ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಕೂಡ ನಿನ್ನೆ ರಾತ್ರಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ (40) ಮೃತ ವ್ಯಕ್ತಿ.ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಹೆಂಡತಿ ಮತ್ತು …
Read More »ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ನಿಂದ ಬಿದ್ದು ವ್ಯಕ್ತಿ ಸಾವು.
ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಆಟೋ ರಾಜು(34) ಮೃತ ವ್ಯಕ್ತಿ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು.
Read More »ಪಟಾಕಿ ಸಿಡಿದು ಬಾಲಕ ಸಾವು ಕೇಸ್: ಆಯೋಜಕರ ವಿರುದ್ಧ ಎಫ್ಐಆರ್, ಪಟಾಕಿ ಬಳಕೆ ನಿಷೇಧ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಪ್ರಕರಣ ಹಿನ್ನಲೆ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಬಳಕೆ ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜ್ ಆದೇಶಿಸಿದ್ದಾರೆ. ಒಂದು ವೇಳೆ ಪಟಾಕಿ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Read More »ರೋಣ | ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಮುಸ್ಲಿಂ ಯುವಕರಿಂದಲೇ ಪೂಜೆ.
ಸಂದಿಗವಾಡ ಗ್ರಾಮದಲ್ಲಿ ಮಸೀದಿಯಲ್ಲಿಯೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ನಿತ್ಯವೂ ಮುಸ್ಲಿಂ ಯುವಕರೇ ಮೂರ್ತಿ ಪೂಜೆ ನಡೆಸುವ ಮೂಲಕ ಗಮನಸೆಳೆದಿದ್ದಾರೆ.ಗ್ರಾಮದಲ್ಲಿ ಹಬ್ಬ, ಜಾತ್ರೆ, ಉತ್ಸವಗಳ ಆಚರಣೆಗೆ ಜಾತಿ ಭೇದವಿಲ್ಲ.ಗಣೇಶ ಚತುರ್ಥಿಯಂದು ಅದ್ದೂರಿ ಮೆರವಣಿಗೆಯಲ್ಲಿ ಮುಸ್ಲಿಂ ಯುವಕರೇ ಗಣೇಶನ ಮೂರ್ತಿ ತಂದು ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಮುಸ್ಲಿಂ ಯುವಕರೇ ನಿತ್ಯವೂ ಅವರೇ ಪೂಜೆ, ಪ್ರಾರ್ಥನೆ ಮಾಡುವುದು ವಿಶೇಷ. ಗಣೇಶ ಸ್ತೋತ್ರಗಳನ್ನು ನಿರರ್ಗಳವಾಗಿ ಹೇಳುತ್ತಾರೆ.
Read More »ಕುಟುಂಬವ ತೊರೆದು ಲವರ್ ಜತೆ ಹೊರಟ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು.
ಗಂಡನನ್ನು ತೊರೆದು ಪ್ರೇಮಿಯ ಜತೆ ಹೊರಡಲು ಸಿದ್ಧಳಾಗುತ್ತಾಳೆ. ಆ ನೋವಿನ ಕ್ಷಣದಲ್ಲಿ ಮಕ್ಕಳು ತಾಯಿಯನ್ನು ಕಳೆದುಕೊಳ್ಳಲು ಇಷ್ಟವಿಲ್ಲದೆ. ಹೋಗಬೇಡಮ್ಮ ನೀನು ನಮಗೆ ಬೇಕು, ಇಲ್ಲೇ ಇದ್ದುಬಿಡು ಎಂದು ಬೇಡಿಕೊಳ್ಳುತ್ತಿರುವ ದೃಶ್ಯ ಕಣ್ಣಂಚಲ್ಲಿ ನೀರು ತರದೆ ಬಿಡದು. ತಾಯಿ ದೂರ ಹೋದಾಗ ಮಕ್ಕಳು ಹತಾಶರಾಗಿ ಬೇಡಿಕೊಳ್ಳುವುದನ್ನು ತೋರಿಸುವ ವೈರಲ್ ವಿಡಿಯೋದಲ್ಲಿ ತಮ್ಮ ಅಮ್ಮನನ್ನುಅಲ್ಲೇ ಉಳಿಸಿಕೊಳ್ಳಲು ಸಾಧ್ಯವಾಗದೆ ಹತಾಶರಾಗಿರುವ ಮಕ್ಕಳನ್ನು ಕಾಣಬಹುದು.ಕೊನೆಯ ಅವಕಾಶಕ್ಕಾಗಿ ಸಣ್ಣ ದನಿಗಳು ಬೇಡಿಕೊಂಡಾಗ ಕಣ್ಣೀರು ಧಾರೆಯಾಗಿ ಹರಿಯಿತು.ಮಿಸ್ ಮೋಹಿನಿ …
Read More »ರಾಯಚೂರು : ಪತ್ನಿಯ ಕತ್ತು ಸೀಳಿ ಕೊಂದ ಗಂಡ ಯಲ್ಲಪ್ಪ!
ಮಂಚಕ್ಕೆ ಬರಲು ಹಿಂದೇಟು ಹಾಕಿದ್ದ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. 31 ವರ್ಷದ ಗಂಗಮ್ಮ ಗಂಡನಿಂದ ಕೊಲೆಯಾದ ಮಹಿಳೆ. ಪತ್ನಿಯನ್ನು ಕೊಲೆಗೈದಿರುವ ಗಂಡ ಯಲ್ಲಪ್ಪನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Read More »ಕಾಡಾನೆ ಹಾವಳಿ ನಿಯಂತ್ರಣಕ್ಕೆ ನಿರ್ಮಿಸಿದ ಟ್ರಂಚ್ಗೆ ಬಿದ್ದು ಯುವಕ ಸಾವು.
ಆಡಿನಕೊಟ್ಟಿಗೆ ವ್ಯಾಪ್ತಿಯಲ್ಲಿ ಆನೆ ನಿಯಂತ್ರಣ ಟ್ರಂಚ್ ತೆಗೆಯುವಾಗ ಗ್ರಾಮಸ್ಥರು ವಿರೋಧಿಸಿದ್ದರು. ಮನೆಗಳ ಸಮೀಪ ಟ್ರಂಚ್ ತೆಗೆಯದಂತೆ ಆಗ್ರಹಿಸಿದ್ದರು. ಈಗ ಟ್ರಾಂಚ್ ಗೆ ಬಿದ್ದು ನಾಗರಾಜ್ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಗಾಮಸರು ಆಗಹಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »ಹುಟ್ಟುಹಬ್ಬದ ಉಡುಗೊರೆಗಾಗಿ ಜಗಳ, ಪತ್ನಿ ಹಾಗೂ ಅತ್ತೆಯನ್ನು ಕೊಲೆಗೈದ ವ್ಯಕ್ತಿ.
ಹುಟ್ಟುಹಬ್ಬದ ಉಡುಗೊರೆ ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರೋಹಿಣಿಯಲ್ಲಿ ಶನಿವಾರ ಮಗನ ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದ ಎರಡೂ ಕಡೆಯವರ ನಡುವೆ ವಿನಿಮಯವಾದ ಉಡುಗೊರೆಗಳ ವಿಚಾರದಲ್ಲಿ ಉಂಟಾದ ಜಗಳಕ್ಕೆ ಇಬ್ಬರನ್ನು ಹತ್ಯೆ ಮಾಡಿದ್ದಾನೆ.ತಕ್ಷಣ ಅವರು ಇತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಬೀಗ ಒಡೆದಾಗ, ಕೋಣೆಯೊಳಗೆ ತನ್ನ ತಾಯಿ ಮತ್ತು ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡರು. ಪ್ರಿಯಾಳ …
Read More »ದರ್ಶನ್ಗೆ ಬೆಂಗಳೂರು ಜೈಲೇ ಗತಿ!!
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.ಇದೀಗ ಪವಿತ್ರಾ ಗೌಡ ಕೆಳ ಹಂತದ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.
Read More »ಸಿಎಂ ವಿರುದ್ಧ ನಿಂದನೆ, ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಬಂಧನ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧನ ಮಾಡಿದ್ದಾರೆ.ಈ ಬಾರಿಯ ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದರು. ಸಿಎಂ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದರು. ಅವರು ಸಿಎಂ ಅವರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





