Breaking News

BigTv News

ಗೋವಿನ ಅಕ್ರಮ ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರನ್ನು ಹುಡುಕಿ ಬಂಧಿಸಿದ ಪೊಲೀಸರು

ಕೊಡಗಿನಿಂದ ಗೋವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅರಕಲಗೂಡಿನ ಹೂಳಲುಗೋಡು ಗ್ರಾಮದ ದಿಲ್ ನವಾಜ್ ಅಲಿಯಾಸ್ ಶಾನವಾಜ್ ಹಾಗೂ ಸಯ್ಯದ್ ಗಫೂರ್ ಎಂಬವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ.ಇತ್ತೀಚೆಗೆ ಸೋಮವಾರಪೇಟೆಯಿಂದ ಗೋವು ಸಾಗಾಟ ಮಾಡುತ್ತಿದ್ದ ವೇಳೆ ಕಾಗಡಿಕಟ್ಟೆ ಬಳಿ ಗೋವುಗಳಿದ್ದ ವಾಹನ ಅಪಘಾತಕ್ಕೀಡಾಗಿ ಮಗುಚಿಕೊಂಡಿತ್ತು. ನಂತರ ಬೆಂಗಾವಲು ಇನೋವಾ ಕಾರಿನಲ್ಲಿ ಮೂವರು ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಇತ್ತೀಚೆಗೆ …

Read More »

ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.ಯೋಗಾನಂದ (35) ಹಾಗೂ ಈತನ ಸಹಚರ ಪ್ರವೀಣ್ ಬಂಧಿತರು.ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ. ಗಾಬರಿಗೊಂಡ ಉಷಾ ಸರ ನೀಡಿದರೆ, ವರಲಕ್ಷ್ಮಿ ಅವರು …

Read More »

ಬಸ್ ಕಂಡಕ್ಟರ್ ಮೇಲೆ ಹಲ್ಲೆ: ಮಹಿಳೆ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್‌ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಬಸ್ ಕಂಡಕ್ಟರ್ ತನ್ವೀರ್ ಹೊರಕೆರೆ(38) ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆಶಿಕಾರಿಪುರದಿಂದ ಮುಡುಬ ಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿ ತನ್ವೀರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ಮಾಡಿದ ಇಬ್ಬರು ಪುರುಷರು, ಓರ್ವ ಮಹಿಳೆ …

Read More »

ಕಾನ್‌ಸ್ಟೆಬಲ್‌ಗೆ ಚಾಕುವಿನಿಂದ ತಿವಿದು ಕೊಲೆ

ಹೈದ್ರಾಬಾದ್ ಪ್ರಕರಣವೊಂದರಲ್ಲಿ ಬಂಧಿತನಾಗಿರುವ ಶೇಖ್‌ ರಿಯಾಜ್‌ (24) ಎಂಬಾತ ನಿಜಾಮಾಬಾದ್‌ ಠಾಣೆಗೆ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ಕಾನ್‌ಸ್ಟೆಬಲ್‌ ಇ.ಪ್ರಮೋದ್‌ (42) ಅವರ ಎದೆಗೆ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ.ಶುಕ್ರವಾರ ರಾತ್ರಿ 8.30ರಿಂದ 9ರ ಅವಧಿಯಲ್ಲಿ ಈ ಘಟನೆ ನಡೆದಿದೆ.ಆರೋಪಿಯು ಚಾಕುವನ್ನು ಶೂ ಒಳಗೆ ಇರಿಸಿಕೊಂಡಿದ್ದ. ತೀವ್ರವಾಗಿ ಗಾಯಗೊಂಡಿದ್ದ ಪ್ರಮೋದ್‌ ಅಸುನೀಗಿದ್ದಾರೆ. ಕಾನ್‌ಸ್ಟೆಬಲ್‌ ಬೈಕ್‌ ಹಿಂಬಾಲಿಸುತ್ತಿದ್ದ ಸಬ್‌ ಇನ್‌ಸ್ಪೆಕ್ಟರ್‌ ಮೇಲೆಯೂ ಆರೋಪಿಯು ದಾಳಿ ನಡೆಸಿದ್ದು, ಅವರ ಬೆರಳುಗಳಿಗೆ ಗಾಯಗಳಾಗಿವೆ. ಆರೋಪಿಯು ಪರಾರಿಯಾಗಿದ್ದು, …

Read More »

₹12 ಸಾವಿರ ಲಂಚ: ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಬಂಧನ

ಹಾವೇರಿ ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು (ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಪಹಣಿ ಪತ್ರ (ಆರ್‌.ಟಿ.ಸಿ.) ದುರಸ್ತಿ ಮಾಡಿಸಲು ₹ 12 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್‌ಡಿಎ ಗೂಳಪ್ಪ ಮನಗೂಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಎಸ್‌ಡಿಎ ಶಿವಾನಂದ ಬಡಿಗೇರ್ ಎಂಬುವವರನ್ನು ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ …

Read More »

ಕಚೇರಿ ಸೂಚನೆ ಮೇರೆಗೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಅಮಾನತು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಆಟೋ ಚಾಲಕರೊಬ್ಬರು ಸಮವಸ್ತ್ರ ಧರಿಸದೆ ಆಟೋ ಚಾಲನೆ ಮಾಡಿದ ಕಾರಣ ಸಂಚಾರಿ ಪೊಲೀಸರು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.ಈ ವಿಚಾರ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ಬಂದಿದ್ದು, ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.ಜನಸ್ನೇಹಿ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

Read More »

ಹುಲಿ ದಾಳಿಯಿಂದ ಗಾಯಗೊಂಡ ಮಹದೇವ್ ಸ್ಥಿತಿ ಕ್ರಿಟಿಕಲ್, ಅಪೊಲೋ ಆಸ್ಪತ್ರೆ ವೈದ್ಯರ ಮಾಹಿತಿ.

ಹುಲಿಯಿಂದ ದಾಳಿಗೊಳಗಾದ ವ್ಯಕ್ತಿ ಆರೋಗ್ಯ ಸ್ಥಿತಿ ಬಗ್ಗೆ ಆಪೊಲೊ ಆಸ್ಪತ್ರೆಯ ಕನ್ಸಲ್ಟೆಂಟ್ ಪ್ಲಾಸ್ಟಿಕ್ ಸರ್ಜನ್ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.ದಾಳಿಗೊಳಗಾದ ವ್ಯಕ್ತಿಯ ಮುಖದ ಮೂಳೆಗಳೆಲ್ಲ ಮುರಿದಿದ್ದವು. ಅಪರೇಷನ್ ಮಾಡಿ ಅವೆಲ್ಲವನ್ನು ಸರಿ ಮಾಡಲಾಗಿದೆ.ಮೆದುಳಿಗೂ ಸ್ಪಲ್ಪ ಪ್ರಮಾಣದ ಹಾನಿ ಆಗಿದೆ. ಬಲಗಣ್ಣು ಸಂಪೂರ್ಣವಾಗಿ ಹೋಗಿದೆ, ಎಡಗಣ್ಣು ಬಹುತೇಕ ಹಾನಿ ಆಗಿದೆ. ಎಡಗಣ್ಣಿನ ದೃಷ್ಟಿ ಉಳಿಸಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಸದ್ಯ ವ್ಯಕ್ತಿ ಸ್ಥಿತಿ ಇನ್ನೂ ಕ್ರಿಟಿಕಲ್ ಇದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ …

Read More »

26 ದಿನದಲ್ಲೇ ಸುಟ್ಟುಹೋದ ಕಿಯಾ ಕಾರು: ಹೊಸ ಕಾರು ನೀಡಲು ಧಾರವಾಡ ಆಯೋಗ ಸೂಚನೆ

ಹುಬ್ಬಳ್ಳಿಯ ಅಲ್ತಾಪ್ ನಗರದ ಮಹಮ್ಮದ್ ತಾಹೀರ್ ತಂಬೋಳಿ ಅವರು ಕೇವಲ 26 ದಿನಗಳ ಹಿಂದೆ ಖರೀದಿಸಿದ ಕಿಯಾ ಕಾರು ಬೆಂಕಿಗೆ ಆಹುತಿಯಾದ ಪ್ರಕರಣದಲ್ಲಿ, ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಕಾರು ಉತ್ಪಾದಕರಾದ ಕಿಯಾ ಮೋಟರ್ಸ್ ಕಂಪನಿಯ ವಿರುದ್ಧ ತೀರ್ಪು ನೀಡಿದೆ.ಘಟನೆಯನ್ನು ಉತ್ಪಾದನಾ ದೋಷ ಮತ್ತು ಸೇವಾ ನ್ಯೂನ್ಯತೆ ಎಂದು ಹೇಳಿ, ಕಿಯಾ ಮೋಟರ್ಸ್, ನಾಗಶಾಂತಿ ಸರ್ವಿಸ್ ಸೆಂಟರ್ ಮತ್ತು ಲೋಂಬಾರ್ಡ್ ವಿಮಾ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ 01.08.2023 …

Read More »

ಆರ್ ಎಸ್ ಎಸ್ ಟಾರ್ಗೆಟ್ ಮಾಡಿದ್ಯಾ ಕಾಂಗ್ರೆಸ್‌ ಸರ್ಕಾರ: ಖಡಕ್‌ ಉತ್ತರ ಕೊಟ್ಟ ಸಿದ್ದರಾಮಯ್ಯ.

ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಅಂಬೇಡ್ಕರ್ …

Read More »

ನಡುರಸ್ತೆಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌: 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.

ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಗ್ರೀನ್ ಲೈನ್ ಕಂಪನಿಯ ಸ್ಲೀಪರ್ ಬಸ್ ಆಂಧ್ರಪ್ರದೇಶದ ಅನಂತಪುರ ಸಮೀಪ ಆಕಸ್ಮಿಕವಾಗಿ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಲಾಗಿದೆ. ಸಕಾಲದಲ್ಲಿ ಪ್ರಯಾಣಿಕರೊಬ್ಬರು ಎಚ್ಚೆತ್ತುಕೊಂಡಿದ್ದರಿಂದ ರಾಯಚೂರಿನ 25 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟೈರ್‌ಗೆ ಬೆಂಕಿ ಹತ್ತಿರುವುದನ್ನು ಬಸ್ಸಿನ ಚಾಲಕ ಆರಂಭದಲ್ಲಿ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಚಾಲಕನನ್ನು ತರಾಟೆಗೆ ತೆಗೆದುಕೊಂಡ ನಂತರ ಎಲ್ಲರೂ ಎಚ್ಚರಗೊಂಡರು. ಬಸ್ಸಿನಲ್ಲಿದ್ದವರು ಎಚ್ಚರಗೊಂಡು ಗಾಬರಿಗೊಂಡು ಕೆಳಗೆ ಇಳಿದಿದ್ದಾರೆ.

Read More »