ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಮಕ್ಕಳ ಸರಣಿ ಸಾವಿನ ಪ್ರಕರಣ ಸಂಬಂಧ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದ ಡಾ. ಪ್ರವೀಣ್ ಸೋನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರವೀಣ್ ಸೋನಿ ಅವರು ಪರಾಸಿಯಾದಲ್ಲಿರುವ ತಮ್ಮ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದ ಹಲವಾರು ಮಕ್ಕಳಿಗೆ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದರು ಎಂದು ತಿಳಿದುಬಂದಿದೆ.
Read More »ಜೈಪುರ | 6 ವರ್ಷದ ಮಗು ಸಾವು: ಕೆಮ್ಮಿನ ಸಿರಪ್ ನೀಡಲಾಗಿತ್ತು ಎಂದು ಪೋಷಕರ ಮಾಹಿತಿ.
ನಗರದ ಸರ್ಕಾರಿ ಜೆಕೆ ಲೋನ್ ಆಸ್ಪತ್ರೆಯಲ್ಲಿ ತೀವ್ರ ಮೆದುಳು ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮನೆಯಲ್ಲಿ ಮಗುವಿಗೆ ಕೆಮ್ಮಿನ ಸಿರಪ್ ನೀಡಲಾಗಿತ್ತು ಎಂದು ಪೋಷಕರು ಹೇಳಿದ್ದಾರೆ.ಶನಿವಾರ ಬೆಳಿಗ್ಗೆ 4 ಗಂಟೆಗೆ ಬಾಲಕ ಅನಸ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಮೆದುಳು ಜ್ವರದಿಂದ ಬಳಲುತ್ತಿದ್ದ ಮಗು ಆದೇ ದಿನ ಬೆಳಿಗ್ಗೆ 10 ಗಂಟೆ ಕೊನೆಯುಸಿರೆಳೆಯಿತು’ ಎಂದು ಅವರು ತಿಳಿಸಿದ್ದಾರೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಒಟ್ಟು 11 ಮಕ್ಕಳು ಕಲುಷಿತ ಕೆಮ್ಮಿನ …
Read More »ಮಕ್ಕಳಲ್ಲಿ ಕೆಮ್ಮು: ಅನಗತ್ಯ ಔಷಧ ಶಿಫಾರಸು ಮಾಡದಂತೆ ಡಿಜಿಎಚ್ಎಸ್ ಸೂಚನೆ.
ಕೆಮ್ಮು ಮತ್ತು ಶೀತಕ್ಕೆ ಸಂಬಂಧಿಸಿದಂತೆ ಎರಡು ವರ್ಷದೊಳಗಿನ ಮಕ್ಕಳಿಗೆ ಔಷಧ ಶಿಫಾರಸು ಮಾಡಬಾರದು. ಐದು ವರ್ಷದೊಳಗಿನ ಮಕ್ಕಳಿಗೂ ಸಾಮಾನ್ಯವಾಗಿ ಅಗತ್ಯ ಇರುವುದಿಲ್ಲ. ಅತಿ ಅಗತ್ಯವಾದರೆ ಮಾತ್ರ ಸೂಕ್ತ ಪ್ರಮಾಣದಲ್ಲಿ ಕಡಿಮೆ ಅವಧಿಗೆ ಒದಗಿಸಬೇಕು’ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್ಎಸ್) ಸೂಚಿಸಿದೆ.ಕೆಮ್ಮಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಮಾಣದಲ್ಲಿ ದ್ರವ ಆಹಾರ ಸೇವನೆ, ವಿಶ್ರಾಂತಿ ಮತ್ತು ಇತರೆ ಚಿಕಿತ್ಸಾ ಕ್ರಮಗಳನ್ನು ಅನುಸರಿಸಬೇಕು. ಈ ಬಗ್ಗೆ ಜಿಲ್ಲಾ ಆರೋಗ್ಯ ಪ್ರಾಧಿಕಾರಗಳು …
Read More »10 ವರ್ಷವಾದರೂ ಒತ್ತುವರಿ ತೆರವುಗೊಳ್ಳದ 1,054 ಕೆರೆಗಳು!.
ಒತ್ತುವರಿ ಆಗಿರುವ 1,054 ಕೆರೆಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸಲು 10 ವರ್ಷಗಳ ಹಿಂದೆಯೇ ಆದೇಶವಾಗಿದೆ. ಆದರೆ ಸಂಬಂಧಿಸಿದ ಕಡತಗಳು ಇನ್ನೂ ಭೂ ದಾಖಲೆಗಳ ಉಪನಿರ್ದೇಶಕರ (ಡಿಡಿಎಲ್ಆರ್) ಕಚೇರಿಯ ಕಪಾಟಿನಲ್ಲಿ ಕೊಳೆಯುತ್ತಿವೆ.ಶಿವಮೊಗ್ಗದ ಭೂ ದಾಖಲೆಗಳ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗಳ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸ್ವಯಂಪ್ರೇರಿತವಾಗಿ (ಸುಮೊಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರ ಸೂಚನೆಯ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ಶನಿವಾರ ಡಿಡಿಎಲ್ಆರ್ ಕಚೇರಿಯಲ್ಲಿ ತಪಾಸಣೆ ನಡೆಸಲಾಯಿತು.ಜಿಲ್ಲೆಯಲ್ಲಿರುವ 4,792 …
Read More »ಡಾರ್ಜಿಲಿಂಗ್ ನಲ್ಲಿ ಭಾರೀ ಮಳೆ: 14 ಮಂದಿ ಸಾವು, ಪ್ರವಾಸಿ ತಾಣಗಳು ಬಂದ್.
ಡಾರ್ಜಿಲಿಂಗ್ ನ ಮಿರಿಕ್ ಮತ್ತು ಸುಖಿಯಾ ಪೋಖಾರಿಯಲ್ಲಿ ಭೂಕುಸಿತದಿಂದ 14 ಜನರು ಸಾವನ್ನಪ್ಪಿದ್ದಾರೆ.ಡಾರ್ಜಿಲಿಂಗ್ ಜಿಲ್ಲಾ ಪೊಲೀಸರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭಾರಿ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.
Read More »ಬೆಳಗಾವಿಯಲ್ಲಿ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ : ಸಾವಿನಲ್ಲೂ ಒಂದಾದ ಸಹೋದರರು.!
ಅನಾರೋಗ್ಯದಿಂದ ತಮ್ಮ ಮೃತಪಟ್ಟ ವಿಷಯ ತಿಳಿದು ಹೃದಯಾಘಾತಕ್ಕೆ ಒಳಗಾಗಿ ಅಣ್ಣನೂ ಮೃತಪಟ್ಟ ಘಟನೆ ಬೆಳಗಾವಿಯ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ.ಇಬ್ಬರು ಮಕ್ಕಳನ್ನು ಕಳೆದುಕೊಂಡ ಕಳೆದುಕೊಂಡ ತಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ. ಅಣ್ಣತಮ್ಮಂದಿರ ಸಾವಿಗೆ ಕಪರಟ್ಟಿ ಗ್ರಾಮದ ಜನ ಕಣ್ಣೀರಿಟ್ಟಿದ್ದಾರೆ.
Read More »ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್: ಇಬ್ಬರು ಆರೋಪಿಗಳು ಅರೆಸ್ಟ್.
ರಾಜ್ಯದಲ್ಲೊಂದು ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಬರೋಬ್ಬರಿ 36 ಲಕ್ಷ ಪೀಕಿರುವಂತ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ FIR ದಾಖಲಾಗಿದ್ದು, ಆರೋಪಿಗಳಾದಂತ ಓರ್ವ ಯುವತಿ, ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.ದೂರು ಸಂಬಂಧ ಎ1 ಆರೋಪಿಯಾಗಿ ಅಶ್ವಿನಿ ಹಾಗೂ ಎ2 ಆರೋಪಿಯಾಗಿ ಅಕ್ಷಯ್ ಎಂಬುವರ ವಿರುದ್ಧ FIR ದಾಖಲಿಸಿಕೊಂಡ ಪೊಲೀಸರು, ಬಂಧಿಸಿ ಜೈಲಿಗಟ್ಟಿದ್ದಾರೆ.
Read More »ವಿಜಯನಗರ | ಸಿಲಿಂಡರ್ ಸ್ಫೋಟ: ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4ಕ್ಕೆ ಏರಿಕೆ.
ಗಾದಿಗನೂರಿನಲ್ಲಿ ಸೆ.27ರಂದು ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಶುಕ್ರವಾರ ರಾತ್ರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದಂತಾಗಿದೆ.ಕವಿತಾ (30) ಮತ್ತು ಮೈಲಾರಪ್ಪ (45) ಮೃತರು. ಶುಕ್ರವಾರ ಬೆಳಿಗ್ಗೆಯಷ್ಟೇ ವಕೀಲ ಹಾಲಪ್ಪ ಮತ್ತು ಅವರ ತಾಯಿ ಗಂಗಮ್ಮ ಮೃತಪಟ್ಟಿದ್ದರು.
Read More »ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ.!
ಬೆಂಗಳೂರು ನಗರದ ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಸುಮಾರು 6 ರಿಂದ 8 ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಮೇಲ್ನೋಟಕ್ಕೆ 35 ರಿಂದ 40 ವರ್ಷದ ಪುರುಷನ ಅಸ್ಥಿಪಂಜರ ಎಂದು ಶಂಕಿಸಲಾಗಿದೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬುವರಿಗೆ ಸೇರಿದ ಅಪಾರ್ಟ್ ಮೆಂಟ್ ನಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ.
Read More »ಕೋಲಾರ | ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಮೃತದೇಹ ಬಾವಿಯಲ್ಲಿ ಪತ್ತೆ.
ಮನೆಯಿಂದ ಹೊರಗೆ ಆಟವಾಡಲು ತೆರಳಿದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು. ಶನಿವಾರ ಬೆಳಿಗ್ಗೆ ಇಬ್ಬರ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ.ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





