Breaking News

BigTv News

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. 26 ವರ್ಷದ ಮಧುಮಿತ ಕ್ಲೀನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕ್ಲೀನಿಕ್‌ನಿಂದ ತಿಂಡಿ ತಿನ್ನಲು ಹೊರಬಂದಾಗ ಬೈಕ್‌ನಲ್ಲಿ ಬಂದ ವೆಂಕಟೇಶ್ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿ, ಆಸಿಡ್ ಎರಚಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮಧುಮಿತ ಅವರನ್ನು ಖಾಸಗಿ …

Read More »

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ ಘಟನೆ ಆನಂದ ಪರ್ವತ್ ಪ್ರದೇಶದಲ್ಲಿ ನಡೆದಿದೆ. ಆರೋಪಿ ಚಂದ್ರಪಾಲ್ ಭಾಟಿ, ಹತ್ಯೆಯ ಬಳಿಕ ಪತ್ನಿಯ ಶವದ ಪಕ್ಕದಲ್ಲೇ ಇಡೀ ರಾತ್ರಿ ಮಲಗಿದ್ದ ಎನ್ನಲಾಗಿದೆ. 11 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ. ಮದ್ಯ ಸೇವಿಸಿ ಪತ್ನಿಗೆ ಹಲ್ಲೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಗೀತಾ ಮಕ್ಕಳೊಂದಿಗೆ ತಾಯಿ ಮನೆಯಲ್ಲಿ ವಾಸವಾಗಿದ್ದರು. …

Read More »

ಗಣೇಶೋತ್ಸವ ಮೆರವಣಿಗೆ ವೇಳೆ ಭಟ್ಕಳದಲ್ಲಿ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ: ಬಿಗಿ ಬಂದೋಬಸ್ತ್

ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದೆ. ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರು ನೀಡಲಾಗಿದೆ. ಘಟನೆ ಖಂಡಿಸಿ ಸ್ಥಳೀಯ ಮುಸ್ಲಿಮರು ಭಟ್ಕಳ ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ …

Read More »

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪ್ರೀತಿಸಿ ಮದ್ವೆಯಾದ ಪತ್ನಿಯನ್ನ ಲಾಡ್ಜ್ ನಲ್ಲಿ ಉಸಿರುಗಟ್ಟಿಸಿ ಕೊಂದು ಪತಿ ಎಸ್ಕೇಪ್!

ದೊಡ್ಡಬಳ್ಳಾಪುರ ನಗರದ ಲಾಡ್ಜ್‌ವೊಂದರಲ್ಲಿ ಪತ್ನಿಯನ್ನು ಕತ್ತು ಬಿಗಿದು ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ನಡೆದಿದೆ. ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಕೊಲೆಯಾದ ಮಹಿಳೆ. ಆರೋಪಿ ಪತಿ ಆನಂದ್ ತಲೆಮರೆಸಿಕೊಂಡಿದ್ದಾನೆ. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಒಂದು ಗಂಡು ಮಗುವಿದೆ. ಕಳೆದ ಆರು ತಿಂಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಎರಡು ತಿಂಗಳ ಹಿಂದೆ ವಿದ್ಯಾ ಪತಿಯನ್ನು ತೊರೆದು ಬೆಂಗಳೂರಿನ ಪಿಜಿಯಲ್ಲಿ ವಾಸವಾಗಿದ್ದರು. ಸುಮಾರು 20 …

Read More »

ಯುವತಿ ಕಿರುಚಾಟ ಕೇಳಿ ಕಾರು ಹಿಂಬಾಲಿಸಿದ ಜನ; ಬಿಹಾರ ಮೂಲದ ಗ್ಯಾಂಗ್ ಪೊಲೀಸರ ವಶಕ್ಕೆ

ಬೆಂಗಳೂರು ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಕೆಲ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ಕಿರುಚಾಡುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ಕಾರನ್ನು ಹಿಂಬಾಲಿಸಿ ತಡೆಯಲು ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳು ಕಾರನ್ನು ವೇಗವಾಗಿ ಚಲಾಯಿಸಿ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಸಾರ್ವಜನಿಕರು …

Read More »

ಮಹಿಳೆ ಮೇಲೆ ಹಲ್ಲೆ ನಡೆಸಿ ಮನೆಗೆ ಬೆಂಕಿ: ಎಫ್‌ಐಆರ್ ದಾಖಲಿಸಿದ ಪಿಎಸ್‌ಐ ಕಾರಿಗೂ ಬೆಂಕಿ ಇಟ್ಟ ಕಾನ್‌ಸ್ಟೇಬಲ್!

ಕಲಬುರಗಿ ಜಿಲ್ಲೆಯ ಮಹಾಗಾಂವ್‌ನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ರಾಜಶೇಖರ್ ವರನಾಳ್ ಎಂಬುವವರು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಆಕೆಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪಿಎಸ್‌ಐ ಬಸವರಾಜ್ ಎಫ್‌ಐಆರ್ ದಾಖಲಿಸಿದ್ದರು. ಇದರಿಂದ ಸಿಟ್ಟಿಗೆದ್ದ ರಾಜಶೇಖರ್, ಪಿಎಸ್‌ಐ ಬಸವರಾಜ್ ಅವರ ಖಾಸಗಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಸ್ಥಳೀಯರು ತಕ್ಷಣ ಬೆಂಕಿ ನಂದಿಸಿದ್ದು, ದೊಡ್ಡ ಅನಾಹುತ ತಪ್ಪಿದೆ. ಪ್ರಕರಣಕ್ಕೆ …

Read More »

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ, ಪೊಲೀಸ್-ಜಡ್ಜ್ ಕಾರು ಸೇರಿ ನೂರಾರು ವಾಹನಗಳಿಗೆ ಡಿಕ್ಕಿ!

ಬೆಂಗಳೂರು ಅಗ್ರಹಾರ ದಾಸರಹಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ 21 ವರ್ಷದ ಪೂಜಾ ಎಂಬ ಯುವತಿಯನ್ನು ಕುಟುಂಬದವರು ಸುಪಾರಿ ನೀಡಿ ಅಪಹರಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಮನೆಗೆ ನುಗ್ಗಿದ ಆರೋಪಿಗಳು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಮುಂದಾಗಿದ್ದಾರೆ. ಸ್ಥಳೀಯರು ತಡೆಯಲು ಬಂದಾಗ ಆರೋಪಿಗಳು ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ 35ಕ್ಕೂ ಹೆಚ್ಚು ವಾಹನಗಳು ಹಾಗೂ 100ಕ್ಕೂ ಹೆಚ್ಚು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಹಳ್ಳಿ …

Read More »

₹1 ಕೋಟಿ ಲಂಚಕ್ಕೆ ಬೇಡಿಕೆ, ₹50 ಲಕ್ಷ ಪಡೆಯುವಾಗ ಸಿಕ್ಕಿಬಿದ್ದ ತಹಶೀಲ್ದಾರ್​! ಲೋಕಾ ಬಲೆಗೆ ಬಿದ್ದಿದ್ದು ಹೇಗೆ ಈ ಭ್ರಷ್ಟ ಅಧಿಕಾರಿ?

ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹50 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯರಿಕೊಪ್ಪ ಬಳಿ ಜಮೀನಿನ ಖರಾಬು ತೆಗೆದು ದಾಖಲೆ ಸರಿಪಡಿಸುವ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಕೆಸಿಡಿ ಬಳಿ ರಾತ್ರಿ 9.30ರ ಸುಮಾರಿಗೆ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತಹಶೀಲ್ದಾರ್ ಅವರನ್ನು ಬಂಧಿಸಿದ್ದಾರೆ. ದೂರುದಾರರು ಬೆಳಗ್ಗೆಯೇ ಲೋಕಾಯುಕ್ತಕ್ಕೆ ದೂರು ನೀಡಿದ್ದು, …

Read More »

ರಸ್ತೆಬದಿ ಮಲಗಿದ್ದ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ಬೆಂಗಳೂರು: ರಸ್ತೆ ಬದಿ ಮಲಗಿದ್ದ 19 ವರ್ಷದ ಯುವಕನ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಾಡುಗೊಂಡನಹಳ್ಳಿ ಠಾಣೆ ವ್ಯಾಪ್ತಿಯ ವೆಂಕಟೇಶಪುರದಲ್ಲಿ ನಡೆದಿದೆ. ಮಹೇಶ್‌ ಕೊಲೆಯಾದ ಯುವಕ. ಸೆ.14ರಂದು ತಡರಾತ್ರಿ ರಾಮಟೆಂಟ್‌ ರಸ್ತೆಯ ಬದಿ ಮಹೇಶ್‌ ಮಲಗಿದ್ದ ವೇಳೆ ದುಷ್ಕರ್ಮಿಗಳು ಯಾವುದೋ ವಿಚಾರಕ್ಕೆ ಆತನೊಂದಿಗೆ ಜಗಳ ತೆಗೆದು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹೇಶ್‌ ಮೃತಪಟ್ಟಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ವೆಲ್ಡಿಂಗ್‌ ಶಾಪ್‌ನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ …

Read More »

ಸಿಗರೇಟ್ ಹೊತ್ತಿಸಲು ಬೆಂಕಿ ಪೊಟ್ಟಣ ನೀಡದ್ದಕ್ಕೆ ಜಗಳ: ಯುವಕನ ಕೊಲೆಯಲ್ಲಿ ಅಂತ್ಯ

ನವದೆಹಲಿ: ಸಿಗರೇಟ್ ಹೊತ್ತಿಸಲು ಬೆಂಕಿ ಪೊಟ್ಟಣ ನೀಡದ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೇಶವಪುರಂ ಪ್ರದೇಶದ ಮದ್ಯದಂಗಡಿ ಬಳಿ ನಡೆದ ಘಟನೆಯಲ್ಲಿ 30 ವರ್ಷದ ಭವಾನಿ ಮೃತಪಟ್ಟಿದ್ದು, ಆಶಾರಾಂ ಗಾಯಗೊಂಡಿದ್ದಾರೆ. ಬೆಂಕಿ ಪೊಟ್ಟಣ ಕೇಳಿದಾಗ ಮೂವರು ನಿರಾಕರಿಸಿದ್ದರಿಂದ ವಾಗ್ವಾದ ನಡೆದಿದ್ದು, ಬಳಿಕ ಆರೋಪಿಗಳು ಚಾಕುವಿನಿಂದ ಭವಾನಿ ಮತ್ತು ಆಶಾರಾಂ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಭವಾನಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನರೇಶ್ ಬಹದ್ದೂರ್ …

Read More »