ದ ಮಂಜುನಾಥ ಯಾವಾಗಲೂ ಒಂಟಿಯಾ ಗಿದ್ದು, ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಮಣಿಪಾಲ ಪೊಲೀಸರು ತಿಳಿಸಿದ್ದಾರೆ.ಮೃತ ವಿದ್ಯಾರ್ಥಿಯನ್ನು ಅಲೆವೂರು ಗ್ರಾಮದ ಗುರುಪ್ಪ ಮೇಟಿ ಎಂಬವರ ಮಗನಾದ ಮಂಜುನಾಥ ಮೇಟಿ (17) ಎಂದು ಗುರುತಿಸಲಾಗಿದೆ.

Read More »

ಒಂಟಿಕಟ್ಟೆ: ಆಟೋ ಚಾಲಕ ಆತ್ಮಹತ್ಯೆ.

ಪುರಸಭೆ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಕೊಡಂಗಲ್ಲಿನಲ್ಲಿರುವ ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್‌ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ರಾಜೇಶ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Read More »

ಬಾದಾಮಿ| ಯೋಧ ಆತ್ಮಹತ್ಯೆ: ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ.

ಗ್ರಾಮದ ಬಿಎಸ್‌ಎಫ್ ಯೋಧ ಮನೆಯಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ಹನುಮಂತ ನೆರಳೆ ತಿಳಿಸಿದರು.ಮಲ್ಲಯ್ಯ ಬಸಯ್ಯ ರೇಷ್ಮಿ (38) ಮೃತ ಯೋಧ.ಜೀವನದಲ್ಲಿ ಜಿಗುಪ್ಸೆ ಮೂಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ತಂದೆ, ತಾಯಿ ಇದ್ದಾರೆ.

Read More »