ಕಂದಮ್ಮಗಳ ಕೊಂದು ತಾಯಿಯೊಬ್ಬಳು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ನೆರೆಯ ತೆಲಂಗಾಣದ ಹೈದರಾಬಾದ್ನಲ್ಲಿ ನಡೆದಿದೆ. 27 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷ ಪ್ರಾಯದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾನು ಸಾವಿಗೆ ಶರಣಾಗಿದ್ದಾಳೆ ತೆಲಗಾಣದ ಬಾಲನಗರದಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಸಾಯಿಲಕ್ಷ್ಮಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪತಿ ಅನಿಲ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆತನನ್ನು ಕಸ್ಟಡಿಗೆ ಪಡೆದಿದ್ದಾರೆ.
Read More »ಕೆಎಸ್ಆರ್ಟಿಸಿ ಬಸ್ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ!!
ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ವೈದ್ಯೆಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಘಟನೆಯೊಂದು ವರದಿಯಾಗಿತ್ತು. ಬಸ್ನಲ್ಲಿ ಪಕ್ಕದಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದ. ಸದ್ಯ ಪ್ರಯಾಣಿಕರೆಲ್ಲರೂ ಸೇರಿ ವ್ಯಕ್ತಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.
Read More »ಮೈಸೂರು :ಅಕ್ರಮ ಹೈಟೆಕ್ ವೇಶ್ಯಾವಾಟಿಕೆ ದಂಧೆ!!
ಇತ್ತೀಚೆಗೆ ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿ, 6 ಆರೋಪಿಗಳನ್ನು ಬಂಧಿಸಿದ್ದರು. ಇನ್ನು ದಾಳಿ ವೇಳೆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಮನೆಯಲ್ಲಿ ನಕಲಿ ಪೇಯಿಂಗ್ ಗೆಸ್ಟ್ ಎಂದು ಯುವತಿಯರನ್ನು ಇರಿಸಲಾಗಿತ್ತು. ಸ್ಥಳೀಯರು ಈ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.
Read More »ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ!
ಅಪ್ರಾಪ್ತ ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ ಮಾಡುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮೂಡಬಿದಿರೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಮೂಡಬಿದಿರೆಯ ನಿಡ್ಡೋಡಿ ನಿವಾಸಿ ಆಟೋ ಚಾಲಕ, ಬಂಧಿತ ಮಹೇಶ್, ಇಬ್ಬರು ಅಪ್ರಾಪ್ತ ಕಾಲೇಜ್ ಬಾಲಕಿಯರನ್ನು ಪುಸಲಾಯಿಸಿ ಕರೆತಂದಿದ್ದ. ಇದೇ ವೇಳೆ ತನ್ನ ಸ್ನೇಹಿತರನ್ನು …
Read More »ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ `ಸುದೀಪ್’ ಆತ್ಮಹತ್ಯೆ.!
ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »ಹೃದಯಾಘಾತದಿಂದ ನಟ ರಾಜು ತಾಳಿಕೋಟೆ ನಿಧನ!
ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು.ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ. ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು …
Read More »ಶವದ ಮೇಲಿನ ಚಿನ್ನಾಭರಣ ಕಳವು – ಆಂಬುಲೆನ್ಸ್ ಡ್ರೈವರ್ ವಿರುದ್ದ ದೂರು!
ಶವದ ಮೇಲಿನ ಚಿನ್ನಾಭರಣ ಕದ್ದಿರುವ ಆರೋಪದ ಮೇಲೆ ಆಂಬುಲೆನ್ಸ್ ಸಿಬ್ಬಂದಿಯ ಮೇಲೆ ಮೃತ ಮಹಿಳೆಯ ಪತಿ ದೂರು ದಾಖಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 4.90 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಬೆಂಗಳೂರು ನಿವಾಸಿ ಸಗಾಯ್ ರಾಜ್ ಅವರ ಪತ್ನಿ ಜ್ಞಾನ ಅವರು ಅನಾರೋಗ್ಯದಿಂದಾಗಿ ಹಠಾತ್ತಾನೆ ಕುಸಿದು ಬಿದ್ದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜ್ಞಾನ ಅವರು ಜೀವ ಕಳೆದುಕೊಂಡಿದ್ದು, ನಂತರ ಸ್ವಾಭಾವಿಕ ಸಾವು ಎಂದು ವೈದ್ಯರು …
Read More »ಯಡ್ರಾಮಿ: ಕೊಟ್ಟ ಸಾಲ ಕೇಳಿದ್ದಕ್ಕೆ ಕೊಲೆ!
ತಾಲ್ಲೂಕಿನ ಕಣಮೇಶ್ವರ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಿ ಮನೆಯಲ್ಲೇ ಮೃತದೇಹ ಮುಚ್ಚಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಿಜಯಪುರ ಬಸ್ನಲ್ಲಿ ಬಂಧಿಸಿದ್ದಾರೆ.ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅರೇಮುರಾಳ ಗ್ರಾಮದ ಶರಣಬಸಪ್ಪ ಭೋವಿ (33) ಕೊಲೆಯಾದವನು.
Read More »ಚಿಕ್ಕಮಗಳೂರು |ಪತಿಯಿಂದಲೇ ಪತ್ನಿಯ ಕೊಲೆ!
ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವುದು ಘಟನೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.ಮದುವೆಯಾದ ಕೆಲ ದಿನಗಳಲ್ಲಿ ಪತಿಯಿಂದ ದೂರವಾದ ನೇತ್ರಾವತಿ ತವರು ಮನೆ ಸೇರಿದ್ದರು. ಹಿರಿಯರು ರಾಜಿ ಪಂಚಾಯಿತಿ ಮಾಡಿ ಇಬ್ಬರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ನೇತ್ರಾವತಿ ವಿಚ್ಚೇದನ ನೀಡಲು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಈ ಮಧ್ಯೆ ಮೂರು ದಿನಗಳ ಹಿಂದೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪತಿ ನವೀನ್ ವಿರುದ್ಧ ಕಿರುಕುಳದ ದೂರು ನೀಡಿದ್ದರು. ಪೊಲೀಸರು …
Read More »ಪಾಕ್ ಜನರ ಮೇಲೆ ಸರ್ಕಾರದಿಂದಲೇ ದಾಳಿ – 13 ನಾಗರಿಕರ ಸಾವು, ನೂರಾರು ಮಂದಿಗೆ ಗಾಯ.!-
ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ಪಡೆಗಳು ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆವರೆಗೆ ಭಾರಿ ಸಂಘರ್ಷ ನಡೆಸಿದ್ದು, ಗಡಿಯುದ್ದಕ್ಕೂ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ತಾನು ನಡೆಸಿದ ಪ್ರತೀಕಾರದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 58 ಸೈನಿಕರು ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಹೇಳಿಕೊಂಡಿದೆ. ತನ್ನ 9 ಯೋಧರು ಹುತಾತ್ಮರಾಗಿರುವುದಾಗಿಯೂ ತಿಳಿಸಿದೆ. ಆದರೆ, ಸಂಘರ್ಷದಲ್ಲಿ ತನ್ನ 23 ಯೋಧರು ಮೃತಪಟ್ಟಿರುವುದಾಗಿ ಪಾಕಿಸ್ತಾನ ಹೇಳಿದೆ. ಅಫ್ಗಾನಿಸ್ತಾನದ ಕಡೆಯಲ್ಲಿ ತಾಲಿಬಾನ್ ಹೋರಾಟಗಾರರು ಒಳಗೊಂಡಂತೆ 200ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





