Breaking News

BigTv News

ಹೈಕೋರ್ಟ್‌ನಿಂದ ಕೊಲೆ ಆರೋಪಿಗೆ ವಿಭಿನ್ನ ಶಿಕ್ಷೆ: ಬೇವಿನ ಸಸಿ ಪೋಷಿಸಲು ನ್ಯಾಯಾಲಯದ ಆದೇಶ!

ಕೊಲೆ ಅಪರಾಧಿಯೊಬ್ಬ ತನ್ನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೆ ಪ್ರತಿಜ್ಞೆ ಮಾಡುವುದಾಗಿ ಭರವಸೆ ನೀಡಿದ್ದಾನೆ, ಮಧ್ಯಪ್ರದೇಶ ಹೈಕೋರ್ಟ್ ಅಸಾಮಾನ್ಯ ಮಧ್ಯಮ ಮಾರ್ಗವನ್ನು ತಂದಿತು.ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ 2021 ರ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮತ್ತು ಜಾಮೀನು ನೀಡುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದರು

Read More »

ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್!!

ಬೇಲೂರಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗೆ ಹಾಕಿದ್ದು ಓರ್ವ ಮುಸುಕುಧಾರಿ ಮಹಿಳೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಮುಸುಕುಧಾರಿ ಮಹಿಳೆಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದಂತ ಮುಸುಕುಧಾರಿ ಮಹಿಳೆಯನ್ನು ಪಿಎಸ್‌ಐ ಸುರೇಶ್ ಹಾಗೂ ಶೋಭಾ ನೇತೃತ್ವದ ತಂಡವು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

Read More »

ರಾಮನಗರ: ಹಿಂದೂ-ಮುಸ್ಲಿಂ ಪ್ರೇಮಿಗಳ ಅರ್ಧ ತಲೆ ಬೋಳಿಸಿದ ಐವರ ಬಂಧನ.

ಹಿಂದೂ ಮತ್ತು ಮುಸ್ಲಿಂ ಧರ್ಮಕ್ಕೆ ಸೇರಿದ ಪ್ರೇಮಿಗಳಿಬ್ಬರ ಮೇಲೆ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿದೆ. ಇಬ್ಬರ ತಲೆಯನ್ನು ಅರ್ಧ ಬೋಳಿಸಿ ಮತೀಯ ಗೂಂಡಾಗಿರಿ ಪ್ರದರ್ಶಿಸಿದೆ.ಘಟನೆಗೆ ಸಂಬಂಧಿಸಿದಂತೆ ಮಹೇಶ್ ಮತ್ತು ಆಸಿನ್ ನೀಡಿರುವ ಪ್ರತ್ಯೇಕ ದೂರಿನ ಮೇರೆಗೆ ಆಸಿನ್ ಕಡೆಯವರಾದ ಶೇಕ್ ಕಬೀರ್, ಸುಹೇಲ್ ಷರೀಫ್, ಸೈಯದ್ ನಯಾಜ್, ನವಾಜ್ ಖಾನ್, ಸಾಜಿದಾ ಬೇಗಂ, ಸಯಿದಾ ಸೇರಿ 7 ಮಂದಿ ವಿರುದ್ದ ಕನಕಪುರ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ …

Read More »

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ ಆರೋಪ: ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ.

ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಕೋಟೆ ಓಣಿಯಲ್ಲಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ.ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಹಲ್ಲೆ ನಡೆಸಲಾಗಿದೆ/ ಗುರುಮೂರ್ತಯ್ಯನ ಕ್ಲಿನಿಕ್ ಗೆ ನುಗ್ಗಿದ 20 ರಿಂದ 30 ಜನ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.

Read More »

ಹಳೇ ದ್ವೇಷದ ಕಾರಣ ಮಚ್ಚಿನಿಂದ ಹಲ್ಲೆ: ಐವರ ಬಂಧನ!

ಮಹಮ್ಮದ್ ಜಾವೀದ್ ಹಾಗೂ ಆರೋಪಿಗಳು ಅಕ್ಕಪಕ್ಕದ ಮನೆಯ ನಿವಾಸಿಗಳಾಗಿದ್ದು, ಮಹಮ್ಮದ್ ಜಾವೀದ್ ಹಾಗೂ ಅಫ್ಜಲ್‌ ಖಾನ್ ನಡುವೆ ಈ ಹಿಂದೆಯೂ ಸಣ್ಣ ಪುಟ್ಟ ವಿಚಾರಕ್ಕೆ ಗಲಾಟೆಯಾಗಿತ್ತು. ಶನಿವಾರ ರಾತ್ರಿ ಇಬ್ಬರ ನಡುವೆ ಮತ್ತೆ ಗಲಾಟೆಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಉಳಿದ ಆರೋಪಿಗಳು ಜಾವೀದ್ ಮೇಲೆ ಹಲ್ಲೆ ಮಾಡಿದ್ದಾರೆ.ಮಲ್ಲೇಶ್ವರದ ನಿವಾಸಿಗಳಾದ ಅಫ್ಜಲ್ ಖಾನ್, ಸೈಯದ್ ವಸೀಂ, ಜಯಿದ್ ಭಾಷಾ, ಸೈಯದ್ ಹಫೀಜ್ ಮತ್ತು ಸಲೀಂ ಪಾಷಾ ಬಂಧಿತರು.ಈ ಹಿಂದೆಯೂ ಮಲ್ಲೇಶ್ವರ …

Read More »

ಸುಹಾನಾ ಸೈಯದ್ ಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದು. ಇಬ್ಬರು ಜೊತೆಯಾಗಿ ಜೀವನ ನಡೆಸುವ ನಿರ್ಧಾರಕ್ಕೆ ಬಂದಿದ್ದಾರೆ!

ಸರಿಗಮಪ ಸೀಸನ್ 13ರ ಖ್ಯಾತಿಯ ಗಾಯಕಿ ಸುಹಾನಾ ಸೈಯದ್, ‘ಶ್ರೀಕಾರ’ ಹಾಡಿನ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು. ಇದೀಗ ತಮ್ಮ ಬದುಕಿನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದು, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆಗಿನ ತಮ್ಮ ಪ್ರೇಮವನ್ನು ಜಗತ್ತಿಗೆ ಸಾರಿದ್ದಾರೆ.ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್‌ ಜೋಡಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

Read More »

ತಾಕತ್ತಿದ್ದರೆ ನನ್ನನ್ನು ಹಿಡೀರಿ ಎಂದ ಗ್ಯಾಂಗ್‌ಸ್ಟರ್‌ – ಎದೆಯೊಳಗೆ ಬುಲೆಟ್‌ ನುಗ್ಗಿಸಿದ ಪೊಲೀಸರು!

ಸಾಧ್ಯವಾದರೆ ನನ್ನನ್ನು ಹಿಡಿಯಿರಿ ಎಂದು ವಿಡಿಯೋ ಮೂಲಕ ಪೊಲೀಸರಿಗೆ ಸವಾಲು ಹಾಕಿದ್ದ ಜಾರ್ಖಂಡ್‌ನ ಕುಖ್ಯಾತ ಗ್ಯಾಂಗ್‌ಸ್ಟರ್ ಉತ್ತಮ್ ಯಾದವ್ ಶನಿವಾರ ಪೊಲೀಸರ ಎನ್‌ಕೌಂಟರ್‌ ನಲ್ಲಿ ಹತ್ಯೆಯಾಗಿದ್ದಾನೆ.ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದ. ಶನಿವಾರ ಪೊಲೀಸರು ಹಾಗೂ ಗ್ಯಾಂಗ್‌ಸ್ಟರ್‌ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉತ್ತಮ್‌ ಯಾದವ್‌ ಗಾಯಗೊಂಡು ನಂತರ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More »

ಭೀಕರ ಅಪಘಾತದಲ್ಲಿ ಕಚೇರಿಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು!

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.ಬೈಕ್ ನಲ್ಲಿ ಕಚೇರಿಗೆ ತೆರಳುತ್ತಿದ್ದ ವೇಳೆ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.ಕಲ್ಪನಾ (38) ಮೃತ ಮಹಿಳೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಈ ದುರಂತ ಸಂಭವಿಸಿದೆ.

Read More »

ಬೆಂಗಳೂರಿನಲ್ಲಿ ಹಾಡಹಗಲೇ ಮಹಿಳೆಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿ.

ಬಸ್ ನಿಲ್ದಾಣದಲ್ಲಿ ನಿಂತಿದ್ದ ರೇಖಾ ಎಂಬುವವರ ಜೊತೆ ಲೋಕೇಶ್ ಎಂಬಾತ ಮಾತಿಗೆ ಮಾತು ಬೆಳೆಸಿ ಜಗಳವಾಡಿದ್ದಾನೆ ದುಷ್ಕರ್ಮಿ ಚಾಕು ಇರಿದಿದ್ದಾನೆ. ಇಬ್ಬರ ನಡುವೆ ಗಲಾಟೆಯಾಗಿದೆ. ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ತಿಳಿದುಬಂದಿಲ್ಲ.ಹಲ್ಲೆಗೊಳಗಾದ ರೇಖಾ ಅವರನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಅಪಘಾತ ನಡೆದು ಒಂದು ತಾಸಾದರೂ ಬಾರದ ಆಂಬುಲೆನ್ಸ್‌ – ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ!

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ, ಸಾಸಲು ರಸ್ತೆಯ ಗುಮ್ಮನಹಳ್ಳಿ ಸಮೀಪ ಭಾನುವಾರ ಸಂಜೆ ನಡೆದಿದೆ.ಗಾಯಗೊಂಡವರನ್ನು ತಾಲೂಕಿನ ಬಿಜವಾರ ಗ್ರಾಮದ ತಾಯಿ ಮತ್ತು ಮಗ ಎನ್ನಲಾಗಿದ್ದು, ಇನ್ನಿಬ್ಬರು ನೇಪಾಳಿ ಮೂಲದವರು ಎನ್ನಲಾಗುತ್ತಿದೆ.

Read More »