ಚಿತ್ರದುರ್ಗ: ಶ್ರೀಕೃಷ್ಣ ಜಯಂತಿ ಹಿನ್ನೆಲೆಯಲ್ಲಿ ಡಿಜೆ ಬಳಸಲು ಅವಕಾಶ ನೀಡುವಂತೆ ಆಗ್ರಹಿಸಿ ಸೆ.12ರಂದು ಹಿರಿಯೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ-48 ತಡೆದು ಯುವಕರು ಪ್ರತಿಭಟನೆ ನಡೆಸಿದ್ದರು. ಹೆಚ್ಚುವರಿ ಸೌಂಡ್ ಬಳಸಿ ಮೆರವಣಿಗೆ ನಡೆಸಿದ ಆರೋಪದಡಿ ಹಿರಿಯೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
Read More »ಜೇವರ್ಗಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ; ನೆಲಕ್ಕೆ ಕೆಡವಿ ಹತ್ತಕ್ಕೂ ಹೆಚ್ಚು ಮಂದಿಯಿಂದ ಹಲ್ಲೆ!
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ಗುಂಪು ಹಲ್ಲೆ ನಡೆಸಿರುವ ಘಟನೆ ಜೇವರ್ಗಿ ತಾಲೂಕಿನ ಮಯೂರ ಗ್ರಾಮದಲ್ಲಿ ನಡೆದಿದೆ. ಮಯೂರ ಗ್ರಾಮದ ಗುರುರಾಜ್ ಬಿರಾದರ್ (18) ಹಲ್ಲೆಗೊಳಗಾದ ಯುವಕ. ಗುರುರಾಜ್ ಒಂಟಿಯಾಗಿ ಸಿಕ್ಕ ವೇಳೆ ಶ್ರೀಶೈಲ್, ಅಜಯಕುಮಾರ್, ಮುತ್ತುರಾಜ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಏಕಾಏಕಿ ದಾಳಿ ನಡೆಸಿ, ನೆಲಕ್ಕೆ ಕೆಡವಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಗುರುರಾಜ್ ನೀಡಿದ …
Read More »ಬೆಂಗಳೂರು : ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಭೀಕರ ಕೊಲೆ
ಬೆಂಗಳೂರು, ಸೆ.15- ಯಾವುದೋ ವಿಚಾರಕ್ಕೆ ಯುವಕನೊಂದಿಗೆ ಜಗಳವಾಡಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ಕೂಲಿಕಾರ್ಮಿಕ ಮಹೇಶ್ (18) ಎಂದು ಗುರುತಿಸಲಾಗಿದೆ. ರಾಮಟೆಂಟ್ ರಸ್ತೆಯ ಬದಿ ಮಲಗಿದ್ದ ಮಹೇಶ್ನೊಂದಿಗೆ ರಾತ್ರಿ 11ರ ಸುಮಾರಿಗೆ ದುಷ್ಕರ್ಮಿಗಳು ಜಗಳವಾಡಿದ್ದಾರೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳಗ್ಗೆ 6ರ ಸುಮಾರಿಗೆ ಸ್ಥಳೀಯರು …
Read More »ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್ಪಿನ್ ವೀರೇಶ್ಕುಮಾರ್
ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್ಕುಮಾರ್ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್ಐಟಿ ತನಿಖೆಯಿಂದ ತಿಳಿದುಬಂದಿದೆ. ಕಡಿಮೆ ಬೆಲೆಗೆ ಔಷಧ ಪಡೆದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ. ಎಸ್ಐಟಿ ದಾಳಿಯಲ್ಲಿ ಕೃಪಾ ಫಾರ್ಮಸಿಯಲ್ಲಿ ಅಪಾರ ಪ್ರಮಾಣದ ನಕಲಿ ಔಷಧಿಗಳು ಹಾಗೂ ಬಿಲ್ಗಳು ಪತ್ತೆಯಾಗಿದ್ದು, ಮಾಲೀಕ ವೀರೇಶ್ಕುಮಾರ್ನನ್ನು ಬಂಧಿಸಲಾಗಿದೆ. ಆತನ ಮಾಹಿತಿ ಆಧರಿಸಿ ಮತ್ತಷ್ಟು ದಾಳಿ ನಡೆಯುವ ಸಾಧ್ಯತೆಯಿದೆ. ಮತ್ತೊಬ್ಬ ಆರೋಪಿ ಪ್ರಶಾಂತ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, …
Read More »ಭಕ್ತರ ಜನಜಂಗುಳಿಯಲ್ಲೇ ಮಾಂಗಲ್ಯ ಸರ ಎಗರಿಸಿದ ಖತರ್ನಾಕ್ ಕಳ್ಳಿಯರು
ಉಡುಪಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಿದ್ದ ಸಂದರ್ಭವನ್ನು ಬಳಸಿಕೊಂಡು ಮಹಿಳೆಯೊಬ್ಬರ ಮಾಂಗಲ್ಯ ಸರ ಕಳವು ಮಾಡಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಕೋಟ ವ್ಯಾಪ್ತಿಯ ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಗಣೇಶ ಚತುರ್ಥಿ ಪ್ರಯುಕ್ತ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಈ ಜನಜಂಗುಳಿಯನ್ನೇ ಬಂಡವಾಳ ಮಾಡಿಕೊಂಡ ಕಳ್ಳಿಯರು, ದೇವಳದ ಗರ್ಭಗುಡಿ ಪಕ್ಕದಲ್ಲಿ ತೀರ್ಥ ಸ್ವೀಕರಿಸುತ್ತಿದ್ದ ಭಕ್ತರೊಬ್ಬರ ಮಾಂಗಲ್ಯ ಸರವನ್ನು ಎಗರಿಸಿರುವುದಾಗಿ ತಿಳಿದುಬಂದಿದೆ. ಕಳ್ಳತನದ ಕೃತ್ಯ ದೇವಾಲಯದ …
Read More »ವಿಜಯನಗರ : KKRTC ಬಸ್ ಹರಿದು 8 ಕುರಿಗಳು ದಾರುಣ ಸಾವು!
ವಿಜಯನಗರ: ಕೆಕೆಆರ್ಟಿಸಿ ಬಸ್ ಹರಿದು 8 ಕುರಿಗಳು ಸಾವನ್ನಪ್ಪಿ, 2 ಕುರಿಗಳಿಗೆ ಗಂಭೀರ ಗಾಯಗಳಾದ ಘಟನೆ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ. ಹರಿಜನ ಗಾಳೆಪ್ಪ ಅವರಿಗೆ ಸೇರಿದ ಕುರಿಗಳಾಗಿದ್ದು, ಎಮ್ಮಿಗನೂರಿನಿಂದ ಹಗರಿಬೊಮ್ಮನಹಳ್ಳಿಗೆ ಬಸ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಸ್ ಹಗರಿಬೊಮ್ಮನಹಳ್ಳಿ ಡಿಪೋಗೆ ಸೇರಿದೆ. ಘಟನೆ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಗುಂಡ್ಲುಪೇಟೆಯಲ್ಲಿ ಕೇರಳಂ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ
ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಗಾಳೀಪುರ ನಿವಾಸಿ ಅಬೀವುಲ್ಲಾ ಬಂಧಿತ ಆರೋಪಿ. ಆತನಿಂದ ₹1.20 ಲಕ್ಷ ಮೌಲ್ಯದ 1,200 ಲಾಟರಿ ಟಿಕೆಟ್ಗಳನ್ನು ಜಪ್ತಿ ಮಾಡಲಾಗಿದೆ. ಮಾಹಿತಿ ಆಧರಿಸಿ ಗುಂಡ್ಲುಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಜಯಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Read More »ಬೆಂಗಳೂರಲ್ಲಿ ಗಲ್ಲಿ ಗಲ್ಲಿಗೂ ರೌಡಿಗಳು! ಸಣ್ಣ ಅಂಗಡಿ ಇಟ್ಕೊಂಡು ಜೀವನ ಮಾಡೋಣಂದ್ರೂ ಪುಂಡರ ಕಾಟ!
ಬೆಂಗಳೂರು: ಎಗ್ರೈಸ್ ಖಾಲಿಯಾಗಿದೆ ಎಂದಿದ್ದಕ್ಕೆ ಪಾನಮತ್ತ ಗ್ಯಾಂಗ್ ವ್ಯಕ್ತಿಯೊಬ್ಬರ ಮೇಲೆ ತಲ್ವಾರ್ನಿಂದ ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಬೇಗಿಹಳ್ಳಿಯಲ್ಲಿ ನಡೆದಿದೆ. ರೌಡಿ ಕನಕರಾಜು ಹಾಗೂ ಆತನ ಗ್ಯಾಂಗ್ ರಾತ್ರಿ ಎಗ್ರೈಸ್ ತಿನ್ನಲು ಬಂದಿದ್ದು, ಅಂಗಡಿ ಮುಚ್ಚುತ್ತಿದ್ದ ಮಾಲೀಕ ಎಗ್ರೈಸ್ ಖಾಲಿಯಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಕಿರಿಕ್ ಮಾಡಿದ ಆರೋಪಿಗಳು, ಪಕ್ಕದ ಅಂಗಡಿಗೆ ಪೇಂಟಿಂಗ್ ಮಾಡುತ್ತಿದ್ದ ಮಂಜುನಾಥ್ ಎಂಬುವವರ ಮೇಲೆ ತಲ್ವಾರ್ನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಮಂಜುನಾಥ್ ಅವರ ಕೈಗೆ …
Read More »ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
ಬೆಳಗಾವಿಯ ಚವ್ಹಾಣಗಲ್ಲಿಯಲ್ಲಿ ಗಣೇಶೋತ್ಸವದ ನಡುವೆಯೇ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಗಜಾನನ ದಮೋನೆ (65), ರೋಷನ (21), ಶಾರಧಾ (45) ಹಾಗೂ ಭಾರತಿ (50) ಮೃತಪಟ್ಟಿದ್ದಾರೆ. ಪ್ರಿಯಾ (28) ಹಾಗೂ ಗಂಗಾ (25) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಇಡೀ ಮನೆಗೆ ವ್ಯಾಪಿಸಿದೆ ಎನ್ನಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »ದೇವಸ್ಥಾನಕ್ಕೆ ಬಂದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ!
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದ ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಾಳ ಗ್ರಾಮದ ದಲಿತ ಭಕ್ತರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ವೇಳೆ ಜಾತಿ ನಿಂದನೆ ಹಾಗೂ ಕೊಲೆಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





