Breaking News

BigTv News

ಹೈದರಾಬಾದ್‌ ದೇವಸ್ಥಾನದ ಗೋಡೆಗೆ ಡಿಕ್ಕಿಯಾಗಿ ಟ್ಯಾಂಕರ್ ಪಲ್ಟಿ;

ಹೈದರಾಬಾದ್‌ನ ಉಪ್ಪಲ್ ಪ್ರದೇಶದ ಎನ್‌ಜಿಆರ್‌ಐ ಬಳಿಯ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಸೆಪ್ಟಿಕ್ ಟ್ಯಾಂಕರ್ ಡಿಕ್ಕಿ ಹೊಡೆದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರವಾದ ಆತಂಕ ಸೃಷ್ಟಿಸಿದೆ.

Read More »

ವಿಜಯಪುರ: SBI ಸಿಬ್ಬಂದಿಗೆ ಗನ್ ತೋರಿಸಿ ₹8 ಕೋಟಿ ನಗದು, 50 KG ಚಿನ್ನಾಭರಣ ದರೋಡೆ

ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.ಅಂದಾಜು ₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ.

Read More »

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ಹೊರ ಹಾಕುತ್ತಿವೆ. ಇದೇ ವೇಳೆ ವಿಜಯಪುರ ನಗರ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಾಮುಂಡಿ ತಾಯಿಗೆ ಹೂ ಮುಡಿಸಲು ಸನಾತನ ಧರ್ಮದವರಿಗೆ ಮಾತ್ರ ಅವಕಾಶ ಇದೆ.ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಇವರ ಹೇಳಿಕೆ ವಿರುದ್ಧ ಕೊಪ್ಪಳದಲ್ಲಿ ಎಫ್‌ಐಆರ್ ದಾಖಲಾಗಿದೆ.ಶಾಸಕ ಯತ್ನಾಳ್ …

Read More »

ಲಂಚ ಪಡೆದು ಸಿಕ್ಕಿಬಿದ್ದ ಬೆಂಗಳೂರು, ಬೀದರ್, ಮಂಡ್ಯದ​​ ಮೂವರು ವೈದ್ಯರ ಅಮಾನತು

ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. …

Read More »

ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ : ಲಾಂಗ್ ಹಿಡಿದು ಮಹಿಳೆಯಿಂದ ಸರ ಕದ್ದ ಖದೀಮ.!

ಬೆಂಗಳೂರಿನ ಕೋಣನಕುಂಟೆಯ ಆರ್ ಬಿಐ ಲೇಔಟ್ ನಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಬಳಿ ಹೋಗುವ ಖದೀಮ, ಅವರಿಗೆ ಲಾಂಗ್ ತೋರಿಸಿ ಸರಗಳ್ಳತನ ಮಾಡಿದ್ದಾನೆ.ಸಿಸಿಟಿವಿಯಲ್ಲಿ ಖದೀಮನ ಭಯಾನಕ ದೃಶ್ಯ ಸೆರೆಯಾಗಿದೆ. ಸದ್ಯ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಅಪ್ರಾಪ್ತ ಬಾಲಕನ ಮೇಲೆ 14 ಪುರುಷರಿಂದ ಅತ್ಯಾಚಾರ.!

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ 14 ಪುರುಷರು ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ 16 ವರ್ಷದ ಬಾಲಕನ ಮೇಲೆ 14 ವಿಭಿನ್ನ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಸಹಾಯಕ ಶಿಕ್ಷಣ ಅಧಿಕಾರಿ ಮತ್ತು ರೈಲ್ವೆ ಪೊಲೀಸ್ ಪಡೆಯ ಸದಸ್ಯ ಸೇರಿದಂತೆ ಈ ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ಒಂಬತ್ತು ಜನರನ್ನು ಬಂಧಿಸಿದ್ದಾರೆ.

Read More »

ಕಳ್ಳ ಸಾಗಣೆ ತಡೆದ ವಿದ್ಯಾರ್ಥಿ ಬಾಯಿಗೆ ಗುಂಡಿಟ್ಟು, ತಲೆ ಜಜ್ಜಿ ಬರ್ಬರ ಹತ್ಯೆ.!

ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗೋ ಕಳ್ಳ ಸಾಗಣೆ ತಡೆದ ಯುವಕನ ಬಾಯಿ ಒಳಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಗೋವುಗಳ ಕಳ್ಳ ಸಾಗಾಣೆದಾರರು ನೀಟ್ ವೈದ್ಯಕೀಯ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ವಿಷಯವನ್ನು ಅರಿತುಕೊಂಡಿದ್ದಾರೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

Read More »

ಶಾಲೆಯಲ್ಲಿ ವಿದ್ಯಾರ್ಥಿನಿಯ ತಲೆಗೆ ಹೊಡೆದ ಶಿಕ್ಷಕಿ, ಬಾಲಕಿಯ ತಲೆಬುರುಡೆಯಲ್ಲಿ ಬಿರುಕು.!

ಚಿತ್ತೂರು ಜಿಲ್ಲೆಯ ಪುಂಗನೂರಿನಲ್ಲಿ ನಡೆದ ಈ ಘಟನೆ ಸೋಮವಾರ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಪಟ್ಟಣದ ಹರಿ ಮತ್ತು ವಿಜೇತಾ ದಂಪತಿಯ ಪುತ್ರಿ ಸಾತ್ವಿಕಾ ನಾಗಶ್ರೀ (11) ಸ್ಥಳೀಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದಾಳೆ.ಈ ತಿಂಗಳ 10 ರಂದು, ತರಗತಿಯಲ್ಲಿ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಹಿಂದಿ ಶಿಕ್ಷಕಿಯೊಬ್ಬರು ಶಾಲಾ ಬ್ಯಾಗ್ನಿಂದ ಆಕೆಯ ತಲೆಗೆ ಹೊಡೆದಿದ್ದಾರೆ.ಬಾಲಕಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ, ಪರೀಕ್ಷೆಗಳಲ್ಲಿ ಆಕೆಯ ತಲೆಬುರುಡೆಯಲ್ಲಿ ತೀವ್ರತರ ಹಾನಿಯಾದ ಬಗ್ಗೆ …

Read More »

ಮೂರು ಪೀಳಿಗೆಯ ನಾಯಕತ್ವ? – ಸಿಎಂ ಮೊಮ್ಮಗನಿಗೆ ವೇದಿಕೆ ಸಿದ್ಧ!

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಜಕೀಯ ಪ್ರವೇಶಕ್ಕೆ ವೇದಿಕೆಯಲ್ಲೇ ಮನವಿ ಮಾಡಲಾಗಿದೆ. ವರುಣಾ ಕ್ಷೇತ್ರದ ಭುಗತಹಳ್ಳಿ ಗ್ರಾಮದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.ಗ್ರಾಮದ ಮುಖಂಡ ಕೆ. ಮಣಿಯಯ್ಯ, ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಕೊಡುಗೆಗಳನ್ನು ಸ್ಮರಿಸಿದರು. ಗ್ರಾಮದ ಜನರು ಸಂಕಷ್ಟದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನು ಕೈಬಿಟ್ಟಿಲ್ಲ ಎಂದು ಹೇಳಿದ ಅವರು, ಈಗ ಅವರ ಮೊಮ್ಮಗ ಧವನ್ ಸಿದ್ದರಾಮಯ್ಯ ರಾಜಕೀಯಕ್ಕೆ …

Read More »

ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ.

ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.

Read More »